ಏಪ್ರಿಲ್ 13ಕ್ಕೆ ಮೇಷ ಸಂಕ್ರಾಂತಿ: ಈ ಸೂರ್ಯ ಸಂಚಾರ ದ್ವಾದಶ ರಾಶಿಗಳ ಮೇಲೆ ಬೀರುವ ಪ್ರಭಾವ

ಏಪ್ರಿಲ್ 13ಕ್ಕೆ ಸೂರ್ಯ ಮೊದಲ ಮಾಸವಾದ ಮೇಷ ರಾಶಿಗೆ ಸಂಚರಿಸಲಿದೆ, ಇನ್ನು ಒಂದು ತಿಂಗಳು ಇದೇ ರಾಶಿಯಲ್ಲಿ ಇರಲಿದೆ, ಈ ಸಂಚಾರ ದ್ವಾದಶ ರಾಶಿಗಳ ಮೇಲೆ ಬೀರಿರುವ ಪ್ರಭಾವವೇನು? ನೋಡೋಣ ಬನ್ನಿ:

Sun Transit In Aries On 13 April

ಮೇಷ ರಾಶಿ

ಸೂರ್ಯ ಮೇಷ ರಾಶಿಯವರಲ್ಲಿ ಮೊದಲ ಮನೆಗೆ ಸಂಚರಿಸುತ್ತಿದೆ. ಮೇಷ ರಾಶಿಯಲ್ಲಿ ಸೂರ್ಯನ ಸಂಚಾರವು ನಿಮಗೆ ಶಕ್ತಿ ಮತ್ತು ಸ್ಫೂರ್ತಿಯನ್ನು ತರುತ್ತದೆ. ನಿಮ್ಮ ವೃತ್ತಿಜೀವನದಲ್ಲಿ ಪ್ರಗತಿಯನ್ನು ಪಡೆಯಲು ಕೆಲವು ದಿಟ್ಟ ಕ್ರಮಗಳನ್ನು ತೆಗೆದುಕೊಳ್ಳಲು ನಿಮ್ಮನ್ನು ಪ್ರೇರೇಪಿಸುತ್ತದೆ. ಮೇಷ ರಾಶಿಯವರು ಸೂರ್ಯನ ಸಂಚಾರದ ಸಮಯದಲ್ಲಿ ಉತ್ತಮ ಅವಕಾಶಗಳನ್ನು ಪಡೆಯಬಹುದು. ವೃತ್ತಿ ಜೀವನದಲ್ಲಿ ಉದ್ಯೋಗದಲ್ಲಿ ಬಡ್ತಿಯನ್ನು ಪಡೆಯಬಹುದು.

ಆರ್ಥಿಕ ದೃಷ್ಟಿಯಿಂದ ಈ ಸಮಯವು ಮೇಷ ರಾಶಿಯವರಿಗೆ ಒಳ್ಳೆಯದು. ಈ ಅವಧಿಯಲ್ಲಿ ಹಣಕ್ಕೆ ಸಂಬಂಧಿಸಿದ ಕೆಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು ಸೂರ್ಯನ ಸಂಚಾರವು ನಿಮ್ಮ ಆದಾಯವನ್ನು ಹೆಚ್ಚಿಸುವುದು. ಸೂರ್ಯನ ಈ ಸಾಗಣೆಯು ನಿಮಗೆ ಆರ್ಥಿಕ ಜೀವನದಲ್ಲಿ ಸಮೃದ್ಧಿ ಮತ್ತು ಸ್ಥಿರತೆಯನ್ನು ನೀಡುವುದು.

ವೈವಾಹಿಕ ಜೀವನ ಚೆನ್ನಾಗಿರಲಿದೆ. ಸಂಗಾತಿಯೊಂದಿಗೆ ನಿಮ್ಮ ಸಂಬಂಧವು ಬಲಗೊಳ್ಳುತ್ತದೆ. ಈ ಅವಧಿಯಲ್ಲಿ ನಿಮ್ಮ ಆರೋಗ್ಯವು ಉತ್ತಮವಾಗಿರುತ್ತದೆ .

ವೃಷಭ ರಾಶಿ

ವೃಷಭ ರಾಶಿಯಲ್ಲಿ ಸೂರ್ಯ 12ನೇ ಮನೆಯಲ್ಲಿ ಇರಲಿದೆ. ಮೇಷ ರಾಶಿಯಲ್ಲಿ ಸೂರ್ಯನ ಸಂಚಾರವು ನಿಮಗೆ ಅಷ್ಟೇನೂ ಫಲಪ್ರದವಾಗಿಲ್ಲ. ಈ ಸಂಚಾರ ನಿಮ್ಮ ಕೆಲಸದಲ್ಲಿ ಸಮಸ್ಯೆಗಳನ್ನು ಮತ್ತು ಅಡೆತಡೆಗಳನ್ನು ಉಂಟುಮಾಡಬಹುದು.
ವೃತ್ತಿ ಜೀವನದಲ್ಲಿ ಕೆಲ ಸಮಸ್ಯೆಗಳನ್ನು ಎದುರಿಸಬಹುದು. ಸೂರ್ಯ ಸಂಕ್ರಮಣದ ಅವಧಿಯಲ್ಲಿ ಏರಿಳಿತಗಳನ್ನು ಎದುರಿಸಬೇಕಾಗಬಹುದು. ಈ ತಿಂಗಳಿನಲ್ಲಿ ಖರ್ಚು ಹೆಚ್ಚಾಗಲಿದೆ. ಹಣವನ್ನು ನೋಡಿಕೊಂಡು ಖರ್ಚು ಮಾಡಿದರೆ ಒಳ್ಳೆಯದು.

ಕುಟುಂಬ ಜೀವನದಲ್ಲಿಯೂ ಕೆಲ ಸಮಸ್ಯೆಗಳು ಇರಲಿದೆ. ತಾಯಿಗೆ ಆರೋಗ್ಯ ಸಮಸ್ಯೆಯಿದ್ದರೆ ಜೋಪಾನ ಮಾಡಬೇಕು. ಸೂರ್ಯನ ಸಂಕ್ರಮಣದ ಅವಧಿಯಲ್ಲಿ ತಮ್ಮ ಆರೋಗ್ಯದ ಬಗ್ಗೆ ಗಮನ ಹರಿಸಬೇಕಾಗುತ್ತದೆ, ಕೆಲಸದಲ್ಲಿ ಅಧಿಕ ಒತ್ತಡವಿರಲಿದೆ.

ಮಿಥುನ ರಾಶಿ

ಮಿಥುನ ರಾಸಿಯವರಲ್ಲಿ ಹನ್ನೊಂದನೇ ಮನೆಗೆ ಸಾಗಲಿದೆ. ಈ ಸಂಚಾರ ಅನುಕೂಲಕರವಾಗಿದೆ. ಈ ಅವಧಿಯಲ್ಲಿ ಬಡ್ತಿ ಅಥವಾ ಸಂಬಳದಲ್ಲಿ ಹೆಚ್ಚಳದ ಅವಕಾಶಗಳಿವೆ. ವ್ಯಾಪಾರಿಗಳು ಲಾಭದ ಜೊತೆಗೆ ಪ್ರತಿಸ್ಪರ್ಧಿಗಳಿಂದ ಕಠಿಣ ಸ್ಪರ್ಧೆಯನ್ನು ಎದುರಿಸಬೇಕಾಗಬಹುದು. ಈ ಅವಧಿಯಲ್ಲಿ ನಿಮ್ಮ ವ್ಯವಹಾರವನ್ನು ನಡೆಸಲು ಮತ್ತು ನಿಮ್ಮ ಆದಾಯವನ್ನು ಹೆಚ್ಚಿಸಲು ನೀವು ಹೊಸ ಅವಕಾಶಗಳನ್ನು ಪಡೆಯುತ್ತೀರಿ. ಕುಟುಂಬ ಜೀವನ ಚೆನ್ನಾಗಿರಲಿದೆ. ಆರೋಗ್ಯ ಉತ್ತಮವಾಗಿರಲಿದೆ.

ಕರ್ಕ ರಾಶಿ

ಕರ್ಕ ರಾಶಿಯವರಲ್ಲಿ ಸೂರ್ಯ 10ನೇ ಹತ್ತನೇ ಮನೆಗೆ ಸಾಗಲಿದೆ. ಈ ಸಾಗಣೆ ನಿಮ್ಮ ವೃತ್ತಿಜೀವನದಲ್ಲಿ ಬೆಳವಣಿಗೆಯನ್ನು ತರುತ್ತದೆ. ಈ ಅವಧಿಯಲ್ಲಿ ನಿಮ್ಮ ಕಾರ್ಯಕ್ಷಮತೆ ಉತ್ತಮವಾಗಿರುತ್ತದೆ. ಹೂಡಿಕೆಯಿಂದ ಲಾಭ ಗಳಿಸುತ್ತೀರಿ. ಸಂಬಂಧ ಗಟ್ಟಿಯಾಗುತ್ತದೆ. ಕುಟುಂಬದೊಂದಿಗೆ ಸಮಯ ಕಳೆಯಲು ಸಾಧ್ಯವಾಗುವುದು. ಆದರೆ, ಈ ಅವಧಿಯಲ್ಲಿ ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳು ಎದುರಾಗಬಹುದು.

ಸಿಂಹ ರಾಶಿ

ಸಿಂಹ ರಾಶಿಯವರಲ್ಲಿ 9ನೇ ಮನೆಯಲ್ಲಿ ಇರಲಿದೆ. ಮೇಷ ರಾಶಿಯಲ್ಲಿ ಸೂರ್ಯನ ಸಂಚಾರವು ನಿಮಗೆ ಉತ್ತಮವಾಗಿರುತ್ತದೆ. ಆರ್ಥಿಕವಾಗಿ ಈ ಸಮಯ ಉತ್ತಮವಾಗಿದೆ. ಹಣ ಉಳಿತಾಯ ಮಾಡಲು ಸಾಧ್ಯವಾಗುವುದು. ಈ ಅವಧಿಯಲ್ಲಿ ಮಾಡಿದ ಹೂಡಿಕೆಗಳು ನಿಮಗೆ ಉತ್ತಮ ಆದಾಯವನ್ನು ನೀಡಬಹುದು. ನಿಮ್ಮ ಜೀವನದಲ್ಲಿ ಕೆಲವು ಪ್ರಮುಖ ಬದಲಾವಣೆಗಳಾಗಬಹುದು. ನಿಮ್ಮ ಸಂಬಂಧ ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ, ಈ ಈ ಅವಧಿ ನಿಮಗೆ ಉತ್ತಮವಾಗಿದೆ. ಆರೋಗ್ಯದ ಕಡೆಗೆ ಗಮನಹರಿಸಬೇಕು.

ಕನ್ಯಾ ರಾಶಿ

ಕನ್ಯಾ ರಾಶಿಯವರಲ್ಲಿ ಎಂಟನೇ ಮನೆಯಲ್ಲಿ ಇರಲಿದೆ. ಈ ಅವಧಿಯಲ್ಲಿ ಖರ್ಚು ಹೆಚ್ಚಾಗಲಿದೆ. ಹನ್ನೆರಡನೇ ಮನೆಯಲ್ಲಿ ಸೂರ್ಯನ ಸಂಚಾರವು ನಿಮ್ಮ ವೃತ್ತಿಜೀವನದಲ್ಲಿ ಸಮಸ್ಯೆಗಳನ್ನು ಮತ್ತು ಅಡೆತಡೆಗಳನ್ನು ಉಂಟುಮಾಡಬಹುದು. ಈ ಅವಧಿಯಲ್ಲಿ ಖರ್ಚು ಹೆಚ್ಚಾಗಲಿದೆ. ನಿಮ್ಮ ಕುಟುಂಬ ಜೀವನ ಚೆನ್ನಾಗಿರಲಿದೆ. ಕೆಲವೊಂದು ಆರೋಗ್ಯ ಸಮಸ್ಯೆಗಳೂ ಇರಬಹುದು.

ತುಲಾ ರಾಶಿ

ತುಲಾ ರಾಶಿಯವರಲ್ಲಿ 7ನೇ ಮನೆಯಲ್ಲಿ ಇರಲಿದೆ. ಈ ಅವಧಿ ಸವಾಲಿನಿಂದ ಕೂಡಿದೆ. ವ್ಯಾಪಾರಿಗಳು ಸವಾಲುಗಳನ್ನು ಎದುರಿಸಬೇಕಾಗಬಹುದು. ಅಂತಹ ಪರಿಸ್ಥಿತಿಯಲ್ಲಿ, ಯಾವುದೇ ವ್ಯವಹಾರ ಸಂಬಂಧಿತ ನಿರ್ಧಾರವನ್ನು ತೆಗೆದುಕೊಳ್ಳುವಾಗ ನೀವು ಜಾಗರೂಕರಾಗಿರಬೇಕು, ಇಲ್ಲದಿದ್ದರೆ ನೀವು ನಷ್ಟವನ್ನು ಅನುಭವಿಸಬೇಕಾಗುವುದು. ಹಣದ ಖರ್ಚು ಹೆಚ್ಚಿರಲಿದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.

ವೃಶ್ಚಿಕ ರಾಶಿ'
ಸೂರ್ಯ ನಿಮ್ಮ 6ನೇ ಮನೆಯಲ್ಲಿ ಇದೆ. ಈ ಸೂರ್ಯ ಸಂಚಾರವು ಪ್ರಗತಿಯನ್ನು ತರುತ್ತದೆ. ನೀವು ಕೆಲಸದಲ್ಲಿ ಮಾಡಿದ ಕಠಿಣ ಕೆಲಸಕ್ಕೆ ಬಡ್ತಿ, ಸಂಬಳ ಹೆಚ್ಚಳ ಇತ್ಯಾದಿಗಳ ರೂಪದಲ್ಲಿ ಈ ಪ್ರಗತಿಯನ್ನು ಪಡೆಯಬಹುದು. ಹೊಸ ಉದ್ಯೋಗಾವಕಾಶಗಳನ್ನು ಪಡೆಯಬಹುದು . ಪಾಲುದಾರಿಕೆ ವ್ಯವಹಾರ ಮಾಡುವವರೆಗೆ ಉತ್ತಮ ಸಮಯವಾಗಿರುತ್ತದೆ, ನೀವು ಉತ್ತಮ ಲಾಭವನ್ನು ಗಳಿಸುವಿರಿ. ಆರ್ಥಿಕವಾಗಿ ಈ ಅವಧಿ ಒಳ್ಳೆಯದು. ಏನಾದರೂ ಆರೋಗ್ಯ ಸಮ್ಯಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಬೇಡಿ.

ಧನು ರಾಶಿ

ಧನು ರಾಶಿಯವರಲ್ಲಿ 5ನೇ ಮನೆಯಲ್ಇ ಇರಲಿದೆ. ಐದನೇ ಮನೆಯಲ್ಲಿ ಸೂರ್ಯ ಮಹಾರಾಜನ ಉಪಸ್ಥಿತಿಯು ನಿಮಗೆ ಹೊಸ ಉದ್ಯೋಗಾವಕಾಶಗಳನ್ನು ಮತ್ತು ವೃತ್ತಿಜೀವನದ ಪ್ರಗತಿಗೆ ಅವಕಾಶಗಳನ್ನು ಒದಗಿಸುವುದು. ಆರ್ಥಿಕವಾಗಿ ಈ ಅವಧಿ ಒಳ್ಳೆಯದು. ಕುಟುಂಬ ಜೀವನ ಚೆನ್ನಾಗಿರಲಿದೆ, ಆರೋಗ್ಯ ಉತ್ತಮವಾಗಿರಲಿದೆ.

ಮಕರ ರಾಶಿ

ಮಕರ ರಾಶಿಯವರಲ್ಲಿ ಸೂರ್ಯ 4ನೇ ಮನೆಯಲ್ಲಿ ಇರಲಿದೆ. ಕೆಲಸದಲ್ಲಿ ಒತ್ತಡ ಹೆಚ್ಚಾಗಲಿದೆ. ಆರ್ಥಿಕವಾಗಿ ನೋಡುವುದಾದರೆ ಖರ್ಚು ಹೆಚ್ಚಾಗಲಿದೆ. ಖರ್ಚು ಕಡೆ ಗಮನಹರಿಸಬೇಕು. ಸಂಬಂಧದಲ್ಲಿ ಸಾಮರಸ್ಯವನ್ನು ಕಾಪಾಡಿಕೊಳ್ಳಬೇಕಾಗುತ್ತದೆ. ಕೆಲವೊಂದು ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು.

ಕುಂಭ ರಾಶಿ

ಕುಂಭ ರಾಶಿಯಲ್ಲಿ ಮೂರನೇ ಮನೆಯಲ್ಲಿಇರಲಿದೆ. ಸ್ವಂತ ವ್ಯವಹಾರ ಮಾಡುತ್ತಿರುವವರು ಉತ್ತಮ ಲಾಭ ಗಳಿಸಲು ಸಾಧ್ಯವಾಗುವುದು. ಆದಾಯ ಉತ್ತಮವಾಗಿರಲಿದೆ. ಕುಟುಂಬ ಜೀವನದಲ್ಲಿ ಸಾಮರಸ್ಯ ಇರಲಿದೆ. ನಿಮ್ಮ ಆರೋಗ್ಯವು ಉತ್ತಮವಾಗಿರುತ್ತದೆ.

ಮೀನ ರಾಶಿ

ಮೀನ ರಾಶಿಯಲ್ಲಿ 2ನೇ ಮನೆಯಲ್ಲಿ ಇರಲಿದೆ. ಕಷ್ಟಪಟ್ಟು ಕೆಲಸ ಮಾಡಿದರೂ, ಈ ಜನರು ಕೆಲಸದಲ್ಲಿ ತಮ್ಮ ಗುರಿಗಳನ್ನು ಸಾಧಿಸುವಲ್ಲಿ ಅಡೆತಡೆಗಳನ್ನು ಎದುರಿಸಬೇಕಾಗಬಹುದು. ಮೇಷ ರಾಶಿಯಲ್ಲಿ ಸೂರ್ಯನ ಸಂಚಾರವು ವೃತ್ತಿ ಕ್ಷೇತ್ರದಲ್ಲಿ ಸಮಸ್ಯೆಗಳನ್ನು ಮತ್ತು ತೊಂದರೆಗಳನ್ನು ತರಬಹುದು. ಕಷ್ಟಪಟ್ಟು ಕೆಲಸ ಮಾಡಿದರೂ, ಈ ಜನರು ಕೆಲಸದಲ್ಲಿ ತಮ್ಮ ಗುರಿಗಳನ್ನು ಸಾಧಿಸುವಲ್ಲಿ ಅಡೆತಡೆಗಳನ್ನು ಎದುರಿಸಬೇಕಾಗಬಹುದು ಅಥವಾ ಕೆಲಸದಲ್ಲಿ ವಿಳಂಬವಾಗುವ ಸಾಧ್ಯತೆಯಿದೆ. ಆರ್ಥಿಕವಾಗಿಯೂ ಈ ಅವಧಿ ಉತ್ತಮವಾಗಿಲ್ಲ, ಕೆಲವೊಂದು ಆರೋಗ್ಯ ಸಮಸ್ಯೆ ಎದುರಿಸಬಹುದು.

Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.

English summary

Sun Transit In Aries On 13 April: Effects On 12 Zodiac Signs In Kannada

Sun Transit In Aries On 13 April: How it effects on 12 zodiac signs, read on....
Story first published: Thursday, April 11, 2024, 23:35 [IST]
X
Desktop Bottom Promotion