Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಕರ್ಕ ರಾಶಿಗೆ ಸೂರ್ಯ ಸಂಚಾರ: 30 ದಿನ ದ್ವಾದಶ ರಾಶಿಗಳ ಮೇಲೆ ಇದರ ಪ್ರಭಾವ ಹೀಗಿರಲಿದೆ
ಸೂರ್ಯ ಪ್ರತಿ ಮಾಸ ತನ್ನ ರಾಶಿ ಪಥ ಬದಲಾಯಿಸುತ್ತಲೇ ಇರುತ್ತಾನೆ, ಹೀಗೆ ರಾಶಿ ಬದಲಾವಣೆ ಮಾಡಿದಾಗ ಅದು ದ್ವಾದಶ ರಾಶಿಗಳ ಮೇಲೆ ಬೀರುವ ಪ್ರಭಾವ ಕೂಡ ಭಿನ್ನವಾಗಿರುತ್ತದೆ. ಇದೀಗ ಜುಲೈ 16ಕ್ಕೆ ಮಿಥುನ ರಾಶಿಯನ್ನು ಬಿಟ್ಟು ಕರ್ಕ ರಾಶಿಗೆ ಸಂಚರಿಸಿದೆ, ಈ ಸಂಚಾರ ದ್ವಾದಶ ರಾಶಿಗಳ ಮೇಲೆ ಬೀರಿರುವ ಪ್ರಭಾವವೇನು ಎಂದು ನೋಡೋಣ ಬನ್ನಿ:

ಮೇಷ ರಾಶಿ
ಸೂರ್ಯ ಈ ಸಂಚಾರ ನಿಮಗೆ ಅನುಕೂಲಕರವಾಗಿದೆ. ಈ ಅವಧಿ ವೈಯಕ್ತಿಕವಾಗಿ, ವೃತ್ತಿಪರವಾಗಿ ನಿಮಗೆ ಒಳ್ಳೆಯದಿದೆ.
ವೃತ್ತಿಜೀವನದಲ್ಲಿ ನಿಮ್ಮ ಪ್ರಯತ್ನಗಳಿಗೆ ಉತ್ತಮ ಫಲ ಸಿಗುವುದರಿಂದ ನಿಮಗೆ ತೃಪ್ತಿ ಇರಲಿದೆ. ಆರ್ಥಿಕವಾಗಿಯೂ ಈ ಸಮಯ ನಿಮಗೆ ಪ್ರಯೋಜನಕಾರಿಯಾಗಿದೆ. ಕುಟುಂಬ ಜೀವನದಲ್ಲಿ ನೆಮ್ಮದಿ ಇರಲಿದೆ, ವೈವಾಹಿಕ ಜೀವನದಲ್ಲಿ ಪ್ರೀತಿ, ಹೊಂದಾಣಿಕೆ ಇರಲಿದೆ, ಆರೋಗ್ಯ ಕೂಡ ಉತ್ತಮವಾಗಿರಲಿದೆ.
ವೃಷಭ ರಾಶಿ
ಕರ್ಕ ರಾಶಿಗೆ ಸೂರ್ಯ ಸಂಚಾರ ನಿಮಗೆ ತುಂಬಾನೇ ಉತ್ತಮವಾಗಿದೆ. ವೃತ್ತಿ ಬದುಕಿನಲ್ಲಿ ಯಶಸ್ಸು ಕಂಡು ಬರಲಿದೆ. ವ್ಯಾಪಾರಿಗಳು ತಮ್ಮ ವ್ಯವಹಾರದಲ್ಲಿ ಪ್ರಗತಿಯನ್ನು ಕಾಣುತ್ತೀರಿ. ಈ ಅವಧಿಯಲ್ಲಿ ಆರ್ಥಿಕ ಪ್ರಗತಿ ಕಂಡು ಬರಲಿದೆ. ನಿಮ್ಮ ಹಾಗೂ ಸಂಗಾತಿಯ ನಡುವೆ ಬಾಂಧವ್ಯ ಚೆನ್ನಾಗಿರಲಿದೆ. ಈ ಸಮಯದಲ್ಲಿ ಆರೋಗ್ಯ ಕೂಡ ಚೆನ್ನಾಗಿರಲಿದೆ.
ಮಿಥುನ ರಾಶಿ
ಈ ಸೂರ್ಯ ಸಂಚಾರ ಮಿಥುನ ರಾಶಿಯವರಿಗೂ ಅನುಕೂಲಕರವಾಗಿದೆ, ವೃತ್ತಿ ಬದುಕಿನಲ್ಲಿ ಉತ್ತಮ ಯಶಸ್ಸು ಪಡೆಯುತ್ತೀರಿ. ಹಣಕ್ಕೆ ಸಂಬಂಧಿಸಿದ ಪ್ರಯತ್ನದಲ್ಲಿ ಯಶಸ್ಸು ಸಿಗಲಿದೆ. ನಿಮ್ಮ ಹಾಗೂ ಸಮಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ, ನಿಮ್ಮ ಆರೋಗ್ಯ ಕೂಡ ಉತ್ತಮವಾಗಿರಲಿದೆ.
ಕರ್ಕ ರಾಶಿ
ಸೂರ್ಯನು ನಿಮ್ಮ ಲಗ್ನ ಮನೆಗೆ ಸಮಚರಿಸಿದೆ, ಈ ಅವಧಿ ನೀವು ಸ್ವಲ್ಪ ಜಾಗ್ರತೆವಹಿಸಬೇಕು. ಈ ಅವಧಿಯಲ್ಲಿ ನಿಮ್ಮ ಆತ್ಮಸ್ಥೈರ್ಯವೂ ಕಡಿಮೆಯಾಗಬಹುದು. ವೃತ್ತಿ ಬದುಕಿನಲ್ಲಿ ಕೆಲ ಸವಾಲುಗಳನ್ನು ಎದುರಿಸಬೇಕಾಗಬಹುದು, ವ್ಯಾಪಾರಿಗಳು ಕೂಡ ಹಲವು ಅಡೆತಡೆಗಳನ್ನು ಎದುರಿಸಬೇಕಾಗುವುದು. ಇನ್ನು ಅಹಂನಿಂದಾಗಿ ಸಂಬಂಧದಲ್ಲಿ ಸಮಸ್ಯೆ ಕಂಡು ಬರುವುದು. ಆರೋಗ್ಯಕ್ಕೆ ಸಂಬಂಧಿಸಿದಂತೆ ಕೂಡ ಜಾಗ್ರತೆವಹಿಸಬೇಕು.
ಸಿಂಹ ರಾಶಿ
ಸೂರ್ಯ ಕರ್ಕ ರಾಶಿಗೆ ಸಂಚರಿಸಿದಾಗ ಸಿಂಹ ರಾಶಿಯವರು ಹೆಚ್ಚಿನ ಪ್ರಯಾಣ ಮಾಡುತ್ತೀರಿ, ಈ ಪ್ರಯಾಣ ಆಯಾಸವನ್ನುಂಟು ಮಾಡುವುದು. ವಿದೇಶಕ್ಕೆ ಹೋಗಲು ಪ್ರಯತ್ನ ಮಾಡುತ್ತಿದ್ದರೆ ಈ ಅವಧಿ ನಿಮಗೆ ಅನುಕೂಲಕರವಾಗಿದೆ. ವ್ಯಾಪಾರಿಗಳು ಜಾಗ್ರತೆವಹಿಸದಿದ್ದರೆ ಹಣಕಾಸಿನ ಸಮಸ್ಯೆಯನ್ನು ಎದುರಿಸಬೇಕಾಗುವುದು. ಸಂಬಂಧದಲ್ಲಿಯೂ ಕೆಲ ಸಮಸ್ಯೆಗಳಿರಬಹುದು, ಆರೋಗ್ಯದ ಬಗ್ಗೆ ನೋಡುವುದಾದರೆ ಕಣ್ಣಿಗೆ ಸಂಬಂಧಿಸಿದ ಸಮಸ್ಯೆವಿರಬಹುದು.
ಕನ್ಯಾ ರಾಶಿ
ಈ ಸೂರ್ಯ ಸಂಚಾರ ಕನ್ಯಾ ರಾಶಿಯವರಿಗೆ ಮಿಶ್ರಫಲ ನೀಡಲಿದೆ. ವೃತ್ತಿ ಬದುಕಿನಲ್ಲಿ ಒತ್ತಡ ಇರಲಿದೆ. ವ್ಯಾಪಾರಿಗಳು ಲಾಭ-ನಷ್ಟ ಎರಡನ್ನೂ ಎದುರಿಸಬೇಕಾಗುತ್ತದೆ. ಖರ್ಚುಗಳು ಹೆಚ್ಚಾಗುವುದರಿಂದ ಆರ್ಥಿಕ ಸಮಸ್ಯೆ ಎದುರಾಗುವುದು. ಕುಟುಂಬ ಜೀವನ ಚೆನ್ನಾಗಿರಲಿದೆ, ಆರೋಗ್ಯ ಸಮಸ್ಯೆ ಇದ್ದರೆ ನಿರ್ಲಕ್ಷ್ಯ ಮಾಡಲು ಹೋಗಬೇಡಿ.
ತುಲಾ ರಾಶಿ
ತುಲಾ ರಾಶಿಯವರು ಈ ಅವಧಿಯಲ್ಲಿ ಆರ್ಥಿಕ ಪ್ರಯೋಜನ ಪಡೆಯುತ್ತೀರಿ. ವೃತ್ತಿ ಬದುಕಿನಲ್ಲಿ ಯಶಸ್ಸು ದೊರೆಯಲಿದೆ. ವ್ಯಾಪಾರಿಗಳು ಉತ್ತಮ ಆರ್ಥಿಕ ಪ್ರಯೋಜನ ಪಡೆಯುತ್ತೀರಿ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಷೇರುಗಳಿಂದ ಉತ್ತಮ ಆರ್ಥಿಕ ಪ್ರಯೋಜನ ಪಡೆಹಯುತ್ತೀರಿ. ಆರೋಗ್ಯ ಚೆನ್ನಾಗಿರಲಿದೆ.
ವೃಶ್ಚಿಕ ರಾಶಿ
ಸೂರ್ಯ ಕರ್ಕ ರಾಶಿಯಲ್ಲಿರುವಾಗ ನೀವು ಕೆಲಸದ ಬಗ್ಗೆ ಹೆಚ್ಚು ಗಮನ ಹರಿಸಬೇಕಾಗುತ್ತದೆ. ಹೊಸ ಉದ್ಯೋಗಾವಕಾಶಗಳನ್ನು ಪಡೆಯುವಲ್ಲಿ ಯಶಸ್ವಿಯಾಗುತ್ತೀರಿ. ವ್ಯಾಪಾರಿಗಳು ಕೂಡ ಈ ಅವಧಿಯಲ್ಲಿ ಧನ ಲಾಭ ಪಡೆಯುತ್ತೀರಿ. ವೈವಾಹಿಕ ಜೀವನದಲ್ಲಿನ ಸಮಸ್ಯೆಗಳನ್ನು ಮುಕ್ತ ಮಾತುಕತೆ ಮೂಲಕ ಬಗೆಹರಿಸಿದರೆ ಒಳ್ಳೆಯದು. ಆರೋಗ್ಯ ಚೆನ್ನಾಗಿರಲಿದೆ.
ಧನು ರಾಶಿ
ಧನು ರಾಶಿಯವವರು ಈ ಸೂರ್ಯ ಸಂಚಾರದ ಸಮಯದಲ್ಲಿ ಹೆಚ್ಚಿನ ಅಡಚಣೆ ಎದುರಿಸಬೇಕಾಗುತ್ತದೆ, ಈ ಅವಧಿ ಸ್ವಲ್ಪ ಒತ್ತಡದಿಂದ ಕೂಡಿರಲಿದೆ. ವೃತ್ತಿ ಬದುಕಿನಲ್ಲಿ ಹಲವು ಅಡೆತಡೆಗಳು ಎದುರಾಗಬಹುದು. ಅಲ್ಲದೆ ಈ ಅವಧಿಯಲ್ಲಿ ಕೆಲಸ ಬದಲಾವಣೆಯ ಬಗ್ಗೆ ಅಲೋಚಿಸಬಹುದು, ಆದರೆ ಒಂದು ಕೆಲಸ ಸಿಗುವ ಮುನ್ನ ಬಿಡದಂತೆ ಸಲಹೆ ನೀಡಲಾಗುವುದು. ವ್ಯಾಪಾರಿಗಳು ಆರ್ಥಿಕ ನಷ್ಟ ಉಂಟಾಗದಂತೆ ಜಾಗ್ರತೆವಹಿಸಿ. ಸಂಬಂಧದ ಕಡೆಗೂ ಗಮನಹರಿಸಬೇಕು, ಆರೋಗ್ಯದ ಬಗ್ಗೆ ಹೇಳುವುದಾದರೆ ಕಣ್ಣಿಗೆ ಸಂಬಂಧಿಸಿದ ಸಮಸ್ಯೆವಿರಬಹುದು.
ಮಕರ ರಾಶಿ
ಮಕರ ರಾಶಿಯವವರು ಈ ಅವಧಿಯಲ್ಲಿ ಸ್ವಲ್ಪ ಜಾಗ್ರತೆವಹಿಸಬೇಕು, ಕೆಲಸದ ಜಾಗದಲ್ಲಿ ಸಹೋದ್ಯೋಗಿಗಳು ಮತ್ತು ಮೇಲಧಿಕಾರಿಗಳೊಂದಿಗೆ ಕೆಲ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು, ತಾಳ್ಮೆಯಿಂದ ವರ್ತಿಸಿ. ಆರ್ಥಿಕವಾಗಿ ಚೆನ್ನಾಗಿರಲಿದೆ. ಆರೋಗ್ಯದ ಕಡೆಗೆ ನಿರ್ಲಕ್ಷ್ಯ ಬೇಡ.
ಕುಂಭ ರಾಶಿ
ಕುಂಭ ರಾಶಿಯವರು ಕುಟುಂಬದ ಕಡೆಗೆ ಹೆಚ್ಚು ಗಮನಹರಿಸಬೇಕು, ಸಂಗಾತಿಯ ಭಾವನೆಗಳನ್ನು ಗೌರವಿಸಿ. ವೃತ್ತಿ ಬದುಕಿನಲ್ಲಿಯೂ ಹೆಚ್ಚಿನ ಒತ್ತಡ ಇರಲಿದೆ. ವ್ಯಾಪಾರಿಗಳೂ ಲಾಭ ಗಳಿಸಲು ಹೆಚ್ಚಿನ ಶ್ರಮ ಹಾಕಬೇಕಾಗುತ್ತದೆ. ಆರೋಗ್ಯ ಸಮಸ್ಯೆಯಿದ್ದರೆ ಸೂಕ್ತ ವೈದ್ಯರನ್ನು ಕಾಣಿ, ನಿರ್ಲಕ್ಷ್ಯ ದುಬಾರಿಯಾಗಬಹುದು.
ಮೀನ ರಾಶಿ
ಮೀನ ರಾಶಿಯವರಿಗೆ ಈ ಅವಧಿಯಲ್ಲಿ ಮಕ್ಕಳ ಚಿಂತೆ ಹೆಚ್ಚು ಕಾಡುವುದು, ವೃತ್ತಿ ಬದುಕಿನಲ್ಲಿಯೂ ಹೆಚ್ಚಿನ ಕೆಲಸದ ಒತ್ತಡ ಇರಲಿದೆ. ಉದ್ಯೋಗ ಬದಲಾವಣೆಯ ಬಗ್ಗೆ ಆಲೋಚಿಸಬಹುದು. ವ್ಯಾಪಾರಿಗಳಿಗೆ ಸರಾಸರಿಯಾಗಿರಲಿದೆ. ಸಂಬಂಧದಲ್ಲಿನ ಸಮಸ್ಯೆಯನ್ನು ತಾಳ್ಮೆಯಿಂದ ಬಗೆಹರಿಸಿ, ಆರೋಗ್ಯದ ಬಗ್ಗೆ ಹೇಳುವುದಾದರೆ ಈ ಅವಧಿಯಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications