Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಸಿಂಹ ರಾಶಿಗೆ ಸೂರ್ಯ ಸಂಚಾರ : 30 ದಿನ ನಿಮ್ಮ ರಾಶಿಯಲ್ಲಿ ಸೂರ್ಯನ ಪ್ರಭಾವ ಹೇಗಿರಲಿದೆ?
ಸೂರ್ಯನು ಆಗಸ್ಟ್ 16ಕ್ಕೆ ಸಿಂಹ ರಾಶಿಗೆ ಪ್ರವೇಶಿಸಿದ್ದು 30 ದಿನಗವರೆಗೆ ಸೂರ್ಯನ ಪ್ರಭಾವ ಹೀಗಿರಲಿದೆ:
ಮೇಷ ರಾಶಿ
ಮೇಷ ರಾಶಿಯವರಿಗೆ ಈ ಅವಧಿ ಉತ್ತಮವಾಗಿರಲಿದೆ. ನಿಮ್ ಕೆಲಸ ಕಾರ್ಯಗಳು ನೀವು ಯೋಜಿಸಿದಂತೆಯೇ ಪುರ್ಣಗೊಳ್ಳಲಿದೆ. ವ್ಯಾಪಾರಿಗಲಿಗು ಈ ಸೂರ್ಯ ಸಂಚಾರ ಅನುಕೂಲಕರವಾಗಿದೆ. ವೈವಾಹಿಕ ಬದುಕಿನಲ್ಲಿ ನೆಮ್ಮದಿ ಇರಲಿದೆ, ಆರೋಗ್ಯ ಕೂಡ ಉತ್ತಮವಾಗಿರಲಿದೆ.

ವೃಷಭ ರಾಶಿ
ಈ ಅವಧಿ ನಿಮಗೆ ಉತ್ತಮವಾಗಿದೆ, ವೃತ್ತಿ ಬದುಕು ಹಾಗೂ ಆರ್ಥಿಕ ಬದುಕಿನಲ್ಲಿ ಉತ್ತಮ ಪ್ರಯೋಜನ ಪಡೆಯುತ್ತೀರಿ. ಕುಟುಂಬದಲ್ಲಿ ಪರಿಸ್ಥಿತಿ ಅಷ್ಟು ಚೆನ್ನಾಗಿರಲ್ಲ, ಸಮಸ್ಯೆಗಳನ್ನು ತಾಳ್ಮೆಯಿಂದ ಬಗೆಹರಿಸಿ. ಇನ್ನು ಆಸ್ತಿ ಸಂಬಂಧಿಸಿದ ವಿವಾದ ಬಗೆಹರಿಯಲಿದೆ, ಆರೋಗ್ಯದ ಕಡೆಗೆ ಗಮನಹರಿಸಿ.
ಮಿಥುನ ರಾಶಿ
ಸೂರ್ಯನ ಪ್ರಭಾವದಿಂದ ಈ ಅವಧಿ ಅನುಕೂಲಕರವಾಗಿದೆ. ಅವಧಿಯಲ್ಲಿ ನೀವು ತೆಗೆದುಕೊಳ್ಳುವ ಪ್ರಯತ್ನಕ್ಕೆ ಉತ್ತಮ ಫಲ ಸಿಗಲಿದೆ. ಈ ಅವಧಿಯಲ್ಲಿ ಧಾರ್ಮಿಕ ಒಲವು ಹೆಚ್ಚಿರಲಿದೆ. ವೈವಾಹಿಕ ಬದುಕು ಚೆನ್ನಾಗಿರಲಿದೆ. ಈ ಅವಧಿಯಲ್ಲಿ ಹೆಚ್ಚು ಪ್ರಯಾಣ ಮಾಡುತ್ತೀರಿ.
ಕರ್ಕ ರಾಶಿ
ಸೂರ್ಯನ ಪ್ರಭಾವದಿಂದ ಸಂಪತ್ತು ಹೆಚ್ಚಾಗಲಿದೆ. ಆರ್ಥಿಕವಾಗಿ ಉತ್ತಮವಾಗಿರಲಿದೆ. ಏನಾದರು ಆಸ್ತಿಗೆ ಸಂಬಂಧಿಸಿದ ವಿವಾದವಿದ್ದರೆ ಅದು ಬಗೆಹರಿಯಲಿದೆ. ನೀವು ವಾಹನ ಖರೀದಿಸಲು ಬಯಸಿದರೆ ಈ ಅವಧಿ ಉತ್ತಮವಾಗಿದೆ. ಕೆಲಸ ಮತ್ತು ವ್ಯವಹಾರದ ಸೀಕ್ರೆಟ್ ಯಾರ ಜೊತೆ ಹೇಳಲು ಹೋಗಬೇಡಿ. ವೈವಾಹಿಕ ಜೀವನದ ಸಮಸ್ಯೆ ಬಗೆಹರಿಯಲಿದೆ. ಆರೋಗ್ಯ ಚೆನ್ನಾಗಿರಲಿದೆ.
ಸಿಂಹ ರಾಶಿ
ನಿಮ್ಮ ಲಗ್ನ ಮನೆಯಲ್ಲಿ ಸೂರ್ಯ ಸಂಚಾರವಾಗಿರುವುದರಿಂದ ನಿಮಗೆ ಅದೃಷ್ಟಕರವಾಗಿದೆ. ಆರೋಗ್ಯದ ದೃಷ್ಟಿಯಿಂದ ಈ ಅವಧಿ ಉತ್ತಮವಾಗಿದೆ.
ಕೆಲಸ ಮತ್ತು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕೆಲಸ ಹುಡುಕುತ್ತಿದ್ದರೆ ಈ ಅವಧಿ ಅನುಕೂಲಕರವಾಗಿದೆ.
ಕನ್ಯಾ ರಾಶಿ
ಈ ಸೂರ್ ಸಂಚಾರದ ಸಮಯದಲ್ಲಿ ವಿಪರೀತ ಓಡಾಟವಿರಲಿದೆ. ಖರ್ಚುಗಳು ತುಂಬಾ ಇರಲಿದೆ. ವಿದೇಶದಲ್ಲಿ ಕೆಲಸಕ್ಕೆ ಪ್ರಯತ್ನಿಸುತ್ತಿರುವವರಿಗೆ ಈ ಅವಧಿ ಅನುಕೂಲಕರವಾಗಿದೆ. ಇನ್ನು ಹಣದ ಬಗ್ಗೆ ಜಾಗ್ರತೆವಹಿಸಿ. ಯಾರಿಗೂ ಹಣ ಸಾಲ ನೀಡಬೇಡಿ. ಆರೋಗ್ಯದ ಕಡೆಗೆ ಗಮನಹರಿಸಿ.
ತುಲಾ ರಾಶಿ
ಈ ಸೂರ್ಯ ಸಂಚಾರ ನಿಮಗೆ ಅನುಕೂಲಕರವಾಗಿದೆ. ಕೆಲಸ ಮತ್ತು ವ್ಯವಹಾರದಲ್ಲಿ ಪ್ರಗತಿ ಇರುತ್ತದೆ . ಆರ್ಥಿಕವಾಗಿ ಈ ಅವಧಿ ಉತ್ತಮವಾಗಿರಲಿದೆ.
ನಿಮ್ಮ ಕೆಲಸವನ್ನು ಬದಲಾಯಿಸಲು ನೀವು ಪ್ರಯತ್ನಿಸುತ್ತಿದ್ದರೆ ಈ ಸಮಯದಲ್ಲಿ ಒಳ್ಳೆಯ ಅವಕಾಶಗಳು ದೊರೆಯಲಿದೆ. ಮಕ್ಕಳಿಗೆ ಸಂಬಂಧಿಸಿದ ಕಾಳಜಿ ನಿಮ್ಮನ್ನು ಕಾಡುವ ಸಾಧ್ಯತೆ ಇದೆ. ಕೋಪಗೊಳ್ಳುವ ಬದಲಿಗೆ ತಾಳ್ಮೆಯಿಂದ ಸಮಸ್ಯೆ ಬಗೆಹರಿಸಿ.
ವೃಶ್ಚಿಕ ರಾಶಿ
ಸೂರ್ಯನ ಸಂಕ್ರಮಣವು ನಿಮಗೆ ಅಪೇಕ್ಷಿತ ಫಲಿತಾಂಶ ನೀಡಲಿದೆ. ವೃತ್ತಿ ಬದುಕಿನ ದೃಷ್ಟಿಯಿಂದ ನೋಡುವುದಾದರೆ ಈ ಅವಧಿ ಅನುಕೂಲಕರವಾಗಿದೆ. ಹೊಸ ಕೆಲಸಕ್ಕೆ ಪ್ರಯತ್ನಿಸುತ್ತಿದ್ದರೆ ಈ ಅವಧಿ ನಿಮಗೆ ಅನುಕೂಲಕರವಾಗಿದೆ, ಆದರೆ ಸಂಬಂಧದ ದೃಷ್ಟಿಯಿಂದ ಈ ಅವಧಿ ಅನುಕೂಲಕರವಲ್ಲ, ಕೆಲ ಭಿನ್ನಾಬಿಪ್ರಾಯಗಳಿರಬಹುದು. ಆರ್ಥಿಕವಾಗಿ ಈ ಅವಧಿ ಉತ್ತಮವಾಗಿದೆ.
ಧನು ರಾಶಿ
ಈ ಸಮಯದಲ್ಲಿ ನಿಮ್ಮ ಧೈರ್ಯ ಮತ್ತು ಶೌರ್ಯ ಹೆಚ್ಚಾಗಲಿದೆ. ಮಕ್ಕಳಿಗೆ ಸಂಬಂಧಿಸಿದ ಚಿಂತೆ ಕಡಿಮೆಯಾಗಲಿದೆ. ವೈವಾಹಿಕ ಜೀವನದಲ್ಲಿ ಖುಷಿ ಇರಲಿದೆ.
ಕೌಟುಂಬಿಕ ಜೀವನ ಚೆನ್ನಾಗಿರಲಿದೆ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ.
ಮಕರ ರಾಶಿ
ಈ ಅವಧಿ ನಿಮಗೆ ಮಿಶ್ರಫಲ, ಆರೋಗ್ಯದ ಕಡೆಗೆ ಗಮನಹರಿಸಿ, ಇಲ್ಲದಿದ್ದರೆ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುವುದು. ವೃತ್ತಿ ಬದುಕಿನ ದೃಷ್ಟಿಯಿಂದ ಈ ಅವಧಿ ಅನುಕುಲಕರವಾಗಿದೆ. ಆರ್ಥಿಕವಾಗಿ ಈ ಅವಧಿ ಅನುಕೂಲಕರವಾಗಿದೆ. ನೀವು ಬಯಸಿದ ವಸ್ತುಗಳನ್ನು ಖರೀದಿಸಲು ಸಾಧ್ಯವಾಗುವುದು.
ಕುಂಭ ರಾಶಿ
ವೈವಾಹಿಕ ಜೀವನದಲ್ಲಿ ಕೆಲ ಭಿನ್ನಾಭಿಪ್ರಾಯಗಳಿರಬಹುದು. ನಿಮ್ಮ ಸಮಸ್ಯೆಗಳನ್ನು ದೊಡ್ಡದಾಗಲು ಬಿಡಬೇಡಿ. ವ್ಯಾಪಾರಿಗಳಿಗೆ ಧನಲಾಭವಾಗಲಿದೆ, ವೃತ್ತಿ ಬದುಕು ತುಂಬಾ ಚೆನ್ನಾಗಿರಲಿದೆ. ವಿದೇಶದಲ್ಲಿ ಕೆಲಸಕ್ಕೆ ಪ್ರಯತ್ನಿಸುತ್ತಿದ್ದರೆ ಈ ಅವಧಿ ಉತ್ತಮವಾಗಿದೆ. ಆ
ಮೀನ ರಾಶಿ
ಈ ಅವಧಿ ಅನುಕೂಲಕರವಾಗಿದೆ. ನ್ಯಾಯಾಲಯದಲ್ಲಿ ಏನಾದರು ಪರಕರಣವಿದ್ದರೆ ಅದು ಬಗೆಹರಿಯಲಿದೆ. ವೃತ್ತಿ ಬದುಕಿನ ದೃಷ್ಟಿಯಿಂದ ಈ ಅವಧಿ ಉತ್ತವಾಗಿರಲಿದೆ. ಕೆಲಸ ಬದಲಾವಣೆಗೆ ಅವಧಿ ಅನುಕೂಲಕವಾಗಿದೆ. ಈಅವಧಿಯಲ್ಲಿ ವಾಹನವನ್ನು ಜಾಗ್ರತೆಯಿಂದ ಓಡಿಸಿ, ಆರೋಗ್ಯದ ಕಡೆಗೆ ಗಮನಹರಿಸಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
