Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಸಿಂಹ ರಾಶಿಗೆ ಸೂರ್ಯ ಸಂಚಾರವಾದಾಗ ಈ 3 ರಾಶಿಗಳ ಅದೃಷ್ಟ ಬದಲಾಗಲಿದೆ
ನವಗ್ರಹಗಳ ಅಧಿಪತಿ ಸೂರ್ಯ, ಸೂರ್ಯನು ಪ್ರತಿ ಮಾಸ ರಾಶಿ ಬದಲಾಯಿಸುತ್ತಿರುತ್ತಾನೆ, ಕರ್ಕದಲ್ಲಿರುವ ಸೂರ್ಯ ಆಗಸ್ಟ್ 16ಕ್ಕೆ ಸಿಂಹ ರಾಶಿಗೆ ಸಂಚರಿಸಲಿದೆ. ಸೂರ್ಯನ ರಾಶಿ ಬದಲಾವಣೆ ದೇಶ-ವಿದೇಶ ಪ್ರತಿಯೊಬ್ಬ ವ್ಯಕ್ತಿಯ ಮೇಲೂ ಪರಿಣಾಮ ಬೀರುವುದು ಎಂದು ಜ್ಯೋತಿಷ್ಯಶಾಸ್ತ್ರ ಹೇಳುತ್ತದೆ.
ಸೂರ್ಯನು ಸಿಂಹ ರಾಶಿಗೆ ಸಂಚರಿಸಿದಾಗ ಕೆಲವೊಂದು ರಾಶಿಗಳ ಮೇಲೆ ಅದ್ಭುತ ಪ್ರಯೋಜನ ಪ್ರಯೋಜನ ಬೀರಲಿದೆ. ಸೂರ್ಯ ಸಿಂಹ ರಾಶಿಗೆ ಸಂಚರಿಸಿದಾಗ ಈ ರಾಶಿಯವರು ಹೆಚ್ಚಿನ ಪ್ರಯೋಜನ ಪಡೆಯಲಿದ್ದಾರೆ:

ತುಲಾ ರಾಶಿ
ತುಲಾ ರಾಶಿಯವರಿಗೆ ಈ ಅವಧಿ ಅದ್ಭುತವಾಗಿರಲಿದೆ. ಈ ಅವಧಿಯಲ್ಲಿ ನೀವು ಪ್ರತಿಯೊಂದು ವಿಷಯದಲ್ಲಿ ಅನುಕೂಲಕ ಪ್ರಯೋಜನ ಪಡೆಯುತ್ತೀರಿ. ಈ ಸಮಯದಲ್ಲಿ ಆರ್ಥಿಕ ಸ್ಥಿತಿ ತುಂಬಾ ಚೆನ್ನಾಗಿರಲಿದೆ. ವ್ಯಾಪಾರಿಗಳು ಉತ್ತಮ ಆರ್ಥಿಕ ಪ್ರಯೋಜನ ಪಡೆಯುತ್ತಿರಿ. ನಿಮ್ಮ ಕೆಲಸ ಕಾರ್ಯಗಳು ಯಾವುದೇ ತೊಂದರೆಯಿಲ್ಲದೆ ಪುರ್ಣಗೊಳ್ಳಲಿದೆ.
ಇನ್ನು ಈ ಅವಧಿ ಹೂಡಿಕೆಗೂ ಉತ್ತಮವಾಗಿದೆ, ಹೂಡಿಕೆಯಿಂದ ನೀವು ಅತ್ಯುತ್ತಮ ಪ್ರಯೋಜನ ಪಡೆಯಲಿದ್ದೀರಿ, ನವ ವಿವಾಹಿತರು ಮಗುವಿಗೆ ಸಂಬಂಧಿಸಿದ ಸಿಹಿ ಸುದ್ದಿ ಪಡೆಯುತ್ತೀರಿ.
ಕರ್ಕ ರಾಶಿ
ಈ ಸೂರ್ಯ ಸಂಚಾರದಿಂದ ಕರ್ಕ ರಾಶಿಯವರು ಕೂಡ ಒಳ್ಳೆಯ ಪ್ರಯೋಜನ ಪಡೆಯುತ್ತೀರಿ, ಸೂರ್ಯ ನಿಮ್ಮ ಸಂಪತ್ತು ಹೆಚ್ಚಿಸುತ್ತಾನೆ, ಈ ಅವಧಿಯಲ್ಲಿ ಆರ್ಥಿಕ ಪ್ರಯೋಜನ ಪಡೆಯುತ್ತೀರಿ. ಈ ಅವಧಿಯಲ್ಲಿ ನಿಮ್ಮ ಆರ್ಥಿಕ ಸ್ಥಿತಿ ಮೊದಲಿಗಿಂತಲೂ ಅಭಿವೃದ್ಧಿಯಾಗಿರುವುದನ್ನು ಕಾಣಬಹುದು. ಈ ಅವಧಿಯಲ್ಲಿ ನಿಮ್ಮ ಮಾತುಗಳು ಅಷ್ಟೇ ಪ್ರಭಾವ ಬೀರುವುದು. ನಿಮ್ಮ ಮಾತುಗಳಿಗೆ ಗೌರವ ಸಿಗಲಿದೆ.
ಕೆಲಸಕ್ಕಾಗಿ ಪ್ರಯತ್ನಿಸುತ್ತಿದ್ದರೆ ಈ ಅವಧಿಯಲ್ಲಿ ನೀವು ಉತ್ತಮ ಪ್ರಯೋಜನ ಪಡೆಯುತ್ತೀರಿ, ನೀವು ಬಯಸಿದ ಕೆಲಸ ಸಿಗಲಿದೆ. ಅಪೂರ್ಣವಾಗಿದ್ದ ಕೆಲಸವನ್ನು ಈ ಅವಧಿಯಲ್ಲಿ ಪೂರ್ಣಗೊಳಿಸಲು ಸಾಧ್ಯವಾಗುವುದು.
ಕುಟುಂಬ ಜೀವನದ ದೃಷ್ಟಿಯಿಂದ ನೋಡುವುದಾದರೆ ಈ ಅವಧಿ ತುಂಬಾ ಚೆನ್ನಾಗಿರಲಿದೆ. ವೈವಾಹಿಕ ಬದುಕು ಚೆನ್ನಾಗಿರಲಿದೆ.
ಧನು ರಾಶಿ
ಸಿಂಹ ರಾಶಿಯಲ್ಲಿ ಸೂರ್ಯ ಸಂಚಾರ ಧನು ರಾಶಿಯವರಿಗೆ ತುಂಬಾನೇ ಪ್ರಯೋಜನಕಾರಿಯಾಗಿದೆ. ಈ ಅವಧಿಯಲ್ಲಿ ನೀವು ಮಂಗಳಕರ ಫಲಿತಾಂಶ ಪಡೆಯುತ್ತೀರಿ. ಧನು ರಾಶಿಯವರು ಈ ಅವಧಿಯಲ್ಲಿ ಆರ್ಥಿಕ ಪ್ರಯೋಜನ ಪಡೆಯುತ್ತೀರಿ, ವ್ಯಾಪಾರಿಗಳು, ಉದ್ಯಮಿಗಳು ಈ ಅವಧಿಯಲ್ಲಿ ಒಳ್ಳೆಯ ಲಾಭ ಗಳಿಸಲು ಸಾಧ್ಯವಾಗುವುದು.
ಈ ಸಮಯದಲ್ಲಿ ಕೆಲಸ ಬದಲಾವಣೆಗೆ ಒಳ್ಳೆಯದಿದೆ, ಕೆಲಸ ಹುಡುಕುತ್ತಿರುವವರಿಗೆ ಒಳ್ಳೆಯ ಸುದ್ದಿ ಸಿಗಲಿದೆ. ಈ ಅವಧಿಯಲ್ಲಿ ನೀವು ಪ್ರವಾಸ ಮಾಡುವ ಸಾಧ್ಯತೆ ಇದೆ, ಕುಟುಂಬ ಜೀವನ ಚೆನ್ನಾಗಿರಲಿದೆ, ವೈವಾಹಿಕ ಬದುಕಿನಲ್ಲಿ ಸಾಮರಸ್ಯ ಇರಲಿದೆ, ಕುಟುಂಬದಲ್ಲಿ ಪ್ರಗತಿಯ ವಾತಾವರಣ ಕಂಡು ಬರುವುದು.
ಸೂರ್ಯನು ಆಗಸ್ಟ್ 16 ಸಂಜೆ 07:32ಕ್ಕೆ ಸಿಂಹ ರಾಶಿಗೆ ಸಂಚರಿಸಲಿದೆ.
ಸೂರ್ಯ ಸಂಕ್ರಾಂತಿ ದಿನ ಸೂರ್ಯನಿಗೆ ಆರ್ಘ್ಯ ಅರ್ಪಿಸಿ ಈ ಮಂತ್ರಗಳ ಪಠಣೆ ಮಾಡುವುದರಿಂದ ಮತ್ತಷ್ಟು ಶುಭ ಫಲ ದೊರೆಯಲಿದೆ:
ಸೂರ್ಯ ನಮಸ್ಕಾರ ಮಂತ್ರ :
ಓಂ ಮಿತ್ರಾಯ ನಮಃ
ಓಂ ರವಾಯ್ರೇ ನಮಃ
ಓಂ ಸೂರ್ಯಾಯ ನಮಃ
ಓಂ ಭಾನವೇ ನಮಃ ಓಂ ಖಗಾಯ ನಮಃ
ಓಂ ಪುಷ್ನೇ ನಮಃ
ಓಂ ಹಿರಣ್ಯಗರ್ಭಾಯ ನಮಃ
ಓಂ ಮರೀಚಯೇ ನಮಃ
ಓಂ ಆದಿತ್ಯಾಯ ನಮಃ
ಓಂ ಸವಿತ್ರೇ ನಮಃ ಓಂ ಅರ್ಕಾಯ ನಮಃ
ಓಂ ಭಾಸ್ಕರಾಯ ನಮಃ
ಸೂರ್ಯ ಬೀಜ ಮಂತ್ರ : ಓಂ ಹರಂ ಹ್ರೀ ಹ್ರೌಂ ಸಃ ಸೂರ್ಯಾಯ ನಮಃ
ಸೂರ್ಯ ಪ್ರಭಾವಶಾಲಿ ಗ್ರಹ, ಸೂರ್ಯನ ಅನುಕೂಲಕರ ಸ್ಥಾನ ನಮ್ಮ ರಾಶಿಯಲ್ಲಿದ್ದರೆ ಸೂರ್ಯನ ಪ್ರಭೆಯಂತೆ ತುಂಬಾನೇ ಆಹ್ಲಾದಕರವಾಗಿರುತ್ತದೆ, ಸಮಾಜದಲ್ಲಿ ಗೌರವ ಹೆಚ್ಚಾಗುವುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications