ಮಾರ್ಚ್‌ 14ಕ್ಕೆ ಸೂರ್ಯ ಸಂಚಾರ: 30 ದಿನ ದ್ವಾದಶ ರಾಶಿಗಳ ಮೇಲೆ ಬೀರಲಿದೆ ಈ ಪ್ರಭಾವ

ಗ್ರಹಗಳ ಅಧಿಪತಿ ಸೂರ್ಯನು ಮೀನ ರಾಶಿಗೆ ಮಾರ್ಚ್‌ 14ಕ್ಕೆ ಸಂಚಾರ ಮಾಡಲಿದೆ. ಸೂರ್ಯನು ಮೀನ ರಾಶಿಗೆ ಸಂಚಾರ ಮಾಡಿದಾಗ ಕೆಲ ರಾಶಿಯವರಿಗೆ ತುಂಬಾನೇ ಪ್ರಯೋಜನಕಾರಿಯಾಗಿದೆ, ಇನ್ನು ಕೆಲ ರಾಸಿಯವರು ಜಾಗ್ರತೆ ಮಾಡಬೇಕಾಗಿದೆ, ಈ ಸಂಚಾರ ಯಾವ ರಾಶಿಗೆ ಹೇಗಿರಲಿದೆ ಎಂದು ನೋಡೋಣ:


ಮೇಷ ರಾಶಿ

ಮೇಷ ರಾಶಿಯವರಿಗೆ ಈ ಸೂರ್ಯ ಸಂಚಾರ ಅಷ್ಟೊಂದು ಅನುಕೂಲಕರ ಎಂದು ಹೇಳಲು ಸಾಧ್ಯವಿಲ್ಲ, ಏಕೆಂದರೆ ಮೇಷ ರಾಶಿಯವರು ಈ ಸೂರ್ಯ ಸಂಚಾರದ ಅವಧಿಯಲ್ಲಿ ಕೆಲಸ ಜಾಗದಲ್ಲಿ ಕೆಲ ಅಡೆತಡೆಗಳನ್ನು ಎದುರಿಸಬಹುದು, ಕೆಲಸದಲ್ಲಿನ ಸವಾಲುಗಳು ಮಾನಸಿಕ ಒತ್ತಡ ಹೆಚ್ಚಿಸಲಿದೆ, ಕೆಲಸದಲ್ಲಿ ಅಭದ್ರತೆ ಕಾಡಲಿದೆ. ಆರ್ಥಿಕ ದೃಷ್ಟಿಯಿಂದ ಈ ಸಂಚಾರ ಅಷ್ಟೊಂದು ಅನುಕೂಲಕರವಲ್ಲ, ಖರ್ಚು ಹೆಚ್ಚು ಮಾಡಬಹುದು.
ನಿಮ್ಮ ಹಾಗೂ ಸಂಗಾತಿ ಜೊತೆ ಕೆಲ ಭಿನ್ನಾಭಿಪ್ರಾಯಗಳು ಉಂಟಾಗಬಹುದು, ನೀವು ತಾಳ್ಮೆಯಿಂದ ಸಮಸ್ಯೆಯನ್ನು ಬಗೆಹರಿಸಿ.

Sun Transit In Meena Rashi 2025


ವೃಷಭ ರಾಶಿ

ಈ ಸೂರ್ಯ ಸಂಚಾರ ವೃಷಭ ರಾಶಿಯವರಿಗೆ ತುಂಬಾನೇ ಅನುಕೂಲಕರವಾಗಿದೆ, ನೀವು ವೃತ್ತಿ ಬದುಕಿನಲ್ಲಿ ಹಾಗೂ ವೈಯಕ್ತಿಕ ಬದುಕಿನಲ್ಲಿ ಉತ್ತಮ ಪ್ರಯೋಜನ ಪಡೆಯುತ್ತೀರಿ. ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಈ ಅವಧಿ ತುಂಬಾನೇ ಚೆನ್ನಾಗಿರಲಿದೆ. ಆರ್ಥಿಕವಾಗಿ ಕೂಡ ಈ ಅವಧಿ ಪ್ರಯೋಜನಕಾರಿಯಾಗಿದೆ. ವ್ಯಾಪಾರಿಗಳು ಉತ್ತಮ ಲಾಭ ಪಡೆಯುತ್ತೀರಿ. ಕುಟುಂಬ ಜೀವನ ಚೆನ್ನಾಗಿರಲಿದೆ, ಆರೋಗ್ಯದ ದೃಷ್ಟಿಯಿಂದಲೂ ಈ ಅವಧಿ ಅನುಕೂಲಕರವಾಗಿರಲಿದೆ.


ಮಿಥುನ ರಾಶಿ

ಈ ಸೂರ್ಯ ಸಂಚಾರ ಮಿಥುನ ರಾಶಿಯವರಿಗೆ ತುಂಬಾ ಅನುಕೂಲಕರವಾಗಿದೆ, ಉದ್ಯೋಗಿಗಳು ವೃತ್ತಿ ಬದುಕಿನಲ್ಲಿ ಉತ್ತಮ ಯಶಸ್ಸು ಪಡೆಯುತ್ತೀರಿ. ಕೆಲಸದಲ್ಲಿ ಎದುರಿಸುತ್ತಿರುವ ಅಡೆತಡೆಗಳು ದೂರಾಗಲಿದೆ, ವ್ಯಾಪಾರಸ್ಥರಿಗೂ ಈ ಸಂಚಾರ ಪ್ರಯೋಜನಕಾರಿಯಾಗಿದೆ. ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಮತ್ತಷ್ಟು ಗಟ್ಟಿಯಾಗಲಿದೆ.

ಕರ್ಕ ರಾಶಿ

ಕರ್ಕ ರಾಶಿಯವರಿಗೆ ಈ ಅವಧಿ ತುಂಬಾ ಅನುಕೂಲಕರವಾಗಿರಲಿದೆ, ವೃತ್ತಿ ಬದುಕಿನಲ್ಲಿ ಹೊಸ ಅವಕಾಶಗಳು ದೊರೆಯಲಿದೆ, ವಿದೇಶಕ್ಕೆ ಕೆಲಸಕ್ಕೆ ಪ್ರಯತ್ನ ಮಾಡುತ್ತಿದ್ದರೆ ಈ ಸಮಯ ನಿಮಗೆ ತುಂಬಾನೇ ಅನುಕೂಲಕರವಾಗಿರಲಿದೆ. ಆರ್ಥಿಕವಾಗಿ ತುಂಬಾನೇ ಪ್ರಯೋಜನೇಕಾರಿಯಾಗಿದೆ. ಹಣಕಾಸಿನ ದೃಷ್ಟಿಯಿಂದಲ ಈ ಅವಧಿ ಅನುಕೂಲಕರವಾಗಿರಲಿದೆ. ಕುಟುಂಬ ಬದುಕು ಚೆನ್ನಾಗಿರಲಿದೆ, ಆರೋಗ್ಯ ಕೂಡ ಉತ್ತಮವಾಗಿರಲಿದೆ.


ಸಿಂಹ ರಾಶಿ

ಈ ಸೂರ್ಯ ಸಂಚಾರ ಸಿಂಹ ರಾಶಿಯವರಿಗೆ ಪ್ರಯೋಜಕಾರಿಯಾಗಿದೆ, ನಿಮ್ಮ ಸ್ಥಾನ ಮಾನ ಹೆಚ್ಚಾಗಲಿದೆ. ಈ ಅವಧಿಯಲ್ಲಿ ವೃತ್ತಿ ಜೀವನದಲ್ಲಿ ನೀವು ಉತ್ತಮ ಅವಕಾಶ ಪಡೆಯುತ್ತೀರಿ. ಆರ್ಥಿಕ ದೃಷ್ಟಿಯಿಂದಲೂ ಈ ಸಮಯ ಪ್ರಯೋಜನಕಾರಿಯಾಗಿದೆ. ಇನ್ನು ನೀವು ಅನಗ್ಯತ ವಿವಾದಗಳಿಗೆ ಸಿಲುಕಿಕೊಳ್ಳದಂತೆ ಸಲಹೆ ನೀಡಲಾಗುವುದು. ಆರೋಗ್ಯ ಸಮಸ್ಯೆಗಳಿದ್ದರೆ ನಿರ್ಲಕ್ಷ್ಯ ಮಾಡಬೇಡಿ.


ಕನ್ಯಾ ರಾಶಿ

ಈ ಸೂರ್ಯ ಸಂಚಾರ ನಿಮಗೆ ತುಂಬಾನೇ ಪ್ರಯೋಜನಕಾರಿಯಾಗಿದೆ. ಹಣವನ್ನು ಉಳಿತಾಯ ಮಾಡಲು ಸಾಧ್ಯವಾಗಲಿದೆ, ಹೂಡಿಕೆಯಿಂದ ನೀವು ಉತ್ತಮ ಲಾಭ ಪಡೆಯಲು ಸಾಧ್ಯವಾಗಲಿದೆ. ಆರ್ಥಿಕವಾಗಿ ನಿಮಗೆ ತುಂಬಾನೇ ಪ್ರಯೋಜನಕಾರಿಯಾಗಿದೆ. ನಿಮ್ಮ ವೈಯಕ್ತಿಕ ಹಾಗೂ ವೃತ್ತಿ ಬದುಕು ಎರಡೂ ಚೆನ್ನಾಗಿರಲಿದೆ.

ತುಲಾ ರಾಶಿ

ತುಲಾ ರಾಶಿಯವರು ಈ ಅವಧಿಯಲ್ಲಿ ಸ್ವಲ್ಪ ಜಾಗ್ರತೆವಹಿಸಬೇಕು, ಕೆಲ ಸಮಸ್ಯೆಯನ್ನು ಎದುರಿಸಬೇಕಾಗಿ ಬರಬಹುದು. ನೀವು ಯಾರೊಂದಿಗೂ ಜಗಳ ಮಾಡಬೇಡಿ, ಕೋಪವನ್ನು ನಿಯಂತ್ರಿಸಿ, ಪ್ರತಿಕೂಲ ಸಂದರ್ಭದಲ್ಲಿ ತಾಳ್ಮೆಯಿಂದ ಎದುರಿಸಿ. ಖರ್ಚು-ವೆಚ್ಚಗಳ ನಡುವೆ ಸಮತೋಲನ ಕಾಪಾಡಲು ಕೂಡ ಕಷ್ಟವಾಗುವುದು. ಕುಟುಂಬ ಜೀವನದ ಕಡೆಗೆ ಗಮನಹರಿಸಿ.

ವೃಶ್ಚಿಕ ರಾಶಿ

ವೃಶ್ಚಿಕ ರಾಶಿಯವರಿಗೆ ಈ ಸೂರ್ಯ ಸಂಚಾರ ತುಂಬಾನೇ ಅನುಕೂಲಕರವಾಗಿದೆ. ವೃತ್ತಿ ಬದುಕಿನಲ್ಲಿ ಉತ್ತಮ ಅವಕಾಶಗಳು ದೊರೆಯಲಿದೆ. ಈ ಸಮಯದಲ್ಲಿ ನೀವು ಕೆಲಸದ ಕಡೆಗೆ ತುಂಬಾನೇ ಗಮನಹರಿಸಿ. ವ್ಯಾಪಾರಸ್ಥರಿಗೆ ಈ ಅವಧಿ ಅನುಕೂಲಕರವಾಗಿದೆ. ಆರೋಗ್ಯದ ವಿಷಯದಲ್ಲಿ ನಿರ್ಲಕ್ಷ್ಯ ಮಾಡಬೇಡಿ.

ಧನು ರಾಶಿ

ಧನು ರಾಶಿಯವರು ಹೆಚ್ಚಿನ ಶ್ರಮ ಹಾಕಬೇಕಾಗುತ್ತದೆ, ನಿಮ್ಮ ಕೆಲಸದಲ್ಲಿ ಬರುವ ಉತ್ತಮ ಅವಕಾಶಗಳನ್ನು ಮಿಸ್‌ ಮಾಡದಿರಿ. ಆರ್ಥಿಕ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿದೆ. ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಮಾಡಬೇಡಿ. ಕುಟುಂಬ ಜೀವನದ ಕಡೆಗೆ ಗಮನಹರಿಸಿ.

ಮಕರ ರಾಶಿ

ಈ ಸೂರ್ಯ ಸಂಚಾರ ಮಕರ ರಾಶಿಯವರಿಗೆ ತುಂಬಾನೇ ಅನುಕೂಲಕರವಾಗಿರಲಿದೆ, ಕೆಲಸದಲ್ಲಿ ನಿಮಗೆ ಉತ್ತಮ ಅವಕಾಶ ದೊರೆಯಲಿದೆ. ವೃತ್ತಿ ಬದುಕಿನಲ್ಲಿ ನಿಮಗೆ ಉತ್ತಮ ಅವಕಾಶಗಳು ದೊರೆಯಲಿದೆ. ಆರ್ಥಿಕವಾಗಿ ಪ್ರಯೋಜನಕಾರಿಯಾಗಿದೆ. ವೈಯಕ್ತಿಕ ಬದುಕು ಕೂಡ ತುಂಬಾ ಚೆನ್ನಾಗಿರಲಿದೆ.


ಕುಂಭ ರಾಶಿ

ಕುಂಭ ರಾಶಿಯಲ್ಲಿ 2ನೇ ಮನೆಯಲ್ಲಿರುವ ಸೂರ್ಯನು ನಿಮಗೆ ತುಂಬಾನೇ ಉತ್ತಮ ಪ್ರಯೋಜನ ನೀಡಲಿದೆ, ಕುಟುಂಬ ಬದುಕಿನಲ್ಲಿ ಸ್ಥಾನಮಾನ ಹೆಚ್ಚಾಗಲಿದೆ. ಆರ್ಥಿಕ ದೃಷ್ಟಿಯಿಂದಲೂ ಈ ಅವಧಿ ಅನುಕೂಲಕರವಾಗಿದೆ. ವ್ಯಾಪಾರಿಗಳು ಉತ್ತಮ ಲಾಭ ಪಡೆಯುತ್ತೀರಿ. ಆರೋಗ್ಯ ಜೀವನ ಚೆನ್ನಾಗಿರಲಿದೆ.

ಮೀನ ರಾಶಿ

ಮೀನ ರಾಶಿಯವರಿಗೆ ಈ ಅವಧಿ ನಿಮಗೆ ಪ್ರಯೋಜನಕಾರಿಯಾಗಿದೆ. ಕೆಲಸ ಕಾರ್ಯದಲ್ಲಿ ನೀವು ಯಶಸ್ಸು ಪಡೆಯುತ್ತೀರಿ. ಆರ್ಥಿಕವಾಗಿ ನಿಮಗೆ ತುಂಬಾನೇ ಪ್ರಯೋಜನಕಾರಿಯಾಗಿದೆ. ವ್ಯಾಪಾರಸ್ಥರು ಉತ್ತಮ ಲಾಭ ಪಡೆಯುತ್ತೀರಿ. ಕುಟುಂಬ ಬದುಕು ಚೆನ್ನಾಗಿರಲಿದೆ.

ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ

Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.

English summary

Sun Transit In Meena Rashi 2025: Effects On 12 Zodiac Signs In Kannada

Sun Transit In Meena Rashi 2025: Here is how it effects on 12 zodiac signs, read on...
Story first published: Thursday, March 13, 2025, 19:29 [IST]
X
Desktop Bottom Promotion