Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಮಾ. 14ಕ್ಕೆ ಸೂರ್ಯ ಸಂಚಾರ: ಇನ್ನು 30 ದಿನ ಈ ರಾಶಿಗಳಿಗೆ ಸೂರ್ಯ ಕೃಪೆಯಿಂದ ಅದೃಷ್ಟದ ಸಮಯ
ಮಾರ್ಚ್ 14ಕ್ಕೆ ಸೂರ್ಯ ಮೀನ ರಾಶಿಗೆ ಸಂಚಾರ ಮಾಡಿದಾಗ ಅದು ದ್ವಾದಶ ರಾಶಿಗಳ ಮೇಲೆ ಬೀರುವ ಪ್ರಭಾವ ಭಿನ್ನವಾಗಿರುತ್ತದೆ, ಈ ಸಂಚಾರ ಕೆಲವೊಂದು ರಾಶಿಗಳಿಗೆ ತುಂಬಾನೇ ಅದ್ಭುತವಾಗಿರಲಿದೆ, ಈ ರಾಶಿಗಳಿಗೆ ಈ ಅವಧಿ ಅನುಕೂಲಕರವಾಗಿದೆ, ಬನ್ನಿ ಆ ಅದೃಷ್ಟದ ರಾಶಿಗಳು ಯಾವುವು ಎಂದು ನೋಡೋಣ ಬನ್ನಿ:

ವೃಷಭ ರಾಶಿ
ವೃಷಭ ರಾಶಿಯವರಿಗೆ ಈ ಅವಧಿ ಅನುಕೂಲಕರವಾಗಿದೆ, ಆದಾಯದ ದೃಷ್ಟಿಯಿಂದ ಈ ಅವಧಿ ಉತ್ತಮವಾಗಿರಲಿದೆ. ವ್ಯಾಪಾರಸ್ಥರು ಈ ಅವಧಿಯಲ್ಲಿ ಉತ್ತಮ ಲಾಭ ಗಳಿಸಲು ಸಾಧ್ಯವಾಗುವುದು. ಉದ್ಯೋಗದಲ್ಲಿ ಹೊಸ ಅವಕಾಶಗಳು ದೊರೆಯಲಿದೆ. ಇನ್ನು ಕುಟುಂಬ ಜೀವನ ಚೆನ್ನಾಗಿರಲಿದೆ. ವೈವಾಹಿಕ ಜೀವನ ತುಂಬಾ ಚೆನ್ನಾಗಿರಲಿದೆ. ನಿಮ್ಮಿಬ್ಬರಲ್ಲಿ ಉತ್ತಮ ಹೊಂದಾಣಿಕೆ ಇರಲಿದೆ. ನಿಮ್ಮ ಮೂಲಭೂತ ಸೌಕರ್ಯ ಹೆಚ್ಚಾಗಲಿದೆ. ಆರೋಗ್ಯ ಉತ್ತಮವಾಗಿರಲಿದೆ.
ಮಿಥುನ ರಾಶಿ
ಮೀನ ರಾಶಿಗೆ ಸೂರ್ಯ ಸಂಚಾರ ತುಂಬಾ ಉತ್ತಮವಾಗಿರಲಿದೆ. ವೃತ್ತಿ ಜೀವನದಲ್ಲಿ ಅದ್ಭುತವಾದದ್ದನ್ನು ಸಾಧಿಸುವಲ್ಲಿ ನೀವು ಯಶಸ್ವಿಯಾಗಬಹುದು. ಸೂರ್ಯ ಸಂಚಾರದ ಈ ಅವಧಿಯಲ್ಲಿ ನೀವು ಉತ್ತಮ ಪ್ರಗತಿ ಕಾಣುವಿರಿ. ಈ ಅವಧಿ ಹೆಚ್ಚು ಲಾಭದಾಯಕವಾಗಿರಲಿದೆ. ಈ ಸಾಗಣೆಯ ಸಮಯದಲ್ಲಿ ನೀವು ದೊಡ್ಡ ಲಾಭವನ್ನು ಗಳಿಸಲು ಸಾಧ್ಯವಾಗುವುದು. ಈ ಅವಧಿಯಲ್ಲಿ ಹಣಕಾಸಿನ ಪರಿಸ್ಥಿತಿ ಚೆನ್ನಾಗಿರಲಿದೆ. ಸೂರ್ಯ ಮೀನ ರಾಶಿಯಲ್ಲಿ ಇರುವಾಗ ಹಣ ಉಳಿತಾಯವಾಗುವುದು. ಇನ್ನು ಕುಟುಂಬದ ದೃಷ್ಟಿಯಿಂದಲೂ ಈ ಅವಧಿ ಉತ್ತಮವಾಗಿರಲಿದೆ, ವೈವಾಹಿಕ ಜೀವನ ಚೆನ್ನಾಗಿರಲಿದೆ.
ಕನ್ಯಾ ರಾಶಿ
ಈ ಸೂರ್ಯ ಸಂಚಾರ ಕನ್ಯಾ ರಾಶಿಯವರಿಗೆ ಅನುಕೂಲಕರವಾಗಿದೆ. ಈ ಅವಧಿಯಲ್ಲಿ ನಿಮ್ಮ ಆದಾಯದಲ್ಲಿ ಅನಿರೀಕ್ಷಿತ ಹೆಚ್ಚಳ ಕಂಡುಬರಲಿದೆ. ಈ ಅವಧಿಯಲ್ಲಿ ನಿಮ್ಮ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಈ ಅವಧಿಯಲ್ಲಿ ನೀವು ಹೆಚ್ಚಿನ ಮಟ್ಟದ ಲಾಭವನ್ನು ಪಡೆಯುವ ಸಾಧ್ಯತೆಯಿದೆ. ವ್ಯಾಪಾರಿಗಳಿಗೆ ಈ ಸಮಯ ತುಂಬಾನೇ ಲಾಭದಾಯಕವಾಗಿರಲಿದೆ. ಆರ್ಥಿಕ ಪ್ರಯೋಜನ ಸಿಗಲಿದೆ. ನಿಮ್ಮಿಬ್ಬರಲ್ಲಿ ಹೊಂದಾಣಿಕೆ ಇರಲಿದೆ. ಆರೋಗ್ಯ ಉತ್ತಮವಾಗಿರಲಿದೆ.
ಧನು ರಾಶಿ
ಮೀನ ರಾಶಿಗೆ ಸೂರ್ಯ ಸಂಚಾರಧನು ರಾಶಿಯವರಿಗೆ ತುಂಬಾನೇ ಅದೃಷ್ಟಕರ. ಕುಟುಂಬ ಜೀವನದಲ್ಲಿ ಸಂತೋಷ, ಸಮೃದ್ಧಿ ಇರಲಿದೆ. ವೃತ್ತಿ ಬದುಕಿನಲ್ಲಿ ನೀವು ಯಶಸ್ವಿ ಕಾಣುತ್ತೀರಿ. ವ್ಯಾಪಾರಿಗಳು ಉತ್ತಮ ಲಾಭ ಗಳಿಸಲು ಸಾಧ್ಯವಾಗುವುದು. ಸೂರ್ಯನ ಈ ಸಾಗಣೆಯ ಸಮಯದಲ್ಲಿ ಷೇರು ಮಾರುಕಟ್ಟೆಯಲ್ಲಿ ಉತ್ತಮ ಲಾಭ ಗಳಿಸುತ್ತೀರಿ. ಕುಟುಂಬ ಜೀವನದಲ್ಲಿ ಖುಷಿ, ನೆಮ್ಮದಿ ಇರಲಿದೆ. ಆರೋಗ್ಯ ಉತ್ತಮವಾಗಿರಲಿದೆ.
ಸೂರ್ಯ ಮಂತ್ರಗಳು
'ಓಂ ಹ್ರೀಂ ಘ್ರೀಂ ಸೂರ್ಯಾಯ ನಮಃ''
ಈ ಸೂರ್ಯ ಮಂತ್ರ ಪಠಣೆ ಮಾಡುವುದರಿಂದ ಆರೋಗ್ಯ, ಸಮೃದ್ಧಿ ಹೆಚ್ಚಾಗುವುದು, ಈ ಮಂತ್ರವನ್ನು ಬೆಳಗ್ಗೆ ಸೂರ್ಯನಿಗೆ ಸೂರ್ಯೋದಯದ ಸಮಯದಲ್ಲಿ ಪಠಣೆ ಮಾಡಬೇಕು.
ಆದಿತ್ಯ ಹೃದಯಂ ಪುಣ್ಯಂ ಸರ್ವ ಶತ್ರು ವಿನಾಶನಂ''
ಶತ್ರುದೋಷ ನಿವಾರಣೆಗೆ, ಸರ್ವ ಸಂಕಷ್ಟಗಳ ನಿವಾರಣೆಗೆ ಈ ಮಂತ್ರ ಪಠಣೆ ಮಾಡುವುದು ಒಳ್ಳೆಯದು.
''ಓಂ ಘೃಣಿ ಸೂರ್ಯಾಯ ನಮಃ''
ಈ ಮಂತ್ರ ಪಠಣೆ ಮಾಡುವುದರಿಂದ ವೃತ್ತಿ ಜೀವನದಲ್ಲಿ ಪ್ರಗತಿ ಕಾಣಬಹುದು. ಈ ಮಂತ್ರ ಪ್ರತಿನಿತ್ಯ ಪಠಣೆ ಮಾಡಬೇಕು.
ಓಂ ಶ್ರೀಂ ಹ್ರೀಂ ಸೂರ್ಯಾಯ ನಮಃ''
ಈ ಮಂತ್ರ ಪಠಣೆ ಮಾಡುವುದರಿಂದ ಆರ್ಥಿಕ ಸ್ಥಿತಿಯನ್ನು ಸುಧಾರಣೆ ಕಂಡು ಬರುವುದು, ಆರ್ಥಿಕ ಸಾಲದಿಂದ ಮುಕ್ತರಾಗಲು ಈ ಮಂತ್ರ ಪಠಣೆ ಮಾಡಿ.
''ಆದಿತ್ಯ ಹೃದಯ ಸ್ತೋತ್ರ''
ಈ ಮಂತ್ರ ಪಠಣೆ ಮಾಡುವುದರಿಂದ ಆರೋಗ್ಯ ಸಮಸ್ಯೆಯಿಂದ ಮುಕ್ತಿಯನ್ನು ಪಡೆಯುತ್ತಾರೆ.
ಓಂ ಆದಿತ್ಯಾಯ ವಿದ್ಮಹೇ
ದಿವಾಕರಾಯ ಧೀಮಹಿ
ತನ್ನೋ ಸೂರ್ಯಃ ಪ್ರಚೋದಯಾತ್''.
ಈ ಮಂತ್ರ ಪಠಣೆ ಮಾಡುವುದರಿಂದ ಏಕಾಗ್ರತೆ ಹೆಚ್ಚಾಗುವುದು, ಮಕ್ಕಳಲ್ಲಿ ಗ್ರಹಿಕೆಯ ಶಕ್ತಿ ಹೆಚ್ಚಾಗುವುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications