Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಮೀನ ರಾಶಿಗೆ ಸೂರ್ಯ ಸಂಚಾರ 2024: ಈ 5 ರಾಶಿಯವರಿಗೆ ಅನುಕೂಲಕರವಲ್ಲ
ಸೂರ್ಯ ಮಾರ್ಚ್ 14ಕ್ಕೆ ಮೀನ ರಾಶಿಗೆ ಸಂಚರಿಸಲಿದೆ, ಸೂರ್ಯ ಮೀನ ರಾಶಿಗೆ ಸಂಚರಿಸಿದಾಗ ಸೂರ್ಯ ಸ್ಥಾನ ಕೆಲವೊಂದು ರಾಶಿಗಳಿಗೆ ಅನುಕೂಲಕರವಲ್ಲ, ಈ ಅವಧಿಯಲ್ಲಿ ಯಾವೆಲ್ಲಾ ರಾಶಿಗಳು ಹೆಚ್ಚು ಜಾಗ್ರತೆವಹಿಸಬೇಕು ನೋಡೋಣ ಬನ್ನಿ:

ಮೇಷ ರಾಶಿ
ಈ ಅವಧಿ ನಿಮಗೆ ಅಷ್ಟೊಂದು ಅನುಕೂಲಕರವಾಗಿರಲ್ಲ, ನೀವು ಈ ಅವಧಿಯಲ್ಲಿ ತುಂಬಾನೇ ಸವಾಲುಗಳನ್ನು ಎದುರಿಸಬಹುದು, ವೃತ್ತಿ ಜೀವನದಲ್ಲಿ ಅಡೆತಡೆಗಳು ಎದುರಾಗಬಹುದು, ಅತಿಯಾದ ಕೆಲಸದ ಒತ್ತಡ ಮಾನಸಿಕ ಒತ್ತಡ ಹೆಚ್ಚಿಸಲಿದೆ. ವ್ಯಾಪಾರಿಗಳು ಈ ಸಮಯದಲ್ಲಿ ನಷ್ಟವನ್ನು ಎದುರಿಸಬೇಕಾಗಬಹುದು. ನಿಮ್ಮ ಪ್ರತಿಸ್ಪರ್ಧಿಗಳಿಂದ ನೀವು ಕಠಿಣ ಸ್ಪರ್ಧೆಯನ್ನು ಎದುರಿಸಲಿದ್ದೀರಿ. ಈ ಅವಧಿಯಲ್ಲಿ ಸಂಬಂಧದಲ್ಲಿಯೂ ಕೆಲ ಭಿನ್ನಾಭಿಪ್ರಾಯ ಉಂಟಾಗಬಹುದು, ಈ ಅವಧಿಯಲ್ಲಿ ನೀವು ಆರೋಗ್ಯದ ಕಡೆಗೆ ಹೆಚ್ಚು ಗಮನಹರಿಸುವುದು ಒಳ್ಳೆಯದು.
ಸಿಂಹ ರಾಶಿ
ಈ ಸೂರ್ಯ ಸಂಚಾರ ನಿಮಗೆ ಅನುಕೂಲಕರವಲ್ಲ, ಸೂರ್ಯನ ಸ್ಥಾನ ನಿಮ್ಮ ಕುಟುಂಬ ಬದುಕಿನಲ್ಲಿ ಕೆಲ ಸಮಸ್ಯೆ ತರಬಹುದು. ವ್ಯಾಪಾರಿಗಳು ಈ ಅವಧಿಯಲ್ಲಿ ಕಠಿಣ ಸ್ಪರ್ಧೆ ಎದುರಿಸಬೇಕಾಗುವುದು, ಬಯಸಿದ ಲಾಭ ಗಳಿಸುವುದು ಕಷ್ಟ. ವೃತ್ತಿ ಜೀವನದಲ್ಲಿಯೂ ಜಾಗ್ರತೆವಹಿಸಬೇಕು. ಈ ಅವಧಿಯಲ್ಲಿ ಬರೀ ನಷ್ಟ ಅಂತಲ್ಲ, ಲಾಭವೂ ಇರಲಿದೆ, ಖರ್ಚು ಸರಿದೂಗಿಸಿಕೊಂಡು ಹೋದರೆ ಆರ್ಥಿಕ ಸಮಸ್ಯೆ ಉಂಟಾಗುವುದಿಲ್ಲ. ಈ ಅವಧಿಯಲ್ಲಿ ನಿಮ್ಮ ಬದ್ಧತೆಗಳು ಸಹ ಹೆಚ್ಚಾಗುವ ಸಾಧ್ಯತೆಯಿದೆ. ಆರೋಗ್ಯದ ಕಡೆಗೆ ಗಮನಹರಿಸಿ. ಹಣಕಾಸಿನ ಬಗ್ಗೆ ಹೆಚ್ಚಿನ ಜಾಗ್ರತೆವಹಿಸಿ.
ವೃಶ್ಚಿಕ ರಾಶಿ
ಮೀನ ರಾಶಿಯಲ್ಲಿ ಸೂರ್ಯನ ಸಂಚಾರವು ವೃಶ್ಚಿಕ ರಾಶಿಯವರಿಗೆ ಒತ್ತಡ ಹೆಚ್ಚಿಸಲಿದೆ. ವೃತ್ತಿ ಬದುಕಿನಲ್ಲಿ ಅಧಿಕ ಒತ್ತಡ ಇರಲಿದೆ. ಕೆಲಸದಲ್ಲಿ ಅತೃಪ್ತಿ ಉಂಟಾಗಿ ಕೆಲಸ ಬದಲಾಯಿಸಲು ಯೋಚಿಸಬಹುದು, ಆದರೆ ಅವಸರದಲ್ಲಿ ನಿರ್ಧಾರ ತೆಗೆದುಕೊಳ್ಳದಂತೆ ಜಾಗ್ರತೆವಹಿಸಿ. ಕುಟುಂಬ ಜೀವನದಲ್ಲಿ ಪರಿಸ್ಥಿತಿ ಅಷ್ಟು ಚೆನ್ನಾಗಿರಲ್ಲ, ಸೂರ್ಯನ ಈ ಸಂಕ್ರಮಣದ ಸಮಯದಲ್ಲಿ, ನಿಮ್ಮ ಸಂಗಾತಿಯೊಂದಿಗೆ ಉತ್ತಮ ಸಂಬಂಧವನ್ನು ಕಾಪಾಡಿಕೊಳ್ಳಲು ನಿಮಗೆ ಸಾಧ್ಯವಾಗುವುದಿಲ್ಲ, ನಿಮ್ಮಿಬ್ಬರ ನಡುವೆ ಕೆಲ ಮನಸ್ತಾಪಗಳು ಉಂಟಾಗುವುದು. ಆರೋಗ್ಯದ ಕಡೆಗೆ ಗಮನಹರಿಸಿ.
ಕುಂಭ ರಾಶಿ
ಕುಂಭ ರಾಶಿಯವರಿಗೆ ಸೂರ್ಯನ ಈ ಸಂಚಾರ ಒಳ್ಳೆಯದಲ್ಲ. ಪಾಲುದಾರಿಕೆಯಲ್ಲಿ ವ್ಯವಹಾರ ಮಾಡುವವರು ತುಂಬಾನೇ ಜಾಗ್ರತೆವಹಿಸಬೇಕಯ, ಪಲುದಾರರೊಂದಿಗೆ ಭಿನ್ನಾಭಿಪ್ರಾಯ ಬರಬಹುದು. ವ್ಯಾಪಾರಸ್ಥರು ಹಲವು ಸಮಸ್ಯೆ ಎದುರಿಸಬೇಕಾಗುವುದು. ಈ ಸಾಗಣೆಯ ಸಮಯದಲ್ಲಿ ನಿಮ್ಮ ವೆಚ್ಚಗಳು ಹೆಚ್ಚಾಗಲಿವೆ. ಈ ಅವಧಿಯಲ್ಲಿ ನೀವು ಕೆಲಸದ ಒತ್ತಡ , ಅನೇಕ ಅಡೆತಡೆಗಳನ್ನು ಎದುರಿಸಬೇಕಾಗಬಹುದು, ವ್ಯಾಪಾರಿಗಳು ನಿರೀಕ್ಷಿತ ಲಾಭವನ್ನು ಗಳಿಸಲು ಸಾಧ್ಯವಾಗುವುದಿಲ್ಲ. ಈ ಸಮಯದಲ್ಲಿ ಹಣದ ಚಿಂತೆ ಕಾಡುವುದು, ಅತಿಯಾದ ಖರ್ಚು ಸಮಸ್ಯೆ ಹೆಚ್ಚಿಸುವುದು.
ಮೀನ ರಾಶಿ
ಮೀನ ರಾಶಿಯಲ್ಲಿ ಸೂರ್ಯನ ಸಂಚಾರವು ನಿಮ್ಮಲ್ಲಿ ಅಭದ್ರತೆ ಮತ್ತು ಆತ್ಮವಿಶ್ವಾಸದ ಕೊರತೆಯನ್ನು ಉಂಟು ಮಾಡುವುದು. ಉದ್ಯೋಗದ ವಿಷಯದಲ್ಲಿ ಸಾಕಷ್ಟು ಒತ್ತಡ ಅನುಭವಿಸುವಿರಿ. ವ್ಯಾಪಾರಿಗಳಿಗೂ ಈ ಅವಧಿ ಮಿಶ್ರಫಲ. ಈ ಅವಧಿಯಲ್ಲಿ, ನೀವು ನಷ್ಟವನ್ನು ಅನುಭವಿಸಬೇಕಾಗಬಹುದು . ಈ ಅವಧಿಯಲ್ಲಿ ಖರ್ಚು ಹೆಚ್ಚಾಗಲಿದೆ. ನಿಮ್ಮ ಜೀವನ ಸಂಗಾತಿಯೊಂದಿಗಿನ ನಿಮ್ಮ ಸಂಬಂಧದಲ್ಲಿ ಅಗತ್ಯ ಹೊಂದಾಣಿಕೆಯನ್ನು ಕಾಪಾಡಿಕೊಳ್ಳಲು ನೀವು ವಿಫಲರಾಗಬಹುದು, ಇಬ್ಬರು ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳಲು ಪ್ರಯತ್ನಿಸುವುದು ಒಳ್ಳೆಯದು. ಆರೋಗ್ಯದ ಕಡೆಗೂ ಗಮನಹರಿಸಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











