ನವೆಂಬರ್‌ 16ಕ್ಕೆ ವೃಶ್ಚಿಕ ರಾಶಿಗೆ ಸೂರ್ಯ ಸಂಚಾರ: ದ್ವಾದಶ ರಾಶಿಗಳ ಮೇಲೆ ಬೀರುವ ಪ್ರಭಾವವೇನು?

ಪ್ರತಿ ತಿಂಗಳು ಸೂರ್ಯ ರಾಶಿ ಬದಲಾವಣೆ ಮಾಡುತ್ತದೆ, ನವೆಂಬರ್‌ 16ಕ್ಕೆ ಸೂರ್ಯನು ವೃಶ್ಚಿಕ ರಾಶಿಗೆ ಸಂಚರಿಸಲಿದೆ, ಈ ಸಂಚಾರ ದ್ವಾದಶ ರಾಶಿಗಳ ಮೇಲೆ ಪ್ರಭಾವ ಬೀರಲಿದ್ದು ಯಾವ ರಾಶಿಗಳ ಮೇಲೆ ಹೇಗಿರಲಿದೆ ಎಂದು ನೋಡೋಣ:

ಮೇಷ ರಾಶಿ
ಈ ಸೂರ್ಯ ಸಂಚಾರ ವೃತ್ತಿ ಜೀವನದ ದೃಷ್ಟಿಯಿಂದ ನಿಮಗೆ ಅನುಕೂಲಕರವಾಗಿರಲಿದೆ. ವ್ಯವಹಾರಿಗಳಿಗೆ ಧನ ಲಾಭವಾಗಿರಲಿದೆ. ಆರ್ಥಿಕವಾಗಿಈ ಅವಧಿ ನಿಮಗೆ ಉತ್ತಮವಾಗಿರಲಿದೆ. ನಿಮ್ಮ ಕುಟುಂಬ ಜೀವನ ಚೆನ್ನಾಗಿರಲಿದೆ, ಆರೋಗ್ಯ ಚೆನ್ನಾಗಿರಲಿದೆ.

ವೃಷಭ ರಾಶಿ
ವೃತ್ತಿ ಬದುಕಿನಲ್ಲಿ ನೀವು ಉತ್ತಮ ಫಲ ಪಡೆಯುತ್ತೀರಿ, ವ್ಯಾಪಾರದಲ್ಲಿ ಉತ್ತಮ ಬೆಳವಣಿಗೆ ಕಂಡು ಬರಲಿದೆ. ಹಣಕಾಸಿನ ದೃಷ್ಟಿಯಿಂದ ಈ ಅವಧಿ ಉತ್ತಮವಾಗಿರಲಿದೆ. ವೈಯಕ್ತಿಕ ಜೀವನ ತುಂಬಾ ಚೆನ್ನಾಗಿರಲಿದೆ, ಈ ಸೂರ್ಯ ಸಂಚಾರ ಆರೋಗ್ಯದ ದೃಷ್ಟಿಯಿಂದ ನಿಮಗೆ ಅನುಕೂಲಕರವಾಗಿರಲಿದೆ.

ಮಿಥುನ ರಾಶಿ
ಈ ಸೂರ್ಯ ಸಂಚಾರ ವೃತ್ತಿ ಬದುಕಿನಲ್ಲಿ ಉತ್ತಮ ಅವಕಾಶ ದೊರೆಯಲಿದೆ, ವ್ಯಾಪಾರಿಗಳು ಉತ್ತಮ ಲಾಭ ಪಡೆಯುತ್ತೀರಿ. ಕುಟುಂಬ ಜೀವನ ತುಂಬಾ ಚೆನ್ನಾಗಿರಲಿದೆ. ಸೂರ್ಯನ ಪ್ರಭಾವದಿಂದ ನಿಮ್ಮ ಆರೋಗ್ಯ ಚೆನ್ನಾಗಿರಲಿದೆ.

ಕರ್ಕ ರಾಶಿ
ಈ ಸೂರ್ಯ ಸಂಚಾರದ ಸಮಯದಲ್ಲಿ ನೀವು ಹಣದ ವಿಷಯದಲ್ಲಿ ಜಾಗ್ರತೆವಹಿಸಬೇಕು, ವೃತ್ತಿ ಬದುಕಿನಲ್ಲಿ ನೀವು ಯೋಜನೆ ರೂಪಿಸಿ ಅದರಂತೆ ಕೆಲಸ ಕಾರ್ಯಗಳನ್ನು ಮಾಡಿ ಮುಗಿಸಲು ಪ್ರಯತ್ನಿಸುವುದು ಒಳ್ಳೆಯದು. ವ್ಯಾಪಾರಿಗಳಿಗೆ ಈ ಅವಧಿ ಸವಾಲಿನ ಸಮಯ. ಈ ಸಮಯದಲ್ಲಿ ಹಣದ ಖರ್ಚು ಹೆಚ್ಚಿರಲಿದೆ. ಕುಟುಂಬ ಜೀವನದ ಕಡೆಗೆ ಗಮನಹರಿಸಿ.

ಸಿಂಹ ರಾಶಿ
ಈ ಸೂರ್ಯ ಸಂಚಾರದ ಸಮಯದಲ್ಲಿ ಕೆಲಸದ ಒತ್ತಡ ಹೆಚ್ಚಿರಲಿದೆ, ಆದರೆ ಆರ್ಥಿಕವಾಗಿ ನಿಮಗೆ ಅನುಕೂಲಕರವಾಗಿದೆ. ವ್ಯಾಪಾರಿಗಳಿಗೆ ಈ ಸಮಯದಲ್ಲಿ ಧನ ಲಾಭವಾಗಲಿದೆ. ಈ ಸಮಯದಲ್ಲಿ ಕುಟುಂಬ ಜೀವನ ಚೆನ್ನಾಗಿರಲಿದೆ. ಆರೋಗ್ಯ ಬಗ್ಗೆ ನೋಡುವುದಾದರೆ
ಚರ್ಮ ಸಂಬಂಧಿತ ಸಮಸ್ಯೆವಿರಬಹುದು.

ಕನ್ಯಾ ರಾಶಿ
ಈ ಸೂರ್ಯ ಸಂಚಾರ ಸಮಯದಲ್ಲಿ ನೀವು ಹಣದ ಬಗ್ಗೆ ತುಂಬಾ ಜಾಗ್ರತೆವಹಿಸಬೇಕು. ವೃತ್ತಿ ಜೀವನದ ದೃಷ್ಟಿಯಿಂದ ನಿಮಗೆ ತುಂಬಾನೇ ಅನುಕೂಲಕರವಾಗಿರಲಿದೆ, ವ್ಯಾಪಾರಿಗಳಿಗೆ ಈ ಅವಧಿ ಲಾಭದಾಯಕವಾಗಿರಲಿದೆ. ಕುಟುಂಬ ಜೀವನದ ಕಡೆಗೆ ಗಮಹರಿಸಬೇಕು. ಆರೋಗ್ಯದ ಕಡೆಗೆ ಗಮನಹರಿಸಬೇಕು.

ತುಲಾ ರಾಶಿ
ತುಲಾ ರಾಶಿಯವರಿಗೆ ಈ ಅವಧಿ ತುಂಬಾನೇ ಅನುಕೂಲಕರವಾಗಿದೆ. ವ್ಯಾಪಾರಿಗಳಿಗೆ ಧನ ಲಾಭಗಳಿಸಲು ಸಾಧ್ಯವಾಗುವುದು. ಹಣದ ಉಳಿತಾಯ ಮಾಡಲು ಸಾಧ್ಯವಾಗುವುದು. ವೈವಾಹಿಕ ಜೀವನ ಚೆನ್ನಾಗಿರಲಿದೆ.

ವೃಶ್ಚಿಕ ರಾಶಿ
ವೃತ್ತಿ ಜೀವನದಲ್ಲಿ ತೃಪ್ತಿ ಇರಲ್ಲ, ನೀವು ಕೆಲಸವನ್ನು ಬದಲಾಯಿಸಲು ಆಲೋಚಿಸಬಹುದು, ಆದರೆ ಒಂದು ಕೆಲಸ ಸಿಕ್ಕಿದ ಮೇಲೆ ಬಿಡುವಂತೆ ಸಲಹೆ ನೀಡಲಾಗುವುದು. ಹಣದ ಬಗ್ಗೆ ಎಚ್ಚರಿಕೆವಹಿಸಬೇಕು, ವ್ಯಾಪಾರಿಗಳಿಗೆ ಹೆಚ್ಚಿನ ಹೂಡಿಕೆ ಮಾಡದಂತೆ ಸಲಹೆ ನೀಡಲಾಗುವುದು. ಕುಟುಂಬ ಜೀವನ ಚೆನ್ನಾಗಿರಲಿದೆ.

ಧನು ರಾಶಿ
ಈ ಸೂರ್ಯ ಸಂಚಾರ ಧನು ರಾಶಿಯವರಿಗೆ ಅನುಕೂಲಕರವಾಗಿರಲಿದೆ. ವ್ಯಾಪಾರಿಗಳಿಗೆ ಧನ ಲಾಭವಾಗಿರಲಿದೆ, ಹಣಕಾಸಿನ ದೃಷ್ಟಿಯಿಂದ ನೋಡುವುದಾದರೆ ಆದಾಯ ಹೆಚ್ಚಾಗುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಧನ ಲಾಭ ಗಳಿಸಲು ಸಾಧ್ಯವಾಗುವುದು. ಪ್ರೇಮಿಗಳಿಗೆ ಈ ಸಮಯ ಅನುಕೂಲಕರವಾಗಿರಲಿದೆ, ಈ ಸಂಕ್ರಮಣ ಆರೋಗ್ಯದ ದೃಷ್ಟಿಯಿಂದಲೂ ಉತ್ತಮವಾಗಿದೆ.

ಮಕರ ರಾಶಿ
ಸೂರ್ಯನು ವೃಶ್ಚಿಕ ರಾಶಿಯವರು ತುಂಬಾ ಜಾಗ್ರತೆವಹಿಸಿ. ಉದ್ಯೋಗದ ಬಗ್ಗೆ ಜಾಗ್ರತೆವಹಿಸಬೇಕು, ಕೆಲಸದಲ್ಲಿ ಅಭದ್ರತೆ ಕಾಡಬಹುದು. ವ್ಯಾಪಾರಿಗಳು ತಮ್ಮ ವ್ಯವಹಾರದ ಕಡೆಗೆ ಗಮನಹರಿಸಿ. ವೈಯಕ್ತಿಕ ಜೀವನದ ಕಡೆಗೆ ಗಮನಹರಿಸಬೇಕು. ಆರೋಗ್ಯ ಸಮಸ್ಯೆಗಳಿರಬಹುದು.

Sun Transit In Scorpio

ಕುಂಭ ರಾಶಿ
ಕುಂಭ ರಾಶಿಯವರಿಗೆ ಈ ಅವಧಿ ಅನುಕೂಲಕರವಾಗಿರಲಿದೆ. ವೃತ್ತಿ ಜೀವನದಲ್ಲಿ ಉತ್ತಮ ಅವಕಾಶ ಸಿಗಲಿದೆ. ವ್ಯಾಪಾರಿಗಳಿಗೆ ಈ ಸಂಚಾರ ಲಾಭ ತರಲಿದೆ. ಆರ್ಥಿಕವಾಗಿ ಈ ಅವಧಿ ಉತ್ತಮವಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ.

ಮೀನ ರಾಶಿ
ಈ ಸೂರ್ಯ ಸಂಚಾರ ನಿಮಗೆ ಹಠಾತ್‌ ಲಾಭ ದೊರೆಯಲಿದೆ. ವೃತ್ತಿ ಬದುಕಿನಲ್ಲಿ ತುಂಬಾನೇ ಒತ್ತಡವಿರಲಿದೆ. ವ್ಯಾಪಾರಿಗಳಿಗೆ ಈ ಅವಧಿ ಸರಸರಿಯಾಗಿರಲಿದೆ. ಈ ಅವಧಿಯಲ್ಲಿ ಖರ್ಚು ಹೆಚ್ಚಿರಲಿದೆ, ಈ ಸಮಯದಲ್ಲಿ ಸಾಲ ಪಡೆಯುವ ಸಾಧ್ಯತೆ ಇದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆವಿರಬಹುದು.

Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.

English summary

Sun Transit In Scorpio On November 16: Effects On 12 Zodiac Signs In Kannada

Sun Transit In Scorpio: Sun effects on 12 zodiac when it transit to vruschika rashi, read on
Story first published: Tuesday, November 12, 2024, 16:07 [IST]
X
Desktop Bottom Promotion