ಸೂರ್ಯ ಸಂಚಾರ: ವೃಶ್ಚಿಕ ರಾಶಿಯಲ್ಲಿ ಸೂರ್ಯ, ದ್ವಾದಶ ರಾಶಿಗಳ ಬದುಕಿನಲ್ಲಿ ಈ ಬದಲಾವಣೆಗಳಾಗಲಿದೆ

ನವಗ್ರಹಗಳ ಅಧಿಪತಿ ಸೂರ್ಯ ವೃಶ್ಚಿಕ ರಾಶಿಗೆ ಸಂಚರಿಸಿದ್ದಾನೆ, ಈ ಸಂಚಾರ ಪ್ರತಿಯೊಬ್ಬರ ಬದುಕಿನಲ್ಲಿಯೂ ಪ್ರಭಾವ ಬೀರಲಿದೆ, ನಿಮ್ಮ ರಾಶಿಗೆ ತಕ್ಕಂತೆ ಪ್ರಭಾವ ಬೀರಲಿದೆ. ಈ ಸಂಚಾರ 9 ರಾಶಿಗಳಿಗೆ ತುಂಬಾನೇ ಅನುಕೂಲಕರವಾಗಿದೆ, 3 ರಾಶಿಯವರ ಮೇಲೆ ಸ್ವಲ್ಪ ನಕರಾತ್ಮಕ ಪ್ರಭಾವ ಇದೆ, ನಿಮ್ಮ ರಾಶಿಗೆ ಹೇಗಿದೆ ಎಂದು ನೋಡೋಣ ಬನ್ನಿ:

Sun Transit In Scorpion

ಮೇಷ ರಾಶಿ
ಸೂರ್ಯನು ಮೇಷ ರಾಶಿಯ 5ನೇ ಮನೆಯಲ್ಲಿ ಇರಲಿದೆ, ಈ ಸೂರ್ಯ ಸಂಚಾರದ ಸಮಯದಲ್ಲಿ ವೃತ್ತಿ ಬದುಕಿನಲ್ಲಿ ತುಂಬಾನೇ ಒತ್ತಡವಿರಲಿದೆ. ಮಕ್ಕಳ ಬಗ್ಗೆ ಚಿಂತೆ ಕಾಡಬಹುದು, ಆರ್ಥಿಕವಾಗಿಯೂ ನೀವು ಜಾಗ್ರತೆವಹಿಸಬೇಕು. ಸಂಗಾತಿ ಜೊತೆಗೆ ಅನಗ್ಯತ ವಾದ ಮಾಡಲು ಹೋಗಬೇಡಿ, ಆದಷ್ಟು ತಾಳ್ಮೆಯಿಂದ ವರ್ತಿಸಿ, ವೈಯಕ್ತಿಕ ಬದುಕಿನಲ್ಲಿ ತಪ್ಪು ಕಲ್ಪನೆ, ಭಿನ್ನಾಭಿಪ್ರಾಯ ಹೆಚ್ಚಾಗಲು ಬಿಡಬೇಡಿ.

ವೃಷಭ ರಾಶಿ
ಈ ಸೂರ್ಯ ಸಂಚಾರ ವೃಷಭ ರಾಶಿಯವರಿಗೆ ಶುಭವಾಗಿದೆ, ವೃತ್ತಿ ಬದುಕಿನಲ್ಲಿ ಹೊಸ ಅವಕಾಶಗಳು ದೊರೆಯಲಿದೆ, ಹಣಕಾಸಿನ ದೃಷ್ಟಿಯಿಂದ ಈ ಅವಧಿ ನಿಮಗೆ ಅನುಕೂಲಕರವಾಗಿರಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ.

ಮಿಥುನ ರಾಶಿ
ಈ ಸೂರ್ಯ ಸಂಚಾರ ನಿಮಗೆ ಅನುಕೂಲಕರವಾಗಿರಲಿದೆ, ನಿಮ್ಮ ಕೆಲಸದಲ್ಲಿ ಪ್ರಗತಿ ದೊರೆಯಲಿದೆ, ಆರ್ಥಿಕವಾಗಿಯೂ ಉತ್ತಮವಾಗಿದೆ, ಹಣದ ಅವಶ್ಯಕತೆ ಸುಲಭವಾಗಿ ಪೂರೈಸಲು ಸಾಧ್ಯವಾಗುವುದು. ಕುಟುಂಬದಲ್ಲಿಯೂ ಸಂತೋಷದ ವಾತಾವರಣ ಇರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ.

ಕರ್ಕ ರಾಶಿ
ಈ ಅವಧಿಯಲ್ಲಿ ಮಕ್ಕಳ ಕುರಿತ ಚಿಂತೆ ಕಾಡಬಹುದು, ವೃತ್ತಿ ಜೀವನದಲ್ಲಿ ಅನೇಕ ಹೊಸ ಅವಕಾಶಗಳು ದೊರೆಯಲಿದೆ, ವ್ಯಾಪಾರಿಗಳಿಗೆ ಉತ್ತಮ ಆರ್ಥಿಕ ಪ್ರಯೋಜನ ಪಡೆಯಲು ಸಾಧ್ಯವಾಗುವುದು. ನಿಮ್ಮ ಹಾಗೂ ಸಂಗಾತಿ ನಡುವೆ ಬಾಂಧವ್ಯ ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ ಈ ಸಮಯ ಅನುಕೂಲಕರವಾಗಿರಲಿದೆ.

ಸಿಂಹ ರಾಶಿ
ಈ ಸೂರ್ಯ ಸಂಚಾರ ನಿಮಗೆ ಅನುಕೂಲಕರವಾಗಿರಲಿದೆ, ವೃತ್ತಿ ಬದುಕಿನಲ್ಲಿ ನಿಮಗೆ ಉತ್ತಮ ಅವಕಾಶ ದೊರೆಯಲಿದೆ, ಆರ್ಥಿಕವಾಗಿ ಉತ್ತಮವಾಗಿದೆ, ನಿಮ್ಮ ಉಳಿತಾಯ ಹೆಚ್ಚಾಗಲಿದೆ. ಸಂಗಾತಿಯ ಕಡೆಗೆ ಹೆಚ್ಚಿನ ಗಮನಹರಿಸುತ್ತೀರಿ, ಅವರ ಜೊತೆ ಹೆಚ್ಚಿನ ಸಮಯ ಕಳೆಯಲು ಪ್ರಯತ್ನಿಸುತ್ತೀರಿ. ಆರೋಗ್ಯದ ಕಡೆಯೂ ಗಮನಹರಿಸುತ್ತೀರಿ.

ಕನ್ಯಾ ರಾಶಿ
ಕನ್ಯಾ ರಾಶಿಯವರು ಸಂಬಂಧದ ಕಡೆಗೆ ಗಮನಹರಿಸಬೇಕು, ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಭಿನ್ನಾಭಿಪ್ರಾಯ ಬರಬಹುದು, ಒಡಹುಟ್ಟಿದವರ ಜೊತೆ ಮನಸ್ತಾಪವಿರಬಹುದು, ಸಂಬಂಧದಲ್ಲಿನ ಸಮಸ್ಯೆ ತಾಳ್ಮೆಯಿಂದ ಬಗೆಹರಿಸಲು ಪ್ರಯತ್ನಿಸಬೇಕು, ಹೂಡಿಕೆಗೆ ಈ ದಿನ ನಿಮಗೆ ಉತ್ತಮವಾಗಿದೆ, ಹಣಕಾಸಿನ ದೃಷ್ಟಿಯಿಂದ ನಿಮಗೆ ಅನುಕೂಲಕರವಾಗಿರಲಿದೆ.

ತುಲಾ ರಾಶಿ
ನೀವು ಹಣ ಉಳಿತಾಯದ ಕಡೆಗೆ ಗಮನಹರಿಸುವುದು ಒಳ್ಳೆಯದು. ಕೆಲಸಕ್ಕೆ ಸಂಬಂಧಿಸಿದ ಪ್ರಯಾಣದಿಂದ ಆರ್ಥಿಕ ಲಾಭ ಪಡೆಯಬಹುದು, ವ್ಯಾಪಾರಿಗಳಿಗೂ ಧನ ಲಾಭವಾಗಲಿದೆ, ವೈಯಕ್ತಿಕ ಬದುಕು ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವೆ ಉತ್ತಮ ಬಾಂಧವ್ಯ ಇರಲಿದೆ.

ವೃಶ್ಚಿಕ ರಾಶಿ
ಈ ಸೂರ್ಯ ಸಂಚಾರ ವೃತ್ತಿ ಬದುಕಿನ ದೃಷ್ಟಿಯಿಂದ ಅನುಕೂಲಕರವಾಗಿರಲಿದೆ, ಕೆಲಸ ಬದಲಾವಣೆ ಬಗ್ಗೆ ಆಲೋಚಿಸುತ್ತಿದ್ದರೆ ಉತ್ತಮ ಅವಕಾಶಗಳು ದೊರೆಯಲಿದೆ. ಆರ್ಥಿಕವಾಗಿ ಹಣ ಉಳಿತಾಯ ಮಾಡಲು ಸಾಧ್ಯವಾಗುವುದು. ವೈಯಕ್ತಿಕ ಬದುಕನ ದೃಷ್ಟಿಯಿಂದಲೂ ಈ ಅವಧಿ ನಿಮಗೆ ಅನುಕೂಲಕರವಾಗಿರಲಿದೆ. ಈ ಸಂಚಾರ ನಿಮಗೆ ಅನುಕೂಲಕರವಾಗಿದೆ.

ಧನು ರಾಶ
ಈ ಸಂಚಾರದ ಸಮಯದಲ್ಲಿ ದೂರ ಪ್ರಯಾಣದ ಸಾಧ್ಯತೆ ಇದೆ, ವೃತ್ತಿ ಬದುಕು ಚೆನ್ನಾಗಿರಲಿದೆ, ಹಣಕಾಸಿನ ದೃಷ್ಟಿಯಿಂದ ನೋಡುವುದಾದರೆ ಹಣವನ್ನು ಉಳಿತಾಯ ಮಾಡಲು ಸಾಧ್ಯವಾಗುವುದು. ಆರೋಗ್ಯದ ಬಗ್ಗೆ ಹೇಳುವುದಾದರೆ ಮೈಕೈ ನೋವಿನ ಸಮಸ್ಯೆವಿರಬಹುದು.

ಮಕರ ರಾಶಿ
ಈ ಸೂರ್ಯ ಸಂಚಾರ ವೃತ್ತಿ ಬದುಕಿನ ದೃಷ್ಟಿಯಿಂದ ನಿಮಗೆ ಅನುಕೂಳಕರವಾಗಿದೆ, ಆರ್ಥಿಕ ಪ್ರಯೋಜನಗಳನ್ನು ನೀಡಲಿದೆ. ವೃತ್ತಿ ಬದುಕಿನಲ್ಲಿ ಹೊಸ ಉದ್ಯೋಗವಕಾಶ ದೊರೆಯಲಿದೆ, ವೈವಾಹಿಕ ಜೀವನ ಚೆನ್ನಾಗಿರಲಿದೆ, ಆರೋಗ್ಯದ ಕಡೆಗೆ ತುಂಬಾ ಗಮನಹರಿಸುತ್ತೀರಿ. ಸಾಲ ಮಾಡಿದ್ದರೆ ಈ ಅವಧಿ ಸಾಲ ಮರುಪಾವತಿ ಮಾಡಲು ಸಾಧ್ಯವಾಗುವುದು.

ಕುಂಭ ರಾಶಿ
ವೃತ್ತಿ ಬದುಕಿನ ದೃಷ್ಟಿಯಿಂದ ಈ ಸೂರ್ಯ ಸಂಚಾರ ನಿಮಗೆ ತುಂಬಾನೇ ಅನುಕೂಲಕರವಾಗಿರಲಿದೆ. ಆರ್ಥಿಕವಾಗಿ ಉತ್ತಮ ಪ್ರಯೋಜನ ಪಡೆಯುತ್ತೀರಿ, ಹಣವನ್ನು ಉಳಿತಾಯ ಮಾಡಲು ಸಾಧ್ಯವಾಗುವುದು. ನಿಮ್ಮ ಹಾಗೂ ಸಂಗಾತಿ ನಡುವೆ ಬಾಂಧವ್ಯ ಚೆನ್ನಾಗಿರಲಿದೆ.

ಮೀನ ರಾಶಿ
ಆರ್ಥಿಕವಾಗಿ ಉತ್ತಮ ಪ್ರಯೋಜನ ಪಡೆಯುತ್ತೀರಿ, ವೃತ್ತಿ ಬದುಕಿನಲ್ಲಿ ಹೊಸ ಅವಕಾಶಗಳು ದೊರೆಯಲಿದೆ. ಆರ್ಥಿಕ ಸ್ಥಿತಿಯಲ್ಲಿ ಪ್ರಗತಿಯನ್ನು ಕಾಣಬಹುದು. ಆರೋಗ್ಯದ ದೃಷ್ಟಿಯಿಂದ ಉತ್ತಮವಾಗಿದೆ.

Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.

English summary

Sun Transit In Scorpion 2024: How It Effects On 12 Zodiac Signs In Kannada

Sun Transit In Scorpio: How it Affects on 12 zodiac signs, 9 zodiac gets more benefit from this transit, read on..
Story first published: Saturday, November 16, 2024, 13:30 [IST]
X
Desktop Bottom Promotion