Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಕನ್ಯಾ ರಾಶಿಗೆ ಸೂರ್ಯ ಸಂಚಾರ 2024: 12 ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಸೂರ್ಯನು ಕನ್ಯಾ ರಾಶಿಗೆ ಸಂಚರಿಸಿದೆ, ಈ ಸಂಚಾರ ಪ್ರತಿಯೊಂದು ರಾಶಿಗಳ ಮೇಲೆ ಪ್ರಭಾವ ಬೀರಿದೆ. ಈ ಸಂಚಾರ ನಿಮ್ಮ ರಾಶಿಗಳ ಮೇಲೆ ಪ್ರಭಾವ ಹೇಗಿರಲಿದೆ ಎಂದು ನೋಡೋಣ:
ಮೇಷ ರಾಶಿ
ಈ ಸೂರ್ಯ ಸಂಕ್ರಾಂತಿ ನಿಮಗೆ ಅನುಕೂಲಕರವಾಗಿದೆ. ಆರ್ಥಿಕವಾಗಿಯೂ ನಿಮಗೆ ಅನುಕೂಲಕರವಾಗಿದೆ, ಆದರೆ ಬಜೆಟ್ ಮೀರಿ ಖರ್ಚು ಮಾಡಲು ಹೋಗಬೇಡಿ.ಆರೋಗ್ಯದ ಕಡೆಗೆ ಗಮನಹರಿಸಿ.

ವೃಷಭ ರಾಶಿ
ಈ ಸೂರ್ಯ ಸಂಕ್ರಾಂತಿ ನಿಮಗೆ ಮಿಶ್ರಫಲ. ವಿದ್ಯಾರ್ಥಿಗಳಿಗೆ ಈ ಅವಧಿ ಅನುಕೂಲಕರವಾಗಿದೆ.ಹೊಸ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ. ವೈವಾಹಿಕ ಜೀವನದಲ್ಲಿ ಭಿನ್ನಾಭಿಪ್ರಾಯಗಳಿರಬಹುದು. ಆರೋಗ್ಯದ ಕಡೆಗೆ ಗಮನಹರಿಸಿ.
ಮಿಥುನ ರಾಶಿ
ಕುಟುಂಬ ಜೀವನದಲ್ಲಿ ಕೆಲ ಭಿನ್ನಾಭಿಪ್ರಾಯಗಳಿರಬಹುದು. ನಿಮ್ಮ ಹಾಗೂ ಸಂಗಾತಿ ನಡುವೆ ಏನೇ ಭಿನ್ನಾಭಿಪ್ರಾಯವಿದ್ದರೆ ಅದನ್ನು ಬಗೆಹರಿಸಲು ಪ್ರಯತ್ನಿಸಬೇಕು.
ಆಸ್ತಿಗೆ ಸಂಬಂಧಿಸಿದ ವಿಷಯಗಳು ಬಗೆಹರಿಯಲಿದೆ. ವಾಹನ, ಆಸ್ತಿ ಖರೀದಿಸಲು ಈ ಸಮಯ ನಿಮಗೆ ಅನುಕೂಲಕರವಾಗಿದೆ. ನಿಮ್ಮ ವ್ಯಾಪಾರ ಯೋಜನೆಗಳನ್ನು ರಹಸ್ಯವಾಗಿಟ್ಟುಕೊಳ್ಳಬೇಕು.
ಕರ್ಕ ರಾಶಿ
ಕುಟುಂಬದಲ್ಲಿ ಕೆಲ ಭಿನ್ನಾಭಿಪ್ರಾಯಗಳಿರಬಹುದು, ನಿಮ್ಮ ಸಂಗಾತಿ ನಡುವೆ ಬಾಂಧವ್ಯ ಚೆನ್ನಾಗಿರಲಿದೆ. ಉದ್ಯೋಗದ ದೃಷ್ಟಿಯಿಂದ ಈ ಅವಧಿ ಅನುಕೂಲಕರವಲ್ಲ, ನೀವು ಕೆಲಸದ ಕಡೆಗೆ ಗಮನಹರಿಸಬೇಕು, ವ್ಯಾಪಾರಿಗಳು ಜಾಗ್ರತೆವಹಿಸದಿದ್ದರೆ ನಷ್ಟ ಅನುಭವಿಸಬಹುದು.
ಸಿಂಹ ರಾಶಿ
ಸೂರ್ಯ ಸಂಚಾರ ನಿಮಗೆ ಅನುಕೂಲಕರವಾಗಿದೆ. ಕೆಲಸದ ನಿಮಿತ್ತ ಮಾಡುವ ಪ್ರಯಾಣ ನಿಮಗೆ ಅನುಕೂಲಕರವಾಗಿದೆ. ವ್ಯಾಪಾರಿಗಳಿಗೆ ಈ ಅವಧಿ ಅನುಕೂಲಕರವಾಗಿದೆ. ವೈಯಕ್ತಿಕ ಬದುಕು ತುಂಬಾ ಚೆನ್ನಾಗಿರಲಿದೆ. ಆರೋಗ್ಯ ಚೆನ್ನಾಗಿರಲಿದೆ.
ಕನ್ಯಾ ರಾಶಿ
ಸೂರ್ಯನು ನಿಮ್ಮ ರಾಶಿಗೆ ಸಂಚರಿಸಲಿದೆ. ಈ ಸಮಯದಲ್ಲಿ ವೃತ್ತಿ ಬದುಕಿನಲ್ಲಿ ಅಭದ್ರತೆ ಕಾಡುವುದು. ವ್ಯಾಪಾರಿಗಳಿಗೆ ಈ ಸಮಯ ಅನುಕೂಲಕರವಲ್ಲ. ಹಣದ ವಿಷಯದಲ್ಲಿ ಜಾಗ್ರತೆವಹಿಸಿ. ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಬೇಡ.
ತುಲಾ ರಾಶಿ
ತುಲಾ ರಾಶಿಯಲ್ಲಿ ಸೂರ್ಯನು 12ನೇ ಮನೆಯಲ್ಲಿ ಇರಲಿದೆ. ಈ ಸಮಯ ನಿಮಗೆ ಅಷ್ಟೊಂದು ಅನುಕೂಲಕರವಲ್ಲ. ಆರ್ಥಿಕವಾಗಿ ಈ ಅವಧಿ ಉತ್ತಮವಾಗಿರಲಿದೆ.
ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಭಿನ್ನಾಭಿಪ್ರಾಯಗಳಿರಬಹುದು. ಆರೋಗ್ಯದ ಬಗ್ಗೆ ಜಾಗ್ರತೆವಹಿಸಿ.
ವೃಶ್ಚಿಕ ರಾಶಿ
ಈ ಸಂಚಾರದಲ್ಲಿ ಸೂರ್ಯನು 11ನೇ ಮನೆಯಲ್ಲಿ ಇರಲಿದೆ. ಈ ಸಮಯ ಅನುಕೂಲಕರವಾಗಿದೆ, ಉದ್ಯೋಗದ ದೃಷ್ಟಿಯಿಂದ ಮಾಡುವ ಪ್ರಯತ್ನದಿಂದ ಲಾಭ ಗಳಿಸುತ್ತೀರಿ. ಉಳಿತಾಯದ ಕಡೆಗೆ ಗಮನಹರಿಸಬೇಕು, ವೃತ್ತಿ ಜೀವನದ ದೃಷ್ಟಿಯಿಂದ ಈ ಅವಧಿ ಉತ್ತಮವಾಗಲಿದೆ. ಆರೋಗ್ಯ ಚೆನ್ನಾಗಿರಲಿದೆ. ವೃತ್ತಿ ಬದುಕಿನಲ್ಲಿ ಕೆಲ ಭಿನ್ನಾಭಿಪ್ರಾಯಗಳಿರಬಹುದು.
ಧನು ರಾಶಿ
ಈ ವಾರ ನಿಮಗೆ ಅನುಕೂಲಕರವಾಗಿದೆ. ಕೆಲಸ ಮತ್ತು ವ್ಯವಹಾರದಲ್ಲಿ ಪ್ರಗತಿ ಇರಲಿದೆ, ವೃತ್ತಿ ಸಂಬಂಧಿತ ಕೆಲಸದಲ್ಲಿ ಪ್ರಗತಿ ದೊರೆಯಲಿದೆ. ಇನ್ನು ಆಸ್ತಿಗೆ ಸಂಬಂಧಿಸಿದ ಸಮಸ್ಯೆಯಿದ್ದರೆ ಅದು ಬಗೆಹರಿಯಲಿದೆ. ಆರ್ಥಿಕ ದೃಷ್ಟಿಯಿಂದ ಈ ಸಮಯ ನಿಮಗೆ ಉತ್ತಮವಾಗಿದೆ.
ಮಕರ ರಾಶಿ
ಮಕರ ರಾಶಿಯವರು ವರತ್ತಿ ಬದುಕಿನಲ್ಲಿ ಅನಿರೀಕ್ಷಿತ ಪರಿಣಾಮ ಎದುರಿಸಬೇಕಾಗುವುದು. ಸವಾಲುಗಳನ್ನು ಸುಲಭವಾಗಿ ಜಯಿಸಲು ಸಾದ್ಗಯವಾಗುವುದು, ಇದರಿಂದ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ. ವೃತ್ತಿ ಸಂಬಂಧಿತ ನಿರ್ಧಾರ ತೆಗೆದುಕೊಳ್ಳುವಾಗ ಜಾಗ್ರತೆವಹಿಸಬೇಕು.
ಕುಂಭ ರಾಶಿ
ಕುಂಭ ರಾಶಿಯಲ್ಲಿ ಸೂರ್ಯ 8ನೇ ಮನೆಯಲ್ಲಿ ಇರಲಿದೆ. ಈ ಸಮಯದಲ್ಲಿ ನೀವು ಹಣದ ಬಗ್ಗೆ ಹಾಗೂ ಆರೋಗ್ಯದ ಬಗ್ಗೆ ಜಾಗ್ರತೆವಹಿಸಬೇಕು. ಈ ಸಮಯದಲ್ಲಿ ಯಾವುದೇ ನಿರ್ಧಾರವಾದರೂ ನೀವು ಜಾಗ್ರತೆಯಿಂದ ತೆಗೆದುಕೊಳ್ಳಬೇಕು, ಅವಸರದ ನಿರ್ಧಾರ ಸಮಸ್ಯೆ ಹೆಚ್ಚಿಸಬಹುದು. ಹಣಕಾಸಿನ ವಿಚಾರದಲ್ಲಿ ಜಾಗ್ರತೆವಹಿಸಿ.
ಮೀನ ರಾಶಿ
ಸೂರ್ಯನು 7ನೇ ಮನೆಯಲ್ಲಿ ಇರಲಿದೆ. ಈ ಸಮಯದಲ್ಲಿ ವೈವಾಹಿಕ ಬದುಕಿನಲ್ಲಿ ನೀವು ಜಾಗ್ರತೆವಹಿಸಬೇಕು, ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಭಿನ್ನಾಭಿಪ್ರಾಯಗಳಿರಬಹುದು. ಆರೋಗ್ಯವು ಉತ್ತಮವಾಗಿರಲಿದೆ. ವೃತ್ತಿ ಬದುಕಿನ ದೃಷ್ಟಿಯಿಂದ ಅಷ್ಟೊಂದು ಅನುಕೂಲಕರವಲ್ಲ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications