Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ವರ್ಷದ ಬಳಿಕ ವೃಷಭ ರಾಶಿಗೆ ಸೂರ್ಯ ಸಂಚಾರ: ಈ ರಾಶಿಯವರಲ್ಲಿ ಧನಾತ್ಮಕ ಲಾಭ!
ವೈದಿಕ ಜ್ಯೋತಿಷ್ಯದಲ್ಲಿ ಗ್ರಹಗಳ ಅಧಿಪತಿ ಎಂದು ಪರಿಗಣಿಸಲಾದ ಸೂರ್ಯನು ಪ್ರತಿ ತಿಂಗಳು ತನ್ನ ರಾಶಿ ಬದಲಾಯಿಸುತ್ತಾನೆ. ಹಾಗೆ ಸೂರ್ಯ ಮೇ ತಿಂಗಳಲ್ಲಿಯೂ ತನ್ನ ರಾಶಿ ಬದಲಾಯಿಸಿದ್ದಾನೆ. ಈ ತಿಂಗಳ 15ರಂದು ವೃಷಭ ರಾಶಿಗೆ ಪ್ರವೇಶಿಸುತ್ತಾನೆ. ಬರೋಬ್ಬರಿ 1 ವರ್ಷದ ಬಳಿಕ ಸೂರ್ಯ ವೃಷಭ ರಾಶಿಗೆ ತೆರಳಲಿದ್ದಾನೆ.
ಪ್ರಸ್ತುತ ಮೇಷ ರಾಶಿಯಿಂದ ವೃಷಭ ರಾಶಿಗೆ ಚಲಿಸಲಿದ್ದು, ಇದು ಎಲ್ಲಾ 12 ರಾಶಿಗಳಲ್ಲೂ ಪ್ರಭಾವ ಬೀರುವುದು ನೋಡಬಹುದು. ಪ್ರಮುಖವಾಗಿ ಸೂರ್ಯನ ಸಂಚಾರವು ಮೂರು ರಾಶಿಯವರಲ್ಲಿ ಲಾಭದಾಯಕವಾದ ಬೆಳವಣಿಗಗೆ ಕಾರಣವಾಗಲಿದೆ. ಹಾಗಾದ್ರೆ ಯಾವೆಲ್ಲಾ ರಾಶಿಯವರಿಗೆ ಸೂರ್ಯನ ಸಂಚಾರದಿಂದ ಲಾಭವಾಗಲಿದೆ ಎಂಬುದನ್ನು ನಾವಿಂದು ತಿಳಿದುಕೊಳ್ಳೋಣ.

ಕನ್ಯಾ ರಾಶಿ
ಸೂರ್ಯನು ಕನ್ಯಾರಾಶಿಯ 9ನೇ ಮನೆಯಲ್ಲಿ ಚಲಿಸಲಿದ್ದಾನೆ. ಇದರಿಂದ ಕನ್ಯಾ ರಾಶಿಯವರಲ್ಲಿ ಹೊಸ ರೀತಿಯ ಲಾಭಗಳ ನೋಡಬಹುದು. ಮುಖ್ಯವಾಗಿ ಎಲ್ಲಾ ಕೆಲಸಗಳಲ್ಲೂ ಉತ್ತಮ ಯಶಸ್ಸು ಸಿಗಬಹುದು. ಹಾಗೆ ನಿಮ್ಮ ಕೆಲಸಗಳು ಯಾವುದೇ ಅಡ್ಡಿ ಇಲ್ಲದೆ ಸರಾಗವಾಗಿ ನಡೆಯಬಹುದು. ಕೆಲಸದ ನಿಮಿತ್ತ ಸುದೀರ್ಘ ಪ್ರಯಾಣ ಮಾಡಬೇಕಾಗಬಹುದು. ಶುಭ ಕಾರ್ಯಗಳಲ್ಲಿ ಭಾಗಿಯಾಗುವ ಕುರಿತಾಗಿ ನೀವು ಆಲೋಚಿಸಬಹುದು. ಉದ್ಯಮಿಗಳಿಗೆ ಹಾಗೂ ಸ್ವಂತ ವ್ಯಾಪಾರ ಮಾಡುವವರಿಗೆ ಈ ಸಮಯದಲ್ಲಿ ಲಾಭದಾಯಕ ಸ್ಥಿತಿ ನೋಡಬಹುದು. ನೀವು ಸರ್ಕಾರಿ ಕೆಲಸಕ್ಕೆ ಪ್ರಯತ್ನಿಸುತ್ತಿದ್ದರೆ ಈ ಸಮಯದಲ್ಲಿ ಉತ್ತಮ ಅವಕಾಶಗಳ ಪಡೆಯುತ್ತೀರಿ. ಹೊಸ ವ್ಯವಹಾರಗಳನ್ನು ನೀವು ಸುಲಭವಾಗಿ ಮಾಡಿ ಮುಗಿಸಬಹುದು. ಸಂಬಂಧಗಳಲ್ಲಿ ಉತ್ತಮ ಬಾಂಧವ್ಯ ವೃದ್ಧಿ ನೋಡಬಹುದು. ದಾಂಪತ್ಯದಲ್ಲಿ ಕೂಡ ನಿಮಗೆ ಸಂತೋಷ ಇರಲಿದೆ.
ಸಿಂಹ ರಾಶಿ
ಸಿಂಹ ರಾಶಿಯ ಅಧಿಪತಿ ಸೂರ್ಯ 10ನೇ ಮನೆಯಲ್ಲಿ ಚಲಿಸುತ್ತಾನೆ ಇದರಿಂದ ನಿಮ್ಮ ಆರೋಗ್ಯ ಹಾಗೂ ಆರ್ಥಿಕ ಪ್ರಗತಿಗೆ ಕಾರಣವಾಗಲಿದೆ. ನಿಮ್ಮ ಎಲ್ಲಾ ಕೆಲಸಗಳು ಅನಿರೀಕ್ಷಿತ ರೀತಿಯಲ್ಲಿ ಶುಭಕರವಾಗಲಿವೆ. ವ್ಯವಹಾರಿಕ ಪ್ರಗತಿ, ವ್ಯಾಪಾರದಲ್ಲಿ ಪ್ರಗತಿ ಅದರಲ್ಲು ಮುಖ್ಯವಾಗಿ ಕಬ್ಬಿಣ ಸಂಬಂಧಿ ವ್ಯಾಪಾರಿಗಳಾಗಿದ್ದರೆ ಈ ಸಮಯದಲ್ಲಿ ಬಹಳ ಲಾಭ ನೋಡಬಹುದು. ಸಮಾಜದಲ್ಲಿ ನಿಮ್ಮ ಗೌರವ ಹೆಚ್ಚಾಗಲಿದೆ. ಬಹಳ ಸಮಯದಿಂದ ನಿಮಗೆ ಬರಬೇಕಿದ್ದ ಹಣ ನಿಮ್ಮ ಕೈ ಸೇರಬಹುದು. ಖಾಸಗಿ ಹಾಗೂ ಸರ್ಕಾರಿ ಕೆಲಸ ಮಾಡುವವರಿಗೆ ಈ ಸಮಯ ಬಹಳ ಲಾಭದಾಯಕವಾಗಬಹುದು. ತಂದೆಯೊಂದಿಗಿನ ಸಂಬಂಧ ಬಲವಾಗಲಿದೆ. ಅವಿವಾಹಿತರು ತಮ್ಮ ನೆಚ್ಚಿನ ಕೆಲಸದಲ್ಲಿ ಭಾಗಿಯಾಗಬಹುದು. ಹಾಗೆ ನಿಮ್ಮ ಮದುವೆ ಸಂಬಂಧ ಚರ್ಚೆಗಳು ಧನಾತ್ಮಕ ಫಲಿತಾಂಶ ನೀಡಬಹುದು.
ಕುಂಭ ರಾಶಿ
ಸೂರ್ಯನು ಕುಂಭ ರಾಶಿಯ 4 ನೇ ಮನೆಯಲ್ಲಿ ಚಲಿಸಲಿದ್ದಾನೆ. ಇದರಿಂದ ನಿಮ್ಮ ಬಹಳ ಸಮಯದ ಆಸೆಗಳ ಪೂರೈಸಿಕೊಳ್ಳಲು ಉತ್ತಮ ಸಮಯ ಆಗಲಿದೆ. ನೀವು ಹೊಸ ವಾಹನ, ಆಸ್ತಿ, ಜಮೀನು ಖರೀದಿಗೆ ಮುಂದಾಗುವುದಾದರೆ ಈ ಸಮಯದಲ್ಲಿ ಎಲ್ಲವೂ ನೀವು ಅಂದುಕೊಂಡಂತೆ ನಡೆಯಬಹುದು. ನಿಮ್ಮ ದೈನಂದಿನ ಕೆಲಸದಲ್ಲಿ ಅಡ್ಡಿಯಾಗಿದ್ದ ಸಮಸ್ಯೆಯೊಂದು ದೂರಾಗಲಿದೆ. ಕುಟುಂಬದಲ್ಲಿ ಶಾಂತಿ ನೆಲೆಸಿರುತ್ತದೆ. ದಾಂಪತ್ಯದಲ್ಲಿದ್ದ ಮನಸ್ತಾಪಗಳು ನಿವಾರಣೆಯಾಗಲಿದೆ. ನೀವು ಈ ಹಿಂದೆ ಮಾಡಿದ್ದ ಹೂಡಿಕೆಯೊಂದರಿಂದ ಲಾಭ ನೋಡಬಹುದು. ಅವಿವಾಹಿತರಲ್ಲಿ ಅನಗತ್ಯ ಖರ್ಚುಗಳ ಕಡೆಗೆ ಗಮನ ಹೆಚ್ಚು ಹರಿಸಬೇಕಾಗುತ್ತದೆ. ಅಲ್ಲದೆ ಜಾಗದ ವಿಚಾರವಾಗಿ ಯಾರೊಂದಿಗಾದರು ತಗಾದೆ ಇದ್ದರೆ ಈ ಸಮಯದಲ್ಲಿ ನಿಮ್ಮ ಪರವಾದ ಫಲಿತಾಂಶಗಳ ನಿರೀಕ್ಷಿಸಬಹುದು.
(ಹಕ್ಕುತ್ಯಾಗ: ಮೇಲೆ ನೀಡಲಾದ ಮಾಹಿತಿಯು ಅಂತರ್ಜಾಲದಲ್ಲಿ ಲಭ್ಯವಿರುವ ಊಹೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ ಮತ್ತು ನಿಖರವಾಗಿರುತ್ತದೆ ಎಂದು ಖಾತರಿಪಡಿಸುವುದಿಲ್ಲ. ಕನ್ನಡ ಬೋಲ್ಡ್ ಸ್ಕೈ ಲೇಖನದಲ್ಲಿನ ಮಾಹಿತಿಯನ್ನು ಅನುಮೋದಿಸುವುದಿಲ್ಲ. ಮತ್ತು ನಮ್ಮ ಏಕೈಕ ಉದ್ದೇಶ ಮಾಹಿತಿಯನ್ನು ಒದಗಿಸುದಾಗಿದೆ)
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











