Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಮೇಷ ರಾಶಿಗೆ ಸೂರ್ಯ ಸಂಚಾರ: ಈ 7 ರಾಶಿಗಳಿಗೆ ಅನುಕೂಲಕರ
ಗ್ರಹಗಳ ಅಧಿಪತಿ ಸೂರ್ಯನು ಏಪ್ರಿಲ್ 13ಕ್ಕೆ ರಾಶಿ ಬದಲಾಯಿಸಲಿದೆ. ಸೂರ್ಯನು ಮೊದಲ ರಾಶಿಯಾದ ಮೇಷ ರಾಶಿಗೆ ಸಂಚರಿಸಲಿದೆ.
ಸೂರ್ಯ ಮೇಷ ರಾಶಿಗೆ ಸಂಚರಿಸಿದಾಗ 12 ರಾಶಿಗಳ ಮೇಲೂ ಪ್ರಭಾವ ಬೀರುತ್ತದೆ, ಆದರೆ ಈ 7 ರಾಶಿಗಳು ತುಂಬಾನೇ ಅನುಕೂಲಕರವಾಗಿದೆ. ಈ ರಾಶಿಯವರಿಗೆ ಈ ಅವಧಿ ತುಂಬಾ ಉತ್ತಮವಾಗಿರಲಿದೆ ನೋಡಿ.

ಮೇಷ ರಾಶಿ
ಈ ಅವಧಿ ನಿಮಗೆ ಅನುಕೂಲಕರವಾಗಿದೆ, ಈ ಸಂಚಾರದಿಂದ ನೀವು ಸಉತ್ತಮ ಅವಕಾಶಗಳನ್ನು ಪಡೆಯಬಹುದು. ವೃತ್ತಿ ಜೀವನದಲ್ಲಿ ಉದ್ಯೋಗದಲ್ಲಿ ಬಡ್ತಿಯನ್ನು ಪಡೆಯಬಹುದು. ಆರ್ಥಿಕ ದೃಷ್ಟಿಯಿಂದ ಈ ಸಮಯ ಒಳ್ಳೆಯದಿದೆ. ಸೂರ್ಯನ ಸಂಚಾರವು ನಿಮ್ಮ ಆದಾಯವನ್ನು ಹೆಚ್ಚಿಸುವುದು. ನಿಮ್ಮ ಜೀವನದಲ್ಲಿ ಆರ್ಥಿಕ ಸ್ಥಿರತೆ ಉಂಟಾಗಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಈ ಸೂರ್ಯ ಸಂಚಾರ ನಿಮ್ಮ ಆರೋಗ್ಯಕ್ಕೂ ಒಳ್ಳೆಯದು.
ಮಿಥುನ ರಾಶಿ
ಮೇಷ ರಾಶಿಗೆ ಸೂರ್ಯನ ಸಂಚಾರ ಮಿಥುನ ರಾಶಿಯವರಿಗೆ ಅನುಕೂಲಕರವಾಗಿದೆ. ನಿಮಗೆ ಬಡ್ತಿ ಸಿಗಲಿದೆ. ವ್ಯಾಪಾರಿಗಳು ಲಾಭ ಗಳಿಸಲು ಸಾಧ್ಯವಾಗುವುದು. ನಿಮ್ಮ ವ್ಯವಹಾರ ಮತ್ತಷ್ಟು ವೃದ್ಧಿಸಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಹೂಡಿಕೆಯಿಂದ ಲಾಭ ಗಳಿಸುತ್ತೀರಿ. ಸಂಬಂಧ ಗಟ್ಟಿಯಾಗುವುದು. ನಿಮ್ಮ ಹಾಗೂ ಸಂಗಾತಿ ನಡುವಿನ ಪ್ರೀತಿ ಹೆಚ್ಚಾಗಲಿದೆ.
ಕರ್ಕ ರಾಶಿ
ಸೂರ್ಯನ ಈ ಸಂಚಾರ ನಿಮಗೆ ತುಂಬಾನೇ ಅನುಕೂಲಕರವಾಗಿದೆ. ಸೂರ್ಯನ ಈ ಸಾಗಣೆಯು ಹಣಕಾಸಿನ ದೃಷ್ಟಿಯಿಂದ ನಿಮಗೆ ಉತ್ತಮವಾಗಿದೆ. ಅಪೂರ್ಣವಾಗಿದ್ದ ನಿಮ್ಮ ಕೆಲಸವು ಪೂರ್ಣಗೊಳ್ಳುತ್ತದೆ, ನಿಮ್ಮ ಮೇಲಧಿಕಾರಿಗಳೊಂದಿಗೆ ನಿಮ್ಮ ಸಂಬಂಧವು ಬಲಗೊಳ್ಳುತ್ತದೆ. ಈ ಹಿಂದೆ ಯಾವುದಾದರೂ ಆರೋಗ್ಯ ಸಮಸ್ಯೆ ಇದ್ದಿದ್ದರೆ, ಆ ಆರೋಗ್ಯ ಸಮಸ್ಯೆಯೂ ಈಗ ಗುಣವಾಗಬೇಕು. ಕುಟುಂಬ ಜೀವನ ಚೆನ್ನಾಗಿರಲಿದೆ.
ಸಿಂಹ ರಾಶಿ
ಸಿಂಹ ರಾಶಿಯವರಿಗೆ ಸೂರ್ಯ ಮೇಷ ರಾಶಿಯಲ್ಲಿ ಇರುವುದರಿಂದ ಆರ್ಥಿಕವಾಗಿ ಒಳ್ಳೆಯದಿದೆ. ಈ ಅವಧಿಯಲ್ಲಿ ಹೂಡಿಕೆಯಿಂದ ಲಾಭ ಗಳಿಸುತ್ತೀರಿ. ನಿಮ್ಮ ಜೀವನದಲ್ಲಿ ಕೆಲವು ಧನಾತ್ಮಕ ಬದಲಾವಣೆಗಳಾಗಬಹುದು. ಉದ್ಯೋಗಿಗಳಿಗೆ ಹಾಗೂ ವ್ಯಾಒಆರಸ್ಥರಿಗೆ ಈ ಅವಧಿ ತುಂಬಾ ಚೆನ್ನಾಗಿರಲಿದೆ. ನಿಮ್ಮ ಕುಟುಂಬ ಜೀವನ ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ, ಈ ಈ ಅವಧಿ ನಿಮಗೆ ಉತ್ತಮವಾಗಿದೆ.
ವೃಶ್ಚಿಕ ರಾಶಿ
ಈ ಸೂರ್ಯ ಸಂಚಾರ ನಿಮಗೆ ತುಂಬಾ ಒಳ್ಳೆಯದು. ಸಂಬಳ ಹೆಚ್ಚಾಗಬಹುದು, ಬಡ್ತಿ ಸಿಗಬಹುದು, ನಿಮಗೆ ಹೊಸ ಉದ್ಯೋಗಾವಕಾಶಗಳನ್ನು ಪಡೆಯಬಹುದು . ಪಾಲುದಾರಿಕೆ ವ್ಯವಹಾರ ಮಾಡುವವರೆಗೆ ಉತ್ತಮ ಸಮಯವಾಗಿರುತ್ತದೆ, ಹೆಚ್ಚು ಲಾಭ ಗಳಿಸುತ್ತೀರಿ. ಆರ್ಥಿಕವಾಗಿ ಈ ಅವಧಿ ಒಳ್ಳೆಯದು. ಸೂರ್ಯನ ಈ ಸಂಕ್ರಮಣವು ಸಾಮಾಜಿಕ ಗೌರವ ಹೆಚ್ಚಿಸುತ್ತದೆ. ಆರೋಗ್ಯದ ದೃಷ್ಟಿಯಿಂದಲೂ ಈ ಅವಧಿ ತುಂಬಾನೇ ಉತ್ತಮವಾಗಿರಲಿದೆ.
ಧನು ರಾಶಿ
ಧನು ರಾಶಿಯವರಿಗೆ ಈ ಸೂರ್ಯ ಸಂಚಾರ ಅನುಕೂಲಕರವಾಗಿದೆ. ನಿಮಗೆ ಹೊಸ ಉದ್ಯೋಗಾವಕಾಶಗಳು ದೊರೆಯಲಿದೆ, ಕೆಲಸ ಬದಲಾಯಿಸಲು ಈ ಅವಧಿ ಉತ್ತಮವಾಗಿದೆ. ಆದರೆ ಒಂದು ಕೆಲಸ ಸಿಕ್ಕ ಬಳಿಕವಷ್ಟೇ ಇರುವ ಕೆಲಸ ಬಿಡಿ. ವ್ಯಪಾರಿಗಳಿಗೆ ಈ ಅವಧಿ ಲಾಭದಾಯಕವಾಗಿದೆ. ಈ ಸೂರ್ಯ ಸಂಚಾರ ಆರ್ಥಿಕವಾಗಿ ಒಳ್ಳೆಯದು. ಕುಟುಂಬ ಜೀವನ ಚೆನ್ನಾಗಿರಲಿದೆ. ಈ ಸಮಯದಲ್ಲಿ ನಿಮ್ಮ ಆರೋಗ್ಯ ಉತ್ತಮವಾಗಿರುತ್ತದೆ.
ಕುಂಭ ರಾಶಿ
ಮೇಷ ರಾಶಿಗೆ ಸೂರ್ಯ ಸಂಚಾರವಾದಾಗ ಸ್ವಂತ ವ್ಯವಹಾರ ಮಾಡುತ್ತಿರುವವರು ಉತ್ತಮ ಲಾಭ ಗಳಿಸಲು ಸಾಧ್ಯವಾಗುವುದು. ಆದಾಯ ಉತ್ತಮವಾಗಿರಲಿದೆ.
ದಾಂಪತ್ಯ ಜೀವನದಲ್ಲಿ ಉತ್ತಮ ಹೊಂದಾಣಿಕೆ ಇರಲಿದೆ. ಒಡಹುಟ್ಟಿದವರು ಮತ್ತು ಸ್ನೇಹಿತರೊಂದಿಗಿನ ಸಂಬಂಧಗಳು ಗಟ್ಟಿಯಾಗಬಹುದು. ಉದ್ಯೋಗಿಗಳು ಬಡ್ತಿಯನ್ನು ಪಡೆಯುತ್ತೀರಿ. ಆರೋಗ್ಯ ಸಮಸ್ಯೆಯಿದ್ದರೆ ಆರೋಗ್ಯದಲ್ಲಿ ಸುಧಾರಣೆ ಕಂಡು ಬರುವುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications