Latest Updates
-
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ! -
ಬಿರುಗಾಳಿ ಅಬ್ಬರಕ್ಕೆ ಬಾಲ್ಕನಿ ಗಾರ್ಡನ್ ಹಾಳಾಗುತ್ತಾ? ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೆಹಲಿ ಸರ್ಕಾರದ ಈ 'ರಿಲೀಫ್ ವ್ಯಾನ್' ನಿಮ್ಮ ಜೀವ ರಕ್ಷಕವಾಗಬಹುದು! -
ಮೆಟ್ ಗಾಲಾ 2026: ದುಬಾರಿ ಫ್ಯಾಷನ್ ಅನ್ನು ನಮ್ಮೂರಿನ ಕ್ರಿಯೇಟರ್ಗಳು ದೇಸಿ ಶೈಲಿಯಲ್ಲಿ ಮರುಸೃಷ್ಟಿಸಿದ್ದು ಹೇಗೆ? ಅಚ್ಚರಿ ಪಡಬೇಡಿ! -
ಹೊರಗೆ ಬಿರುಗಾಳಿ, ಮನೆಯಲ್ಲಿ ಫಿಟ್ನೆಸ್: ಇಂದಿನ ಹವಾಮಾನಕ್ಕೆ ಈ ವರ್ಕೌಟ್ ಬೆಸ್ಟ್! -
ಮದುವೆ ಮನೆಯಲ್ಲಿ ನೋಟಿನ ಹಾರ: ಸಂಭ್ರಮದ ನಡುವೆ ಅನಿರೀಕ್ಷಿತವಾಗಿ ನುಗ್ಗಿ ಬಂತು ರಣರಂಗ! -
ಮಕ್ಕಳಲ್ಲಿ ಹೆಚ್ಚುತ್ತಿದೆ ಮಧುಮೇಹದ ಭೀತಿ: ಇಂದೇ ಬದಲಾಯಿಸಿ ನಿಮ್ಮ ಅಡುಗೆಮನೆಯ ಈ ಅಭ್ಯಾಸಗಳನ್ನು! -
ಮೆಟ್ ಗಾಲಾ 2026: ಜಾಗತಿಕ ವೇದಿಕೆಯಲ್ಲಿ ಅಬ್ಬರಿಸಿದ ಭಾರತೀಯ ಸಂಸ್ಕೃತಿ, ಫ್ಯಾನ್ಸ್ ಫಿದಾ! -
ಬೇಸಿಗೆಯ ಬಿಸಿಲಿಗೆ ಸುಸ್ತಾದ್ರಾ? ಕೇವಲ 1000 ರೂಪಾಯಿಯಲ್ಲಿ ನಿಮ್ಮ ಮನೆಯನ್ನು ತಂಪಾಗಿಸಿ! -
ದೆಹಲಿ ಮಂದೆದ್ದಿದೆ: ವರ್ಷದಲ್ಲೇ ಮೊದಲ ಬಾರಿಗೆ ಸಿಕ್ಕಿದೆ ಇಂತಹ ಅದ್ಭುತ ಅವಕಾಶ!
ವೃಶ್ಚಿಕ ರಾಶಿಗೆ ಸೂರ್ಯ ಸಂಚಾರ: ಸೂರ್ಯ ಪಥ ಬದಲಾವಣೆ ಈ 5 ರಾಶಿಗಳಿಗೆ ಅದೃಷ್ಟಕರ
ಗ್ರಹಗಳ ಅಧಿಪತಿ ಸೂರ್ಯ, ಸೂರ್ಯನು 30 ದಿನಗಳಿಗೊಮ್ಮೆ ರಾಶಿ ಬದಲಾವಣೆ ಮಾಡುತ್ತದೆ, ನವೆಂಬರ್ 16ಕ್ಕೆ ವೃಶ್ಚಿಕ ಸಂಕ್ರಾಂತಿ, ಸೂರ್ಯನು ತನ್ನ ಪಥ ಬದಲಾಯಿಸುತ್ತಿದ್ದಾನೆ, ಸೂರ್ಯನು ವೃಶ್ಚಿಕ ರಾಶಿಗೆ ಸಂಚರಿಸಿದಾಗ ಅದರ ಪ್ರಭಾವ ದ್ವಾದಶ ರಾಶಿಗಳ ಮೇಲೆ ಪ್ರಭಾವ ಬೀರಲಿದೆ.
ಈ ಸಂಚಾರ ಕೆಲವರ ಜೀವನದಲ್ಲಿ ಏರಳಿತ ಉಂಟು ಮಾಡಿದರೆ ಇನ್ನು ಕೆಲವರ ಜೀವನದಲ್ಲಿ ಅದೃಷ್ಟವನ್ನು ತರಲಿದೆ. ಸೂರ್ಯನು ವೃಶ್ಚಿಕ ರಾಶಿಗೆ ಸಂಚರಿಸಿದಾಗ 30 ದಿನ ಈ ರಾಶಿಗಳ ಮೇಲೆ ಸೂರ್ಯನ ಪ್ರಭಾವ ತುಂಬಾ ಅನುಕೂಲಕರವಾಗಿರಲಿದೆ:

ಮಿಥುನ ರಾಶಿ
ಸೂರ್ಯನು ವೃಶ್ಚಿಕ ರಾಶಿಗೆ ಸಂಚರಿಸಿದಾಗ ಮಿಥುನ ರಾಶಿಯಲ್ಲಿ 6ನೇ ಮನೆಯಲ್ಲಿ ಇರಲಿದೆ. ಈ ಸೂರ್ಯ ಸಂಚಾರ ತುಂಬಾ ಅನುಕೂಲಕರವಾಗಿರಲಿದೆ. ಈ ಅವಧಿಯಲ್ಲಿ ವೃತ್ತಿ ಬದುಕಿನ ಪ್ರಮುಖ ಸಮಸ್ಯೆ ಬಗೆಹರಿಯಲಿದೆ. ಇನ್ನುಕಾನೂನಿಗೆ ಸಂಬಂಧಿಸಿದ ವಿಷಯದಲ್ಲಿ ತುಂಬಾನೇ ಜಾಗ್ತತೆವಹಿಸಿ.
ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲಕರವಾಗಿರಲಿದೆ, ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದರೆ ಈ ಅವಧಿ ಅಂತೂ ನಿಮಗೆ ತುಂಬಾ ಚೆನ್ನಾಗಿರಲಿದೆ. ಸರ್ಕಾರಿ ಕೆಲಸಕ್ಕೆ ಪ್ರಯತ್ನ ನಡೆಸುತ್ತಿರುವವರೆಗೆ ಈ ಅವಧಿ ತುಂಬಾ ಚೆನ್ನಾಗಿರಲಿದೆ.
ವೈವಾಹಿಕ ಬದುಕು ತುಂಬಾ ಚೆನ್ನಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವೆ ಏನಾದರು ಭಿನ್ನಾಭಿಪ್ರಾಯವಿದ್ದರೆ ಎಲ್ಲವೂ ಬಗೆಹರಿಯಲಿದೆ, ಈ ಅವಧಿಯಲ್ಲಿ ನಿಮ್ಮ ಕೆಲಸ ಕಾರ್ಯಗಳು ಅಡೆತಡೆಯಿಲ್ಲದೆ ನಡೆಯಲಿದೆ. ಈ ಅವಧಿ ಆರ್ಥಿಕವಾಗಿ ತುಂಬಾ ಚೆನ್ನಾಗಿರಲಿದೆ.
ಕರ್ಕ ರಾಶಿ
ಸೂರ್ಯ ಸಂಚಾರ ಕರ್ಕ ರಾಶಿಯವರಿಗೆ ತುಂಬಾನೇ ಅನುಕೂಲಕರವಾಗಿದೆ. ಈ ಅವಧಿಯಲ್ಲಿ ನಿಮ್ಮ ಆರ್ಥಿಕ ಸ್ಥಿತಿ ತುಂಬಾ ಚೆನ್ನಾಗಿರಲಿದೆ. ವ್ಯಾಪಾರಿಗಳು ಉತ್ತಮ ಆರ್ಥಿಕ ಪ್ರಯೋಜನ ಪಡೆಯುವಿರಿ. ಹೂಡಿಕೆಗೆ ಈ ಅವಧಿ ತುಂಬಾನೇ ಪ್ರಯೋಜನಕಾರಿಯಾಗಿದೆ.
ಕುಟುಂಬ ಜೀವನ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ತುಂಬಾ ಚೆನ್ನಾಗಿರಲಿದೆ. ಕುಟುಂಬದಲ್ಲಿ ನೀವು ತೆಗೆದುಕೊಳ್ಳುವ ನಿರ್ಧಾರಗಳು ಉತ್ತಮವಾಗಿಲಿದೆ.
ವೃತ್ತಿ ಬದುಕಿನಲ್ಲಿ ನೀವು ಅಂದುಕೊಂಡಂತೆಯೇ ಕೆಲಸ ಕಾರ್ಯಗಳು ನಡೆಯಲಿದೆ. ಕೆಲಸದ ಹುಡಡುಕಾಟದಲ್ಲಿದ್ದರೆ ಸೂರ್ಯನ ಪ್ರಭಾವ ನಿಮಗೆ ಅನುಕೂಲಕರವಾಗಿರುವುದರಿಂದ ಕೆಲಸ ಪಡೆಯುತ್ತೀರಿ. ಒಟ್ಟಿನಲ್ಲಿ ವೃಶ್ಚಿಕ ರಾಶಿಯಲ್ಲಿ ಸೂರ್ಯ ಸಂಚಾರ ನಿಮಗೆ ತುಂಬಾನೇ ಅನುಕೂಲಕರವಾಗಿರಲಿದೆ.
ಸಿಂಹ ರಾಶಿ
ಈ ಸೂರ್ಯ ಸಂಚಾರ ಸಿಂಹ ರಾಶಿಯವರ ಬದುಕಿನಲ್ಲಿಯೂ ಅನುಕೂಲಕರ ಪ್ರಯೋಜನ ನೀಡಲಿದೆ, ಈ ದಿನ ನೀವು ಧಾರ್ಮಿಕ ವಿಷಯಗಳ ಕಡೆಗೆ ತುಂಬಾ ಒಲವು ತೋರುತ್ತೀರಿ. ನಿಮ್ಮ ಕೆಲಸ ಕಾರ್ಯಗಳು ನೀವಂದುಕೊಂಡತೆಯೇ ನಡೆಯಲಿದೆ.
ಈ ಸೂರ್ಯ ಸಂಚಾರ ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸುತ್ತದೆ. ಆರ್ಥಿಕವಾಗಿ ತುಂಬಾ ಒಳ್ಳೆಯ ಪ್ರಯೋಜನ ಪಡೆಯುತ್ತೀರಿ. ರಿಯಲ್ ಎಸ್ಟೇಟ್ ಸಂಬಂಧಿಸಿದ ವ್ಯವಹಾರ ಮಾಡುವುದಾದರೆ ಈ ಅವಧಿಯಲ್ಲಿ ನೀವು ಉತ್ತಮ ಪ್ರಯೋಜನ ಪಡೆಯುತ್ತೀರಿ.
ಈ ಸೂರ್ಯ ಸಂಚಾರ ಆರೋಗ್ಯದ ದೃಷ್ಟಿಯಿಂದಲೂ ಅನುಕೂಲಕರವಾಗಿರಲಿದೆ. ಕುಟುಂಬ ಜೀವನ ಕೂಡ ತುಂಬಾ ಚೆನ್ನಾಗಿರಲಿದೆ.
ಕನ್ಯಾ ರಾಶಿ
ಇರುವ ಕೆಲಸ ಬಿಟ್ಟು ಬೇರೆ ಕಡೆ ಕೆಲಸಕ್ಕೆ ಪ್ರಯತ್ನ ಮಾಡುತ್ತಿದ್ದರೆ ಈ ಅವಧಿ ನಿಮಗೆ ತುಂಬಾನೇ ಪ್ರಯೋಜನಕಾರಿಯಾಗಿದೆ, ನೀವು ಬಯಸಿದ ಕೆಲಸನ ಪಡೆಯಬಹುದು. ವ್ಯಾಪಾರಿಗಳು ಸರಿಯಾಗಿ ಯೋಜನೆ ರೂಪಿಸಿದರೆ ಉತ್ತಮ ಪ್ರಯೋಜನ ಪಡೆಯುತ್ತೀರಿ. ಇನ್ನು ಈ ಅವಧಿಯಲ್ಲಿ ಹಣವನ್ನು ಉಳಿತಾಯ ಮಾಡಲು ಸಾಧ್ಯವಾಗುವುದು.
ಹೊರ ದೇಶಕ್ಕೆ ಹೋಗಲು ಪ್ರಯತ್ನಿಸುತ್ತಿರುವವರೆಗೆ ಈ ಸಮಯ ಅನುಕೂಲಕರವಾಗಿದೆ. ವಿದೇಶದಲ್ಲಿ ನೀವು ಕೆಲಸಕ್ಕೆ ಪ್ರಯತ್ನಿಸುತ್ತಿದ್ದರೆ ಒಳ್ಳೆಯ ಕೆಲಸ ಸಿಗಲಿದೆ. ವೃತ್ತಿ ಬದುಕು ವೇಗ ಪಡೆಯಲಿದೆ.
ಮಕರ ರಾಶಿ
ಸೂರ್ಯನು ಮಕರ ರಾಶಿಯಲ್ಲಿ 11ನೇ ಮನೆಯಲ್ಲಿ ಇರಲಿದೆ. ಸೂರ್ಯನ ಈ ಸ್ಥಾನ ಅನುಕೂಲಕರವಾಗಿದೆ. ಆರ್ಥಿಕವಾಗಿ ಪ್ರಯೋಜನ ಪಡೆಯುವಿರಿ ಹೀಗಾಗಿ ಸಾಲ ಮಾಡಿದ್ದರೆ ಸಾಲ ತೀರಿಸಲು ಸಾಧ್ಯವಾಗುವುದು.
ವೃತ್ತಿ ಬದುಕಿನಲ್ಲಿ ಯಶಸ್ಸು ಸಿಗಲಿದೆ, ವ್ಯಾಪಾರಿಗಳಗೆ ಲಾಭ ಗಳಿಸಲು ಸಾಧ್ಯವಾಗುವುದು. ಆರೋಗ್ಯದ ದೃಷ್ಟಿಯಿಂದ ಅನುಕೂಲಕರವಾಗಿರಲಿದೆ, ಹಣದ ಉಳಿತಾಯ ಮಾಡಲು ಸಾಧ್ಯವಾಗುವುದು. ಈ ಸೂರ್ಯ ಸಂಚಾರ ಕುಟುಂಬ ಮೇಲೂ ಒಳ್ಳೆಯ ಪ್ರಭಾವ ಬೀರುವುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications