Latest Updates
-
ಅಕ್ಟೋಬರ್ 2 ಡ್ರೈ ಡೇ: ಮದ್ಯ ಸಿಗಲ್ಲ, ಪಾರ್ಟಿ ಪ್ಲಾನ್ ಬದಲಿಸಿ! ಸುರಕ್ಷಿತವಾಗಿ ಸಂಭ್ರಮಿಸುವುದು ಹೇಗೆ? -
IMD ಅಲರ್ಟ್: ದಕ್ಷಿಣ ಭಾರತದಲ್ಲಿ ಭಾರಿ ಮಳೆ, ಬಿರುಗಾಳಿ - ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ಕೇವಲ ₹100ರಲ್ಲಿ ದಿನಕ್ಕೆ 80 ಗ್ರಾಂ ಪ್ರೋಟೀನ್: ಸಸ್ಯಾಹಾರಿಗಳಿಗಾಗಿ ಇಲ್ಲಿದೆ ಪಕ್ಕಾ ದೇಸಿ ಡಯಟ್ ಪ್ಲಾನ್! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್!
ಸೂರ್ಯ ಕನ್ಯಾ ರಾಶಿಗೆ ಬಂದಾಗ ಈ 6 ರಾಶಿಗಳಿಗೆ ಅನುಕೂಲಕರ
ಪ್ರತಿ ಮಾಸ ಸೂರ್ಯನು ರಾಶಿ ಬದಲಾವಣೆ ಮಾಡುತ್ತಿರುತ್ತಾನೆ, ಹೀಗೆ ರಾಶಿ ಬದಲಾವಣೆ ಮಾಡುವಾಗ ಅದರ ಪ್ರಭಾವ ಪ್ರತಿ ಮಾಸವೂ ದ್ವಾದಶ ರಾಶಿಗಳ ಮೇಲೆ ಭಿನ್ನವಾಗಿರುತ್ತದೆ. ಈ ಸೆಪ್ಟೆಂಬರ್ 16ಕ್ಕೆ ಸೂರ್ಯನು ಕನ್ಯಾ ರಾಶಿಗೆ ಪ್ರವೇಶಿಸಲಿದೆ. ಸೂರ್ಯನು ಕನ್ಯಾ ರಾಶಿಯಲ್ಲಿರುವಾಗ ಈ ರಾಶಿಗಳ ಮೇಲೆ ಅದರ ಪ್ರಭಾವ ಧನಾತ್ಮಕವಾಗಿರಲಿದೆ, ಈ ಅವಧಿಯಲ್ಲಿ ಈ 6 ರಾಶಿಗಳು ಉತ್ತಮ ಪ್ರಯೋಜನ ಪಡೆಯಬಹುದು.

ವೃಷಭ ರಾಶಿ
ವೃಷಭ ರಾಶಿಯಲ್ಲಿ ಸೂರ್ಯ 5ನೇ ಮನೆಯಲ್ಲಿ ಇರಲಿದೆ. ಈ ಸೂರ್ಯ ಸಂಚಾರ ಮಕ್ಕಳಿಗಾಗಿ ಹೆಚ್ಚು ಖರ್ಚು ಮಾಡಿಸುತ್ತದೆ, ಅವರ ಭವಿಷ್ಯದ ಬಗ್ಗೆ ನೀವು ಹೆಚ್ಚು ಜಾಗ್ರತೆವಹಿಸಬೇಕು. ಆರ್ಥಿಕವಾಗಿ ಈ ಸಮಯ ನಿಮಗೆ ಒಳ್ಳೆಯದಿದೆ, ಈ ಸಮಯದಲ್ಲಿ ವ್ಯಾಪಾರಿಗಳು ಲಾಭ ಗಳಿಸುತ್ತೀರಿ, ಹಣವನ್ನು ಉಳಿಸಲು ಕೂಡ ಸಾಧ್ಯವಾಗುವುದು. ಸೂರ್ಯನ ಪ್ರಭಾವ ನಿಮ್ಮ ಆರೋಗ್ಯದ ಮೇಲೆ ಧನಾತ್ಮಕ ಪ್ರಭಾವ ಬೀರಿದೆ.
ಮಿಥುನ ರಾಶಿ
ಮಿಥುನ ರಾಶಿಯಲ್ಲಿ ಸೂರ್ಯ 4ನೇ ಮನೆಯಲ್ಲಿ ಇರಲಿದೆ. ಈ ಅವಧಿ ನಮಗೆ ಅನುಕೂಲಕರವಾಗಿದೆ, ಹೂಡಿಕೆಗೆ ಅವಕಾಶ ಸಿಗಲಿದೆ, ಅಲ್ಲದೆ ಹೂಡಿಕೆಯಿಂದ ಉತ್ತಮ ಲಾಭ ಕೂಡ ಗಳಿಸಬಹುದು. ವ್ಯಾಪಾರಸ್ಥರಿಗೂ ಈ ಸಮಯ ಅನುಕೂಲಕರವಾಗಿರುತ್ತದೆ. ಆರೋಗ್ಯದ ಬಗ್ಗೆ ನೋಡುವುದಾದರೆ ಈ ಅವಧಿಯಲ್ಲಿ ಯಾವುದೆ ದೊಡ್ಡ ಸಮಸ್ಯೆ ಇರಲ್ಲ. ವಯಯಕ್ತಿಕ ಜೀವನದಲ್ಲಿ ಕೂಡ ನೆಮ್ಮದಿ ಇರಲಿದೆ.
ಕರ್ಕ ರಾಶಿ
ಕರ್ಕ ರಾಶಿಯಲ್ಲಿ ಸೂರ್ಯ 3ನೇ ಮನೆಯಲ್ಲಿ ಇರಲಿದೆ. ಈ ಸೂರ್ಯನ ಸಂಚಾರ ಆರ್ಥಿಕ ದೃಷ್ಟಿಯಿಂದ ನಿಮಗೆ ಅನುಕೂಲಕರವಾಗಿದೆ. ವೃತ್ತಿ ಬದುಕಿನಲ್ಲಿಯೂ ಈ ಸಮಯ ನಿಮಗೆ ತುಂಬಾನೇ ಅನುಕೂಲಕರವಾಗಿದೆ. ವೃತ್ತಿ ಬದುಕಿನಲ್ಲಿ ಯಶಸ್ಸು ದೊರೆಯಲಿದೆ. ಈ ಸಮಯದಲ್ಲಿ ಆರೋಗ್ಯ ಉತ್ತಮವಾಗಿರಲಿದೆ.
ಸಿಂಹ ರಾಶಿ
ಸೂರ್ಯ ಸಂಚಾರ ನಿಮಗೆ ಅನುಕೂಲಕರವಾಗಿದೆ. ಸೂರ್ಯ 2ನೇ ಮನೆಯಲ್ಲಿರುವ ಈ ಅವಧಿ ನಿಮಗೆ ತುಂಬಾನೇ ಅನುಕುಲಕರವಾಗಿದೆ. ಕೆಲಸದ ನಿಮಿತ್ತ ಮಾಡುವ ಪ್ರಯಾಣ ನಿಮಗೆ ಅನುಕೂಲಕರವಾಗಿದೆ. ವ್ಯಾಪಾರಿಗಳಿಗೆ ಈ ಅವಧಿ ಲಾಭದಾಯಕವಾಗಿರಲಿದೆ. ವೈಯಕ್ತಿಕ ಬದುಕಿನಲ್ಲಿ ನೆಮ್ಮದಿ ಇರಲಿದೆ, ನಿಮ್ಮ ಹಾಗೂ ಸಂಗಾತಿ ನಡುವೆ ಬಾಂಧವ್ಯ ತುಂಬಾ ಚೆನ್ನಾಗಿರಲಿದೆ, ನಿಮ್ಮ ಕೆಲಸ ಕಾರ್ಯಗಳಲ್ಲಿ ಯಶಸ್ಸು ಪಡೆಯುತ್ತೀರಿ. ಆರೋಗ್ಯದ ಬಗ್ಗೆ ಹೇಳುವುದಾದರೆ ರೋಗ ನಿರೋಧಕ ಶಕ್ತಿ ಅಧಿಕವಿರಲಿದೆ.
ವೃಶ್ಚಿಕ ರಾಶಿ
ಈ ಸಂಚಾರದಲ್ಲಿ ಸೂರ್ಯನು 11ನೇ ಮನೆಯಲ್ಲಿ ಇರಲಿದೆ. ನಿಮ್ಮ ಕೆಲಸದಲ್ಲಿ ಪ್ರಗತಿ ದೊರೆಯಲಿದೆ, ಉದ್ಯೋಗದ ದೃಷ್ಟಿಯಿಂದ ಮಾಡುವ ಪ್ರಯತ್ನದಿಂದ ಲಾಭ ಗಳಿಸುತ್ತೀರಿ. ವ್ಯಾಪಾರಿಗಲು ಈ ಸಮಯದಲ್ಲಿ ಲಾಭ ಗಳಿಸುತ್ತೀರಿ.ಆರ್ಥಿಕವಾಗಿ ಈ ಅವಧಿ ಅನುಕೂಲರವಾಗಿದೆ. ನೀವು ಉಳಿತಾಯದ ಕಡೆಗೆ ಗಮನಹರಿಸಿ.ವೈಯಕ್ತಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯ ಚೆನ್ನಾಗಿರಲಿದೆ.
ಧನು ರಾಶಿ
ಸೂರ್ಯ 10ನೇ ಮನೆಯಲ್ಲಿ ಇರಲಿದೆ. ವೃತ್ತಿ ಬದುಕಿನ ದೃಷ್ಟಿಯಿಂದ ಈ ಸಮಯ ಅನುಕೂಲಕರವಾಗಿದೆ, ವ್ಯಾಪಾರಿಗಳು ಈ ಅವಧಿಯಲ್ಲಿ ಲಾಭ ಗಳಿಸಲು ಸಾಧ್ಯವಾಗುವುದು, ಆರ್ಥಿಕ ಪ್ರಯತ್ನಗಳಲ್ಲಿ ಯಶಸ್ಸು ಸಿಗಲಿದೆ. ಆರೋಗ್ಯ ಚೆನ್ನಾಗಿರಲಿದೆ, ವೈವಾಹಿಕ ಬದುಕಿನಲ್ಲಿ ಸಂಗಾತಿಯ ಭಾವನೆಗಳನ್ನು ಗೌರವಿಸಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
