Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಕನ್ಯಾ ರಾಶಿಗೆ ಸೂರ್ಯ ಸಂಚಾರ: ಸೂರ್ಯನ ಸ್ಥಾನ ಈ 6 ರಾಶಿಗಳಿಗೆ ಅನುಕೂಲಕರವಲ್ಲ, ಸ್ವಲ್ಪ ಜಾಗ್ರತೆ
ಸೂರ್ಯನು ಸೆಪ್ಟೆಂಬರ್ 16ಕ್ಕೆ ಕನ್ಯಾ ರಾಶಿಗೆ ಸಂಚರಿಸಿದಾಗ ಕೆಲ ರಾಶಿಯವರ ಮೇಲೆ ಅನುಕೂಲಕರ ಪ್ರಭಾವ ಬೀರಿದರೆ ಇನ್ನು ಕೆಲವು ರಾಶಿಗಳಿಗೆ ಅಷ್ಟೊಂದು ಅನುಕೂಲಕರವಲ್ಲ, ಈ ಸೂರ್ಯ ಸಂಚಾರದ ಸಮಯ ಈ ರಾಶಿಗೆ ಅಷ್ಟೊಂದು ಅನುಕೂಲಕರವಲ್ಲ, ಸ್ವಲ್ಪ ಜಾಗ್ರತೆವಹಿಸಿ, ಪರಿಹಾರಕ್ಕೆ ಸೂರ್ಯ ಮಂತ್ರ ಪಠಿಸಿ:

ಮೇಷ ರಾಶಿ
ಮೇಷ ರಾಶಿಯಲ್ಲಿ ಸೂರ್ಯ 6ನೇ ಮನೆಯಲ್ಲಿ ಇರಲಿದೆ. ಈ ಸೂರ್ಯ ಸಂಚಾರ ನಿಮಗೆ ಪ್ರಗತಿ ತರಲಿದೆ, ನಿಮ್ಮ ವೃತ್ತಿ ಬದುಕಿನಲ್ಲಿ ಯಶಸ್ಸು ಪಡೆಯುತ್ತೀರಿ. ಕೆಲಸದಲ್ಲಿ ಎದುರಿಸುತ್ತಿರುವ ಅಡೆತಡೆ ದೂರಾಗಲಿದೆ. ಅಲ್ಲದೆ ವೃತ್ತಿ ಬದುಕಿನಲ್ಲಿ ಸ್ಥಿರತೆ ಕಂಡು ಬರಲಿದೆ.
ವ್ಯಾಪಾರಿಗಳು ಈ ಅವಧಿಯಲ್ಲಿ ದೊಡ್ಡ ಲಾಭ ಗಳಿಸಲು ಸಾಧ್ಯವಾಗದಿದ್ದರೂ ದೊಡ್ಡ ಸಮಸ್ಯೆಯಿಲ್ಲ, ಆರ್ಥಿಕ ವಿಷಯಗಳಲ್ಲಿ ಪ್ರಯೋಜನ ಪಡೆಯುತ್ತೀರಿ. ಇನ್ನು ವ್ಯಾಪಾರಕ್ಕೆ ಹೂಡಿಕೆ ಮಾಡಲು ಸಾಲಕ್ಕೆ ಪ್ರಯತ್ನಿಸುತ್ತಿದ್ದರೆ ಈ ಅವಧಿಯಲ್ಲಿ ಸಾಲ ದೊರೆಯಲಿದೆ.
ಸಂಬಂಧದ ದೃಷ್ಟಿಯಿಂದ ಈ ವಾರ ನಿಮಗೆ ಅನುಕೂಲಕರವಲ್ಲ. ನಿಮ್ಮ ಹಾಗೂ ಸಂಗಾತಿ ನಡುವೆ ಭಿನ್ನಾಭಿಪ್ರಾಯಗಳಿರಬಹುದು, ನೀವು ಹೊಂದಾಣಿಕೆಯನ್ನು ಮಾಡಿಕೊಳ್ಳಬೇಕು.
ಅರೋಗ್ಯದ ಬಗ್ಗೆ ಹೇಳುವುದಾದರೆ ಮಕ್ಕಳ ಆರೋಗ್ಯದ ಕಡೆಗೆ ಗಮನಹರಿಸಿ.
ಕನ್ಯಾ ರಾಶಿ
ಸೂರ್ಯನು ಲಗ್ನ ಮನೆಯಲ್ಲಿ ಇರಲಿದೆ. ಈ ಸಮಯದಲ್ಲಿ ವೃತ್ತಿ ಬದುಕಿನಲ್ಲಿ ಅಭದ್ರತೆ ಕಾಡುವುದು. ವ್ಯಾಪಾರಿಗಳಿಗೂ ಈ ಅವಧಿ ಅಷ್ಟೊಂದು ಅನುಕೂಲಕರವಲ್ಲ. ಅರ್ಥಿಕವಾಗಿ ಈ ಅವಧಿ ಸಾಧಾರಣವಾಗಿರಲಿದೆ. ಆರೋಗ್ಯ ಸಮಸ್ಯೆಗಳಿರಬಹುದು, ಆರೋಗ್ಯದ ವಿಷಯದಲ್ಲಿ ನಿರ್ಲಕ್ಷ್ಯ ಬೇಡ.
ತುಲಾ ರಾಶಿ
ತುಲಾ ರಾಶಿಯಲ್ಲಿ ಸೂರ್ಯನು 12ನೇ ಮನೆಯಲ್ಲಿ ಇರಲಿದೆ. ವೃತ್ತಿ ಬದುಕಿನಲ್ಲಿ ಮಿಶ್ರಫಲ, ವೃತ್ತಿಬದುಕಿನಲ್ಲಿ ಕೆಲ ಸಮಸ್ಯೆಗಳಿರಬಹುದು. ವೃತ್ತಿ ಬದುಕಿನಲ್ಲಿ ಲಾಭ ಗಳಿಸುತ್ತೀರಿ.
ಹಣಕಾಸಿನ ವಿಷಯದಲ್ಲಿ, ನೀವು ಉತ್ತಮ ಆರ್ಥಿಕ ಲಾಭವನ್ನು ಪಡೆಯುತ್ತೀರಿ . ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಭಿನ್ನಾಭಿಪ್ರಾಯಗಳಿರಬಹುದು. ಸಣ್ಣ-ಪುಟ್ಟ ಆರೋಗ್ಯ ಸಮಸ್ಯೆಗಳಿರಬಹುದು.
ಮಕರ ರಾಶಿ
ಮಕರ ರಾಶಿಯಲ್ಲಿ ಸೂರ್ಯ 9ನೇ ಮನೆಯಲ್ಲಿ ಇರಲಿದೆ, ಈ ಅವಧಿ ಅನುಕೂಲಕರವಲ್ಲ, ಈ ಅವಧಿಯಲ್ಲ ನಿಮ್ಮ ಪ್ರಯತ್ನಕ್ಕೆ ತಕ್ಕ ಫಲ ಸಿಗುವುದು ಕಷ್ಟವಾಗುವುದು, ಹಾಗಾಗಿ ಆರ್ಥಿಕವಾಗಿ ಈ ಅವಧಿ ಅಷ್ಟೊಂದು ಅನುಕೂಲಕರವಲ್ಲ. ವೃತ್ತಿ ಬದುಕಿನಲ್ಲಿಯೂ ಹೆಚ್ಚಿನ ಒತ್ತಡ ಇರಲಿದೆ. ಇನ್ನು ಈ ಸಮಯದಲ್ಲಿ ಖರ್ಚು ಕೂಡ ಹೆಚ್ಚಿರಲಿದೆ. ಕುಟುಂಬದ ಸದಸ್ಯರ ಆರೋಗ್ಯ ಸಮಸ್ಯೆಯಿಂದಾಗಿ ಹೆಚ್ಚಿನ ಹಣ ಖರ್ಚಾಗಬಹುದು. ಅರೋಗ್ಯದ ಬಗ್ಗೆ ನೋಡುವುದಾದರೆ ರೋಗ ನಿರೋಧಕ ಶಕ್ತಿ ಕಡಿಮೆ ಇರುತ್ತದೆ, ಹಾಗಾಗಿ ಆರೋಗ್ಯದ ಕಡೆಗೆ ಗಮನಹರಿಸಿ.
ಕುಂಭ ರಾಶಿ
ಕುಂಭ ರಾಶಿಯಲ್ಲಿ ಸೂರ್ಯ 8ನೇ ಮನೆಯಲ್ಲಿ ಇರಲಿದೆ. ಈ ಅವಧಿ ಆರ್ಥಿಕವಾಗಿ ನಿಮಗೆ ಅನುಕೂಲಕರವಲ್ಲ. ಈ ಸಮಯದಲ್ಲಿ ಕೆಲಸದ ಜಾಗದಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸಬಹುದು. ವ್ಯಾಪಾರಿಗಳಿಗೂ ಈ ಅವಧಿ ಸವಾಲಿನಿಂದ ಕೂಡಿರಲಿದೆ. ಈ ಸಮಯದಲ್ಲಿ ನೀವು ನಿರೀಕ್ಷಿಸಿದಂತೆ ಲಾಭ ಗಳಿಸಲು ಕಷ್ಟವಾಗುವುದು. ವ್ಯಾಪಾರಿಗಳಿಗೆ ಆರ್ಥಿಕವಾಗಿ ಈ ಸಮಯದಲ್ಲಿ ಕೆಲ ಸವಾಲುಗಳು ಎದುರಾಗಬಹುದು. ಇನ್ನು ಶೀತ, ಕೆಮ್ಮು ಹೀಗೆ ಆರೋಗ್ಯ ಸಮಸ್ಯೆ ಕೂಡ ಕಾಡಬಹುದು, ಸೂರ್ಯನ ಈ ಸ್ಥಾನ ನಿಮಗೆ ಅನುಕೂಲಕರವಲ್ಲ.
ಮೀನ ರಾಶಿ
ಮೀನ ರಾಶಿಯಲ್ಲಿ ಸೂರ್ಯ 7ನೇ ಮನೆಯಲ್ಲಿ ಇರಲಿದೆ. ಮೀನ ರಾಶಿಯಲ್ಲಿ ಸೂರ್ಯನ ಈ ಸ್ಥಾನ ಮಧ್ಯಮ ಫಲ ನೀಡಲಿದೆ. ಈ ಅವಧಿಯಲ್ಲಿ ನಿಮ್ಮ ವೃತ್ತಿ ಬದುಕಿನಲ್ಲಿ ಈ ಅವಧಿ ಅನುಕೂಲಕರವಾಗಿದೆ. ಆದರೆ ನೀವು ಹೆಚ್ಚಿನ ಶ್ರಮ ಹಾಕಬೇಕಾಗುತ್ತದೆ. ಆರ್ಥಿಕ ಲಾಭ ಇರಲಿದೆ, ಆದರೆ ಖರ್ಚು ಕೂಡ ಅಧಿಕವಿರಲಿದೆ. ಖರ್ಚು ನಿಯಂತ್ರಿಸದಿದ್ದರೆ ಸಾಲ ತೆಗೆದುಕೊಳ್ಳಬೇಕಾಗುತ್ತದೆ. ವೈವಾಹಿಕ ಜೀವನದಲ್ಲಿ ಹೊಂದಾಣಕೆ ಇರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಚರ್ಮ ಸಂಬಂಧಿತ ಸಮಸ್ಯೆವಿರಬಹುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications