Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಜೂನ್ 15ಕ್ಕೆ ಮಿಥುನ ರಾಶಿಗೆ ಸೂರ್ಯ ಸಂಚಾರ: 12 ರಾಶಿಗಳ ಮೇಲೆ 30 ದಿನ ಇದರ ಪ್ರಭಾವ ಹೇಗಿರಲಿದೆ?
ಗ್ರಹಗಳ ರಾಜ ಸೂರ್ಯ ಪ್ರತಿ ತಿಂಗಳು ರಾಶಿ ಬದಲಾಯಿಸುತ್ತದೆ, ಹೀಗೆ ಇದು ರಾಶಿ ಬದಲಾವಣೆ ಮಾಡಿದಾಗ ನಮ್ಮ ಮೇಲೆ ಬೀರುವ ಪ್ರಭಾವ ಕೂಡ ಭಿನ್ನವಾಗಿರುತ್ತದೆ, ಇದೀಗ ಜೂನ್ 15ಕ್ಕೆ ಸೂರ್ಯ ಮಿಥುನ ರಾಶಿಗೆ ಸಂಚರಿಸಿದಾಗ ದ್ವಾದಶ ರಾಶಿಗಳಿಗೆ ಸುರ್ಯ ಗೋಚಾರ ಫಲ ಹೇಗಿದೆ ನೋಡೊಣ ಬನ್ನಿ:

ಮೇಷ ರಾಶಿ
ಸೂರ್ಯ ಮಿಥುನ ರಾಶಿಗೆ ಸಂಚರಿಸಿದಾಗ ಮೇಷ ರಾಶಿಯಲ್ಲಿ 3ನೇ ಮನೆಯಲ್ಲಿ ಇರಲಿದೆ. ಈ ಸಂಚಾರ ನಿಮಗೆ ಫಲಪ್ರದವಾಗಿದೆ, ಉದ್ಯೋಗದಲ್ಲಿ ಉತ್ತಮ ಅವಕಾಶ ದೊರೆಯಲಿದೆ. ಇನ್ನು ಹೊಸ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿದ್ದರೆ ಈ ಅವಧಿ ನಿಮಗೆ ಉತ್ತಮವಾಗಿರಲಿದೆ. ವ್ಯಾಪಾರಿಗಳಿಗೂ ಈ ಅವಧಿ ತುಂಬಾನೇ ಅನುಕೂಲಕರವಾಗಿದೆ.
ಆರ್ಥಿಕವಾಗಿ ಈ ಅವಧಿಯಲ್ಲಿ ಯಾವುದೇ ದೊಡ್ಡ ಸಮಸ್ಯೆ ಇರಲ್ಲ, ಇನ್ನು ಕುಟುಂಬ ಜೀವನದಲ್ಲಿ ಸಂತೋಷದ ವಾತಾವರಣ ಇರಲಿದೆ. ವೈವಾಹಿಕ ಜೀವನ ತುಂಬಾ ಚೆನ್ನಾಗಿರಲಿದೆ. ಆರೋಗ್ಯದಲ್ಲಿ ಈ ಅವಧಿ ಉತ್ತಮವಾಗಿದೆ.
ವೃಷಭ ರಾಶಿ
ವೃಷಭ ರಾಶಿಯಲ್ಲಿ ಸೂರ್ಯ 2ನೇ ಮನೆಯಲ್ಲಿ ಇರಲಿದೆ. ಆರ್ಥಿಕವಾಗಿ ನೋಡುವುದಾದರೆ ಈ ಅವಧಿಯಲ್ಲಿ ಖರ್ಚು ಅಧಿಕವಿರಲಿದೆ. ವೃತ್ತಿಜೀವನದ ಬಗ್ಗೆ ನೋಡುವುದಾದರೆ ಈ ಅವಧಿ ಉತ್ತಮವಾಗಿದೆ, ನಿಮ್ಮ ಕೌಶಲ್ಯದಿಂದ ಉತ್ತಮ ಫಲಿತಾಂಶ ದೊರೆಯಲಿದೆ. ವ್ಯಾಪಾರಿಗಳು ವೃತ್ತಿಪರತೆಯಿಂದಾಗಿ ನೀವು ಉತ್ತಮ ಲಾಭವನ್ನು ಪಡೆಯುತ್ತೀರಿ. ಕೌಟುಂಬಿಕ ಜೀವನದಲ್ಲಿ ಇರುವ ಭಿನ್ನಾಭಿಪ್ರಾಯ ದೂರಾಗುವುದು. ಆರೋಗ್ಯ ಸಮಸ್ಯೆಗಳಿರಬಹುದು.
ಮಿಥುನ ರಾಶಿ
ಜೂನ್ 15ಕ್ಕೆ ಸೂರ್ಯನು ಮಿಥುನ ರಾಶಿಗೆ ಸಂಚರಿಸಲಿದೆ, ವೃತ್ತಿ ಬದುಕಿನ ದೃಷ್ಟಿಯಿಂದ ನೋಡುವುದಾದರೆ ಈ ಅವಧಿ ಅನುಕೂಲಕರವಾಗಿದೆ, ವೃತ್ತು ಬದುಕಿನಲ್ಲಿ ಯಶಸ್ಸು ದೊರೆಯಲಿದೆ. ವ್ಯಾಪಾರಿಗಳು ಉತ್ತಮ ಲಾಭ ಗಳಿಸಲು ಸಾಧ್ಯವಾಗುವುದು, ಆರ್ಥಿಕವಾಗಿ ನೋಡುವುದಾದರೆ ಈ ಅವಧಿಯಲ್ಲಿ ಹಣ ಉಳಿತಾಯ ಮಾಡಲು ಸಾಧ್ಯವಾಗುವುದು. ವೈವಾಹಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ ಈ ಅವಧಿ ಉತ್ತಮವಾಗಿದೆ.
ಕರ್ಕ ರಾಶಿ
ಕರ್ಕ ರಾಶಿಯಲ್ಲಿ ಸೂರ್ಯ 12ನೇ ಮನೆಯಲ್ಲಿ ಇರಲಿದೆ. ಈ ಅವಧಿಯಲ್ಲಿ ವೃತ್ತಿ ಬದುಕಿನಲ್ಲಿ ಉತ್ತಮ ಫಲ ಪಡೆಯಲು ಸಿಗುವುದು. ಈ ಅವಧಿಯಲ್ಲಿ ಕೆಲಸದಲ್ಲಿ ಒತ್ತಡ ಇರಲಿದೆ. ವ್ಯಾಪಾರಿಗಳು ಜಾಗ್ರತೆವಹಿಬೇಕು, ಇಲ್ಲದಿದ್ದರೆ ನೀವು ನಷ್ಟವನ್ನು ಎದುರಿಸಬೇಕಾಗಬಹುದು. ಈ ಸಮಯದಲ್ಲಿ ಹಣದ ಖರ್ಚು ಅಧಿಕವಿರಲಿದೆ. ವೈವಾಹಿಕ ಜೀವನದಲ್ಲಿ ಕೆಲ ತೊಂದೆಗಳಿರಬಹುದು. ಕೆಲಸದ ಒತ್ತಡ ಆರೋಗ್ಯದ ಮೇಲೆ ಪರಿಣಾಮ ಬೀರುವುದು.
ಸಿಂಹ ರಾಶಿ
ಸಿಂಹ ರಾಶಿಯಲ್ಲಿ 11ನೇ ಮನೆಯಲ್ಲಿ ಇರಲಿದೆ. ಮಿಥುನ ರಾಶಿಯವರು ಈ ಅವಧಿಯಲ್ಲಿ ವೃತ್ತಿ ಬದುಕಿನಲ್ಲಿ ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಾಗುವುದು, ವೃತ್ತಿ ಬದುಕಿನಲ್ಲಿ ಕಠಿಣ ಪರಿಶ್ರಮಕ್ಕೆ ಉತ್ತಮ ಪ್ರತಿಫಲ ಸಿಗಲಿದೆ. ವ್ಯಾಪಾರಿಗಳು ನೀವು ದೊಡ್ಡ ಲಾಭವನ್ನು ಗಳಿಸುವಿರಿ, ವೈವಾಹಿಕ ಜೀವನದಲ್ಲಿ ಬಾಂಧವ್ಯ ಚೆನ್ನಾಗಿರಲಿದೆ. ಈ ಅವಧಿಯಲ್ಲಿ ಆರೋಗ್ಯದ ದೃಷ್ಟಿಯಿಂದ ನಿಮಗೆ ಉತ್ತಮವಾಗಿದೆ.
ಕನ್ಯಾ ರಾಶಿ
ಕನ್ಯಾ ರಾಶಿಯವರಲ್ಲಿ ಸೂರ್ಯ 10ನೇ ಮನೆಯಲ್ಲಿ ಇರಲಿದೆ. ವೃತ್ತಿ ಬದುಕಿನಲ್ಲಿ ಅನೇಕ ಸವಾಲುಗಳು ಬರಲಿದೆ, ಕೆಲವು ಕಾರಣಗಳಿಂದ ಉದ್ಯೋಗವನ್ನು ಬದಲಾಯಿಸಬಹುದು. ವ್ಯಾಪಾರಿಗಳು ತುಂಬಾನೇ ಜಾಗ್ರತೆವಹಿಸಬೇಕು. ಆರ್ಥಿಕವಾಗಿ ಕೆಲ ಸಮಸ್ಯೆಗಳನ್ನು ಎದುರಿಸಬಹುದು. ಆರೋಗ್ಯದ ಬಗ್ಗೆ ಹೇಳುವುದಾದರೆ ರೋಗನಿರೋಧಕ ಶಕ್ತಿ ಕಡಿಮೆ ಇರಲಿದೆ, ಇದರಿಂದಾಗಿ ಆರೋಗ್ಯ ಸಂಬಂಧಿತ ಸಮಸ್ಯೆವಿರಬಹುದು.
ತುಲಾ ರಾಶಿ
ತುಲಾ ರಾಶಿಯಲ್ಲಿ ಸೂರ್ಯ 9ನೇ ಮನೆಯಲ್ಲಿ ಇರಲಿದೆ. ಈ ಅವಧಿ ಆರ್ಥಿಕವಾಗಿ ಅನುಕೂಲಕರವಾಗಿದೆ, ವೃತ್ತಿ ಬದುಕಿನಲ್ಲಿ ನೀವು ಬಯಸಿದಂತೆ ಯಶಸ್ಸು ಪಡೆಯುತ್ತೀರಿ.
ಹೊಸ ಉದ್ಯೋಗಾವಕಾಶಗಳು ದೊರೆಯಲಿದೆ. ವ್ಯಾಪಾರಿಗಳಿಗೆ ಈ ಸಮಯ ತುಂಬಾನೇ ಅನುಕೂಲಕರವಾಗಿದೆ. ವೈವಾಹಿಕ ಬದುಕು ಚೆನ್ನಾಗಿರಲಿದೆ, ಆರ್ಥಿಕವಾಗಿ ಉಳಿತಾಯ ಮಾಡಲು ಸಾಧ್ಯವಾಗುವುದು. ಆರೋಗ್ಯದ ಬಗ್ಗೆ ಹೇಳುವುದಾದರೆ ಯಾವುದೇ ದೊಡ್ಡ ಸಮಸ್ಯೆಗಳಿರಲ್ಲ.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯಲ್ಲಿ ಸೂರ್ಯ 8ನೇ ಮನೆಯಲ್ಲಿ ಇರಲಿದೆ. ಸೂರ್ಯನು ನಿಮ್ಮ ರಾಶಿಯ 8ನೇ ಮನೆಯಲ್ಲಿ ಇರುವಾಗ ವೃತ್ತಿ ಬದುಕಿನಲ್ಲಿ ಅತೃಪ್ತಿ ಇರಲಿದೆ, ಕೆಲಸಕ್ಕೆ ಕುತ್ತು ಉಂಟಾಗುವ ಸಾಧ್ಯತೆ ಕೂಡ ಬರಬಹುದು, ತುಂಬಾನೇ ಜಾಗ್ರತೆವಹಿಸಿ. ವ್ಯಾಪಾರಿಗಳು ತಮ್ಮ ಪ್ರತಿಸ್ಪರ್ಧಿಗಳಿಂದ ನೀವು ಕಠಿಣ ಸ್ಪರ್ಧೆಯನ್ನು ಎದುರಿಸಬಹುದು, ಹೀಗಾಗಿ ಉತ್ತಮ ಲಾಭ ಗಳಿಸಲು ಕಷ್ಟವಾಗುವುದು. ವೈವಾಹಿಕ ಜೀವನದಲ್ಲಿ ಕೆಲ ಸಮಸ್ಯೆಗಳಿರಬಹುದು, ಅಹಂ ಸಮಸ್ಯೆ ಹೆಚ್ಚಾಗುವುದು. ಆರೋಗ್ಯದ ಬಗ್ಗೆ ತುಂಬಾನೇ ಗಮನಹರಿಸಬೇಕು.
ಧನು ರಾಶಿ
ಧನು ರಾಶಿಯವರಲ್ಲಿ ಸೂರ್ಯ 7ನೇ ಮನೆಯಲ್ಲಿ ಇರಲಿದೆ. ಉದ್ಯೋಗಕ್ಕಾಗಿ ಪ್ರಯಾಣ ಮಾಡಬೇಕಾಗುವುದು. ವ್ಯಾಪಾರಿಗಳಿಗೆ ಈ ಅವಧಿ ಅನುಕೂಲಕರವಾಗಿದೆ. ಆರ್ಥಿಕವಾಗಿ ಈ ಅವಧಿ ಅನುಕೂಲಕರವಾಗಿದೆ, ನೀವು ಉತ್ತಮ ಆರ್ಥಿಕ ಲಾಭವನ್ನು ಗಳಿಸುವಿರಿ. ಕುಟುಂಬ ಜೀವನ ಚೆನ್ನಾಗಿರಲಿದೆ, ವೈವಾಹಿಕ ಜೀವನ ಉತ್ತಮವಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿದೆ.
ಮಕರ ರಾಶಿ
ಮಕರ ರಾಶಿಯವರಲ್ಲಿ 6ನೇ ಮನೆಯಲ್ಲಿ ಸೂರ್ಯ ಇರಲಿದೆ, ಈ ಅವಧಿಯಲ್ಲಿ ಅನಿರೀಕ್ಷಿತ ಲಾಭ ದೊರೆಯಲಿದೆ, ವೃತ್ತಿ ಬದುಕಿನಲ್ಲಿ ನೀವು ಊಹಿಸಿದಂತೆ ಪ್ರತಿಫಲ ದೊರೆಯಲಿದೆ. ವ್ಯಾಪಾರಿಗಳು ಠಿಣ ಪ್ರತಿಸ್ಪರ್ಧೆ ಎದುರಿಸಬೇಕಾಗುವುದು, ಹೀಗಾಗಿ ಲಾಭ ಗಳಿಸಲು ಕಷ್ಟವಾಗುವುದು. ಕುಟುಂಬದಲ್ಲಿ ಖರ್ಚು ಹೆಚ್ಚಿರಲಿದೆ. ಸಂಗಾತಿಯೊಂದಿಗೆ ಕೆಲ ಭಿನ್ನಾಭಿಪ್ರಾಯಗಳಿರಲಿದೆ. ಆರೋಗ್ಯ ಸಂಬಂಧಿತ ಸಮಸ್ಯೆವಿರಬಹುದು.
ಕುಂಭ ರಾಶಿ
ಕುಂಭ ರಾಶಿಯಲ್ಲಿ 5ನೇ ಮನೆಯಲ್ಲಿ ಇರಲಿದೆ. ವ್ಯಾಪಾರಿಗಳು ಉತ್ತಮ ಪ್ರತಿಫಲ ಪಡೆಯಬಹುದು, ಉದ್ಯೋಗಿಗಳು ಈ ಅವಧಿಯಲ್ಲಿ ನೀವು ಹೊಸ ಉದ್ಯೋಗಾವಕಾಶಗಳನ್ನು ಪಡೆಯಬಹುದು. ವ್ಯಾಪಾರಿಗಳು ಆರ್ಥಿಕ ಲಾಭವನ್ನು ಪಡೆಯಬಹುದು. ವೈವಾಹಿಕ ಜೀವನದಲ್ಲಿ ಸಮಸ್ಯೆಗಳಿರಬಹುದು. ತಾಯಿಯ ಆರೋಗ್ಯಕ್ಕಾಗಿ ಹಣವನ್ನು ಖರ್ಚು ಮಾಡಬೇಕಾಗುತ್ತದೆ.
ಮೀನ ರಾಶಿ
ಮೀನ ರಾಶಿಯವರಲ್ಲಿ ಸೂರ್ಯ 4ನೇ ಮನೆಯಲ್ಲಿ ಇರಲಿದೆ. ಭವಿಷ್ಯದಲ್ಲಿ ಖರ್ಚುಗಳು ಹೆಚ್ಚಿರಲಿದೆ, ಅದಕ್ಕಾಗಿ ನೀವು ಸಾಲವನ್ನು ತೆಗೆದುಕೊಳ್ಳಬೇಕಾಗಬಹುದು.
ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ದೊರೆಯಲಿದೆ, ವ್ಯಾಪಾರಿಗಳು ಕಠಿಣ ಸ್ಪರ್ಧೆಯಿಂದಾಗಿ ನೀವು ನಷ್ಟವನ್ನು ಅನುಭವಿಸಬೇಕಾಗಬಹುದು.
ಹಣಕಾಸಿನ ದೃಷ್ಟಿಯಿಂದ ನೀವು ಮಧ್ಯಮ ಆರ್ಥಿಕ ಲಾಭಗಳನ್ನು ಹೊಂದಿರುತ್ತೀರಿ. ಹಣದ ವ್ಯವಹಾರದಲ್ಲಿ ನೀವು ಜಾಗರೂಕರಾಗಿರಬೇಕು. ಆರೋಗ್ಯ ಸಮಸ್ಯೆಗಳಿರಬಹುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











