Latest Updates
-
ಐಟಿಆರ್ ಗಡುವು ಮಿಸ್ ಆಯ್ತಾ? ದಂಡ ತಪ್ಪಿಸಲು ಈಗಲೇ ಈ ಕೆಲಸ ಮಾಡಿ, ಆರ್ಥಿಕ ನಷ್ಟದಿಂದ ಪಾರಾಗಿ! -
ಕರ್ನಾಟಕದಲ್ಲಿ ಭಾರಿ ಮಳೆ: ನಿಮ್ಮ ಮನೆ ಮತ್ತು ಕುಟುಂಬವನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಪೀನಟ್ ಬಟರ್ನಲ್ಲಿ ವಿಷಕಾರಿ ಶಿಲೀಂಧ್ರ? ನಿಮ್ಮ ಆರೋಗ್ಯ ಕಾಪಾಡಲು ಈ ವಿಷಯಗಳನ್ನು ಮರೆಯದಿರಿ -
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ! -
ಶ್ವಾಸಕೋಶದ ಆರೋಗ್ಯಕ್ಕೆ 7 ನಿಮಿಷದ ಬೆಳಗಿನ ಅಭ್ಯಾಸ: ಕಲುಷಿತ ಗಾಳಿಯಿಂದ ರಕ್ಷಣೆ ಪಡೆಯುವುದು ಹೇಗೆ?
ಸೂರ್ಯ-ಶನಿ ಯುತಿಯ ಈ ಅವಧಿಯಲ್ಲಿ ಈ 4 ರಾಶಿಯವರು ಜಾಗ್ರತೆ, ಯಾವ ಪರಿಹಾರ ಒಳ್ಳೆಯದು?
ಕುಂಭ ರಾಶಿಯಲ್ಲಿ ಸೂರ್ಯ ಮತ್ತು ಶನಿಯ ಸಂಯೋಗವಾಗಿದೆ. ಈ ಸಂಯೋಗ ಕೆಲವೊಂದು ರಾಶಿಗಳ ಮೇಲೆ ಅಡ್ಡಪರಿಣಾಮ ಬೀರಿದೆ, ಆ ರಾಶಿಗಳು ಯಾವುವು, ಪರಿಹಾರವೇನು ಎಂದು ನೋಡೋಣ ಬನ್ನಿ:
ಧನು ರಾಶಿ
ಈಗ ಸೂರ್ಯ-ಶನಿ ನಿಮ್ಮ ಮೂರನೇಯ ಮನೆಯಲ್ಲಿದೆ. ಈ ಗ್ರಹಗಳ ಪ್ರಭಾವದಿಂದ ನಿಮ್ಮ ನಡವಳಿಕೆಯಲ್ಲಿ ನಕಾರಾತ್ಮಕತೆ ಹೆಚ್ಚಾಗಬಹುದು. ನಿಮ್ಮ ಹಠ-ಕೋಪ ಹೆಚ್ಚಾಗಬಹುದು. ಈ ಸಮಯದಲ್ಲಿ ನೀವು ವೃತ್ತಿಯಲ್ಲಿ ಸವಾಲುಗಳನ್ನು ಎದುರಿಸಬಹುದು. ಈ ಅವಧಿಯಲ್ಲಿ, ನಿಮ್ಮ ವೃತ್ತಿಜೀವನದಲ್ಲಿ ನೀವು ಸಾಕಷ್ಟು ಏರಿಳಿತಗಳನ್ನು ಕಾಣಬಹುದು.

ಮಕರ ರಾಶಿ
ಮಕರ ರಾಶಿಯಲ್ಲಿ ಎರಡನೇ ಮನೆಯಲ್ಲಿ ಸೂರ್ಯ ಮತ್ತು ಶನಿಯ ಸಂಯೋಗದ ಪರಿಣಾಮವಾಗಿ, ನೀವು ಅನೇಕ ನಕಾರಾತ್ಮಕ ಪರಿಣಾಮಗಳನ್ನು ಎದುರಿಸಬೇಕಾಗಬಹುದು. ಈ ಅವಧಿಯಲ್ಲಿ ನೀವು ಆರ್ಥಿಕ ಸಂಕಷ್ಟ ಎದುರಿಸಬಹುದು. ಈ ಸಮಯದಲ್ಲಿ ಹಣವನ್ನು ಉಳಿಸಲು ಕಷ್ಟವಾಗಬಹುದು, ಕೆಲಸದಲ್ಲಿಯೂ ನಿಮ್ಮ ಕೆಲಸ ಪೂರ್ಣಗೊಳಿಸಲು ಅಡೆತಡೆಗಳು ಎದುರಾಗುವುದು. ಸೂರ್ಯ ಮತ್ತು ಶನಿಯ ಸಂಯೋಜನೆಯು ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಈ ಸಮಯದಲ್ಲಿ ಆರೋಗ್ಯ ವಿಷಯದಲ್ಲಿ ಜಾಗ್ರತೆವಹಿಸಿ.
ಕುಂಭ ರಾಶಿ
ಕುಂಭ ರಾಶಿಯಲ್ಲಿ ಮೊದಲ ಮನೆಯಲ್ಲಿ ಸೂರ್ಯ-ಶನಿಯ ಸಂಯೋಗವಾಗಿದೆ. ಅದು ನಿಮ್ಮ ಸಂಬಂಧದ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು. ಪರಿಣಾಮವಾಗಿ, ಸಂಬಂಧಗಳನ್ನು ಕಾಪಾಡಿಕೊಳ್ಳಲು ನಿಮಗೆ ಕಷ್ಟವಾಗಬಹುದು. ವೈವಾಹಿಕ ಜೀವನದಲ್ಲಿ ಹಲವು ಸಮಸ್ಯೆಗಳು ಎದುರಾಗಬಹುದು, ನಿಮ್ಮ ಸಂಗಾತಿ ನಿಮ್ಮನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದನಿಸಬಹುದು.
ಮೀನ ರಾಶಿ
ಮೀನ ರಾಶಿಯವರಲ್ಲಿ 12ನೇ ಮನೆಯಲ್ಲಿ ಸೂರ್ಯ ಮತ್ತು ಶನಿಯ ಸಂಯೋಗವಾಗಲಿದೆ. ಈ ಸಂಯೋಗದ ಪರಿಣಾಮವಾಗಿ ನೀವು ಜೀವನದಲ್ಲಿ ಪ್ರತಿಯೊಂದು ಹಂತದಲ್ಲಿಯೂ ಸವಾಲನ್ನು ಎದುರಿಸಲು ಸಿದ್ಧರಾಗಿರುತ್ತೀರಿ. ಆದರೆ ಈ ಸಂಯೋಗದ ಸಮಯದಲ್ಲಿ ನೀವು ಅಭದ್ರತೆಯ ಭಾವನೆಯನ್ನು ಅನುಭವಿಸಬಹುದು. ನಿಮ್ಮ ಸ್ವಂತ ನಿರ್ಧಾರವನ್ನು ತೆಗೆದುಕೊಳ್ಳಲು ನೀವು ಭಯಪಡುವ ಸಾಧ್ಯತೆಯಿದೆ. ಈ ಅವಧಿಯಲ್ಲಿ ಆರ್ಥಿಕ ಸಂಕಷ್ಟ ಎದುರಾಗಬಹುದು. ಈ ಅವಧಿಯಲ್ಲಿ ಖರ್ಚುಗಳು ಅಧಿಕವಿರಬಹುದು.
ಶನಿ-ಸೂರ್ಯ ಯುತಿಯಿಂದ ಉಂಟಾದ ಕೆಟ್ಟ ಪರಿಣಾಮಗಳೇನು?
ಖಿನ್ನತೆ
ವೃತ್ತಿಯಲ್ಲಿ ಸವಾಲುಗಳು
ಅನಾರೋಗ್ಯ
ಬೇಗನೆ ಕೋಪ ಬರುವುದು
ಅನೈತಿಕ ಸಂಬಂಧ, ತೇಜೋವಧೆ ಉಂಟಾಗುವುದು
ಈ ಬಗೆಯ ಸಮಸ್ಯೆಗಳು ಕಂಡು ಬರುವುದು
ಶನಿಯ ಕೆಟ್ಟ ಪ್ರಭಾವ ಕಡಿಮೆ
ಈ ಶನಿ ಮಂತ್ರ ಪಠಿಸಿ. ಓಂ ಪ್ರಾಂ ಪ್ರೀಂ ಪ್ರೌಂ ಸಃ ಶನೈಶ್ಚರಾಯ ನಮಃ ಓಂ ಐಂಗ್ ಹ್ರಿಂಗ್ ಶ್ರೀಂಗ್ ಶಂಗ್ ಶನೈಶ್ಚರಾಯ ನಮಃ ಓಂ ಓಂ ಹಿಂ ಶಂ ಶನಯೇ ನಮಃ ಓಂ ಶಂ ಶನೈಶ್ಚರಾಯ ನಮಃ
ಈ ಮಂತ್ರ ಪ್ರತಿದಿನ ಪಠಿಸಿ.
ಶನಿವಾರ ಶನಿದೇವಾಲಯಕ್ಕೆ ಹೋಗಿ ಶನಿದೇವರಿಗೆ ಪ್ರಾರ್ಥನೆ ಮಾಡಿ,
ಶನಿ ದೇವರಿಗೆ ಸಾಸಿವೆಯೆಣ್ಣೆ ಅರ್ಪಿಸಿ
ಪ್ರತಿದಿನ ಸೂರ್ಯನಿಗೆ ಆರ್ಘ್ಯ ಅರ್ಪಿಸಿ ಈ ಮಂತ್ರ ಪಠಿಸಿ
ಸೂರ್ಯ ಬೀಜ ಮಂತ್ರ
ಓಂ ಹರಂ ಹ್ರೀ ಹ್ರೌಂ ಸಃ ಸೂರ್ಯಾಯ ನಮಃ
ಸೂರ್ಯ ನಮಸ್ಕಾರ ಮಂತ್ರ :
ಓಂ ಮಿತ್ರಾಯ ನಮಃ
ಓಂ ರವಾಯ್ರೇ ನಮಃ
ಓಂ ಸೂರ್ಯಾಯ ನಮಃ
ಓಂ ಭಾನವೇ ನಮಃ
ಓಂ ಖಗಾಯ ನಮಃ
ಓಂ ಪುಷ್ನೇ ನಮಃ
ಓಂ ಹಿರಣ್ಯಗರ್ಭಾಯ ನಮಃ
ಓಂ ಮರೀಚಯೇ ನಮಃ
ಓಂ ಆದಿತ್ಯಾಯ ನಮಃ
ಓಂ ಸವಿತ್ರೇ ನಮಃ
ಓಂ ಅರ್ಕಾಯ ನಮಃ
ಓಂ ಭಾಸ್ಕರಾಯ ನಮಃ
ಸೂರ್ಯ ಗಾಯತ್ರಿ ಮಂತ್ರ :
ಓಂ ಭಾಸ್ಕರಾಯ ವಿದ್ಮಹೇ ಮಹಾದುತ್ಯಾತಿಕರಾಯ ಧೀಮಹಿ ತಾನಃ ಸೂರ್ಯ ಪ್ರಚೋದಯಾತ್ ಓಂ ಆದಿತ್ಯಾಯ ವಿದ್ಮಹೇ ಮಾರ್ತಾಂಡೇ ಧೀಮಹಿ ತನಃ ಸೂರ್ಯ ಪ್ರಚೋದಯಾತ್ ಓಂ ಸಪ್ತ ತುರಂಗಾಯ ವಿದ್ಮಹೇ ಸಹಸ್ರ ಕೀರ್ಣಯ ಧೀಮಹಿ ತನ್ನೋ ರವಿ ಪ್ರಚೋದಯಾತ್
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications