Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಸೂರ್ಯ-ಶನಿ ಸಂಯೋಗ ತರಲಿದೆ ಈ ರಾಶಿಗಳ ಪಾಲಿಗೆ ಅಪಾರ ಯಶಸ್ಸು, ಅದೃಷ್ಟ
ಸೂರ್ಯ ಮತ್ತು ಶನಿ ಮೀನ ರಾಶಿಯಲ್ಲಿ ಸಂಯೋಗವಾಗುತ್ತಿದೆ, ಈ ಸಂಯೋಗ ಸುಮಾರು 30 ವರ್ಷಗಳ ಬಳಿ ಸಂಭವಿಸಲಿದೆ, ಸೂರ್ಯ ಮತ್ತು ಶನಿಯದು ತಂದೆ ಮಗನ ಸಂಬಂಧ, ಅಲ್ಲದೆ ಇವುಗಳು ಶತ್ರುಗಳಾಗಿದೆ. ಈ ಗ್ರಹಗಳ ಸಂಯೋಗ ಪ್ರತಿಯೊಂದು ರಾಶಿ ಮೇಲೆ ಪ್ರಭಾವ ಬೀರುತ್ತದೆ, ಈ ಗ್ರಹಗಳು ಶತ್ರು ಗ್ರಹಗಳೇ ಆದರೂ ಈ ರಾಶಿಯವರು ಪ್ರಯೋಜನ ಪಡೆಯುತ್ತೀರಿ:

ವೃಷಭ ರಾಶಿ
ವೃಷಭ ರಾಶಿಯವರು ಸೂರ್ಯ ಮತ್ತು ಶನಿ ಸಂಯೋಗದಿಂದಾಗಿ ತುಂಬಾನೇ ಉತ್ತಮ ಪ್ರಯೋಜನ ಪಡೆಯುತ್ತೀರಿ, ಆರ್ಥಿಕವಾಗಿ ಪ್ರಗತಿ ಕಾಣುತ್ತೀರಿ. ಸಾಲ ಮಾಡಿದ್ದರೆ ಸಾಲ ತೀರಿಸಲು ಸಾಧ್ಯವಾಗಲಿದೆ, ಹಣ ಉಳಿಸಲು, ಹೂಡಿಕೆಗೆ ಈ ಅವಧಿ ಅನುಕೂಲಕರವಾಗಿದೆ. ವೃತ್ತಿ ಜೀವನಕ್ಕೂ ಈ ಅವಧಿ ಅನುಕೂಲಕರವಾಗಿದೆ. ಕುಟುಂಬ ಜೀವನದ ಮೇಲೆ ಉತ್ತಮ ಪರಿಣಾಮ ಬೀರಲಿದೆ. ನಿಮ್ಮ ಹಾಗೂ ಸಂಗಾತಿಯ ಬಾಂಧವ್ಯ ಮತ್ತಷ್ಟು ಗಟ್ಟಿಯಾಗಲಿದೆ. ಆರೋಗ್ಯ ವಿಷಯದಲ್ಲಿಯೂ ಈ ಸಂಯೋಗ ನಿಮಗೆ ಅನುಕೂಲಕರವಾಗಿದೆ.
ಮಿಥುನ ರಾಶಿ
ಸೂರ್ಯ ಶನಿ ಯುತಿಯಿಂದಾಗಿ ಮಿಥುನ ರಾಶಿಯವರು ಕೂಡ ತುಂಬಾ ಉತ್ತಮ ಪ್ರಯೋಜನ ಪಡೆಯುತ್ತೀರಿ, ಕೆಲಸ ಕಾರ್ಯಗಳು ಅಡೆತಡೆಯಿಲ್ಲದೆ ನಡೆಯಲಿದೆ. ದೊಡ್ಡ ಪ್ರಾಜೆಕ್ಟ್‌ನಲ್ಲಿ ಕೆಲಸ ಮಾಡುತ್ತಿದ್ದರೆ ಸಹೋದ್ಯೋಗಿಗಳ ಬೆಂಬಲ ನಿಮಗೆ ದೊರೆಯುವುದರಿಂದ ಕೆಲಸದಲ್ಲಿ ಯಶಸ್ಸು ಪಡೆಯಲು ಸಾಧ್ಯವಾಗುವುದು. ಆರೋಗ್ಯ ಉತ್ತಮವಾಗಿದೆ, ವೈವಾಹಿಕ ಬದುಕು ಚೆನ್ನಾಗಿರಲಿದೆ, ಪ್ರೇಮಿಗಳು ಕುಟುಂಬದಲ್ಲಿ ಮದುವೆ ಮಾತುಕತೆ ನಡೆಸಲು ಸಮಯ ಅನುಕೂಲಕರವಾಗಿದೆ.
ತುಲಾ ರಾಶಿ
ಏನಾದರು ಅನಾರೋಗ್ಯ ಸಮಸ್ಯೆವಿದ್ದರೆ ಆರೋಗ್ಯದಲ್ಲಿ ಗಮನಾರ್ಹ ಬದಲಾವಣೆ ಕಾಣುತ್ತೀರಿ. ಆರ್ಥಿಕವಾಗಿ ತುಂಬಾನೇ ಉತ್ತಮ ಪ್ರಯೋಜನ ಪಡೆಯುತ್ತೀರಿ, ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ, ವ್ಯಾಪಾರಸ್ಥರು ತಮ್ಮ ವ್ಯವಹಾರದಲ್ಲಿ ಗಮನಾರ್ಹ ಬೆಳವಣಿಗೆ ಕಾಣಲು ಸಾಧ್ಯವಾಗುವುದು. ಈ ಸೂರ್ಯ- ಶನಿ ಯುತಿ ನಿಮಗೆ ತುಂಬಾನೇ ಪ್ರಯೋಜನ ಉಂಟು ಮಾಡಲಿದೆ.
ವೃಶ್ಚಿಕ ರಾಶಿ
ವೃತ್ತಿ ಜೀವನದ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿದೆ.ಪ್ರೇಮ ವಿವಾಹವಾಗಲು ಬಯಸುವವರಿಗೆ ಈ ಸಮಯ ಅನುಕೂಲಕರವಾಗಿದೆ. ಆರ್ಥಿಕ ಪ್ರಯತ್ನದಲ್ಲಿ ಉತ್ತಮ ಪ್ರತಿಫಲ ಪಡೆಯಲು ಸಾಧ್ಯವಾಗಲಿದೆ. ನಿಮ್ಮ ಯೋಜನೆಗಳಲ್ಲಿ ಯಶಸ್ಸು ಪಡೆಯುವುದರಿಂದ ಖುಷಿಯಾಗಿರುತ್ತೀರಿ.
ಕುಂಭ ರಾಶಿ
ಈ ಅವಧಿಯಲ್ಲಿ ಖರ್ಚುಗಳು ಕಡಿಮೆ ಇರುವುದರಿಂದ ಆರ್ಥಿಕ ಪ್ರಯೊಜನ ಪಡೆಯುತ್ತೀರಿ. ಇನ್ನು ಆಸ್ತಿ ಸಂಬಂಧಿತ ಸಮಸ್ಯೆವಿದ್ದರೆ ಅದು ಬಗೆಹರಿಯಲಿದೆ. ಬಡ್ತಿ ನೀರಿಕ್ಷೆಯಲ್ಲಿದ್ದರೆ ಸಂಬಳ ಹೆಚ್ಚಾಗಲಿದೆ. ಮನೆಯಲ್ಲಿಯೂ ಸಂತೋಷದ ವಾತಾವರಣ ಇರಲಿದೆ. ಆರೋಗ್ಯದ ದೃಷ್ಟಿಯಿಂದ ಕೂಡ ಸಮಯ ಉತ್ತಮವಾಗಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications