ದಿನ ಭವಿಷ್ಯ: ಮೇ 10, ಅಕ್ಷಯ ತೃತೀಯ ಈ ದಿನ 12 ರಾಶಿಗಳಿಗೆ ಲಕ್ಷ್ಮಿ ಯೋಗ ಹೇಗಿದೆ?

ಅಕ್ಷಯ ತೃತೀಯ ಈ ಶುಭ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ ನೋಡೋಣ:

ಮೇಷ ರಾಶಿ

ಕೆಲಸದಲ್ಲಿ ಹೆಚ್ಚಿನ ಒತ್ತಡ ಹೆಚ್ಚಿರಲಿದೆ, ಅತಿಯಾದ ಮಾನಸಿಕ ಒತ್ತಡ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ. ನಿಮ್ಮ ಕೆಲಸವನ್ನು ಸರಿಯಾಗಿ ಪ್ಲ್ಯಾನ್‌ ಮಾಡಿ ಮುಗಿಸಲು ಪ್ರಯತ್ನಿಸಿ. ಹಣದ ಬಗ್ಗೆ ಹೇಳುವುದಾದರೆ ಈ ದಿನ ಖರ್ಚು ಹೆಚ್ಚಿರಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಪ್ರೇಮಿಗಳಿಗೂ ಈ ದಿನ ಚೆನ್ನಾಗಿರಲಿದೆ.

Dina Bhavishya

ವೃಷಭ ರಾಶಿ

ರಾಜಕಾರಣಿಗಳಿಗೆ ಈ ಸಮಯ ಚೆನ್ನಾಗಿದೆ. ಇನ್ನು ಸ್ವಂತ ವ್ಯವಹಾರ ಮಾಡಲು ಪ್ರಯತ್ನಿಸುತ್ತಿದ್ದರೆ ಈ ಅವಧಿ ಚೆನ್ನಾಗಿರಲಿದೆ. ಹಣಕಾಸಿನ ಪರಿಸ್ಥಿತಿ ಸುಧಾರಿಸಲಿದೆ. ನಿಮ್ಮ ಕಠಿಣ ಪರಿಶ್ರಮಕ್ಕೆ ನೀವು ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ಕೌಟುಂಬಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ ಈ ದಿನವು ಅನುಕೂಲಕರವಾಗಿರುತ್ತದೆ.

ಮಿಥುನ ರಾಶಿ

ಹಣದ ಖರ್ಚು ಹೆಚ್ಚಿರಲಿದೆ, ಇನ್ನು ವೈವಾಹಿಕ ಜೀವನದಲ್ಲಿ ಕೆಲ ಸಮಸ್ಯೆವಿರಬಹುದು, ಸಂಗಾತಿ ನಿಮ್ಮನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದನಿಸಬಹುದು. ವೈಯಕ್ತಿಕ ಸಮಸ್ಯೆ ಕೆಲಸದ ಮೇಲೆ ಪ್ರಭಾವ ಬೀರದಂತೆ ಜಾಗ್ರತೆವಹಿಸಿ, ವ್ಯಾಪಾರಿಗಳಿಗೆ ಈ ದಿನ ಅನುಕೂಲರವಾಗಿರಲಿದೆ.

ಕರ್ಕ ರಾಶಿ

ಕುಟುಂಬ ಜೀವನ ಚೆನ್ನಾಗಿರಲಿದೆ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯ ಬಲವಾದ ಸಾಧ್ಯತೆಯಿದೆ. ಕೆಲಸದ ವಿಷಯದಲ್ಲಿ ಈ ದಿನ ಶುಭವಾಗಿದೆ. ವ್ಯಾಪಾರಿಗಳಿಗೂ ಒಳ್ಳೆಯದಿದೆ, ನೀವು ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡಿದರೆ ಇಂದು ನೀವು ಉತ್ತಮ ಲಾಭವನ್ನು ನಿರೀಕ್ಷಿಸಬಹುದು. ಆರೋಗ್ಯದ ಕಡೆಗೆ ಗಮನಹರಿಸಿ.

ಸಿಂಹ ರಾಶಿ

ಈ ದಿನ ಕೆಲಸದ ಒತ್ತಡ ಅಧಿಕವಿರಲಿದೆ. ಕೆಲಸದ ಬಗ್ಗೆ ಶುಭ ಸುದ್ದಿ ಪಡೆಯುತ್ತೀರಿ. ನೀವು ಹೂಡಿಕೆ ಮಾಡಿದ್ದರೆ ಅದರಿಂದ ಉತ್ತಮ ಲಾಭ ಪಡೆಯುತ್ತೀರಿ. ಕುಟುಂಬ ಜೀವನದಲ್ಲಿ ಪರಿಸ್ಥಿತಿ ಸಾಮಾನ್ಯವಾಗಿರುತ್ತದೆ. ಆರೋಗ್ಯ ಚೆನ್ನಾಗಿರಲಿದೆ.

ಕನ್ಯಾ ರಾಶಿ

ಹಣಕ್ಕೆ ಸಂಬಂಧಿಸಿದ ಸಮಸ್ಯೆ ಬಗೆಹರಿಯಲಿದೆ. ಉದ್ಯೋಗಿಗಳು ಸಂಬಳ ಹೆಚ್ಚಾಗುವ ಸಿಹಿ ಸುದ್ದಿ ಪಡೆಯುತ್ತೀರಿ. ವ್ಯಾಪಾರಿಗಳು ನೀವು ಊಹಿಸಿದ ಫಲಿತಾಂಶ ಶೀಘ್ರದಲ್ಲಿಯೇ ಪಡೆಯುತ್ತೀರಿ. ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. ಆರೋಗ್ಯ ಚೆನ್ನಾಗಿರಲಿದೆ.

ತುಲಾ ರಾಶಿ

ನೀವು ವಿದ್ಯಾರ್ಥಿಯಾಗಿದ್ದರೆ ಮತ್ತು ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಭಾಗವಹಿಸಿದ್ದರೆ ಉತ್ತಮ ಫಲಿತಾಂಶ ಪಡೆಯುತ್ತೀರಿ. ಹಣದ ಬಗ್ಗೆ ಜಾಗ್ರತೆ. ಇಂದು ನೀವು ತರಾತುರಿಯಲ್ಲಿ ಹಣಕ್ಕೆ ಸಂಬಂಧಿಸಿದ ಯಾವುದೇ ಕೆಲಸವನ್ನು ಮಾಡಬೇಡಿ. ವ್ಯಾಪಾರಿಗಳು ಉತ್ತಮ ಲಾಭ ಪಡೆಯುತ್ತೀರಿ. ಕುಟುಂಬ ಜೀವನದಲ್ಲಿ ಪರಿಸ್ಥಿತಿ ಸಾಮಾನ್ಯವಾಗಿರಲಿದೆ. ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಬೇಡಿ.

ವೃಶ್ಚಿಕ ರಾಶಿ

ಉದ್ಯಮಿಗಳಿಗೆ ಈ ದಿನ ಉತ್ತಮವಾಗಿದೆ, ನಿಮ್ಮ ಹಣದ ಸಮಸ್ಯೆ ಬಗೆಹರಿಯಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ನಿಮ್ಮ ಬಜೆಟ್‌ಗೆ ಅನುಗುಣವಾಗಿ ಮಾತ್ರ ನೀವು ಖರ್ಚು ಮಾಡುತ್ತೀರಿ. ಆರೋಗ್ಯ ಸಮಸ್ಯೆಯನ್ನು ನಿರ್ಲಕ್ಷ್ಯ ಮಾಡಬೇಡಿ.

ಧನು ರಾಶಿ

ನಿಮ್ಮ ಹಣಕಾಸಿನ ಸ್ಥಿತಿ ಚೆನ್ನಾಗಿರಲಿದೆ, ನೀವು ಆಸ್ತಿಯಲ್ಲಿ ಹೂಡಿಕೆ ಮಾಡುತ್ತೀರಿ. ಆದರೆ ಷೇರು ಮಾರುಕಟ್ಟೆಯಲಲಿ ಹೂಡಿಕೆ ಮಾಡಲು ಹೋಗಬೇಡಿ. ಕಬ್ಬಿಣದ ವ್ಯಾಪಾರಿಗಳು ಉತ್ತಮ ಆರ್ಥಿಕ ಲಾಭವನ್ನು ಪಡೆಯುತ್ತಾರೆ. ಕುಟುಂಬ ಜೀವನದಲ್ಲಿ ಪರಿಸ್ಥಿತಿ ಅಷ್ಟು ಚೆನ್ನಾಗಿರಲ್ಲ. ಆರೋಗ್ಯದ ದೃಷ್ಟಿಯಿಂದ ಈ ದಿನವು ಸರಾಸರಿಯಾಗಿರುತ್ತದೆ.

ಮಕರ ರಾಶಿ

ಇಂದು ಬೇಡ ಚಿಂತೆ ನಿಮ್ಮ ಮನಸ್ಸಿಗೆ ಕಸಿವಿಸಿ ಉಂಟು ಮಾಡಬಹುದು. ಅನಗ್ಯತ ಚಿಂತೆಗಳಿಂದ ದೂರವಿರಿ. ಖರ್ಚು ಮಿತಿಯಲ್ಲಿ ಮಾಡಿ. ವೈವಾಹಿಕ ಜೀವನ ಕೂಡ ಅಷ್ಟು ಚೆನ್ನಾಗಿರಲ್ಲ, ನೀವು ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳಲು ಪ್ರಯತ್ನಿಸಿ. ಆರೋಗ್ಯವೂ ಇಂದು ಅಷ್ಟು ಚೆನ್ನಾಗಿರಲ್ಲ.


ಕುಂಭ ರಾಶಿ

ಉದ್ಯೋಗಿಗಳಿಗೆ , ವ್ಯಾಪಾರಸ್ಥರಿಗೆ ಈ ದಿನ ಉತ್ತಮವಾಗಿರಲಿದೆ. ವ್ಯಾಪಾರಿಗಳಿಗೆ ಉತ್ತಮ ಲಾಭ ಗಳಿಸುತ್ತೀರಿ. ದಾಂಪತ್ಯ ಜೀವನ ಚೆನ್ನಾಗಿರಲಿದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಹಾಗಂತ ಹೆಚ್ಚು ಖರ್ಚು ಮಾಡಲು ಹೋಗಬೇಡಿ.

ಮೀನ ರಾಶಿ

ವ್ಯಾಪಾರಿಗಳಿಗೆ ಈ ದಿನ ತುಂಬಾನೇ ಚೆನ್ನಾಗಿರಲಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಇಂದು ನೀವು ಹವ್ಯಾಸಗಳು ಮತ್ತು ಸಂತೋಷಗಳಿಗಾಗಿ ಸ್ವಲ್ಪ ಹಣವನ್ನು ಖರ್ಚು ಮಾಡುತ್ತೀರಿ. ಉತ್ತಮ ಆರೋಗ್ಯಕ್ಕಾಗಿ ನಿಮ್ಮ ದಿನಚರಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಂಡರೆ ಒಳ್ಳೆಯದು.

Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.

English summary

Today Horoscope in Kannada 10th May 2024: Aries to Pisces Dina Bhavishya Prediction for 12 Zodiacs

Explore Dina Bhavishya (ದಿನ ಭವಿಷ್ಯ) /Daily Horoscope Prediction For Aries, Taurus, Gemini, Cancer, Leo, Virgo, Libra, Scorpio, Sagittarius, Capricorn, Aquarius, And Pisces In Kannada
Story first published: Thursday, May 9, 2024, 20:28 [IST]
X
Desktop Bottom Promotion