Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಮೇ 11, ದಿನ ಭವಿಷ್ಯ: ಈ ದಿನ 12 ರಾಶಿಗಳ ರಾಶಿಫಲ ಹೇಗಿರಲಿದೆ?
ಮೇ 11 ಈ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ ನೋಡೋಣ:
ಮೇಷ ರಾಶಿ
ಈ ದಿನ ನಿಮಗೆ ತುಂಬಾನೇ ಚೆನ್ನಾಗಿರಲಿದೆ, ಕುಟುಂಬ ಜೀವನದಲ್ಲಿ ಖುಷಿ ಇರಲಿದೆ. ಹಣಕಾಸಿನ ಪರಿಸ್ಥಿತಿ ತುಂಬಾ ಚೆನ್ನಾಗಿರಲಿದೆ. ಈ ದಿನ ನಿಮ್ಮ ಎಲ್ಲಾ ಕೆಲಸಗಳು ನಿಮ್ಮ ಯೋಜನೆಯಂತೆಯೇ ಪೂರ್ಣಗೊಳ್ಳಲಿದೆ. ವ್ಯಾಪರಿಗಳಿಗೆ ಈ ದಿನ ಸ್ವಲ್ಪ ಒತ್ತಡದ ದಿನ. ಆರೋಗ್ಯ ಉತ್ತಮವಾಗಿರಲಿದೆ.

ವೃಷಭ ರಾಶಿ
ಈ ದಿನ ನಿಮಗೆ ಅಷ್ಟೊಂದು ಅನುಕೂಲಕರವಲ್ಲ. ವ್ಯಾಪಾರಿಗಳಿಗೆ ಈ ದಿನ ಹೆಚ್ಚು ಲಾಭದಾಯಕವಾಗಿರಲಿದೆ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರಲಿದೆ. ನೀವು ಉಳಿತಾಯದ ಕಡೆಗೆ ಗಮನಹರಿಸಿ. ಕುಟುಂಬ ಜೀವನದಲ್ಲಿ ಶಾಂತಿ ಇರಲಿದೆ. ಆರೋಗ್ಯದಲ್ಲಿ ಈ ದಿನ ಮಿಶ್ರಫಲ.
ಮಿಥುನ ರಾಶಿ
ಈ ದಿನ ನೀವು ಪ್ರಯಾಣ ಮಾಡುವುದಾದರೆ ಹೆಚ್ಚು ಜಾಗ್ರತೆವಹಿಸಿ, ನಿಮ್ಮ ವಸ್ತುಗಳು ಕಳ್ಳತನವಾಗಬಹುದು. ಕೆಲಸದ ಒತ್ತಡ ಹೆಚ್ಚಾಗಲಿದೆ, ಆರೋಗಯದ ಮೇಲೂ ಪರಿಣಾಮ ಬೀರಲಿದೆ. ನಿಮ್ಮ ಆದಾಯವನ್ನು ಗಮನದಲ್ಲಿಟ್ಟುಕೊಂಡು ಮಾತ್ರ ಖರ್ಚು ಮಾಡಬೇಕು.
ಕರ್ಕ ರಾಶಿ
ಪ್ರೇಮಿಗಳಿಗೆ ಈ ದಿನ ರೊಮ್ಯಾಂಟಿಕ್ ಆಗಿರಲಿದೆ. ಆರ್ಥಿಕ ಸಮಸ್ಯೆಗಳಿರಬಹುದು, ನೀವು ಈ ದಿನ ಯಾರ ಬಳಿಯೂ ಸಾಲ ಪಡೆಯಬೇಡಿ. ವ್ಯಾಪಾರಿಗಳು ಈ ದಿನ ಆರ್ಥಿಕ ಲಾಭವನ್ನು ಪಡೆಯಲು ಸಾಧ್ಯವಾಗಬಹುದು. ಇನ್ನು ಹೆಚ್ಚಿನ ಲಾಭಕ್ಕಾಗಿ ನಿಮ್ಮ ವ್ಯವಹಾರದಲ್ಲಿ ಕೆಲ ಬದಲಾವಣೆ ಮಾಡಿದರೆ ಇನ್ನೂ ಒಳ್ಳೆಯದು.ಆರೋಗ್ಯದ ದೃಷ್ಟಿಯಿಂದ ದಿನವು ಸಾಮಾನ್ಯವಾಗಿರುತ್ತದೆ.
ಸಿಂಹ ರಾಶಿ
ವ್ಯಾಪಾರಿಗಳು ಈ ದಿನ ಜಾಗ್ರತೆವಹಿಸಬೇಕು, ಇಲ್ಲದಿದ್ದರೆ ನಷ್ಟ ಅನುಭವಿಸಬೇಕಾಗುತ್ತದೆ. ಉದ್ಯೋಗಿಗಳು ಕೂಡ ಕಚೇರಿಯಲ್ಲಿ ತಮ್ಮ ವರ್ತನೆ ಬಗ್ಗೆ ಗಮನಹರಿಸಿ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ ವೈವಾಹಿಕ ಜೀವನ ಚೆನ್ನಾಗಿರಲಿದೆ, ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.
ಕನ್ಯಾ ರಾಶಿ
ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುತ್ತಿದ್ದರೆ ನೀವು ವ್ಯವಹಾರದ ಲೆಕ್ಕಚಾರದ ಬಗ್ಗೆ ಗಮನಹರಿಸಬೇಕಯ. ಉದ್ಯೋಗಿಗಳಿಗೆ ಈ ದಿನ ಕೆಲಸದ ಒತ್ತಡವಿರಲುದೆ. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ನೀವು ಊಹಿಸದೆ ಇರುವ ಖರ್ಚು ಬರಲಿದೆ. ಕುಟುಂಬ ಜೀವನದಲ್ಲಿ ಪರಿಸ್ಥಿತಿ ಸಾಮಾನ್ಯವಾಗಿರಲಿದೆ. ಆರೋಗ್ಯ ಸಂಬಂಧಿ ಸಮಸ್ಯೆಗಳಿರಬಹುದು.
ತುಲಾ ರಾಶಿ
ಈ ದಿನ ವಿವಾಹಿತರಿಗೆ ಅನುಕೂಲಕರವಲ್ಲ, ನೀವು ಪ್ರತಿಕೂಲ ಪರಿಸ್ಥಿತಿಗಳನ್ನು ಎದುರಿಸಬೇಕಾಗಬಹುದು. ನಿಮ್ಮಿಬ್ಬರ ನಡುವೆ ಕೆಲ ಭಿನ್ನಾಭಿಪ್ರಾಯ ಬರಬಹುದು, ನೀವು ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳಲು ಪ್ರಯತ್ನಿಸಿದರೆ ಒಳ್ಳೆಯದು. ಹಣಕಾಸಿನ ಪರಿಸ್ಥಿತಿಯಲ್ಲಿ ಸುಧಾರಣೆಯ ಲಕ್ಷಣಗಳಿವೆ. ನೀವು ಬ್ಯಾಂಕಿನಿಂದ ಸಾಲವನ್ನು ತೆಗೆದುಕೊಳ್ಳಲು ಯೋಜಿಸುತ್ತಿದ್ದರೆ ಅದನ್ನು ಪಡೆಯುವಲ್ಲಿ ಯಶಸ್ವಿಯಾಗುತ್ತೀರಿ. ಆರೋಗ್ಯ ಅಷ್ಟೊಂದು ಚೆನ್ನಾಗಿರಲ್ಲ
ವೃಶ್ಚಿಕ ರಾಶಿ
ನೀವು ವಿದ್ಯಾರ್ಥಿಯಾಗಿದ್ದರೆ ಅನಗ್ಯತ ಯೋಚನೆ ತೆಗೆದುಹಾಕಿ. ನಿಮ್ಮ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಇಂದು ನೀವು ಕೆಲವು ಪ್ರಮುಖ ಹಣಕಾಸಿನ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು. ಕುಟುಂಬ ಜೀವನ ಚೆನ್ನಾಗಿರಲಿದೆ, ಆರೋಗ್ಯದ ದೃಷ್ಟಿಯಿಂದ ಕೂಡ ಉತ್ತಮ ದಿನವಾಗಿರುತ್ತದೆ.
ಧನು ರಾಶಿ
ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿರುವವರೆಗೆ ಶುಭವಾಗಿದೆ. ಹಣದ ವಿಷಯದಲ್ಲಿ ಇಂದು ನಿಮಗೆ ತುಂಬಾ ಒಳ್ಳೆಯ ದಿನ. ಕುಟುಂಬ ಜೀವನದಲ್ಲಿ ಪರಿಸ್ಥಿತಿ ಅಷ್ಟು ಚೆನ್ನಾಗಿರಲ್ಲ, ಅತಿಯಾದ ಮಾನಸಿಕ ಒತ್ತಡದಿಂದ ತಲೆನೋವು, ನಿದ್ರಾಹೀನತೆಯ ಸಮಸ್ಯೆವಿರಬಹುದು.
ಮಕರ ರಾಶಿ
ಅನಗ್ಯತ ಕಾನೂನು ತೊಡುಕುಗಳಲ್ಲಿ ಸಿಕ್ಕಿಹಾಕಿಕೊಳ್ಳಬೇಡಿ. ವ್ಯಾಪಾರಿಗಳಿಗೆ ಈ ದಿನ ತುಂಬಾ ಚೆನ್ನಾಗಿರಲಿದೆ. ನೀವು ಹೊಸ ವ್ಯವಹಾರ ಪ್ರಸ್ತಾಪವನ್ನು ಪಡೆಯುವ ಬಲವಾದ ಸಾಧ್ಯತೆಯಿದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಆದರೆ ಈ ದಿನ ಯಾವುದೇ ದೊಡ್ಡ ಖರ್ಚು ಮಾಡುವುದನ್ನು ತಪ್ಪಿಸಲು ನಿಮಗೆ ಸಲಹೆ ನೀಡಲಾಗುವುದು. ಆರೋಗ್ಯದ ಈ ದಿನ ಸಾಮಾನ್ಯವಾಗಿರಲಿದೆ.
ಕುಂಭ ರಾಶಿ
ಕಚೇರಿಯಲ್ಲಿ ನಿಮ್ಮ ಕೆಲವು ಕೆಲಸಗಳಲ್ಲಿ ಅಡೆತಡೆಗಳು ಇರಬಹುದು, ಶೀಘ್ರದಲ್ಲೇ ನಿಮ್ಮ ಸಮಸ್ಯೆ ಬಗೆಹರಿಯಲಿದೆ. ವ್ಯಾಪಾರಿಗಳ ಆರ್ಥಿಕ ಸ್ಥಿತಿಯಲ್ಲಿ ಕುಸಿತದ ಸೂಚನೆಗಳಿವೆ. ಪ್ರೇಮಿಗಳಿಗೆ ಈ ದಿನ ರೊಮ್ಯಾಂಟಿಕ್ ಆಗಿರಲಿದೆ. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ಅಂತಹ ಪರಿಸ್ಥಿತಿಯಲ್ಲಿ, ನಿಮ್ಮ ಬಜೆಟ್ ಅಸಮತೋಲಿತವಾಗಬಹುದು.
ಮೀನ ರಾಶಿ
ನಿಮ್ಮ ಪೂರ್ವಜರ ವ್ಯವಹಾರದೊಂದಿಗೆ ನೀವು ಸಂಬಂಧ ಹೊಂದಿದ್ದರೆ, ನಿಮ್ಮ ಹಿರಿಯರನ್ನು ಸಂಪರ್ಕಿಸದೆ ಯಾವುದೇ ನಿರ್ಧಾರ ತೆಗೆದುಕೊಳ್ಳುವುದನ್ನು ತಪ್ಪಿಸಿ, ಇಲ್ಲದಿದ್ದರೆ ನೀವು ನಷ್ಟವನ್ನು ಅನುಭವಿಸಬಹುದು. ಉದ್ಯೋಗಿಗಳಿಗೆ ಈ ದಿನ ಉತ್ತಮವಾಗಿದೆ. ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ನಿಮ್ಮ ಆದಾಯ ಹೆಚ್ಚಾಗಬಹುದು. ನಿಮ್ಮ ಆದಾಯ ಮತ್ತು ವೆಚ್ಚಗಳ ನಡುವಿನ ಸಮತೋಲನವನ್ನು ನೀವು ನಿರ್ವಹಿಸಿದರೆ ಆರ್ಥಿಕ ಸಮಸ್ಯೆ ಶೀಘ್ರದಲ್ಲೇ ದೂರಾಗಲಿದೆ. ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications