Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಮೇ 15 ದಿನ ಭವಿಷ್ಯ : ಬುಧವಾರದ ದಿನ ನಿಮ್ಮ ರಾಶಿಯ ರಾಶಿಫಲ ಹೇಗಿರಲಿದೆ?
ಮೇ 15, ಬುಧವಾರದ ಈ ದಿನ ದ್ವಾದಶ ರಾಶಿಗಳಿಗೆ ಹೇಗಿರಲಿದೆ ನೋಡೋಣ:
ಮೇಷ ರಾಶಿ
ನಿಮ್ಮ ನಡತೆಯೇ ನಿಮಗೆ ಸಮಸ್ಯೆ ತರಬಹುದು. ವ್ಯಾಪಾರಿಗಳೂ ಈ ದಿನ ಜಾಗ್ರತೆವಹಿಸಬೇಕು. ಉದ್ಯೋಗಿಗಳಿಗೂ ಈ ದಿನ ಅನುಕೂಲಕರವಲ್ಲ, ನಿಮಗೆ ಕೆಲಸದ ಒತ್ತಡ ಅಧಿಕವಿರಲಿದೆ. ಆರ್ಥಿಕ ಸ್ಥಿತಿ ಸಾಮಾನ್ಯವಾಗಿರಲಿದೆ. ಖರ್ಚು ಮಿತಿಯಲ್ಲಿ ಮಾಡಿ, ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಬೇಡ.

ವೃಷಭ ರಾಶಿ
ಈ ದಿನ ನೀವು ಖುಷಿಯಾಗಿರುತ್ತೀರಿ, ನಿಮ್ಮ ಪ್ರಮುಖ ಸಮಸ್ಯೆ ಬಗೆಹರಿಯಲಿದೆ. ಮನೆಯಲ್ಲಿಯೂ ಖುಷಿಯಾಗಿರಲಿದೆ. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಹಣದ ವಿಷಯದಲ್ಲಿ ಈ ದಿನ ಚೆನ್ನಾಗಿರಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯ ಕೂಡ ಚೆನ್ನಾಗಿರಲಿದೆ.
ಮಿಥುನ ರಾಶಿ
ನೀವು ಹೊಸ ಉದ್ಯೋಗ ಹುಡುಕುತ್ತಿದ್ದರೆ ನಿಮ್ಮ ಹುಡುಕಾಟ ಇನ್ನೂ ಚುರುಕುಗೊಳಿಸಬೇಕು. ಕೆಲಸದಲ್ಲಿ ಈ ದಿನ ಉತ್ತಮವಾಗಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ ದಿನವು ಉತ್ತಮವಾಗಿರುತ್ತದೆ.
ಕರ್ಕ ರಾಶಿ
ಕೆಲಸದ ಸ್ಥಳದಲ್ಲಿ ನೀವು ಅನಗ್ಯತ ಸಮಸ್ಯೆಗೆ ಸಿಲುಕದಂತೆ ಜಾಗ್ರತೆವಹಿಸಿ. ನಿಮ್ಮ ಕೆಲಸದ ಕಡೆಗೆ ಹೆಚ್ಚಿನ ಗಮನ ಕೊಡುವುದು ಒಳ್ಳೆಯದು. ಇನ್ನು ಆರ್ಥಿಕ ದೃಷ್ಟಿಯಿಂದ ನೋಡುವುದಾದರೆ ಈ ದಿನ ಅಷ್ಟೊಂದು ಸಮಸ್ಯೆಯಿಲ್ಲ. ಕೋಪ ನಿಯಂತ್ರಿಸಿ. ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಬೇಡಿ.
ಸಿಂಹ ರಾಶಿ
ಈ ದಿನ ನಿಮಗೆ ಶುಭವಾಗಿರಲಿದೆ. ನಿಮ್ಮ ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ಈ ದಿನ ಆರ್ಥಿಕವಾಗಿ ಸಮಸ್ಯೆಯಾಗಲ್ಲ. ಆರೋಗ್ಯ ಚೆನ್ನಾಗಿರಲಿದೆ, ವ್ಯಾಪಾರಿಗಳಿಗೆ ಈ ದಿನ ಶುಭವಾಗಿದೆ, ಒಟ್ಟಿನಲ್ಲಿ ಈ ದಿನ ಉತ್ತಮವಾಗಿದೆ.
ಕನ್ಯಾ ರಾಶಿ
ಅನಗ್ಯತ ಚಿಂತೆಗಳು ನಿಮ್ಮ ಮನಸ್ಥಿತಿ ಹಾಳು ಮಾಡಬಹುದು. ನೀವು ಕೆಲಸದ ಜೊತೆಗೆ ನಿಮ್ಮವರ ಬಗ್ಗೆ ಗಮನಹರಿಸಬೇಕು. ವ್ಯಾಪಾರಿಗಳು ಈ ದಿನ ಯಾವುದೇ ಹೊಸ ನಿರ್ಧಾರ ತೆಗೆದುಕೊಳ್ಳಬೇಡಿ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.
ತುಲಾ ರಾಶಿ
ಕೆಲಸದ ಬಗ್ಗೆ ಹೇಳುವುದಾದರೆ ನಿಮ್ಮ ಕೆಲಸವು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳ್ಳಲಿದೆ. ಕುಟುಂಬ ಜೀವನ ಕೂಡ ತುಂಬಾ ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಭಿನ್ನಾಭಿಪ್ರಾಯ ದೂರಾಗಲಿದೆ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಆರೋಗ್ಯ ಸಮಸ್ಯೆಯಿದ್ದರೆ ಔಷಧವನ್ನು ಸರಿಯಾದ ಸಮಯಕ್ಕೆ ತಿಳಿದುಕೊಳ್ಳಿ.
ವೃಶ್ಚಿಕ ರಾಶಿ
ಹಣದ ವಿಷಯದಲ್ಲಿ ಈ ದಿನ ನಿಮಗೆ ಯಾವುದೇ ಸಮಸ್ಯೆಯಾಗಲ್ಲ, ಉದ್ಯೋಗವಾಗಲಿ ಅಥವಾ ವ್ಯವಹಾರವಾಗಲಿ, ನಿಮ್ಮ ಎಲ್ಲಾ ಕೆಲಸಗಳು ನಿಮ್ಮ ಯೋಜನೆಯಂತೆ ಪೂರ್ಣಗೊಳ್ಳುತ್ತವೆ. ನಿಮ್ಮ ವೃತ್ತಿಯಲ್ಲಿ ಶೀಘ್ರವೇ ಪ್ರಗತಿ ದೊರೆಯಲಿದೆ. ಅವಾಹಿತರಾಗಿದ್ದರೆ ನಿಮ್ಮ ಮದುವೆ ಮಾತುಕತೆ ನಡೆಯಬಹುದು. ಆರೋಗ್ಯ ಈ ದಿನ ಚೆನ್ನಾಗಿರಲಿದೆ.
ಧನು ರಾಶಿ
ಪ್ರೇಮಿಗಳಿಗೆ ಈ ದಿನ ಅನುಕೂಲಕರವಾಗಿದೆ. ಆರ್ಥಿಕವಾಗಿ ಈ ದಿನ ಅಷ್ಟೊಂದು ಉತ್ತಮವಾಗಿರಲ್ಲ. ಕೆಲಸದಲ್ಲಿಯೂ ಕೆಲ ಅಡೆತಡೆಗಳಿರಬಹುದು. ವ್ಯಾಪಾರಿಗಳು ಕಾನೂನು ಬಾಹಿರ ಕೆಲಸ ಮಾಡಬೇಡಿ. ಇಲ್ಲದಿದ್ದರೆ ನೀವು ದೊಡ್ಡ ತೊಂದರೆಗೆ ಸಿಲುಕಬಹುದು. ಹೃದಯ ಸಂಬಂಧಿ ಸಮಸ್ಯೆ ಇರುವವರು ಆರೋಗ್ಯದಲ್ಲಿ ನಿರ್ಲಕ್ಷ್ ಮಾಡಬಾರದು.
ಮಕರ ರಾಶಿ
ಈ ದಿನ ಮನಸ್ಸು ಸರಿಯಿರಲ್ಲ, ಏನೂ ತಳಮಳ, ಬೇಸರ, ನಕರಾತ್ಮಕ ಯೋಚನೆಗಳಿರುತ್ತದೆ. ದುಡುಕಿನಿಂದ ಯಾವುದೇ ನಿರ್ಧಾರ ತೆಗೆದುಕೊಳ್ಳಿ. ಕೆಲಸದ ಜಾಗದಲ್ಲಿ ಕೋಪದಿಂದ ವರ್ತಿಸಲು ಹೋಗದಿರಿ. ಆರ್ಥಿಕ ಸಮಸ್ಯೆಗಳಿರಲ್ಲ, ಆದರೆ ವೈಯಕ್ತಿಕ ಸಮಸ್ಯೆ ನಿಮ್ಮ ಮನಸ್ಥಿತಿ ಹಾಳು ಮಾಡುತ್ತದೆ. ಕೆಲಸದ ಜೊತೆಗೆ ಕುಟುಂಬ ಜೀವನದ ಕಡೆಗೂ ನೀವು ಪ್ರಾಮುಖ್ಯತೆ ನೀಡಬೇಕು.
ಕುಂಭ ರಾಶಿ
ನೀವು ನಿಮ್ಮ ಆರೋಗ್ಯ ಗಮನಿಸದಿದ್ದರೆ ಹೆಚ್ಚಿನ ಸಮಸ್ಯೆ ಅನುಭವಿಸಬೇಕಾಗುತ್ತದೆ, ತೂಕ ನಿಯಂತ್ರಣಕ್ಕೆ ಪ್ರಯತ್ನಿಸಿ. ಉದ್ಯೋಗಿಗಳಿಗೆ ಈ ದಿನ ಚೆನ್ನಾಗಿರಲಿದೆ, ವ್ಯಾಪಾರಿಗಳೂ ತಮ್ಮ ಶ್ರಮಕ್ಕೆ ತಕ್ಕ ಫಲ ಪಡೆಯುತ್ತಾರೆ. ಕುಟುಂಬ ಜೀವನ ಸರಾಸರಿಯಾಗಿರಲಿದೆ.
ಮೀನ ರಾಶಿ
ಈ ದಿನ ನಿಮಗೆ ಶುಭವಾಗಿದೆ. ಇಂದು ನಿಮ್ಮ ಕೆಲವು ದೊಡ್ಡ ಸಮಸ್ಯೆ ಬಗೆಹರಿಯುವುದರಿಂದ ಮನಸ್ಸಿಗೆ ನೆಮ್ಮದಿ ಇರಲಿದೆ. ಉದ್ಯೋಗಿಗಳಿಗೆ ಈ ದಿನ ಅನುಕೂಲಕರ ಆದರೆ ಉದ್ಯಮಿಗಳಿಗೆ ಇಂದು ಮಿಶ್ರಫಲ. ನಿಮ್ಮ ವ್ಯಾಪರ ವಿಸ್ತರಣೆ ಈ ಸಮಯದಲ್ಲಿ ಮಾಡದಿದ್ದರೆ ಒಳ್ಳೆಯದು. ಆರೋಗ್ಯದ ದೃಷ್ಟಿಯಿಂದ ದಿನವು ಸರಾಸರಿಯಾಗಿರುತ್ತದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications