Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಏಪ್ರಿಲ್ 28 ದಿನ ಭವಿಷ್ಯ: ಈ ದಿನ 12 ರಾಶಿಗಳ ರಾಶಿಫಲ ಹೇಗಿದೆ? ಯಾರಿಗೆಲ್ಲಾ ಈ ದಿನ ಶುಭ?
ವೈದಿಕ ಶಾಸ್ತ್ರದ ಪ್ರಕಾರ ಏಪ್ರಿಲ್ 28 ನಿಮಗೆ ಹೇಗಿರಲಿದೆ ಎಂದು ನೋಡೋಣ....
ಮೇಷ ರಾಶಿ
ಈ ದಿನ ತುಂಬಾ ಶುಭವಾಗಿದೆ. ನಿಮ್ಮೆಲ್ಲಾ ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ಮುಗಿಯಲಿದೆ. ಈ ದಿನ ವೈವಾಹಿಕ ಜೀವನ ಚೆನ್ನಾಗಿರಲಿದೆ. ಖರ್ಚು ಹೆಚ್ಚಿಸಲು ನೀವು ಪ್ರಯತ್ನ ಮಾಡುತ್ತಿದ್ದರೆ ಒಳ್ಳೆಯ ಅವಕಾಶ ದೊರೆಯಲಿದೆ. ಆರೋಗ್ಯ ಕೂಡ ಚೆನ್ನಾಗಿರಲಿದೆ.

ವೃಷಭ ರಾಶಿ
ಈ ದಿನ ಖರ್ಚು ಹೆಚ್ಚಾಗುವುದರಿಂದ ಹಣದ ಖರ್ಚು ಕಾಡಲಿದೆ. ಈ ದಿನ ನಿಮ್ಮ ಸಂಗಾತಿ ನಿಮಗೆ ಸಹಾಯ ಮಾಡುತ್ತಾರೆ, ಇನ್ನು ಆದಾಯ ಹೆಚ್ಚಾಗುತ್ತಿಲ್ಲ ಎಂದಾದರೆ ಕೆಲಸದ ಜೊತೆಗೆ ಪಾರ್ಟ್‌ಟೈಂ ಕೆಲಸ ನಿಮ್ಮ ಆರ್ಥಿಕ ಸ್ಥಿತಿ ಸುಧಾರಿಸಲು ಸಹಾಯ ಮಾಡಲಿದೆ. ಆರೋಗ್ಯದಲ್ಲಿ ಈ ದಿನ ನಿಮಗೆ ಮಿಶ್ರಫಲ.
ಮಿಥುನ ರಾಶಿ
ಹಣದ ವಿಷಯದಲ್ಲಿ ಈ ದಿನ ನಿಮಗೆ ಉತ್ತಮವಾಗಿದೆ. ನೀವು ಹೊಸ ಆಸ್ತಿ ಇತ್ಯಾದಿಗಳನ್ನು ಖರೀದಿಸಲು ಯೋಜಿಸುತ್ತಿದ್ದರೆ ಶೀಘ್ರದಲ್ಲೇ ನಿಮ್ಮ ಆಸೆ ಈಡೇರಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ಆರೋಗ್ಯದ ಬಗ್ಗೆ ನೋಡುವುದಾದರೆ ಮೂಳೆಗಳಿಗೆ ಸಂಬಂಧಿಸಿದ ಸಮಸ್ಯೆವಿರಬಹುದು.
ಕರ್ಕ ರಾಶಿ
ಪ್ರೇಮಿಗಳ ನಡುವೆ ಭಿನ್ನಾಭಿಪ್ರಾಯ ಉಂಟಾಗಬಹುದು, ನೀವು ಪರಿಸ್ಥಿತಿ ತಾಳ್ಮೆಯಿಮದ ಬಗೆಹರಿಸಲು ಪ್ರಯತ್ನಿಸಬೇಕು. ಇನ್ನು ನೀವು ಕೆಲಸದ ಕಡೆಗೆ ತುಂಬಾ ಗಮನಹರಿಸಬೇಕು, ಯಾವುದೇ ಕೆಲಸ ಅಪೂರ್ಣವಾಗಿ ಬಿಡಬೇಡಿ. ವ್ಯಾಪಾರಿಗಳಿಗೆ ಈ ದಿನ ಉತ್ತಮವಾಗಿದೆ, ನಿಮಗೆ ಧನ ಲಾಭವಾಗಲಿದೆ. ನಿಮ್ಮ ಆರೋಗ್ಯವನ್ನು ಸುಧಾರಿಸಲು ನೀವು ಆಹಾರಕ್ರಮದ ಕಡೆಗೆ ಗಮನಹರಿಸಿ.
ಸಿಂಹ ರಾಶಿ
ಕೆಲಸದ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ. ವ್ಯಾಪಾರಿಗಳು ವ್ಯವಹಾರದಲ್ಲಿ ಯಾವುದೇ ಶಾರ್ಟ್‌ಕಟ್ ಅನುಸರಿಸಬೇಡಿ. ಕುಟುಂಬ ಜೀವನದಲ್ಲಿ ಪರಿಸ್ಥಿತಿ ಸಾಮಾನ್ಯವಾಗಿರುತ್ತದೆ. ನಿಮ್ಮ ಪ್ರೀತಿಪಾತ್ರರ ಭಾವನೆಗಳನ್ನು ಗೌರವಿಸಿ. ವಿಶೇಷವಾಗಿ ನಿಮ್ಮ ಸಂಗಾತಿಯನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಬೇಕು. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ. ನಿಮ್ಮ ಬಜೆಟ್ ಅನ್ನು ಗಮನದಲ್ಲಿಟ್ಟುಕೊಂಡು ಖರ್ಚು ಮಾಡಿದರೆ ಅದು ಉತ್ತಮವಾಗಿರುತ್ತದೆ. ನೀವು ಯಾವುದೇ ಆರೋಗ್ಯ ಸಂಬಂಧಿತ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ ಆವಾಗ ನೀವು ವಿಶ್ರಾಂತಿ ಕಡೆಗೆ ಗಮನಹರಿಸಬೇಕು.
ಕನ್ಯಾ ರಾಶಿ
ವ್ಯಾಪಾರಿಗಳಿಗೆ ಈ ದಿನ ಧನಲಾಭವಾಗಿದೆ. ನಿಮ್ಮ ವ್ಯವಹಾರ ಚೆನ್ನಾಗಿ ನಡೆಯುವುದರಂದ ನಿರೀಕ್ಷೆ ಮಾಡಿದ್ದಕ್ಕಿಂತ ಹೆಚ್ಚಿನ ಲಾಭ ಗಳಿಸುತ್ತೀರಿ. ಉದ್ಯೋಗಿಗಳಿಗೂ ಅನುಕೂಲಕರವಾಗಿದೆ. ಕುಟುಂಬ ಜೀವನದಲ್ಲಿ ಪರಿಸ್ಥಿತಿ ಅನುಕೂಲಕರವಾಗಿರುತ್ತದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಆರೋಗ್ಯಕ್ಕೆ ಸಂಬಂಧಿಸಿದಂತೆ ನೀವು ಬದಲಾವಣೆ ಮಾಡಿದ್ದರೆ ಅದರ ಪ್ರಭಾವ ನಿಮಗೆ ಕಂಡು ಬರಲಿದೆ.
ತುಲಾ ರಾಶಿ
ವ್ಯಾಪಾರಿಗಳು ಈ ದಿನ ಅಪೇಕ್ಷಿತ ಲಾಭವನ್ನು ಪಡೆಯಬಹುದು. ನಿಮಗೆ ದೊಡ್ಡ ವ್ಯವಹಾರ ಮಾಡುವ ಅವಕಾಶ ಸಿಗಲಿದೆ, ಇದರಿಂದ ದೊಡ್ಡ ಆರ್ಥಿಕ ಲಾಭಗಳನ್ನು ಪಡೆಯುವ ಸಾಧ್ಯತೆಯಿದೆ. ಮನೆಯಲ್ಲಿ ಉತ್ತಮ ವಾತಾವರಣ ಚೆನ್ನಾಗಿರಲಿದೆ. ಮನೆಗೆ ಅತಿಥಿಗಳು ಬರುವುದರಿಂದ ಮನೆಯ ವಾತಾವರಣ ಇನ್ನೂ ಚೆನ್ನಾಗಿರಲಿದೆ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯವಾಗಿರುತ್ತದೆ. ಆರೋಗ್ಯದ ದೃಷ್ಟಿಯಿಂದ ಇಂದು ಒಳ್ಳೆಯ ದಿನವಾಗಿದೆ.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯ ಪ್ರೇಮಿಗಳಿಗೆ, ವಿವಾಹಿತರಿಗೆ ಈ ದಿನ ತುಂಬಾ ರೊಮ್ಯಾಂಟಿಕ್ ಆಗಿರಲಿದೆ. ನೀವು ಹಣದ ವಿಷಯದಲ್ಲಿ ಜಾಗ್ರತೆವಹಿಸಬೇಕು. ಕೆಲಸದ ದೃಷ್ಟಿಯಿಂದ ಈ ದಿನ ನಿಮಗೆ ಮಿಶ್ರ ಫಲಿತಾಂಶ. ವ್ಯಾಪಾರಿಗಳುಈ ಸಮಯದಲ್ಲಿ ನೀವು ಯಾವುದೇ ರೀತಿಯ ಬದಲಾವಣೆಯನ್ನು ಮಾಡಬೇಡಿ. ಉತ್ತಮ ಆರೋಗ್ಯಕ್ಕಾಗಿ ಯೋಗ ಮತ್ತು ಧ್ಯಾನ ಸೇರಿಸಿದರೆ ಒಳ್ಳೆಯದು.
ಧನು ರಾಶಿ
ನೀವು ಅನಗತ್ಯ ವೆಚ್ಚಗಳನ್ನು ನಿಯಂತ್ರಿಸಿ ಮತ್ತು ನಿಮ್ಮ ಆದಾಯವನ್ನು ಹೆಚ್ಚಿಸಲು ನಿಮ್ಮ ಪ್ರಯತ್ನಗಳನ್ನು ವೇಗಗೊಳಿಸಬೇಕಾಗುತ್ತದೆ.ಇಂದು ನೀವು ನಿಮ್ಮ ಎಲ್ಲಾ ಕೆಲಸವನ್ನು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳಿಸಬಹುದು. ವ್ಯಾಪಾರಿಗಳಿಗೆ ಈ ದಿನ ಲಾಭದಾಯಕವಾಗಿರಲಿದೆ. ಈ ದಿನ ಆರೋಗ್ಯ ದುರ್ಬಲವಾಗಿರಲಿದೆ.
ಮಕರ ರಾಶಿ
ಇಂದು ವ್ಯಾಪಾರಸ್ಥರಿಗೆ ಮಿಶ್ರ ಫಲಿತಾಂಶ. ನಿಧಾನಗತಿಯಲ್ಲಿದ್ದರೂ, ನಿಮ್ಮ ಕೆಲಸವು ಪ್ರಗತಿಯಲ್ಲಿದೆ. ಉದ್ಯೋಗಿಗಳು ತಮ್ಮ ಕೆಲಸದ ಬಗ್ಗೆ ಹೆಚ್ಚು ಗಮನ ಹರಿಸಬೇಕು. ನೀವು ಯಾವುದೇ ತಪ್ಪು ಮಾಡಿದರೆ, ನಿಮಗೆ ನೀಡಿದ ಜವಾಬ್ದಾರಿಯನ್ನು ನಿಮ್ಮಿಂದ ಹಿಂಪಡೆಯಬಹುದು. ಹಣಕಾಸಿನ ಸ್ಥಿತಿ ಚೆನ್ನಾಗಿರಲಿದೆ, ಆದರೆ ಖರ್ಚು ಹೆಚ್ಚು ಮಾಡಲು ಹೋಗದಿದ್ದರೆ ಒಳ್ಳೆಯದು. ಏನಾದರೂ ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಬೇಡಿ.
ಕುಂಭ ರಾಶಿ
ವ್ಯಾಪಾರಿಗಳು ಈ ದಿನ ಮಾಡುವ ಪ್ರಯಾಣದಿಂದ ಪ್ರಯೋಜನ ಪಡೆಯುತ್ತೀರಿ. ಉದ್ಯೋಗಿಗಳಿಗೆ ಈ ದಿನ ಉತ್ತಮವಾಗಿರಲಿದೆ. ನೀವು ನಿರುದ್ಯೋಗಿಗಳಾಗಿದ್ದರೆ ಮತ್ತು ಉದ್ಯೋಗವನ್ನು ಹುಡುಕುತ್ತಿದ್ದರೆ ಶೀಘ್ರದಲ್ಲಿಯೇ ಉತ್ತಮ ಫಲಿತಾಂಶ ಪಡೆಯುತ್ತೀರಿ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಮಲಬದ್ಧತೆ, ಆಮ್ಲೀಯತೆ, ಹೊಟ್ಟೆ ನೋವು ಮುಂತಾದ ಸಮಸ್ಯೆಗಳಿರಬಹುದು.
ಮೀನ ರಾಶಿ
ನಿಮ್ಮ ಕುಟುಂಬ ಜೀವನದಲ್ಲಿ ಕೋಪ ನಿಯಂತ್ರಿಸಿದರೆ ಒಳ್ಳೆಯದು. ನೀವು ನಿಮ್ಮ ಸಂಗಾತಿಯ ಭಾವನೆಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಬೇಕು. ವ್ಯಾಪಾರಿಗಳಿಗೆ ಈ ದಿನ ಅನುಕೂಲಕರವಾಗಿರುತ್ತದೆ. ಕೆಲಸಕ್ಕಾಗಿ ನೀವು ಸ್ವಲ್ಪ ದೂರ ಪ್ರಯಾಣಿಸಬೇಕಾಗಬಹುದು. ಆರ್ಥಿಕ ಅಂಶವು ಬಲವಾಗಿ ಉಳಿಯುತ್ತದೆ. ಆರೋಗ್ಯಕ್ಕಾಗಿ ವ್ಯಾಯಾಮದ ಕಡೆ ಗಮನಹರಿಸಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications