Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಮೇ 3: ಶುಕ್ರವಾರದ ಈ ದಿನ ಯಾವ ರಾಶಿಯವರಿಗೆ ಈ ದಿನ ಆರ್ಥಿಕವಾಗಿ ಪ್ರಯೋಜನಕಾರಿ
ವೈದಿಕ ಶಾಸ್ತ್ರದ ಪ್ರಕಾರ ಮೇ 3 ನಿಮಗೆ ಹೇಗಿರಲಿದೆ ಎಂದು ನೋಡೋಣ....
ಮೇಷ ರಾಶಿ
ಉದ್ಯೋಗಗಳಿಗೆ ಈ ದಿನ ತುಂಬಾ ಚೆನ್ನಾಗಿರಲಿದೆ. ನಿಮಗೆ ಮತ್ತಷ್ಟು ಜವಾಬ್ದಾರಿ ನೀಡಲಿದ್ದಾರೆ, ಇದು ಕೆಲಸದಲ್ಲಿ ನಿಮ್ಮ ಸ್ಥಾನ ಭದ್ರಮಾಡಲು ಸಹಾಯ ಮಾಡುತ್ತದೆ. ವ್ಯಾಪಾರಿಗಳಿಗೆ ಧನಾತ್ಮಕವಾಗಿರಲಿದೆ. ಹಣದ ಬಗ್ಗೆ ನೋಡುವುದಾದರೆ ಖರ್ಚು ಅಧಿಕವಿರಲಿದೆ. ಆದರೆ ಆದಾಯಕ್ಕಿಂತ ಹೆಚ್ಚು ಖರ್ಚು ಮಾಡಬೇಡಿ, ಆರೋಗ್ಯ ಚೆನ್ನಾಗಿರಲಿದೆ.

ವೃಷಭ ರಾಶಿ
ಕೆಲಸಕ್ಕೆ ಸಂಬಂಧಿಸಿದ ಸಮಸ್ಯೆ ಬಗೆಹರಿಯಲಿದೆ. ನೀವು ಆದಾಯ ಬಲ ಪಡಿಸಲು ಪ್ರಯತ್ನಿಸುತ್ತಿದ್ದರೆ ಶೀಘ್ರವೇ ಅದು ಸಾಧ್ಯವಾಗಲಿದೆ. ಮನೆಯ ವಾತಾವರಣ ಶಾಂತವಾಗಿರಲಿದೆ. ಇನ್ನು ಆರೋಗ್ಯದ ಬಗ್ಗೆ ಹೇಳುವುದಾದರೆ ಅತಿ ಹೆಚ್ಚಿನ ಮಾನಸಿಕ ಒತ್ತಡ ಆರೋಗ್ಯದ ಮೇಲೆ ಪರಿಣಾಮ ಬೀರುವುದು, ಜಾಗ್ರತೆವಹಿಸಿ.
ಮಿಥುನ ರಾಶಿ
ಉದ್ಯೋಗಿಗಳಿಗೆ ಈ ದಿನ ಸರಾಸರಿಯಾಗಿರಲಿದೆ. ಇನ್ನು ವ್ಯಾಪಾರಿಳು ಈ ದಿನ ಹೂಡಿಕೆಯ ವಿಷಯದಲ್ಲಿ ತಪ್ಪು ಮಾಡಲು ಹೋಗಬೇಡಿ. ವೈವಾಹಿಕ ಜೀವನದಲ್ಲಿ ಸಮಸ್ಯೆ ಹೆಚ್ಚಾಗಲಿದೆ, ನೀವಿಬ್ಬರು ಕುಳಿತು ಮಾತನಾಡಿ ಸಮಸ್ಯೆ ಬಗೆಹರಿಸುವುದು ಒಳ್ಳೆಯದು. ಕೋಪ ನಿಯಂತ್ರಿಸಿದರೆ ಕುಟುಂಬದಲ್ಲಿ ವಾತಾವರಣ ತುಂಬಾ ಚೆನ್ನಾಗಿರಲಿದೆ. ಆರ್ಥಿಕ ದೃಷ್ಟಿಯಿಂದ ಈ ದಿನ ಸರಾಸರಿಯಾಗಿರಲಿದೆ.
ಕರ್ಕ ರಾಶಿ
ಕರ್ಕ ರಾಶಿಯವರಿಗೆ ಉತ್ತಮವಾಗಿದೆ. ನೀವು ಸಣ್ಣ ಹೂಡಿಕೆಯಿಂದ ಉತ್ತಮ ಲಾಭ ಗಳಿಸಲು ಸಾಧ್ಯವಾಗುವುದು. ಶೀಘ್ರದಲ್ಲಿಯೇ ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ಬಲವಾದ ಹೂಡಿಕೆ ಮಾಡಬಹುದು. ನಿಮ್ಮ ಕಠಿಣ ಪರಿಶ್ರಮಕ್ಕೆ ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುತ್ತಿರುವವರಿಗೆ ಈ ದಿನ ತುಂಬಾ ಚೆನ್ನಾಗಿರಲಿದೆ. ಆರೋಗ್ಯ ತುಂಬಾ ಚೆನ್ನಾಗಿರಲಿದೆ.
ಸಿಂಹ ರಾಶಿ
ಕುಟುಂಬ ಜೀವನ ಚೆನ್ನಾಗಿರಲಿದೆ. ನಿಮ್ಮ ಮನೆಯಲ್ಲಿ ಮದುವೆ ಪ್ರಾಯದವರು ಇದ್ದರೆ ಶೀಘ್ರವೇ ಶುಭ ಕಾರ್ಯ ನಡೆಯಲಿದೆ. ವ್ಯಾಪಾರಿಗಳಿಗೆ , ಉದ್ಯೋಗಿಗಳಿಗೆ ಕೆಲಸ ಕಾರ್ಯದಲ್ಲಿ ಈ ದಿನ ಶುಭವಾಗಿದೆ. ಇನ್ನು ಅಪರಿಚಿತ ಜನರ ಜೊತೆಗೆ ಯಾವುದೇ ವ್ಯವಹಾರ ಮಾಡಲು ಹೋಗಬೇಡಿ. ಆರೋಗ್ಯ ಚೆನ್ನಾಗಿರಲಿದೆ.
ಕನ್ಯಾ ರಾಶಿ
ಉದ್ಯೋಗಿಗಳಿಗೆ ಈ ದಿನ ಕೆಲಸದ ಒತ್ತಡ ಅಧಿಕವಿರಲಿದೆ. ಇನ್ನು ನೀವು ಆಸ್ತಿ ಖರೀದಿಗೆ ಪ್ರಯತ್ನಿಸುತ್ತಿದ್ದರೆ ಅದರ ದಾಖಲೆಯನ್ನು ಸರಿಯಾಗಿ ಪರೀಕ್ಷಿಸಿದ ನಂತರವಷ್ಟೇ ಮಾಡಿ. ವ್ಯಾಪಾರಿಗಳು ಈ ದಿನ ತಮ್ಮ ಶ್ರಮಕ್ಕೆ ಲಾಭ ಪಡೆಯಲು ಸಾಧ್ಯವಾಗುವುದು. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ. ನಿಮ್ಮ ಹಣಕಾಸಿನ ಸ್ಥಿತಿಯು ಉತ್ತಮವಾಗಿರಲಿದೆ, ಅಗ್ಯತಕ್ಕಿಂತ ಹೆಚ್ಚಿನ ಖರ್ಚು ಮಾಡಲು ಹೋಗಬೇಡಿ, ಆರೋಗ್ಯ ಸರಾಸರಿ ಇರಲಿದೆ.
ತುಲಾ ರಾಶಿ
ಈ ದಿನ ನಿಮಗೆ ಅದೃಷ್ಟಕರ , ಕೆಲಸದಲ್ಲಿ ಈ ದಿನ ಶುಭವಾಗಿದೆ, ನಿಮ್ಮ ಕೆಲಸ ನಿಮ್ಮ ಯೋಜನೆಯಂತೆಯೇ ಪೂರ್ಣವಾಲಿದೆ. ವ್ಯಾಪಾರಿಗಳು ತಮ್ಮ ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆಯನ್ನು ಕಾಣಬಹುದು. ನಿಮ್ಮ ಯಾವುದೇ ಬಾಕಿಯಿರುವ ಕೆಲಸವನ್ನು ಪೂರ್ಣಗೊಳಿಸುವಲ್ಲಿ ನೀವು ಯಶಸ್ವಿಯಾಗುತ್ತೀರಿ. ಕ ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯವರು ಈ ದಿನ ಸಂತೋಷದಿಂದ ಕಳೆಯುತ್ತೀರಿ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ನಿಮ್ಮ ಕಠಿಣ ಶ್ರಮಕ್ಕೆ ಶೀಘ್ರದಲ್ಲಿಯೇ ಒಳ್ಳೆಯ ಫಲ ಸಿಗಲಿದೆ. ಅಲ್ಲದೆ ಹಣದ ಚಿಂತೆ ದೂರಾಗುವ ಲಕ್ಷಣಗಳಿವೆ. ಈ ದಿನ ಆರೋಗ್ಯ ಚೆನ್ನಾಗಿರಲಿದೆ.
ಧನು ರಾಶಿ
ಈ ದಿನ ನಿಮ್ಮ ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಹಣಕಾಸಿನ ವಹಿವಾಟು ನಡೆಸುವಾಗ ಹೆಚ್ಚು ಜಾಗರೂಕರಾಗಿರಲು ಸಲಹೆ ನೀಡಲಾಗುವುದು. ಕೆಲಸದಲ್ಲಿ ಯಾವುದೇ ಅಡೆತಡೆ ಇರಲ್ಲ, ವ್ಯಾಪಾರಿಗಳಿಗೂ ಸಾಧಾರಣವಾಗಿರಲಿದೆ, ಏನಾದರೋ ಆರೋಗ್ಯ ಸಮಸ್ಯೆಯಿದ್ದರೆ ಜಾಗ್ರತೆ.
ಮಕರ ರಾಶಿ
ಇಂದು ನಿಮ್ಮ ಕೆಲಸ ಪೂರ್ಣಗೊಳಿಸಲು ಕಷ್ಟವಾಗುವುದು. ಆದರೆ ಕೆಲಸದ ಬಗ್ಗೆ ನೀವು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ನಿಮ್ಮ ಬಾಸ್‌ಗೆ ಅನಿಸಿದರೆ ನಿಮ್ಮ ಪ್ರಗತಿಗೆ ಕಷ್ಟವಾಗುವುದು. ವ್ಯಾಪಾರಿಗಳು ತಮ್ಮ ವ್ಯವಹಾರದಲ್ಲಿ ಜಾಗ್ರತೆವಹಿಸದಿದ್ದರೆ ಕಷ್ಟ. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ.
ಕುಂಭ ರಾಶಿ
ಹಣದ ಬಗ್ಗೆ ಈ ದಿನ ಜಾಗ್ರತೆವಹಿಸಿ. ದೊಡ್ಡ ಹೂಡಿಕೆಗೆ ಈ ದಿನ ಅಷ್ಟೊಂದು ಅನುಕೂಲಕವರಲ್ಲ. ಉದ್ಯೋಗಿಗಳು ಈ ದಿನ ಹೆಚ್ಚಿನ ಶ್ರಮ ಹಾಕಿ ಕೆಲಸವನ್ನು ಪೂರ್ಣಗೊಳಿಸಲು ಪ್ರಯತ್ನಿಸಬೇಕು. ವ್ಯಾಪಾರಿಗಳಿಗೆ ಈ ದಿನ ಮಿಶ್ರಫಲ.
ಮೀನ ರಾಶಿ
ವ್ಯಾಪಾರಿಗಳಿಗೆ ಈ ದಿನ ಶುಭವಾಗಿದೆ. ಕೌಟುಂಬಿಕ ಜೀವನ ಚೆನ್ನಾಗಿರಲಿದೆ. ವಿವಾಹಿತರಿಗೆ ಈ ದಿನ ತುಂಬಾ ಚೆನ್ನಾಗಿರಲಿದೆ, ಹಣದ ವಿಷಯದಲ್ಲಿ ಇಂದು ನಿಮಗೆ ಒಳ್ಳೆಯ ದಿನವಾಗಿರುತ್ತದೆ. ಆದಾಯ ಹೆಚ್ಚಾಗಬಹುದು. ಆರೋಗ್ಯ ಚೆನ್ನಾಗಿರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications