Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಮೇ 6: ಸೋಮವಾರ 12 ರಾಶಿಗಳಲ್ಲಿ ಈ ದಿನ ಯಾರಿಗೆ ಲಾಭ, ಯಾರಿಗಲ್ಲ
ವೈದಿಕ ಶಾಸ್ತ್ರದ ಪ್ರಕಾರ ಮೇ 6 ನಿಮಗೆ ಹೇಗಿರಲಿದೆ ಎಂದು ನೋಡೋಣ...
ಮೇಷ ರಾಶಿ
ವ್ಯಾಪಾರಿಗಳಿಗೆ, ಉದ್ಯಮಿಗಳಿಗೆ ಈ ದಿನ ಶುಭವಾಗಿದೆ, ನಿಮ್ಮ ವ್ಯವಹಾರ ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳಿಸಿ. ಉದ್ಯೋಗಿಗಳಿಗೆ ಈ ದಿನ ಶುಭವಾಗಿದೆ. ನಿಮ್ಮ ಕಠಿಣ ಪರಿಶ್ರಮಕ್ಕೆ ನೀವು ಸರಿಯಾದ ಫಲಿತಾಂಶವನ್ನು ಪಡೆಯಬಹುದು. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಕುಟುಂಬದಲ್ಲಿಯೂ ಸಂತೋಷದ ವಾತಾವರಣ ಇರಲಿದೆ.

ವೃಷಭ ರಾಶಿ
ನೀವು ಸ್ಪರ್ಧಾತ್ಮಕ ಪರೀಕ್ಷೆ ಬರೆಯುವುದಾದರೆ ನಿಮಗೆ ತುಂಬಾ ಅನುಕೂಲಕರ. ಇನ್ನು ವ್ಯಾಪಾರಿಗಳು ಬೇರೆಯವರ ಮಾತು ಕೇಳಿ ಇರ್ಧಾರ ತೆಗೆದುಕೊಳ್ಳಲು ಹೋಗಬೇಡಿ. ಈ ದಿನ ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಪ್ರತಿಕೂಲ ಸಂದರ್ಭಗಳಲ್ಲಿ ನೀವು ಅವರ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ಆರೋಗ್ಯ ಚೆನ್ನಾಗಿರಲಿದೆ.
ಮಿಥುನ ರಾಶಿ
ನೀವು ಕೆಲಸ ಹುಡುಕುತ್ತಿದ್ದರೆ ಶೀಘ್ರವೇ ಕೆಲಸ ಪಡೆಯುತ್ತೀರಿ. ಇನ್ನು ವೈವಾಹಿಕ ಜೀವನದಲ್ಲಿ ಕೆಲ ಭಿನ್ನಾಭಿಪ್ರಾಯವಿರಬಹುದು. ಆರ್ಥಿಕ ಬಿಕ್ಕಟ್ಟನ್ನು ತೊಡೆದುಹಾಕಲು, ನಿಮ್ಮ ಆದಾಯವನ್ನು ಹೆಚ್ಚಿಸಲು ನಿಮ್ಮ ಪ್ರಯತ್ನಗಳನ್ನು ಮತ್ತಷ್ಟು ಚುರುಕುಗೊಳಿಸಿ. ನೀವು ಆರೋಗ್ಯದ ಕಡೆಗೆ ಗಮನಹರಿಸಿ.
ಕರ್ಕ ರಾಶಿ
ಕುಟುಂಬದಲ್ಲಿ ಪರಿಸ್ಥಿತಿ ಅಷ್ಟು ಚೆನ್ನಾಗಿರಲ್ಲ, ಇದರಿಂದಾಗಿ ನಿಮ್ಮ ಮಾನಸಿಕ ಒತ್ತಡ ಹೆಚ್ಚಾಗಲಿದೆ. ವ್ಯಾಪಾರಿಗಳಿಗೆ ಈ ದಿನ ಧನಾತ್ಮಕವಾಗಿರಲಿದೆ. ಕೆಲಸದಲ್ಲಿ ಈ ದಿನ ನಿಮಗೆ ಉತ್ತಮ ಫಲ ಸಿಗಲಿದೆ. ನಿಮ್ಮ ಆರ್ಥಿಕ ಸ್ಥಿತಿಯು ಬಲವಾಗಿರುತ್ತದೆ. ಇಂದು ನೀವು ಸಾಕಷ್ಟು ಶಾಪಿಂಗ್ ಕೂಡ ಮಾಡಬಹುದು. ಆರೋಗ್ಯದ ದೃಷ್ಟಿಯಿಂದ ದಿನವು ಉತ್ತಮವಾಗಿರುತ್ತದೆ.
ಸಿಂಹ ರಾಶಿ
ವ್ಯಾಪಾರಿಗಳಿಗೆ ಈ ದಿನ ಧನಲಾಭದ ಸೂಚನೆಯಿದೆ. ನೀವು ಸಣ್ಣ ಉದ್ಯಮಿಯಾಗಿದ್ದರೆ, ಷೇರುಗಳನ್ನು ಹೆಚ್ಚಿಸಲು ಇದು ಅನುಕೂಲಕರ ಸಮಯ. ಉದ್ಯೋಗಿಗಳಿಗೂ ಈ ದಿನ ಉತ್ತಮವಾಗಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ, ಆರ್ಥಿಕವಾಗಿಯೂ ಯಾವುದೇ ಸಮಸ್ಯೆಯಿರಲ್ಲ.
ಕನ್ಯಾ ರಾಶಿ
ಸಂಬಂಧದ ವಿಷಯದಲ್ಲಿ ಜಾಗ್ರತೆವಹಿಸಬೇಕು. ಮೂರನೇಯ ವ್ಯಕ್ತಿಯ ಜಾಡಿ ಮಾತು ನಿಮ್ಮ ಸಂಬಂಧ ಹಾಳು ಮಾಡಬಹುದು. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ನಿಮ್ಮ ಯಾವುದೇ ಪೂರ್ವಜರ ಆಸ್ತಿಯನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದರೆ ಈ ದಿನ ನಿಮಗೆ ಅನುಕೂಲಕರವಾಗಿದೆ. ಕೆಲಸದಲ್ಲಿ ನಿರ್ಲಕ್ಷ್ಯ ಮಾಡಬೇಡಿ, ಆರೋಗ್ಯದ ಕಡೆಯೂ ಗಮನಹರಿಸಿ.
ತುಲಾ ರಾಶಿ
ಉದ್ಯೋಗಿಗಳು ಕೆಲಸದ ಜಾಗದಲ್ಲಿ ಕೋಪ ನಿಯಂತ್ರಿಸಲು ಸಲಹೆ ನೀಡಲಾಗುವುದು. ಆರ್ಥಿಕವಾಗಿ ಒಳ್ಳೆಯದಿದೆ, ಮನೆಗೆ ದುಬಾರಿ ಸಾಧನಗಳನ್ನು ಖರೀದಿಸಬಹುದು. ನೀವು ಯಾರಿಗಾದರೂ ಸಾಲವನ್ನು ನೀಡಿದ್ದರೆ ಆ ಹಣ ನಿಮ್ಮ ಕೈ ಸೇರಲಿದೆ. ಆರೋಗ್ಯದಲ್ಲಿ ಈ ದಿನ ನಿಮಗೆ ಮಿಶ್ರಫಲ.
ವೃಶ್ಚಿಕ ರಾಶಿ
ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ. ಇನ್ನು ಕೆಲಸದಲ್ಲಿಯೂ ಈ ದಿನ ಉತ್ತಮವಾಗಿದೆ. ವ್ಯಾಪಾರಿಗಳ ಆರ್ಥಿಕ ಸ್ಥಿತಿ ಸುಧಾರಿಸಲಿದೆ. ನೀವು ಆರ್ಥಿಕ ಲಾಭದ ಸೂಚನೆಗಳನ್ನು ಪಡೆಯುತ್ತೀರಿ. ನೀವು ನಿಮ್ಮ ಬಜೆಟ್‌ಗಿಂತ ಹೆಚ್ಚು ಖರ್ಚು ಮಾಡಲು ಹೋಗಬೇಡಿ. ಆರೋಗ್ಯದ ದೃಷ್ಟಿಯಿಂದ ದಿನವು ಉತ್ತಮವಾಗಿರುತ್ತದೆ.
ಧನು ರಾಶಿ
ಕೆಲಸದ ಕಾರಣ ಮಾನಸಿಕ ಒತ್ತಡ ಹೆಚ್ಚಾಗಲಿದೆ. ಉದ್ಯೋಗಸ್ಥರು ತಮ್ಮ ಕಾರ್ಯಕ್ಷಮತೆಯನ್ನು ಸುಧಾರಿಸಿಕೊಳ್ಳಬೇಕು. ವ್ಯಾಪಾರಿಗಳು ತಮ್ಮ ವಿರೋಧಿಗಳ ಬಗ್ಗೆ ಜಾಗ್ರತೆವಹಿಸಿ. ಈ ದಿನ ಆರ್ಥಿಕವಾಗಿಯೂ ಉತ್ತಮವಲ್ಲ, ಹಣ ನಷ್ಟವಾಗದಂತೆ ಜಾಗ್ರತೆವಹಿಸಿ, ಆಯಾಸ ಹೆಚ್ಚಾಗಿರುವುದರಿಂದ ಸುಸ್ತು ಅನಿಸುವುದು.
ಮಕರ ರಾಶಿ
ಮಕರ ರಾಶಿಯವರೇ ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಲು ಹೋಗಬೇಡಿ. ವ್ಯಾಪಾರಿಗಳಿಗೆ ಈ ದಿನ ಲಾಭದಾಯಕವಾಗಿರಲಿದೆ,
ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಕುಟುಂಬದಲ್ಲಿ ಯಾವುದೇ ಸಮಸ್ಯೆ ಇರಲ್ಲ, ನೀವು ನಿಮ್ಮ ಆರೋಗ್ಯದ ಬಗ್ಗೆ ಜಾಗ್ರತೆವಹಿಸಿ.
ಕುಂಭ ರಾಶಿ
ಸಣ್ಣ ವ್ಯಾಪಾರಿಗಳು ಈ ದಿನ ನಿರೀಕ್ಷೆ ಮಾಡಿರುವುದಕ್ಕಿಂತಲೂ ಅಧಿಕ ಲಾಭ ಪಡೆಯಬಹುದು. ಉದ್ಯೋಗಿಗಳು ಕೆಲಸದಲ್ಲಿ ನಿರ್ಲಕ್ಷ್ಯ ಮಾಡಬೇಡಿ. ನೀವು ನಿರುದ್ಯೋಗಿಗಳಾಗಿದ್ದರೆ ಮತ್ತು ಉದ್ಯೋಗವನ್ನು ಹುಡುಕುತ್ತಿದ್ದರೆ ನಿಮ್ಮ ಪ್ರಯತ್ನಗಳನ್ನು ಮತ್ತಷ್ಟು ಚುರುಕುಗೊಳಿಸಿ. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ಆದಾಯಕ್ಕಿಂತ ಹೆಚ್ಚಿನ ಖರ್ಚು ಇರಬಹುದು. ಆರೋಗ್ಯ ಸಮಸ್ಯೆಯಿಂದಾಗಿ ಹಣ ಹೆಚ್ಚು ಖರ್ಚಾಗಲಿದೆ.
ಮೀನ ರಾಶಿ
ಹಿರಿಯರ ಸಲಹೆ ನಿರ್ಲಕ್ಷ್ಯ ಮಾಡುವ ತಪ್ಪು ಮಾಡದಿರಿ. ವ್ಯಾಪಾರಿಗಳು, ಉದ್ಯೋಗಿಗಳು ವೃತ್ತಿಯಲ್ಲಿ ನಿರ್ಲಕ್ಷ್ಯ ತೋರಬೇಡಿ. ವ್ಯಾಪಾರಿಗಳು ಹೊಸ ವ್ಯವಹಾರ ಪ್ರಸ್ತಾಪ ಬಂದರೆ ಆತುರಪಡಬೇಡಿ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯ ಸಾಧ್ಯತೆ ಇದೆ. ಹಣದ ವಿಚಾರದಲ್ಲಿ ರಿಸ್ಕ್ ತೆಗೆದುಕೊಳ್ಳಬೇಡಿ. ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications