Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಮೇ 7: ಮಂಗಳವಾರ 12 ರಾಶಿಗಳಲ್ಲಿ ಈ 7 ರಾಶಿಯವರಿಗೆ ಈ ದಿನ ತುಂಬಾ ಚೆನ್ನಾಗಿರಲಿದೆ
ವೈದಿಕ ಶಾಸ್ತ್ರದ ಪ್ರಕಾರ ಮೇ 7 ನಿಮಗೆ ಹೇಗಿರಲಿದೆ ಎಂದು ನೋಡೋಣ...
ಮೇಷ ರಾಶಿ
ಈ ದಿನ ನಿಮಗೆ ಶುಭವಾಗಿದೆ. ನಿಮ್ಮ ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳ್ಳಲಿದೆ. ವ್ಯಾಪಾರಿಗಳು ಈ ದಿನ ಉತ್ತಮ ಲಾಭ ಗಳಿಸಲು ಸಾಧ್ಯವಾಗುವುದು. ನಿಮ್ಮ ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ, ಆರೋಗ್ಯ ಕೂಡ ಉತ್ತಮವಾಗಿರಲಿದೆ.
ಈ ದಿನ ಅದೃಷ್ಟದ ಬಣ್ಣ ಕೆನೆ, ಅದೃಷ್ಟ ಸಂಖ್ಯೆ: 7 ಆಗಿದೆ.

ವೃಷಭ ರಾಶಿ
ಇಂದು ಮನೆಯಲ್ಲಿ ಪರಿಸ್ಥಿತಿ ಚೆನ್ನಾಗಿರಲ್ಲ, ನೀವು ತಾಳ್ಮೆಯಿಂದ ವರ್ತಿಸುವಂತೆ ಸಲಹೆ ನೀಡಲಾಗುವುದು. ಅಧಿಕ ಕೆಲಸದ ಒತ್ತಡ ನಿಮ್ಮ ಆರೋಗ್ಯದ ಮೇಲೂ ಪ್ರಭಾವ ಬೀರುವುದು. ಹಣದ ವಿಷಯದಲ್ಲಿ ಈ ದಿನ ನಿಮಗೆ ಮಿಶ್ರ ಫಲಿತಾಂಶಗ, ಈ ದಿನ ಆರೋಗ್ಯದ ಕಡೆಗೆ ಗಮನಹರಿಸಿ.
ಈ ದಿನ ಅದೃಷ್ಟದ ಬಣ್ಣ ನೀಲಿ, ಅದೃಷ್ಟ ಸಂಖ್ಯೆ: 16 ಆಗಿದೆ.
ಮಿಥುನ ರಾಶಿ
ಈ ದಿನ ನೀವು ಬಯಸಿದಂತೆ ಯಾವುದೇ ಕಾರ್ಯಗಳು ನಡೆಯುವುದಿಲ್ಲ, ಇದರಿಂದಾಗಿ ನಿರಾಸೆ ಉಂಟಾಗುವುದು. ನಿಮ್ಮ ಕೆಲಸವನ್ನು ಪೂರ್ಣಗೊಳಿಸಲು ಹೆಚ್ಚಿನ ಶ್ರಮ ಹಾಕಿ. ವ್ಯಾಪಾರಿಗಳಿಗೆ ಈ ದಿನ ಲಾಭದಾಯಕವಾಗಿರಲಿದೆ. ಆರ್ಥಿಕವಾಗಿ ಯಾವುದೇ ಸಮಸ್ಯೆ ಇರಲ್ಲ, ಕುಟುಂಬ ಜೀವನ ಚೆನ್ನಾಗಿರಲಿದರೆ. ಆರೋಗ್ಯ ಉತ್ತಮವಾಗಿರಲಿದೆ.
ಅದೃಷ್ಟದ ಬಣ್ಣ ಕಿತ್ತಳೆ, ಅದೃಷ್ಟ ಸಂಖ್ಯೆ 33
ಶುಭ ಸಮಯ: ಸಂಜೆ 5:30 ರಿಂದ 7 ರವರೆಗೆ ಆಗಿದೆ.
ಕರ್ಕ ರಾಶಿ
ಕುಟುಂಬದಲ್ಲಿ ಪರಿಸ್ಥಿತಿ ತುಂಬಾ ಚೆನ್ನಾಗಿರಲಿದೆ. ನಿಮ್ಮೆಲ್ಲಾ ಕೆಲಸ ಕಾರ್ಯಗಳು ಉತ್ತಮವಾಗಿ ಪೂರ್ಣಗೊಳ್ಳಲಿದೆ. ವ್ಯಾಪಾರಿಗಳಿಗೂ ಧನಲಾಬದ ಸೂಚನೆಯಿದೆ. ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ.
ಈ ದಿನ ಅದೃಷ್ಟದ ಬಣ್ಣ ಕೆಂಪು, ಅದೃಷ್ಟದ ಸಂಖ್ಯೆ: 4 ಆಗಿದೆ.
ಸಿಂಹ ರಾಶಿ
ಈ ದಿನ ಕೆಲಸದಕ್ಕೆ ಸಂಬಂಧಿಸಿದಂತೆ ಕೆಲ ಅವ್ಯಕ್ತ ಭಯ ಕಾಡುವುದು. ವ್ಯಾಪಾರಿಗಳಿಗೆ ಈ ದಿನ ಒತ್ತಡದ ದಿನವಾಗಿದೆ. ಕೆಲಸದ ಒತ್ತಡದ ಕಾರಣ ಕುಟುಂಬದ ಕಡೆಗೆ ಗಮನ ಹರಿಸಲು ಕಷ್ಟವಾಗುವುದು, ನಿಮ್ಮ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಖರ್ಚು ನೋಡಿಕೊಂಡು ಮಾಡಿ. ಆರೋಗ್ಯ ಸಮಸ್ಯೆವಿರಬಹುದು.
ಈ ದಿನ ಅದೃಷ್ಟ ಬಣ್ಣನೇರಳೆ, ಅದೃಷ್ಟ ಸಂಖ್ಯೆ: 20 ಆಗಿದೆ.
ಕನ್ಯಾ ರಾಶಿ
ನೀವು ಹಣ ಹೊಂದಿಸಲು ಪ್ರಯತ್ನಿಸುತ್ತಿದ್ದರೆ ನಿಮಗೆ ಒಳ್ಳೆಯ ದಿನ,ಸಾಲ ಸಿಗಲಿದೆ. ಇನ್ನು ಹೊಸ ಉದ್ಯೋಗಕ್ಕೆ ಪ್ರಯತ್ನಿಸುತ್ತಿದ್ದರೆ ನೀವು ಉತ್ತಮ ಫಲ ಪಡೆಯಲು ಸಾಧ್ಯವಾಗುವುದು, ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಮಕ್ಕಳ ಹಠಮಾರಿ ಸ್ವಭಾವ ಇಂದು ನಿಮ್ಮ ಸಮಸ್ಯೆಗಳನ್ನು ಹೆಚ್ಚಿಸಬಹುದು. ಆರೋಗ್ಯದ ದೃಷ್ಟಿಯಿಂದ ಈ ದಿನಸರಾಸರಿಯಾಗಿರುತ್ತದೆ.
ಈ ಅದೃಷ್ಟದ ಬಣ್ಣ ಗುಲಾಬಿ, ಅದೃಷ್ಟ ಸಂಖ್ಯೆ: 17 ಆಗಿದೆ.
ತುಲಾ ರಾಶಿ
ಆರೋಗ್ಯ ಸಮಸ್ಯೆ ಕಾಣಿಸಿದರೆ ನಿರ್ಲಕ್ಷ್ಯ ಮಾಡಲು ಹೋಗಬೇಡಿ. ಕೆಲಸದಲ್ಲಿ ನಿರ್ಲಕ್ಷ್ಯ ಬೇಡ. ನೀವು ಉದ್ಯಮಿಯಾಗಿದ್ದರೆ ಮತ್ತು ಕೆಲವು ಹೊಸ ಕೆಲಸವನ್ನು ಪ್ರಾರಂಭಿಸಲಿದ್ದರೆ, ನಿಮ್ಮ ವಿರೋಧಿಗಳೊಂದಿಗೆ ಜಾಗರೂಕರಾಗಿರಲು ನಿಮಗೆ ಸಲಹೆ ನೀಡಲಾಗುವುದು. ಹಣದ ವಿಷಯದಲ್ಲಿ ದಿನವು ದುಬಾರಿಯಾಗಲಿದೆ. ಖರ್ಚು ಹೆಚ್ಚಾಗುವುದು, ವೈವಾಹಿಕ ಜೀವನದಲ್ಲಿ ಕೆಲ ಭಿನ್ನಾಭಿಪ್ರಾಯವಿರಬಹುದು.
ಈ ದಿನ ಅದೃಷ್ಟದ ಬಣ್ಣ ಕಿತ್ತಳೆ, ಅದೃಷ್ಟದ ಸಂಖ್ಯೆ 39 ಆಗಿದೆ.
ವೃಶ್ಚಿಕ ರಾಶಿ
ಕುಟುಂಬ ಜೀವನ ಚೆನ್ನಾಗಿರಲಿದೆ. ನಿಮ್ಮ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ನೀವು ಶ್ರಮಿಸುತ್ತಿದ್ದರೆ, ಇಂದು ನೀವು ಅದಕ್ಕೆ ಸಂಬಂಧಿಸಿದಂತೆ ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು. ಈ ದಿನ ಕೆಲಸಕ್ಕೆ ಸಂಬಂಧಿಸಿದ ನಿರ್ಧಾರ ಆತುರದಿಮದ ತೆಗೆದುಕೊಳ್ಳಬೇಡಿ. ಆರೋಗ್ಯ ಚೆನ್ನಾಗಿರಲಿದೆ.
ಈ ದಿನ ನಿಮಗೆ ಅದೃಷ್ಟದ ಬಣ್ಣ ಆಕಾಶ ನೀಲಿ, ಅದೃಷ್ಟದ ಸಂಖ್ಯೆ 42 ಆಗಿದೆ.
ಧನು ರಾಶಿ
ಇಂದು ಕೆಲಸದಲ್ಲಿ ಅಸಡ್ಡೆ ತೋರಿದರೆ ಅದು ನಿಮ್ಮ ಕೆಲಸದ ಮೇಲೆ ಪರಿಣಾಮ ಬೀರಬಹುದು. ಷೇರು ಮಾರುಕಟ್ಟೆಯಲ್ಲಿ ಕೆಲಸ ಮಾಡುವವರು ಇಂದು ತಮ್ಮ ನಿರ್ಧಾರಗಳ ಬಹಳ ಆಲೋಚಿಸಿ ತೆಗೆದುಕೊಳ್ಳಲು ಸಲಹೆ ನೀಡಲಾಗುವುದು. ನೀವು ಇತ್ತೀಚೆಗೆ ಕೆಲಸದ ಒತ್ತಡದಿಂದ ಮನೆಯ ಕಡೆ ಗಮನ ನೀಡಲು ಸಾಧ್ಯವಾಗುತ್ತಿಲ್ಲ, ಆದರೆ ಕೆಲಸ ಮತ್ತು ಕುಟುಂಬ ಜೀವನ ಸಮತೋಲನ ಮಾಡಿಕೊಂಡು ಹೋಗುವುದು ಒಳ್ಳೆಯದು.ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ.
ಈ ದಿನ ಅದೃಷ್ಟದ ಬಣ್ಣ, ಕಂದು, ಅದೃಷ್ಟದ ಸಂಖ್ಯೆ 32 ಆಗಿದೆ.
ಮಕರ ರಾಶಿ
ಇಂದು ನಿಮಗೆ ಎಲ್ಲಾ ರೀತಿಯಿಂದಲೂ ಉತ್ತಮವಾಗಿದೆ, ಕುಟುಂಬ ಜೀವನದಲ್ಲಿ ಖುಷಿ ಇರಲಿದೆ. ಹಣದ ವಿಷಯದಲ್ಲಿಯೂ ಉತ್ತಮವಾಗಿದೆ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಆರೋಗ್ಯದ ದೃಷ್ಟಿಯಿಂದ ದಿನವು ಉತ್ತಮವಾಗಿರುತ್ತದೆ.
ಈ ದಿನ ಅದೃಷ್ಟದ ಬಣ್ಣ, ಹಸಿರು ಅದೃಷ್ಟದ ಸಂಖ್ಯೆ 5 ಆಗಿದೆ.
ಕುಂಭ ರಾಶಿ
ನೀವು ವಿದ್ಯಾರ್ಥಿಯಾಗಿದ್ದರೆ ಮತ್ತು ವಿದೇಶದಲ್ಲಿ ಅಧ್ಯಯನ ಮಾಡಲು ಬಯಸಿದರೆ ನೀವು ಸರಿಯಾದ ದಿಕ್ಕಿನಲ್ಲಿ ಪ್ರಯತ್ನಿಸಬೇಕು. ಕೆಲಸದ ದೃಷ್ಟಿಯಿಂದ ಇಂದು ನಿಮಗೆ ತುಂಬಾ ಒಳ್ಳೆಯ ದಿನವಾಗಲಿದೆ. ಉದ್ಯೋಗಿಗಳು ತಮ್ಮ ಬಡ್ತಿಗಾಗಿ ಬಹಳ ಸಮಯದಿಂದ ಕಾಯುತ್ತಿದ್ದರೆ, ನೀವು ಇಂದು ಒಳ್ಳೆಯ ಸುದ್ದಿಯನ್ನು ಪಡೆಯಬಹುದು. ನಿರುದ್ಯೋಗಿಗಳು ಶೀಗ್ರದಲ್ಲಿಯೇ ಉದ್ಯೋಗವನ್ನು ಪಡೆಯುವ ಬಲವಾದ ಸಾಧ್ಯತೆಯಿದೆ. ಅದೇ ಸಮಯದಲ್ಲಿ, ವ್ಯವಹಾರಕ್ಕೆ ಸಂಬಂಧಿಸಿದ ಜನರ ಬಾಕಿ ಉಳಿದಿರುವ ಕೆಲಸಗಳು ಪೂರ್ಣಗೊಳ್ಳುತ್ತವೆ. ಆರೋಗ್ಯದ ಕಡೆ ಗಮನಹರಿಸಿ.
ಈ ದಿನ ಅದೃಷ್ಟದ ಬಣ್ಣ: ಹಳದಿ, ಅದೃಷ್ಟದ ಸಂಖ್ಯೆ: 12
ಮೀನ ರಾಶಿ
ವ್ಯಾಪಾರಿಗಳಿಗೆ ಈ ದಿನ ಸವಾಲಿನ ದಿನವಾಗಿದೆ. ಉದ್ಯೋಗಿಗಳಿಗೂ ಈ ದಿನ ಅಷ್ಟೊಂದು ಶುಭವಲ್ಲ. ನಿಮ್ಮ ಯಾವುದೇ ಕೆಲಸವನ್ನುಪೂರ್ಣಗೊಳಿಸದೆ ಬಿಡಬೇಡಿ. ಹಣದ ಖರ್ಚು ಕೂಡ ಅಧಿಕವಿರಲಿದೆ. ನಿಮ್ಮ ಸಂಗಾತಿಯೊಂದಿಗೆ ನೀವು ಭಿನ್ನಾಭಿಪ್ರಾಯವನ್ನು ಹೊಂದುವ ಸಾಧ್ಯತೆಯಿದೆ. ಆರೋಗ್ಯ ಸಮಸ್ಯೆವಿರಬಹುದು.
ಈ ಅದೃಷ್ಟದ ಬಣ್ಣ ಪೀಚ್, ಅದೃಷ್ಟದ ಸಂಖ್ಯೆ: 28
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications