Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಮೇ 8: ಬುಧವಾರ 12 ರಾಶಿಗಳಲ್ಲಿ ಯಾವ ರಾಶಿಗೆ ತುಂಬಾನೇ ಶುಭವಾಗಿದೆ
ವೈದಿಕ ಶಾಸ್ತ್ರದ ಪ್ರಕಾರ ಮೇ 8 ನಿಮಗೆ ಹೇಗಿರಲಿದೆ ಎಂದು ನೋಡೋಣ...
ಮೇಷ ರಾಶಿ
ಈ ದಿನ ನೀವು ಕೋಪ ನಿಯಂತ್ರಿಸಿದರೆ ಒಳ್ಳೆಯದು, ಸಂಬಂಧಿಕರ ಜೊತೆ ಕೆಲ ಸಮಸ್ಯೆಗಳಿರಬಹುದು, ನೀವು ಕೋಪ ನಿಯಂತ್ರಿಸಿದರೆ ಒಳ್ಳೆಯದು. ವ್ಯಾಪಾರಿಗಳಿಗೆ ಈ ದಿನ ಲಾಭದಾಯಕವಾಗಿರಲಿದೆ. ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ. ನೀವು ಆರೋಗ್ಯದ ಕಡೆಗೆ ಗಮನಹರಿಸಿ.

ವೃಷಭ ರಾಶಿ
ಈ ದಿನ ನಿಮ್ಮ ಎಲ್ಲಾ ಕೆಲಸವೂ ಯೋಜನೆಯಂತೆಯೇ ಪೂರ್ಣಗೊಳ್ಳಲಿದೆ. ಕಚೇರಿಯಲ್ಲಿ ಒಳ ರಾಜಕೀಯದ ಬಗ್ಗೆ ಜಾಗ್ರತೆವಹಿಸಿ. ಆರ್ಥಿಕವಾಗಿ ಉತ್ತಮವಾಗಿರುವುದರಿಂದ ಈ ದಿನ ಶಾಪಿಂಗ್ ಮಾಡುವಿರಿ. ಮನೆಯಲ್ಲಿ ವಾತಾವರಣ ಚೆನ್ನಾಗಿರಲಿದೆ.
ಮಿಥುನ ರಾಶಿ
ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಹಳ ಮುಖ್ಯವಾಗಿದೆ. ವ್ಯಾಪಾರಿಗಳು ಹಣದ ವಿಷಯಗಳಲ್ಲಿ ಹೆಚ್ಚು ಜಾಗರೂಕರಾಗಿರಲು ಸಲಹೆ ನೀಡಲಾಗುವುದು. ವೈವಾಹಿಕ ಜೀವನ ಚೆನ್ನಾಗಿರಲಿದೆ. ಹಣಕಾಸಿನ ಪರಿಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಆರೋಗ್ಯದ ದೃಷ್ಟಿಯಿಂದ ಇಂದು ನಿಮಗೆ ಮಿಶ್ರ ಫಲ.
ಕರ್ಕ ರಾಶಿ
ಈ ದಿನ ನೀವು ಕಠಿಣ ಪರಿಶ್ರಮಕ್ಕೆ ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ಉದ್ಯೋಗಿಗಳಿಗೆ ವಿದೇಶ ಪ್ರವಾಸಕ್ಕೆ ಅವಕಾಶ ಸಿಗಬಹುದು. ವ್ಯಾಪಾರಿಗಳಿಗೆ ಈ ದಿನ ಉತ್ತಮವಾಗಿರಲಿದೆ, ಆರ್ಥಿಕವಾಗಿ ಉತ್ತಮವಾಗಿದೆ. ಆರೋಗ್ಯ ಸಮಸ್ಯೆಯಿದ್ದರೆ ಸುಧಾರಣೆ ಕಂಡು ಬರಲಿದೆ.
ಸಿಂಹ ರಾಶಿ
ನೀವು ನಿಮ್ಮ ಸಂಗಾತಿಯೊಂದಿಗೆ ಭಿನ್ನಾಭಿಪ್ರಾಯವಿದ್ದರೆ ಅದನ್ನು ಬಗೆಹರಿಸಲು ಪ್ರಯತ್ನಿಸಿ. ಹಣದ ವಿಷಯದಲ್ಲಿ ಸ್ವಲ್ಪ ದುಬಾರಿಯಾಗಲಿದೆ. ಈ ದಿನ ಯಾವುದೇ ಅಪರಿಚಿತರನ್ನು ಹೆಚ್ಚು ನಂಬಲು ಹೋಗಬೇಡಿ. ನಿಮ್ಮ ಆರೋಗ್ಯದ ಬಗ್ಗೆ ನೀವು ಯಾವುದೇ ರೀತಿಯಲ್ಲಿ ನಿರ್ಲಕ್ಷ್ಯ ಮಾಡಬೇಡಿ.
ಕನ್ಯಾ ರಾಶಿ
ಉದ್ಯೋಗಿಗಳು ಈ ದಿನ ಜಾಗ್ರತೆವಹಿಸಬೇಕು. ಉದ್ಯೋಗಸ್ಥರಿಗೆ ಇಂದು ಏರಿಳಿತಗಳಿಂದ ಕೂಡಿರಲಿದೆ. ನೀವು ಶೀಘ್ರದಲ್ಲೇ ನೀವು ಬಯಸಿದ ಫಲಿತಾಂಶಗಳನ್ನು ಪಡೆಯುತ್ತೀರಿ. ವ್ಯಾಪಾರಿಗಳಿಗೆ ಈ ದಿನ ಲಾಭವಾಗಲಿದೆ. ತ್ವರಿತ ಲಾಭ ಗಳಿಸಲು ಅಡ್ಡ ಮಾರ್ಗ ಹಿಡಿಯಬೇಡಿ. ವೈಯಕ್ತಿಕ ಜೀವನದ ಕಡೆಗೆ ಗಮನಹರಿಸಿ. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯವಾಗಿರುತ್ತದೆ.
ತುಲಾ ರಾಶಿ
ಹಣದ ವಿಷಯದಲ್ಲಿಈ ದಿನ ನಿಮಗೆ ಉತ್ತಮವಾಗಿರಲಿದೆ. ಉದ್ಯೋಗದಲ್ಲಿ ಕೆಲಸದ ಬಗ್ಗೆ ಹೆಚ್ಚು ಗಮನ ಹರಿಸಬೇಕು, ಇಲ್ಲದಿದ್ದರೆ ಕೆಲಸದಲ್ಲಿ ಒತ್ತಡ ಹೆಚ್ಚಾಗುವುದು. ಮನೆಯಲ್ಲಿ ವಾತಾವರಣ ಉತ್ತಮವಾಗಿರುತ್ತದೆ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ ಹೇಳುವುದಾದರೆ ಚರ್ಮ ಸಂಬಂಧಿತ ಸಮಸ್ಯೆಗಳನ್ನು ಹೊಂದಿರಬಹುದು.
ವೃಶ್ಚಿಕ ರಾಶಿ
ನಿಮ್ಮ ಕೋಪವನ್ನು ನಿಯಂತ್ರಿಸಲು ನಿಮಗೆ ಸಲಹೆ ನೀಡಲಾಗುವುದು, ವ್ಯಾಪಾರಿಗಳು ಈ ದಿನ ದುಡುಕಬೇಡಿ, ಗ್ರಾಹಕರೊಂದಿಗೆ ತಾಳ್ಮೆಯಿಂದ ವರ್ತಿಸಿ. ವೈವಾಹಿಕ ಜೀವನದಲ್ಲಿ ಕೆಲ ಸಮಸ್ಯೆಗಳಿರಬಹುದು. ನಿಮ್ಮ ಜೀವನದಲ್ಲಿ ಮೂರನೇಯವರು ಹಸ್ತಕ್ಷೇಪ ಮಾಡಲು ಬಿಡಬೇಡಿ. ಹಣದ ಬಗ್ಗೆ ಹೇಳುವುದಾದರೆ ನಿಮ್ಮ ಬಜೆಟ್‌ಗಿಂತ ಹೆಚ್ಚು ಖರ್ಚು ಮಾಡುವ ತಪ್ಪನ್ನು ಮಾಡಬೇಡಿ.
ಧನು ರಾಶಿ
ಹಣದ ವಿಷಯದಲ್ಲಿ ಜಾಗ್ರತೆವಹಿಸಿ, ಇಲ್ಲದಿದ್ದರೆ ಆರ್ಥಿಕ ಮುಗ್ಗಟ್ಟು ಎದುರಿಸಬೇಕಾಗಬಹುದು. ಉದ್ಯಮಿಗಳಿಗೆ ಈ ದಿನ ಅನುಕೂಲಕರವವಾಗಿದೆ. ಮನೆಯ ಜವಾಬ್ದಾರಿಗಳನ್ನು ನಿರ್ಲಕ್ಷ್ಯ ಮಾಡಬೇಡಿ, ನಿಮ್ಮ ವರ್ತನೆ ಮನೆಯವರಿಗೆ ಸಂಕಟ ತರದಂತೆ ನೋಡಿಕೊಳ್ಳಿ, ಆರೋಗ್ಯ ಉತ್ತಮವಾಗಿರಲಿದೆ.
ಮಕರ ರಾಶಿ
ಇಂದು ನೀವು ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು. ವ್ಯಾಪಾರಿಗಳು ಈ ದಿನ ಯಾವುದೇ ನಿರ್ಧಾರವಾದರೂ ಜಾಗ್ರತೆಯಿಂದ ತೆಗೆದುಕೊಳ್ಳಬೇಕು. ಉದ್ಯೋಗಿಗಳಿಗೆ ಅನುಕೂಲಕರವಾಗಿದೆ, ಇನ್ನು ನೀವು ಕೆಲಸ ಬದಲಾವಣೆಗೆ ಶ್ರಮಿಸುತ್ತಿದ್ದರೆ ಈ ಅವಧಿ ಉತ್ತಮವಾಗಿರಲಿದೆ. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ, ಆರೋಗ್ಯವೂ ಉತ್ತಮವಾಗಿರಲಿದೆ.
ಕುಂಭ ರಾಶಿ
ನೀವು ಉದ್ಯೋಗದಲ್ಲಿದ್ದರೆ ನಿಮ್ಮ ಶ್ರಮಕ್ಕೆ ಉತ್ತಮ ಫಲ ಸಿಗಲಿದೆ. ನೀವು ಸರ್ಕಾರಿ ಕೆಲಸಕ್ಕೆ ತಯಾರಿ ನಡೆಸುತ್ತಿದ್ದರೆ ಅನುಭವಿ ವ್ಯಕ್ತಿಯಿಂದ ಮಾರ್ಗದರ್ಶನ ಸಿಗಲಿದೆ. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವವರಿಗೆ ಇಂದು ಸವಾಲಿನ ದಿನವಾಗಿದೆ. ನಿಮ್ಮ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ನೀವು ಹೆಚ್ಚು ಶ್ರಮಿಸಬೇಕು. ವೈವಾಹಿಕ ಜೀವನ ಚೆನ್ನಾಗಿರಲಿದೆ.
ಮೀನ ರಾಶಿ
ನೀವು ಉದ್ಯಮಿಯಾಗಿದ್ದರೆ ಮತ್ತು ಹೊಸ ವ್ಯವಹಾರದಲ್ಲಿ ಹೂಡಿಕೆ ಮಾಡಲು ಯೋಜಿಸುತ್ತಿದ್ದರೆ, ತುಂಬಾ ಆತುರಪಡಬೇಡಿ. ಚೆನ್ನಾಗಿ ವಿಚಾರಿಸಿದ ಬಳಿಕವಷ್ಟೇ ಮಾಡಿ. ಹಣದ ವಿಷಯದಲ್ಲಿ ಇಂದು ನಿಮಗೆ ತುಂಬಾ ದುಬಾರಿ ದಿನವಾಗಲಿದೆ ಹೆಚ್ಚು ಖರ್ಚು ಮಾಡಬೇಡಿ, ಕಾಯಿಲೆ ಇದ್ದರೆ ಆರೋಗ್ಯ ಸಮಸ್ಯೆ ನಿರ್ಲಕ್ಷ್ಯ ಮಾಡಬೇಡಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications