Latest Updates
-
ಐಟಿಆರ್ ಸಲ್ಲಿಕೆ ಗಡುವು ಹತ್ತಿರ: ದಂಪತಿಗಳು ಒಟ್ಟಾಗಿ ಕುಳಿತು ಈ ಕೆಲಸ ಮಾಡಿದರೆ ಟೆನ್ಷನ್ ಫ್ರೀ! -
ಬೆಂಗಳೂರಿಗರೇ ಗಮನಿಸಿ: ಇಂದು 6 ಗಂಟೆ ಪವರ್ ಕಟ್, ಈ ಮುನ್ನೆಚ್ಚರಿಕೆ ಮರೆಯದಿರಿ! -
ಶ್ರಾವಣ ಉಪವಾಸದಲ್ಲಿ ದಿನವಿಡೀ ಎನರ್ಜಿಯಿಂದ ಇರಬೇಕೆ? ಈ ಹೈ-ಪ್ರೋಟೀನ್ ಸಾತ್ವಿಕ ಆಹಾರ ಪದ್ಧತಿ ಫಾಲೋ ಮಾಡಿ! -
ಗುರು ಪೂರ್ಣಿಮೆ 2026: ಸರಳ ಪೂಜಾ ವಿಧಿ ಮತ್ತು ಕಡಿಮೆ ಬಜೆಟ್ನಲ್ಲಿ ಗುರುಗಳಿಗೆ ನೀಡಬಹುದಾದ ಬೆಸ್ಟ್ ಗಿಫ್ಟ್ ಐಡಿಯಾಗಳು! -
10 ನಿಮಿಷದ 'ಟೈಗರ್ ಫ್ಲೋ': ಬೆನ್ನುನೋವಿಗೆ ಮುಕ್ತಿ ನೀಡುವ ಅದ್ಭುತ ವ್ಯಾಯಾಮ ಇಲ್ಲಿದೆ! -
ಪ್ರತಿಭಟನೆಯಲ್ಲಿ ಪ್ರೀತಿ: 'ಪ್ರೊಟೆಸ್ಟ್ ನೇ ಬನಾ ದಿ ಜೋಡಿ' ಟ್ರೆಂಡ್ ಹಿಂದೆ ಅಡಗಿದೆ ದೊಡ್ಡ ಅಪಾಯ! -
ಮಳೆಗಾಲದಲ್ಲಿ ಮನೆಯಲ್ಲಿ ಬೂಷ್ಟು ಹರಡುತ್ತಿದೆಯೇ? ಈ 20 ನಿಮಿಷದ ಟಿಪ್ಸ್ ಪಾಲಿಸಿ, ಮನೆ ಫ್ರೆಶ್ ಆಗಿಡಿ! -
ಕೇವಲ 200 ರೂಪಾಯಿಯಲ್ಲಿ ಪರಿಸರ ಸ್ನೇಹಿ ಊಟ: ವಿಶ್ವ ಪ್ರಕೃತಿ ಸಂರಕ್ಷಣಾ ದಿನಕ್ಕೆ ನಿಮ್ಮ ಅಡುಗೆಮನೆಯೇ ಮೊದಲ ಹೆಜ್ಜೆ! -
CWG 2026: 6ನೇ ದಿನ ಭಾರತದ ಪದಕದ ಬೇಟೆ; ಮನೆಯಲ್ಲೇ ಕಮ್ಮಿ ಬಜೆಟ್ನಲ್ಲಿ ಅದ್ಭುತ ವಾಚ್ ಪಾರ್ಟಿ ಪ್ಲಾನ್! -
ವಿಶ್ವ ಹೆಪಟೈಟಿಸ್ ದಿನ: ಲಿವರ್ ಆರೋಗ್ಯ ಹೆಚ್ಚಿಸಲು ಈ 10 ನಿಮಿಷದ ಬೆಳಗಿನ ದಿನಚರಿ ಪಾಲಿಸಿ!
ದಿನ ಭವಿಷ್ಯ: ಡಿಸೆಂಬರ್ 3, ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
ಜ್ಯೋತಿಷ್ಯದ ಪ್ರಕಾರ ದ್ವಾದಶ ರಾಶಿಗಳ ರಾಶಿಫಲ ನೀಡಲಾಗಿದ್ದು ಈ ದಿನ ಯಾವ ರಾಶಿಗೆ ಹೇಗಿದೆ ನೋಡೋಣ:
ಮೇಷ ರಾಶಿ
ಈ ದಿನ ಉತ್ತಮವಾಗಿರಲಿದೆ, ಕೆಲಸ ಕಾರ್ಯಗಳು ಚೆನ್ನಾಗಿ ನಡೆಯಲಿದೆ, ಈ ದಿನ ನೀವು ಆರೋಗ್ಯದ ಕಡೆಗೆ ಗಮನಹರಿಸಿ. ವ್ಯಾಪಾರಿಗಳಿಗೆ ಈ ದಿನ ಧನ ಲಾಭವಾಗಲಿದೆ. ಸಂಗಾತಿಗೆ ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಬೇಡಿ.

ವೃಷಭ ರಾಶಿ
ವೃಷಭ ರಾಶಿಯವರಿಗೆ ಈ ದಿನ ಉತ್ತಮವಾಗಿದೆ, ನೀವು ಆಹಾರಕ್ರಮದ ಬಗ್ಗೆ ಜಾಗ್ರತೆವಹಿಸಬೇಕು, ಅದರಲ್ಲಿಯೂ ಅಸಿಡಿಟಿ ಇದ್ದರೆ ಹುಳಿ ಆಹಾರ ಸೇವನೆ ನಿಮ್ಮ ಸಮಸ್ಯೆ ಹೆಚ್ಚಿಸಲಿದೆ, ಈ ದಿನ ಆರ್ಥಿಕವಾಗಿ ಉತ್ತಮವಲ್ಲ, ಕೌಟುಂಬಿಕ ಬದುಕಿನಲ್ಲಿ ಕೆಲ ಭಿನ್ನಾಭಿಪ್ರಾಯವಿರಬಹುದು.
ಮಿಥುನ ರಾಶಿ
ಈ ದಿನ ನಿಮಗೆ ಶುಭವಾಗಿದೆ, ವ್ಯಾಪಾರಿಗಳು ತಮ್ಮ ವ್ಯಾಪಾರದ ಬಗ್ಗೆ ಯಾವುದಾದರೂ ಒಪ್ಪಂದ ಮಾಡುವುದಾದರೆ ಅದರ ಬಗ್ಗೆ ಜಾಗ್ರತೆವಹಿಸಬೇಕು. ದಾಖಲೆಗಳನ್ನು ಸರಿಯಾಗಿ ಪರಿಶೀಲಿಸಿ, ಕೆಲಸದ ವಿಷಯದಲ್ಲಿ ನಿರ್ಲಕ್ಷ್ಯ ಮಾಡಬೇಡಿ.
ಕರ್ಕ ರಾಶಿ
ಈ ದಿನ ಸವಾಲಿನಿಂದ ಕೂಡಿರಲಿದೆ, ಅಲರ್ಜಿಗೆ ಸಂಬಂಧಿಸಿದ ಸಮಸ್ಯೆವಿರಬಹುದು, ಉದ್ಯಮಿಗಳಿಗೆ ಧನ ಲಾಭವಾಗಲಿದೆ, ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ. ಹಿರಿಯರ ಸಲಹೆ ನಿರ್ಲಕ್ಷ್ಯ ಮಾಡಬೇಡಿ
ಸಿಂಹ ರಾಶಿ
ಈ ದಿನ ನಿಮಗೆ ಉತ್ತಮವಾಗಿರಲಿದೆ, ಕೆಲಸದ ಜಾಗದಲ್ಲಿನಿಮಗೆ ಒಪ್ಪಿಸಿದ ಕೆಲಸವನ್ನು ಸರಿಯಾಗಿ ನಿಭಾಯಿಸುವ ಕಡೆಗೆ ಗಮನಹರಿಸಬೇಕು. ಆರೋಗ್ಯದ ಬಗ್ಗೆ ಹೇಳುವುದಾದರೆ ಬೆನ್ನು ನೋವಿಗೆ ಸಂಬಂಧಿಸಿದ ಸಮಸ್ಯೆ ಎದುರಿಸಬಹುದು,ವ್ಯಾಪಾರಿಗಳಿಗೆ ಈ ದಿನ ಸರಾಸರಿಯಾಗಿರಲಿದೆ. ಕುಟುಂಬದ ವಾತಾವರಣ ತುಂಬಾ ಚೆನ್ನಾಗಿರಲಿದೆ.
ಕನ್ಯಾ ರಾಶಿ
ಕನ್ಯಾ ರಾಶಿಯವರಿಗೆ ಈ ದಿನ ಶುಭವಾಗಿದೆ, ಆರೋಗ್ಯ ಸಮಸ್ಯೆಯಿದ್ದರೆ, ವ್ಯಾಪಾರಿಗಳಿಗೆ ಈ ವಾರ ಅನುಕೂಲಕರವಾಗಿರಲಿದೆ, ಆರೋಗ್ಯದ ಕಡೆಗೆ ಗಮನಹರಿಸಬೇಕು, ಚಿಕ್ಕ ಪುಟ್ಟ ಆರೋಗ್ಯ ಸಮಸ್ಯೆಯಂದು ನಿರ್ಲಕ್ಷ್ಯ ಮಾಡಬೇಡಿ. ವೃತ್ತಿ ಬದುಕಿನ ಕಡೆಗೆ ಗಮನಹರಿಸಬೇಕು.
ತುಲಾ ರಾಶಿ
ಈ ದಿನ ಕೆಲಸದಲ್ಲಿ ನಿಮಗ ಉತ್ತಮವಾಗಿದೆ, ನಿಮ್ಮ ಕೆಲಸದಲ್ಲಿ ಬದಲಾವಣೆ ಮಾಡಲು ಪ್ರಯತ್ನ ಮಾಡಿದ್ದರೆ ಈ ದಿನ ಶುಭ ಸುದ್ದಿ ಸಿಗಲಿದೆ. ಈ ದಿನ ಕೋಪದಿಂದ ವರ್ತಿಸಿದರೆ ನಷ್ಟ ನಿಮಗೇನೆನಪಿರಲಿ. ಮಕ್ಕಳಕಡೆಗೆ ಹೆಚ್ಚು ಗಮನಹರಿಸಬೇಕು. ಸಾಲ ಮಾಡಿದ್ದರೆ ಅದನ್ನು ಮರುಪಾವತಿ ಮಾಡಲು ಒತ್ತಡ ಬರಬಹುದು.
ವೃಶ್ಚಿಕ ರಾಶಿ
ಈ ದಿನ ಕೆಲಸದಲ್ಲಿ ಜಾಗ್ರತೆವಹಿಸಬೇಕು. ನಿಮ್ಮ ಕೆಲಸದಲ್ಲಿ ತಪ್ಪುಗಳಾಗದಂತೆ ಜಾಗ್ರತೆವಹಿಸಬೇಕು. ಆರೋಗ್ಯ ಸಮಸ್ಯೆವಿರಬಹುದು, ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಮಾಡಬೇಡಿ. ಈ ದಿನ ಕುಟುಂಬ ಜೀವನ ಚೆನ್ನಾಗಿರಲಿದೆ, ಆರ್ಥಿಕವಾಗಿ ಈ ದಿನ ಉತ್ತಮವಾಗಿರಲಿದೆ.
ಧನು ರಾಶಿ
ಈ ದಿನ ವೃತ್ತಿ ಬದುಕಿನ ದೃಷ್ಟಿಯಿಂದ, ಆರ್ಥಿಕಜೀವನದ ದೃಷ್ಟಿಯಿಂದ ನಿಮಗೆ ಉತ್ತಮವಾಗಿದೆ. ಈ ದಿನ ನೀವು ಕೆಲಸದ ಜಾಗದಲ್ಲಿ ಸಮತೋಲಿತವಾಗಿ ವರ್ತಿಸುವಂತೆ ಸಲಹೆ ನೀಡಲಾಗುವುದು. ಕುಟುಂಬದಲ್ಲಿನ ಸಮಸ್ಯೆ ಮಕ್ಕಳ ಮನಸ್ಸಿನ ಮೇಲೆ ಪರಿಣಾಮ ಬೀರಬಹುದು, ಈ ಬಗ್ಗೆ ಜಾಗ್ರತೆವಹಿಸಬೇಕು.
ಮಕರ ರಾಶಿ
ಈ ದಿನ ನಿಮಗೆ ಶುಭವಾಗಿದೆ, ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳ್ಳಲಿದೆ. ವ್ಯಾಪಾರಿಗಳಿಗೂ ಧನ ಲಾಭವಾಗಲಿದೆ, ವ್ಯಾಪಾರದಲ್ಲಿ ಹೊಸ ತಂತ್ರಗಳನ್ನು ಮಾಡಿದರೆ ಲಾಭ ಗಳಿಸಲು ಸಾಧ್ಯವಾಗುವುದು. ನಮ್ಮ ಹಾಗೂ ಸಂಗಾತಿ ನಡುವೆ ಬಾಂಧವ್ಯ ಚೆನ್ನಾಗಿರಲಿದೆ.
ಕುಂಭ ರಾಶಿ
ಕುಂಭ ರಾಶಿಯವರಿಗೆ ಈ ದಿನ ಉತ್ತಮವಾಗಿದೆ, ಆದರೆ ಆರೋಗ್ಯ ಸಂಬಂಧಿಸಿದ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡಬೇಡಿ, ಹೊರಗಡೆಯ ಆಹಾರ ಸೇವಿಸಬೇಡಿ. ವ್ಯಾಪಾರಿಗಳು ತಮ್ಮ ವ್ಯಾಪಾರ ವೃದ್ಧಿಸಲು ಸರಿಯಾದ ಯೋಜನೆ ಮಾಡಬೇಕು. ಮನೆಯ ವಾತಾವರಣ ಚೆನ್ನಾಗಿರಲಿದೆ.
ಮೀನ ರಾಶಿ
ಕೆಲಸದಲ್ಲಿ ಕೆಲ ಅಡೆತಡೆ ಎದುರಿಸಬಹುದು, ವ್ಯಾಪಾರಿಗಳಿಗೆ ಈ ದಿನ ಹಣ ಲಾಭ ಗಳಿಸಲುಸಾಧ್ಯವಾಗುವುದು. ಆರ್ಥಿಕವಾಗಿ ನೋಡುವುದಾದರೆ ಈ ದಿನ ಸರಾಸರಿಯಾಗಿರಲಿದೆ. ಆರೋಗ್ಯದ ಕಡೆಗೆ ಗಮನಹರಿಸಬೇಕು, ಕುಟುಂಬ ಜೀವನ ಚೆನ್ನಾಗಿರಲಿದೆ, ಈ ದಿನ ಆರ್ಥಿಕವಾಗಿಯೂ ಉತ್ತಮವಾಗಿರಲಿದೆ.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications