Latest Updates
-
ಅಕ್ಟೋಬರ್ 2 ಡ್ರೈ ಡೇ: ಮದ್ಯ ಸಿಗಲ್ಲ, ಪಾರ್ಟಿ ಪ್ಲಾನ್ ಬದಲಿಸಿ! ಸುರಕ್ಷಿತವಾಗಿ ಸಂಭ್ರಮಿಸುವುದು ಹೇಗೆ? -
IMD ಅಲರ್ಟ್: ದಕ್ಷಿಣ ಭಾರತದಲ್ಲಿ ಭಾರಿ ಮಳೆ, ಬಿರುಗಾಳಿ - ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ಕೇವಲ ₹100ರಲ್ಲಿ ದಿನಕ್ಕೆ 80 ಗ್ರಾಂ ಪ್ರೋಟೀನ್: ಸಸ್ಯಾಹಾರಿಗಳಿಗಾಗಿ ಇಲ್ಲಿದೆ ಪಕ್ಕಾ ದೇಸಿ ಡಯಟ್ ಪ್ಲಾನ್! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್!
ಆಗಸ್ಟ್‌ನಲ್ಲಿದೆ ತ್ರಿಗ್ರಹಿ, ಚತುರ್ಗಹಿ ಯೋಗ: ಈ ಮೂರು ರಾಶಿಯವರಿಗೆ ಆರ್ಥಿಕವಾಗಿ ಒಳ್ಳೆಯದು
ನವಗ್ರಹಗಳಲ್ಲಿ ಪ್ರತಿಯೊಂದು ಗ್ರಹದ ಸಂಚಾರವೂ ನಮ್ಮ ಮೇಲೆ ಪರಿಣಾಮ ಬೀರುತ್ತದೆ. ಈ ಆಗಸ್ಟ್‌ನಲ್ಲಿ ಸಿಂಹ ರಾಶಿಯಲ್ಲಿ ಚತುರ್ಗಹಿ ಯೋಗ ಉಂಟಾಗಿದೆ. ಇದು ತುಂಬಾನೇ ಶುಭ ಯೋಗವಾಗಿದೆ. ಆಗಸ್ಟ್‌ನಲ್ಲಿ ಬುಧ, ಸೂರ್ಯ, ಶುಕ್ರ, ಚಂದ್ರ ಒಂದೇ ರಾಶಿಯಲ್ಲಿ ಇರಲಿದೆ. ಈ ಯೋಗವನ್ನು ಸಂಪತ್ತಿನ ಯೋಗವವೆಂದು ಕರೆಯಲಾಗುವುದು, ಈ ಯೋಗ ಕೆಲ ರಾಶಿಗಳಿಗಂತೂ ಅದ್ಭುತವಾಗಿದೆ, ಈ ಅವಧಿಯಲ್ಲಿ ಉತ್ತಮ ಪ್ರಯೋಜನ ಪಡೆಯುತ್ತೀರಿ.

ಈಗಾಗಲೇ ಬುಧನು ಸಿಂಹ ರಾಶಿಯಲ್ಲಿಯೇ ಇದೆ, ಜುಲೈ 19ಕ್ಕೆ ಸಿಂಹ ರಾಶಿಗೆ ಸಂಚರಿಸಿರುವ ಬುಧ ಆಗಸ್ಟ್ 22ರವರೆಗೆ ಇರಲಿದೆ.
ಸಿಂಹರಾಶಿಗೆ ಬುಧದ ಸಾಗಣೆಯು 19 ಜುಲೈ 2024 ರಂದು 20:31 ಕ್ಕೆ ನಡೆದಿದೆ. ಆಗಸ್ಟ್ 22 ರವರೆಗೆ ಬುಧ ಈ ರಾಶಿಯಲ್ಲಿ ಇರುತ್ತಾನೆ. ಸೂರ್ಯನು ಆಗಸ್ಟ್ 16ಕ್ಕೆ ಸಿಂಹ ರಾಶಿಗೆ ಸಂಚರಿಸಿದೆ, ಜುಲೈ 31ಕ್ಕೆ ಶುಕ್ರನು ಸಿಂಹ ರಾಶಿಗೆ ಸಂಚರಿಸಲಿದೆ, ಇದೇ ರಾಶಿಗೆ ಚಂದ್ರ ಕೂಡ ಸಂಚರಿಸಿದಾಗ ಚತುರ್ಗಹಿ ಯೋಗ ಉಂಟಾಗಿದೆ. ಈ ಯೋಗದಿಂದಾಗಿ ಈ ರಾಶಿಯವರಿಗೆ ಅನುಕೂಲಕರವಾಗಿದೆ:
ಸಿಂಹ ರಾಶಿ ಅನುಕೂಲ
ಸಿಂಹ ರಾಶಿಯ ಮೊದಲ ಮನೆಯಲ್ಲಿ ಚತುರ್ಗಹಿ ಉಂಟಾಗಿದೆ, ಈ ಅವಧಿ ನಿಮ್ಮ ಅನುಕೂಲಕರ,ವೃತ್ತಿ ಬದುಕಿನಲ್ಲಿ ಬದಲಾವಣೆಯ ಬಗ್ಗೆ ಯೊಚಿಸುತ್ತಿದ್ದರೆ ಈ ಸಮಯದಲ್ಲಿ ನೆರವೆರಲಿದೆ. ವೃತ್ತಿ ಬದುಕಿನಲ್ಲಿ ಯಶಸ್ಸು ದೊರೆಯಲಿದೆ, ನೀವು ಬಯಸಿದ ಬಡ್ತಿ ಸಿಗುವ ಕಾರಣ ಖುಷಿಯಾಗಿರುತ್ತೀರಿ, ಹೊಸ ಕಾರ್ಯದಲ್ಲಿ ತೊಡಗಿಕೊಳ್ಳಲು ಈ ಅವಧಿ ಉತ್ತಮವಾಗಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ, ವೈವಾಹಿಕ ಬದುಕಿನಲ್ಲಿ ಪ್ರೀತಿ, ಹೊಂದಾಣಿಕೆ ಇರಲಿದೆ.
ಧನು ರಾಶಿ
ಧನು ರಾಶಿಯವರು ಈ ಚತುರ್ಗಹಿ ಯೋಗದಿಂದಾಗಿ ಅತ್ಯುತ್ತಮ ಪ್ರಯೋಜನ ಪಡೆಯುತ್ತೀರಿ. ಈ ಸಮಯದಲ್ಲಿ ನಿಮ್ಮ ಕೆಲಸ ಕಾರ್ಯಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲು ಸಾಧ್ಯವಾಗುವುದು, ಈ ಅವಧಿಯಲ್ಲಿ ನಿಮ್ಮ ಸಂಪತ್ತು ಹೆಚ್ಚಾಗಲಿದೆ. ಯಾವುದಾದರೂ ಒಂದು ಕೆಲಸ ಪ್ರಾರಂಭಿಸಿದರೆ ಅದನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಸಾಧ್ಯವಾಗುವುದು. ಕುಟುಂಬ ಜೀವನ ಚೆನ್ನಾಗಿರಲಿದೆ, ಕುಟುಂಬದಲ್ಲಿ ಶುಭ ಕಾರ್ಯಗಳು ನಡೆಯಲಿದೆ. ವ್ಯಾಪಾರಿಗಳಂತೂ ಈ ಸಮಯದಲ್ಲಿ ಉತ್ತಮ ಆರ್ತಿಕ ಪ್ರಯೋಜನ ಪಡೆಯುತ್ತೀರಿ.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯವರಿಗೂ ಚತುರ್ಗಹಿ ಯೋಗವು ಹೆಚ್ಚಿನ ಪ್ರಯೋಜನ ನೀಡಲಿದೆ, ಈ ಅವಧಿಯಲ್ಲಿ ಆರ್ಥಿಕವಾಗಿ ಬೆಳವಣಿಗೆಯನ್ನು ಕಾಣುತ್ತೀರಿ, ಹೂಡಿಕೆ ಮಾಡಿದ್ದರೆ ಹಣ ಗಳಿಸಲು ಸಾಧ್ಯವಾಗುವುದು, ವ್ಯಾಪಾರಿಗಳು ತಮ್ಮ ವ್ಯವಹಾರದಲ್ಲಿ ಅತ್ಯುತ್ತಮ ಪ್ರಯೋಜನ ಪಡೆಯುತ್ತೀರಿ. ಇನ್ನು ಕೆಲಸ ಹುಡುಕುತ್ತಿದ್ದರೆ ಈ ಸಮಯದಲ್ಲಿ ನೀವು ಬಯಸಿದ ಕೆಲಸ ಪಡೆಯುತ್ತೀರಿ. ಹೊಸ ವ್ಯಾಪಾರ ಪ್ರಾರಂಭಿಸಬೇಕು ಅಥವಾ ವ್ಯವಹಾರ ವಿಸ್ತರಣೆ ಮಾಡಬೇಕೆಂದು ಇರುವವರೆಗೆ ಈ ಸಮಯ ಚೆನ್ನಾಗಿರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
