Latest Updates
-
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು?
ಮೀನ ರಾಶಿಯಲ್ಲಿ ಶುಕ್ರ-ಚಂದ್ರನ ಸಮ್ಮಿಲನ; ಅಪರೂಪದ ಕಲಾತ್ಮಕ ಯೋಗ ಸೃಷ್ಟಿ!
ಜ್ಯೋತಿಷ್ಯದಲ್ಲಿ ಶುಕ್ರನನ್ನು ರಾಕ್ಷಸರ ಗುರು ಎಂದು ಕರೆಯಲಾಗಿದೆ. ಶುಕ್ರನ ಸಂಚಾರದಲ್ಲಿನ ಬದಲಾವಣೆಯು ಹಲವು ರಾಶಿಗಳ ಮೇಲೆ ಪರಿಣಾಮ ಉಂಟು ಮಾಡುತ್ತದೆ. ಶುಕ್ರನನ್ನು ಐಷಾರಾಮಿ, ಸೌಂದರ್ಯ, ಪ್ರೀತಿ, ಸಂಪತ್ತು ಮತ್ತು ಸಮೃದ್ಧಿಯ ಕಾರಣಕ್ಕೆ ಬಹಳ ವಿಶೇಷ ಗ್ರಹವೆಂದು ಹೇಳಲಾಗಿದೆ. ಶುಕ್ರನು ವೃಷಭ ಮತ್ತು ತುಲಾ ರಾಶಿಯ ಅಧಿಪತಿ. ಅಂತಹ ಶುಕ್ರನು ಮಾರ್ಚ್ 02 ರಂದು ಗುರು ರಾಶಿಯಾಗಿರುವ ಮೀನ ರಾಶಿಗೆ ಪ್ರವೇಶಿಸಿದ್ದಾನೆ.
ಈ ಮೀನ ರಾಶಿಯು ಶುಕ್ರನ ಅತ್ಯುನ್ನತ ರಾಶಿಯಾಗಿದೆ. ಈ ರಾಶಿಯಲ್ಲಿ ಶುಕ್ರನು ಎರಡು ಪಟ್ಟು ಬಲದೊಂದಿಗೆ ತನ್ನ ಪ್ರಭಾವ ಉಂಟು ಮಾಡುವುದು ನೋಡಬಹುದು. ಆದ್ರೆ ಇದೇ ಸಮಯದಲ್ಲಿ ಚಂದ್ರನು ಕೂಡ ಶುಕ್ರನೊಂದಿಗೆ ಸಂಯೋಗವಾಗುತ್ತಿದ್ದಾನೆ. ಇದೇ ಮಾರ್ಚ್ 16ರಂದು ಚಂದ್ರನು ಕೂಡ ಮೀನ ರಾಶಿ ಪ್ರವೇಶಿಸುತ್ತಿದ್ದಾನೆ.

ಹೀಗಾಗಿ ಮೀನ ರಾಶಿಯಲ್ಲಿ ಅಪರೂಪಕ್ಕೆ ಶುಕ್ರ ಮತ್ತು ಚಂದ್ರನ ಸಮ್ಮಿಲನವಾಗುತ್ತಿದೆ. ಇದು ಕಲಾತ್ಮಕ ಯೋಗಕ್ಕೆ ಕಾರಣವಾಗುತ್ತಿದೆ. ಈ ಯೋಗವು ಹಲವು ರಾಶಿಗಳಿಗೆ ಅನುಕೂಲಕರ ವಿದ್ಯಮಾನಗಳ ತರಲಿದೆ. ಈ ಯೋಗವು ಅತ್ಯಂತ ಶುಭ ಯೋಗಗಳಲ್ಲಿ ಒಂದಾಗಿದೆ. ಈ ರಾಜಯೋಗದ ಪ್ರಭಾವವು ಮೇಷ ರಾಶಿಯಿಂದ ಮೀನ ರಾಶಿಯವರೆಗಿನ ಎಲ್ಲಾ ರಾಶಿ ಜನರ ಮೇಲೆಯೂ ಪ್ರಭಾವ ಉಂಟು ಮಾಡಲಿದೆ.
ಮೀನ ರಾಶಿ
ಮೀನ ರಾಶಿಯ ಮೊದಲ ಮನೆಯಲ್ಲಿ ಶುಕ್ರ ಮತ್ತು ಚಂದ್ರನ ಸಂಯೋಜನೆಯು ಕಲಾತ್ಮಕ ರಾಜಯೋಗವನ್ನು ಸೃಷ್ಟಿಸುತ್ತದೆ. ಈ ಯೋಗವು ಜೀವನದಲ್ಲಿ ಹೊಸ ಬದಲಾವಣೆಯನ್ನು ತರುತ್ತದೆ. ಕೆಲಸ ಮಾಡುವವರಿಗೆ ಬಡ್ತಿ ಮತ್ತು ಸಂಬಳ ಹೆಚ್ಚಳದ ಸಾಧ್ಯತೆಗಳಿವೆ. ಅಲ್ಲದೆ ನಿಮ್ಮ ಕಠಿಣ ಪರಿಶ್ರಮದ ಕಾರಣಕ್ಕೆ ಉತ್ತಮ ಪ್ರತಿಫಲಗಳ ಪಡೆಯುವ ಸಮಯ ಇದಾಗುತ್ತಿದೆ. ಅದ್ರಲ್ಲೂ ನಿಮಗೆ ಬಹು ಸಮಯದಿಂದ ಬರಬೇಕಿದ್ದ ವಸ್ತು ಅಥವಾ ಹಣ ನಿಮ್ಮ ಕೈ ಸೇರುವ ಸಮಯ. ಜೀವನದಲ್ಲಿ ಪ್ರಮುಖ ಸುಧಾರಣೆಗಳನ್ನು ನೋಡಬಹುದು. ವ
ಮಿಥುನ ರಾಶಿ
ಮಿಥುನ ರಾಶಿಯ 10 ನೇ ಮನೆಯಲ್ಲಿ ಶುಕ್ರ ಮತ್ತು ಚಂದ್ರನ ಸಂಯೋಜನೆಯು ಕಲಾಾತ್ಮಕ ರಾಜಯೋಗವನ್ನು ಸೃಷ್ಟಿಸುತ್ತದೆ. ಇದರಿಂದಾಗಿ ಈ ರಾಶಿ ಜನರ ಜೀವನದಲ್ಲಿ ಸಕಾರಾತ್ಮಕ ಫಲಿತಾಂಶಗಳನ್ನು ಪಡೆಯುತ್ತವೆ. ನೀವು ಕೆಲಸ ಮತ್ತು ವ್ಯವಹಾರದಲ್ಲಿ ಉತ್ತಮ ಪ್ರಗತಿಯನ್ನು ನೋಡುತ್ತೀರಿ. ವ್ಯವಹಾರದಲ್ಲಿ ನೀವು ಅನುಭವಿಸಿದ್ದ ಅಡ್ಡಿಯು ನಿವಾರಣೆಯಾಗಲಿದೆ. ವ್ಯಾಪಾರ ಸಂಬಂಧವಾಗಿ ನಿಮಗೆ ಲಾಭದಾಯಕ ದಿನಗಳಿವೆ. ದೈನಂದಿನ ಕೆಲಸ ಕಾರ್ಯಗಳಲ್ಲಿ ನೀವು ಬಯಸಿದ ಫಲಿತಾಂಶ ಪಡೆಯಬಹುದು.
ವೃಷಭ ರಾಶಿ
ಮಿಥುನ ರಾಶಿಯ 11 ನೇ ಮನೆಯಲ್ಲಿ ಶುಕ್ರ ಮತ್ತು ಚಂದ್ರನ ಸಂಯೋಜನೆಯು ಕಲಾತ್ಮಕ ರಾಜಯೋಗವನ್ನು ಸೃಷ್ಟಿಸುತ್ತದೆ. ಇದು ವೃಷಭ ರಾಶಿಯವರ ಆದಾಯವನ್ನು ಹೆಚ್ಚಿಸುತ್ತದೆ. ಹೊಸ ಆದಾಯದ ಮೂಲಗಳನ್ನು ಸೃಷ್ಟಿಸಲು ಅವಕಾಶಗಳಿವೆ. ಉದ್ಯಮಿಗಳು ತಮ್ಮ ವ್ಯವಹಾರವನ್ನು ವಿಸ್ತರಿಸಲು ಅವಕಾಶಗಳನ್ನು ಪಡೆಯುತ್ತಾರೆ. ಹೊಸ ಉದ್ಯೋಗ ಅಥವಾ ಉದ್ಯಮ ಉತ್ತಮವಾಗಿರಲಿದೆ. ಸಮಾಜದಲ್ಲಿ ನಿಮ್ಮ ಗೌರವ ಮತ್ತು ಘನತೆ ಹೆಚ್ಚಾಗಲಿದೆ. ನಿಮ್ಮ ಹಣಕಾಸಿನ ವಿಚಾರದಲ್ಲಿದ್ದ ಒತ್ತಡ ಕಡಿಮೆಯಾಗಲಿದೆ.
ಧನು ರಾಶಿ
ಧನು ರಾಶಿಯ 4 ನೇ ಮನೆಯಲ್ಲಿ ಶುಕ್ರ ಮತ್ತು ಚಂದ್ರನ ಸಂಯೋಜನೆಯು ಕಲಾತ್ಮಕ ರಾಜಯೋಗವನ್ನು ಸೃಷ್ಟಿಸುತ್ತದೆ. ಇದರಿಂದಾಗಿ ಧನು ರಾಶಿಯ ಜನರಿಗೆ ಬಹು ಸಮಯದ ಬಯಕೆಗಳು ಈಡೇರಲಿದೆ. ವಾಹನ ಲಾಭವಿದೆ. ವಿದೇಶ ಪ್ರಯಾಣಕ್ಕೆ ಅವಕಾಶಗಳಿವೆ. ವಿದೇಶಗಳಿಗೆ ಸಂಬಂಧಿಸಿದ ವ್ಯವಹಾರ ಮಾಡುವವರು ಉತ್ತಮ ಲಾಭವನ್ನು ಗಳಿಸುವ ಸಾಧ್ಯತೆಯಿದೆ. ಯಾರಿಂದಾದರು ಹಣ ಪಡೆಯುವುದು ಬಾಕಿ ಉಳಿದಿದ್ದರೂ ಕೂಡ ಈ ಸಮಯದಲ್ಲಿ ಹಣ ಪಡೆಯುವ ಸಾಧ್ಯತೆ ಹೆಚ್ಚಾಗುತ್ತದೆ.
(ಹಕ್ಕುತ್ಯಾಗ: ಮೇಲೆ ನೀಡಲಾದ ಮಾಹಿತಿಯು ಅಂತರ್ಜಾಲದಲ್ಲಿ ಲಭ್ಯವಿರುವ ಊಹೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ ಮತ್ತು ಅದು ವಿಶ್ವಾಸಾರ್ಹವಾಗಿರುತ್ತದೆ ಎಂದು ಖಾತರಿಪಡಿಸುವುದಿಲ್ಲ. ಕನ್ನಡ ಬೋಲ್ಡ್ ಸ್ಕೈ ಈ ಲೇಖನಕ್ಕೆ ಸಂಬಂಧಿಸಿದ ಮಾಹಿತಿಯನ್ನು ದೃಢೀಕರಿಸಿಲ್ಲ. ಮತ್ತು ಮಾಹಿತಿಯನ್ನು ಒದಗಿಸುವುದು ನಮ್ಮ ಏಕೈಕ ಉದ್ದೇಶವಾಗಿದೆ)



Click it and Unblock the Notifications
