Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
ಕರ್ಕ ರಾಶಿಗೆ ಶುಕ್ರ ಸಂಚಾರದಿಂದ ಈ 5 ರಾಶಿಯವರಿಗೆ ತುಂಬಾನೇ ಅದೃಷ್ಟಕರ
ಶುಕ್ರನನ್ನು ಅದೃಷ್ಟದ ಗ್ರಹವೆಂದು ಪರಿಗಣಿಸಲಾಗುವುದು, ಈ ಶುಕ್ರ ನಮ್ಮ ರಾಶಿಯಲ್ಲಿ ಅನುಕೂಲಕರ ಸ್ಥಾನದಲ್ಲಿದ್ದರೆ ತುಂಬಾನೇ ಉತ್ತಮ ಪ್ರಯೋಜನ ಪಡೆಯುತ್ತೀವಿ.
ಇದೀಗ ಜುಲೈ 7ಕ್ಕೆ ಶುಕ್ರ ಕರ್ಕ ರಾಶಿಗೆ ಸಂಚರಿಸಿದಾಗ ಅದರ ಪ್ರಭಾವ ಕೆಲ ರಾಶಿಗಳಿಗೆ ತುಂಬಾನೇ ಅದ್ಭುತವಾಗಿರಲಿದೆ. ಈ ಅವಧಿಯಲ್ಲಿ ವೃತ್ತಿ ಬದುಕು, ಆರ್ಥಿಕ ಬದುಕು ತುಂಬಾನೇ ಚೆನ್ನಾಗಿರಲಿದೆ. ಶುಕ್ರನ ಈ ಸಂಚಾರದ ಸಮಯ ಈ 5 ರಾಶಿಗಳಿಗೆ ಹೆಚ್ಚು ಅನುಕೂಲಕರವಾಗಿದೆ:

ಮಿಥುನ ರಾಶಿ
ಮಿಥುನ ರಾಶಿಯವರಿಗೆ ಶುಕ್ರ ಐದನೇ ಮತ್ತು ಹನ್ನೆರಡನೇ ಮನೆಯ ಅಧಿಪತಿ, ಜುಲೈ 7ರಿಂದ ಶುಕ್ರ 2ನೇ ಮನೆಯಲ್ಲಿಇರಲಿದೆ. ಈ ಅವಧಿ ತುಂಬಾ ಚೆನ್ನಾಗಿರಲಿದೆ. ಆರ್ಥಿಕವಾಗಿ ತುಂಬಾನೇ ಪ್ರಯೋಜನ ಪಡೆಯುತ್ತೀರಿ. ನೀವು ಕೆಲಸ ಬದಲಾಯಿಸಲು ಯೋಚಿಸುತ್ತಿದ್ದರೆ ಈ ಅವಧಿ ತುಂಬಾ ಚೆನ್ನಾಗಿರಲಿದೆ, ಈ ಸಮಯದಲ್ಲಿ ನೀವು ಒಳ್ಳೆಯ ಕಡೆ ಕೆಲಸ ಗಳಿಸುವಲ್ಲಿ ಯಶಸ್ವಿಯಾಗುತ್ತೀರಿ. ವೈವಾಹಿಕ ಜೀವನದಲ್ಲಿ ಪ್ರೀತಿ ಹೊಂದಾಣಿಕೆ ಇರಲಿದೆ, ವ್ಯಾಪಾರಿಗಳು ಉತ್ತಮ ಲಭ ಗಳಿಸುತ್ತಾರೆ. ಈ ಅವಧಿಯಲ್ಲಿ ಆರೋಗ್ಯ ಚೆನ್ನಾಗಿರಲಿದೆ.
ಕರ್ಕ ರಾಶಿ
ಜುಲೈ 7ಕ್ಕೆ ಶುಕ್ರ ನಿಮ್ಮ ಲಗ್ನ ಮನೆಗೆ ಸಂಚರಿಸಲಿದೆ. ಈ ಅವಧಿ ಆರ್ಥಿಕವಾಗಿ ಉತ್ತಮವಾಗಿದೆ, ನಿಮ್ಮ ಮನೆಯಲ್ಲಿ ಸೌಕರ್ಯಗಳು ಹೆಚ್ಚಾಗಲಿದೆ. ವೃತ್ತಿ ಬದುಕಿನಲ್ಲಿ ಯಶಸ್ಸು ಗಳಿಸುತ್ತೀರಿ. ವ್ಯಾಪಾರಿಗಳಿಗೆ ಈ ಅವಧಿ ತುಂಬಾ ಒಳ್ಳೆಯದಿದೆ, ನೀವು ಉತ್ತಮ ಆರ್ಥಿಕ ಲಾಭ ಪಡೆಯುತ್ತೀರಿ. ಇನ್ನು ಸಂಬಂಧದ ದೃಷ್ಟಿಯಿಂದ ನೋಡುವುದಾದರೂ ಈ ಸಮಯ ತುಂಬಾನೇ ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ ಕೂಡ ಈ ಅವಧಿ ತುಂಬಾ ಉತ್ತಮವಾಗಿರುತ್ತದೆ.
ಕನ್ಯಾ ರಾಶಿ
ಶುಕ್ರ ಕರ್ಕ ರಾಶಿಯಲ್ಲಿ ಇರುವಾಗ ಕನ್ಯಾ ರಾಶಿಯಲ್ಲಿ 11ನೇ ಮನೆಯಲ್ಲಿ ಇರಲಿದೆ. ಶುಕ್ರನ ಈ ಸಂಚಾರ ನಿಮಗೆ ಉತ್ತಮ ಫಲಿತಾಂಶ ಸಿಗಲಿದೆ. ವೃತ್ತಿ ಜೀವನದಲ್ಲಿ ನಿಮ್ಮ ಗುರಿ ಮುಟ್ಟುವಲ್ಲಿ ಯಶಸ್ವಿಯಾಗುತ್ತೀರಿ. ವ್ಯಾಪಾರಿಗಳು ಉತ್ತಮ ಧನಲಾಭ ಪಡೆಯುತ್ತೀರಿ. ಹೊಸ ವ್ಯಾಪಾರ ವ್ಯವಹಾರಗಳು ನಡೆಯುವುದರಿಂದ ಆರ್ಥಿಕ ಪ್ರಯೋಜನ ಪಡೆಯುತ್ತೀರಿ. ಈ ಸಮಯದಲ್ಲಿ ಹಣ ಉಳಿತಾಯ ಮಾಡಲು ಸಾಧ್ಯವಾಗುವುದು. ಅಲ್ಲದೆ ಹೂಡಿಕೆ ಮಾಡುವುದಾದರೆ ಅದಕ್ಕೂ ಈ ಸಮಯ ಚೆನ್ನಾಗಿದೆ. ನಿಮ್ಮ ಆರೋಗ್ಯ ಚೆನ್ನಾಗಿರಲಿದೆ.
ಮಕರ ರಾಶಿ
ಜುಲೈ 7ಕ್ಕೆ ಶುಕ್ರ ಕರ್ಕ ರಾಶಿಗೆ ಸಂಚರಿಸಿದಾಗ ಮಕರ ರಾಶಿಯ 7ನೇ ಮನೆಯಲ್ಲಿ ಶುಕ್ರ ಇರುತ್ತಾನೆ. ಶುಕ್ರನ ಈ ಸ್ಥಾನ ನಿಮಗೆ ತುಂಬಾನೇ ಪ್ರಯೋಜನಕಾರಿಯಾಗಿದೆ. ವೃತ್ತಿ ಬದುಕಿನಲ್ಲಿ ಉತ್ತಮ ಯಶಸ್ಸು ದೊರೆಯಲಿದೆ. ಇನ್ನು ಕೆಲಸ ಹುಡುಕುತ್ತಿದ್ದರೆ ಉತ್ತಮ ಉದ್ಯೋಗಾವಕಾಶಗಳನ್ನು ಪಡೆಯುತ್ತೀರಿ. ವ್ಯಾಪಾರಿಗಳು ಈ ಸಮಯದಲ್ಲಿ ಉತ್ತಮ ಆರ್ಥಿಕ ಪ್ರಯೋಜನ ಪಡೆಯುತ್ತೀರಿ. ಈ ಅವಧಿಯಲ್ಲಿ ಆರ್ಥಿಕ ಪ್ರಗತಿ ಇರುವುದರಿಂದ ನಿಮ್ಮ ಆಸೆಯ ವಸ್ತುಗಳನ್ನುಖರೀದಿಸಲು ಸಾಧ್ಯವಾಗುವುದು. ಆದರೆ ನೀವು ಕುಟುಂಬದ ಕಡೆಗೆ ಗಮನಹರಿಸಬೇಕು. ಸಂಗಾತಿ ಹಾಗೂ ನಿಮ್ಮ ನಡುವೆ ಭಿನ್ನಾಭಿಪ್ರಾಯ ಉಂಟಾದರೆ ಮಾತಿನ ಮೂಲಕ ಬಗೆಹರಿಸಲು ಪ್ರಯತ್ನಿಸಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
