Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಡಿಸೆಂಬರ್ 2ರಿಂದ ಮಕರ ರಾಶಿಯಲ್ಲಿ ಶುಕ್ರ ಸಂಚಾರ: ಶುಕ್ರನ ಪ್ರಭಾವ ಯಾವ ರಾಶಿಗೆ ಹೇಗಿದೆ?
ಅದೃಷ್ಟದ ಗ್ರಹ ಶುಕ್ರನು ಡಿಸೆಂಬರ್ 2ಕ್ಕೆ ಮಕರ ರಾಶಿಗೆ ಪ್ರವೇಶಿಸಲಿದೆ, ಹೀಗೆ ಪ್ರವೇಶ ಮಾಡಿದಾಗ ಮಕರ ರಾಶಿಯಲ್ಲಿ ಶುಕ್ರನು ಇರುವಷ್ಟು ದಿನ ದ್ವಾದಶ ರಾಶಿಗಳಲ್ಲಿ ಶುಕ್ರನ ಪ್ರಭಾವ ಹೀಗಿರಲಿದೆ:
ಮೇಷ ರಾಶಿ
ಶುಕ್ರ ಮಕರ ರಾಶಿಗೆ ಸಂಚರಿಸಿದಾಗ ಮೇಷ ರಾಶಿಯಲ್ಲಿ 10ನೇ ಮನೆಯಲ್ಲಿ ಇರಲಿದೆ, ಇದು ಕರ್ಮದ ಮನೆಯಾಗಿದ್ದು ವೃತ್ತಿ ಬದುಕಿಗೆ ಈ ಶುಕ್ರ ಸಂಚಾರ ತುಂಬಾನೇ ಅನುಕೂಲಕರವಾಗಿರಲಿದೆ. ಹಣಕಾಸಿನ ದೃಷ್ಟಿಯಿಂದ ನೋಡುವುದಾದರೆ ಈ ಅವಧಿ ಅನುಕೂಲಕರವಾಗಿರಲಿದೆ. ಶುಕ್ರನ ಪ್ರಭಾವ ಕುಟುಂಬ ಜೀವನ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ.

ವೃಷಭ ರಾಶಿ
ವೃಷಭ ರಾಶಿ ಶುಕ್ರ 9ನೇ ಮನೆಯಲ್ಲಿರುವಾಗ ಅದೃಷ್ಟಕ್ಕೆ ಯಾವ ಕೊರತೆಯೂ ಇರಲ್ಲ, ಈ ಅವಧಿಯಲ್ಲಿ ವೃತ್ತಿ ಬದುಕು ಚೆನ್ನಾಗಿರಲಿದೆ. ಅಪೂರ್ಣವಾಗಿರುವ ಕೆಲಸ ಪೂರ್ಣವಾಗಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ, ಆರೋಗ್ಯ ಕೂಡ ಉತ್ತಮವಾಗಿರಲಿದೆ.
ಮಿಥುನ ರಾಶಿ
ಮಿಥುನ ರಾಶಿಯಲ್ಲಿ ಶುಕ್ರನು 8ನೇ ಮನೆಯಲ್ಲಿ ಇರಲಿದೆ, ಈ ಸ್ಥಾನ ಅಷ್ಟೊಂದು ಅನುಕೂಲಕರವಲ್ಲ. ಕೆಲಸದ ಜಾಗದಲ್ಲಿ ಒಳ ರಾಜಕೀಯಕ್ಕೆ ಬಲಿಯಾಗದಂತೆ ಜಾಗ್ರತೆವಹಿಸಬೇಕು. ಹಣಕಾಸಿನ ದೃಷ್ಟಿಯಿಂದ ನೋಡುವುದಾದರೆ ನಿಮಗೆ ಅನುಕೂಲಕರವಾಗಿರಲಿದೆ. ನ್ಯಾಯಾಲಯದಲ್ಲಿ ಪ್ರಕರಣವಿದ್ದರೆ ಅದರ ತೀರ್ಪು ನಿಮ್ಮ ಪರವಾಗಿ ಬರಲಿದೆ.
ಕರ್ಕ ರಾಶಿ
ಡಿಸೆಂಬರ್ 2ರಿಂದ ಶುಕ್ರನು ಕರ್ಕ ರಾಶಿಯಲ್ಲಿ 7ನೇ ಮನೆಯಲ್ಲಿ ಇರಲಿದೆ. ಈ ಸ್ಥಾನ ವೃತ್ತಿ ಬದುಕು ಹಾಗೂ ವೈಯಕ್ತಿಕ ಬದುಕಿಗೆ ಅನುಕೂಲಕರವಾಗಿದೆ. ವೃತ್ತಿ ಬದುಕಿನಲ್ಲಿ ಪ್ರಗತಿ ಕಂಡು ಬರಲಿದೆ. ವ್ಯಾಪಾರಿಗಳು ಲಾಭ ಗಳಿಸುತ್ತೀರಿ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ.
ಸಿಂಹ ರಾಶಿ
ಸಿಂಹ ರಾಶಿಯಲ್ಲಿ ಶುಕ್ರ 6ನೇ ಮನೆಯಲ್ಲಿ ಇರಲಿದೆ. ಈ ಅವಧಿಯಲ್ಲಿ ನೀವು ಆರೋಗ್ಯದ ಕಡೆಗೆ ಹೆಚ್ಚು ಗಮನಹರಿಸಬೇಕು. ಅಲ್ಲದೆ ವೃತ್ತಿ ಬದುಕಿನಲ್ಲ ನಿಮ್ಮ ಶತ್ರುಗಳ ಬಗ್ಗೆ ಜಾಗ್ರತೆಯಿಂದಿರಬೇಕು, ಹಣದ ಖರ್ಚು ಹೆಚ್ಚಿರಲಿದೆ.
ಕನ್ಯಾ ರಾಶಿ
ಈ ಶುಕ್ರ ಸಂಚಾರ ಕನ್ಯಾ ರಾಶಿಯವರಿಗೆ ಅನುಕೂಲಕರವಾಗಿದೆ. ವಿದ್ಯಾರ್ಥಿಗಳಿಗೆ ಈ ಅವಬಧಿ ತುಂಬಾನೇ ಚೆನ್ನಾಗಿರಲಿದೆ, ಗ್ರಹದ ಸ್ಥಾನ ಬಲವಾಗಿರುವುದರಿಂದ ವೃತ್ತಿ ಬದುಕು ಹಾಗೂ ಆರ್ಥಿಕ ಬದುಕಿನಲ್ಲಿ ಉತ್ತಮ ಪ್ರಯೋಜನ ಪಡೆಯುತ್ತೀರಿ.
ತುಲಾ ರಾಶಿ
ತುಲಾ ರಾಶಿಯವರಲ್ಲಿ ಶುಕ್ರ ನಾಲ್ಕನೇ ಮನೆಯಲ್ಲಿರುವುದರಿಂದ ಈ ಸಂಚಾರ ನಿಮಗೆ ಅನುಕೂಲಕರವಾಗಿರಲಿದೆ. ಆಸ್ತಿಯಲ್ಲಿ ಹೂಡಿಕೆ ಮಾಡಲು ಈ ಅವಧಿ ಅನುಕೂಲಕರವಾಗಿದೆ. ಆರ್ಥಿಕವಾಗಿ ಈ ಅವಧಿ ಉತ್ತಮವಾಗಿದೆ, ವ್ಯಾಪಾರಿಗಳು ಉತ್ತಮ ಲಾಭ ಪಡೆಯಬಹುದು.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯಲ್ಲಿ ಶುಕ್ರ 3ನೇ ಮನೆಯಲ್ಲಿ ಇರಲಿದೆ, ಶುಕ್ರ ಗ್ರಹದ ಬಲದಿಂದ ಕಷ್ಟದ ಕೆಲಸವನ್ನು ಕೂಡ ಸುಲಭದಲ್ಲಿ ಮಾಡಿ ಮುಗಿಸಲು ಸಾಧ್ಯವಾಗುವುದು, ಆರ್ಥಿಕವಾಗಿ ಈ ಅವಧಿ ತುಂಬಾ ಉತ್ತಮವಾಗಿದೆ, ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ.
ಧನು ರಾಶಿ
ಧನು ರಾಶಿಯಲ್ಲಿ ಶುಕ್ರನು 2ನೇ ಮನೆಯಲ್ಲಿ ಇರಲಿದೆ, ಈ ಶುಕ್ರನ ಸಂಚಾರ ನಿಮ್ಮ ರಾಶಿಗೆ ಅನುಕೂಲಕರವಾಗಿದೆ. ನಿಮ್ಮ ಆರ್ಥಿಕ ಸ್ಥಿತಿ ಬಲಪಡಿಸಲು ಸಾಧ್ಯವಾಗುವುದು, ಅನಿರೀಕ್ಷಿತವಾಗಿ ಹಣ ಬರುವ ಸಾಧ್ಯತೆ ಕೂಡ ಇದೆ. ಕುಟುಂಬ ಜೀವನ ಚೆನ್ನಾಗಿರಲಿದೆ, ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ.
ಮಕರ ರಾಶಿ
ಶುಕ್ರನು ಮಕರ ರಾಶಿಗೆ ಸಂಚರಿಸಲಿದೆ. ಮಕರ ರಾಶಿಯಲ್ಲಿ ಶುಕ್ರ ಸಂಚಾರ ಮಾಡಿದಾಗ ಅವನು ನಿಮ್ಮ ಸೌಕರ್ಯ ಹೆಚ್ಚಿಸಲಿದ್ದಾನೆ, ಕೆಲಸ ಕಾರ್ಯಗಳನ್ನು ಸುಲಭವಾಗಿ ಮಾಡಿ ಮುಗಿಸಲು ಸಾಧ್ಯವಾಗುವುದು, ಆರ್ಥಿಕವಾಗಿ ಈ ಅವಧಿ ತುಂಬಾ ಪ್ರಯೋಜನಕಾರಿಯಾಗಿದೆ.
ಕುಂಭ ರಾಶಿ
ಕುಂಭ ರಾಶಿಯಲ್ಲಿ ಶುಕ್ರ 12ನೇ ಮನೆಗೆ ಸಂಚರಿಸಲಿದೆ. ಈ ಸಂಚಾರ ಕುಂಭ ರಾಶಿಯವರಿಗೆ ಖರ್ಚು ಹೆಚ್ಚಿಸಲಿದೆ, ಹಣಕಾಸಿನ ದೃಷ್ಟಿಯಿಂದ ಅನುಕೂಲಕರವಲಲ್ಲ, ನೀವು ಯಾವುದೇ ಹೊಸ ಯೋಜನೆ ಮಾಡಿಕೊಂಡಿದ್ದರೆ ಪ್ರಾರಂಭ ಮಾಡುವವರಿಗೆ ಯಾರ ಜೊತೆಯೂ ಹಂಚಿಕೊಳ್ಳದಿರಿ.
ಮೀನ ರಾಶಿ
ಮೀನ ರಾಶಿಯಲ್ಲಿ ಶುಕ್ರನು 11ನೇ ಮನೆಯಲ್ಲಿ ಇರಲಿದೆ. ಈ ಅವಧಿಯಲ್ಲಿ ನಿಮ್ಮ ಆದಾಯ ಉತ್ತಮವಾಗಿರಲಿದೆ. ಸಾಲ ಮಾಡಿದ್ದರೆ ಹಣವನ್ನು ಮರಳಿಸಲು ಸಾಧ್ಯವಾಗುವುದು. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಕೂಡ ಚೆನ್ನಾಗಿರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











