Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಜೂನ್ 12ಕ್ಕೆ ಮಿಥುನ ರಾಶಿಗೆ ಶುಕ್ರ ಸಂಚಾರ: ಈ 3 ರಾಶಿಯವರು ಆರ್ಥಿಕ ಬೆಳವಣಿಗೆ ಕಾಣುವಿರಿ
ಶುಕ್ರನನ್ನು ಅದಷ್ಟದ ಗ್ರಹವೆಂದು ಪರಿಗಣಿಸಲಾಗಿದೆ, ಈ ಶುಕ್ರನು ಜೂನ್ 12ಕ್ಕೆ ವೃಷಭ ರಾಶಿಯನ್ನು ಬಿಟ್ಟು ಮಿಥುನ ರಾಶಿಗೆ ಸಂಚರಿಸಲಿದೆ. ಶುಕ್ರನು ಮಿಥುನ ರಾಶಿಗೆ ಸಂಚರಿಸಿದಾಗ ಈ ಅವಧಿ ಕೆಲವೊಂದು ರಾಶಿಗಳಿಗೆ ತುಂಬಾನೇ ಅದ್ಭುತವಾಗಿರಲಿದೆ, ಈ ರಾಶಿಯವರು ತಮ್ಮ ಆರ್ಥಿಕ ಬದುಕಿನಲ್ಲಿ ಪ್ರಗತಿ ಕಾಣುತ್ತೀರಿ:

ಮಿಥುನ ರಾಶಿ
ಶುಕ್ರ ಮಿಥುನ ರಾಶಿಗೆ ಸಂಚರಿಸಿದಾಗ ಮಿಥುನ ರಾಶಿಯವರು ತುಂಬಾನೇ ಉತ್ತಮ ಪ್ರಯೋಜನ ಪಡೆಯಲಿದ್ದಾರೆ. ವೃತ್ತಿ ಬದುಕಿನ ದೃಷ್ಟಿಯಿಂದ ನಿಮಗೆ ಅದ್ಭುತವಆಗಿರಲಿದೆ, ಉದ್ಯೋಗದಲ್ಲಿ ಹೊಸ ಅವಕಾಶಗಳು ದೊರೆಯಲಿದೆ. ಉದ್ಯೋಗಿಗಳಿಗೆ ಬಡ್ತಿ ಸಿಗಬಹುದು. ವ್ಯಾಪಾರಿಗಳು ಉತ್ತಮ ಲಾಭ ಗಳಿಸುತ್ತೀರಿ.
ವೈವಾಹಿಕ ಜೀವನ ಚೆನ್ನಾಗಿರಲಿದೆ, ಸಂಗಾತಿಯೊಂದಿಗಿನ ಸಂಬಂಧ ಮತ್ತಷ್ಟು ಚೆನ್ನಾಗಿರಲಿದೆ, ಆರ್ಥಿಕವಾಗಿ ಈ ಸಮಯ ತುಂಬಾ ಚೆನ್ನಾಗಿರಲಿದೆ. ಖರ್ಚುಗಳು ಕಡಿಮೆ ಇರುವುದರಿಂದ ಆರ್ಥಿಕವಾಗಿ ಉಳಿತಾಯ ಮಾಡಲು ಸಾಧ್ಯವಾಗುವುದು.
ಈ ಶುಕ್ರ ಸಂಕ್ರಮಣ ನಿಮಗೆ ಎಲ್ಲಾ ರೀತಿಯಲ್ಲೂ ಪ್ರಯೋಜನಕಾರಿಯಾಗಲಿದೆ, ಆರೋಗ್ಯವು ಉತ್ತಮವಾಗಿರುತ್ತದೆ ಆದರೆ ಸಾಮಾಜಿಕ ಸ್ಥಾನಮಾನ ಮತ್ತು ಪ್ರತಿಷ್ಠೆಯೂ ಹೆಚ್ಚಾಗುತ್ತದೆ.
ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿರುವವರಿಗೆ ಈ ಅವಧಿ ತುಂಬಾನೇ ಅನುಕೂಲಕರವಾಗಿದೆ, ನೀವು ಆ ಪರೀಕ್ಷೆಯಲ್ಲಿ ಯಶಸ್ಸು ಗಳಿಸುತ್ತೀರಿ. ಇನ್ನು ದೊಡ್ಡ-ದೊಡ್ಡ ಕಂಪನಿಯಲ್ಲಿ ಕೆಲಸ ಮಾಡುತ್ತಿರುವವರಿಗೆ ಸಂಬಳ ಹೆಚ್ಚಾಗಲಿದೆ.
ಸಿಂಹ ರಾಶಿ
ಶುಕ್ರ ಮಿಥುನ ರಾಶಿಗೆ ಸಂಚರಿಸಿದಾಗ ಈ ಅವಧಿ ತುಂಬಾನೇ ಪ್ರಯೋಜನಕಾರಿಯಾಗಿರಲಿದೆ, ಕೆಲಸದಲ್ಲಿ ಉತ್ತಮ ಫಲ ಸಿಗಲಿದೆ, ಇನ್ನು ಪ್ರಸ್ತುತ ಕೆಲಸ ಬದಲಾಯಿಸಬೇಕು ಎಂದು ಯೋಚಿಸುತ್ತಿದ್ದರೆ ಈ ಅವಧಿ ಅನುಕೂಲಕರವಾಗಿದೆ.
ನಿಮ್ಮ 11ನೇ ಮನೆಯಲ್ಲಿ ಶುಕ್ರ ಇರುವ ಈ ಅವಧಿ ನಿಮಗೆ ತುಂಬಾನೇ ಅನುಕೂಲಕರವಾಗಿದೆ, ಕೆಲಸ ಮತ್ತು ವ್ಯವಹಾರದಲ್ಲಿ ಉದ್ಭವಿಸುವ ಹೊಸ ಸವಾಲುಗಳನ್ನು ಸಮರ್ಥವಾಗಿ ಎದುರಿಸುತ್ತೀರಿ, ನೀವು ಯಾವುದೇ ದೊಡ್ಡ ಕೆಲಸವನ್ನು ಮಾಡಬೇಕಾದರೆ ಅಥವಾ ಹೊಸ ಒಪ್ಪಂದಕ್ಕೆ ಸಹಿ ಹಾಕಬೇಕೆಂದು ಇದ್ದರೆ ಆ ದೃಷ್ಟಿಯಿಂದಲೂ ಈ ಅವಧಿ ಅನುಕೂಲಕರವಾಗಿದೆ.
ಈ ಅವಧಿಯಲ್ಲಿ ಸಾಮಾಜಿಕ ಸ್ಥಾನಮಾನ ಮತ್ತು ಪ್ರತಿಷ್ಠೆ ಹೆಚ್ಚಾಗುತ್ತದೆ. ಹೊಸ ಜವಾಬ್ದಾರಿಗಳನ್ನು ಉತ್ತಮವಾಗಿ ನಿರ್ವಹಿಸಲು ಸಾಧ್ಯವಾಗುವುದ, ಪ್ರೇಮಿಗಳಿಗೂ ಈ ಅವಧಿ ಅನುಕೂಲಕರವಾಗಿದೆ, ನಿಮ್ಮ ಪ್ರೀತಿಯ ಬಗ್ಗೆ ಮನೆಯಲ್ಲಿ ಹೇಳಲು ಸೂಕ್ತ ಸಮಯ. ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಈ ಅವಧಿ ತುಂಬಾ ಅನುಕೂಲಕರವಾಗಿರುತ್ತದೆ.
ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವ ಹೊಸ ಅವಕಾಶವನ್ನು ಕಂಡುಕೊಳ್ಳುತ್ತೀರಿ, ವೈವಾಹಿಕ ಜೀವನ ಚೆನ್ನಾಗಿರಲಿದೆ, ಅವಾಹಿತರಿಗೆ ಮದುವೆ ಸಂಬಂಧ ಬರಬಹುದು.
ಕುಂಭ ರಾಶಿ
ಶುಕ್ರ ಮಿಥುನ ರಾಶಿಗೆ ಸಂಚರಿಸಿದಾಗ ಕುಂಭ ರಾಶಿಯಲ್ಲಿ ಶುಕ್ರನು ಪಂಚಮ ಸ್ಥಾನದಲ್ಲಿ ಇರಲಿದೆ. ಪಂಚಮ ಸ್ಥಾನದಲ್ಲಿರುವ ಶುಕ್ರ ಒಳ್ಳೆಯ ಸುದ್ದಿ ಸಿಗಲಿದೆ, ನೀವು ಯಾವುದಾದರೂ ಕಾಯಿಲೆಯಿಂದ ಬಳಲುತ್ತಿದ್ದರೆ ಅದರಿಂದ ಮುಕ್ತಿ ಪಡೆಯಬಹುದು. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ ಕಂಡು ಬರಲಿದೆ. ವೈವಾಹಿಕ ಜೀವನದಲ್ಲಿ ಪತಿ-ಪತ್ನಿ ನಡುವೆ ಬಾಂಧವ್ಯ ತುಂಬಾ ಚೆನ್ನಾಗಿರಲಿದೆ. ಉದ್ಯಮಿಗಳಿಗೆ ಈ ಸಮಯ ಉತ್ತಮವಾಗಿರುತ್ತದೆ.
ವೃತ್ತಿ ಬದುಕಿನಲ್ಲಿ ಕೆಲಸದಲ್ಲಿ ನೀವು ಯಶಸ್ವಿಯಾಗುತ್ತೀರಿ. ಸ್ಪರ್ಧಾತ್ಮಕ ವಿದ್ಯಾರ್ಥಿಗಳಿಗೂ ಈ ಸಮಯ ವರದಾನವಾಗಿದೆ. ಸಮಾಜದಲ್ಲಿ ಸಾಮಾಜಿಕ ಗೌರವ ಹೆಚ್ಚಾಗಲಿದೆ. ಕುಟುಂಬದಲ್ಲಿ ಶುಭ ಕಾರ್ಯಗಳು ದೊರೆಯಲಿದೆ. ಆದಾಯ ಹೆಚ್ಚಾಗಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications



