Latest Updates
-
ಮದುವೆ ಸಂಭ್ರಮಕ್ಕೆ ಸಿದ್ಧರಾಗಿದ್ದೀರಾ? ಮಳೆಗಾಲದ ಮದುವೆಗೆ ಈ 5 ಟಿಪ್ಸ್ ಮರೆಯದಿರಿ! -
ಬೆಲೆ ಏರಿಕೆಯ ಬಿಸಿ: ಜೂನ್ CPI ವರದಿ ಮತ್ತು ನಿಮ್ಮ ಕಿಚನ್ ಬಜೆಟ್ ಉಳಿಸುವ ಸ್ಮಾರ್ಟ್ ಟಿಪ್ಸ್ -
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗೆ ಎಚ್ಚರಿಕೆ: ಹಾಲು, ಮೊಟ್ಟೆ ಖರೀದಿಸುವಾಗ ಈ ತಪ್ಪು ಮಾಡಬೇಡಿ! -
4-0 ಸೋಲಿನ ಆಘಾತದಲ್ಲಿ ಭಾರತೀಯ ಫ್ಯಾನ್ಸ್: ಏಕದಿನ ಸರಣಿಗೆ ಕಮ್ಬ್ಯಾಕ್ ಸಾಧ್ಯವೇ? ಇಲ್ಲಿದೆ ಪಂದ್ಯಗಳ ವೇಳಾಪಟ್ಟಿ ಮತ್ತು ಹೆಲ್ತ್ ಟಿಪ್ಸ್! -
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ!
ಧನು ರಾಶಿಗೆ ಶುಕ್ರನ ಸಂಚಾರದಿಂದ ಈ 7 ರಾಶಿಯವರಿಗೆ ಧನ ಯೋಗ
ಶುಕ್ರನನ್ನು ಅದೃಷ್ಟದ ಗ್ರಹವೆಂದು ಪರಿಗಣಿಸಲಾಗಿದೆ. ಶುಕ್ರನ ಸ್ಥಾನ ನಮ್ಮ ರಾಶಿಯಲ್ಲಿ ಅದೃಷ್ಟದ ಸ್ಥಾನದಲ್ಲಿದ್ದರೆ ನಮಗೆ ಶುಕ್ರದೆಸೆ, ಈ ಅವಧಿಯಲ್ಲಿ ಅಪಾರ ಧನ ಲಾಭವಾಗಲಿದೆ. ಇದೀಗ ಧನು ರಾಶಿಗೆ ಶುಕ್ರನ ಸಂಚಾರ ಜನವರಿ 18ಕ್ಕೆ ಆಗಿದೆ, ಈ ಸಂಚಾರದಿಂದಾಗಿ ಈ 7 ರಾಶಿಯವರಿಗೆ ಅದೃಷ್ಟದ ಸಮಯ:
ಮೇಷ ರಾಶಿ
ಮೇಷ ರಾಶಿಯವರಿಗೆ ಈ ಶುಕ್ರ ಸಂಚಾರ ತುಂಬಾನೇ ಅನುಕೂಲಕರವಾಗಿದೆ. ಈ ಅವಧಿಯಲ್ಲಿ ನಿಮ್ಮ ವೃತ್ತಿ ಜೀವನದಲ್ಲಿ ಯಶಸ್ಸು ಗಳಿಸುತ್ತೀರಿ, ನಿಮ್ಮ ಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಇನ್ನು ವಿದೇಶಕ್ಕೆ ಹೋಗಲು ಪ್ರಯತ್ನಿಸುತ್ತಿರುವವರಿಗೆ ಈ ಅವಧಿ ತುಂಬಾನೇ ಅನುಕೂಲಕರವಾಗಿದೆ. ವಿದೇಶಕ್ಕೆ ಹೋಗಲು ಪ್ರಯತ್ನಿಸುತ್ತಿರುವವರಿಗೆ ಈ ಸಮಯದಲ್ಲಿ ನೀವು ವಿದೇಶಕ್ಕೆ ಹೋಗುವ ಅವಕಾಶವನ್ನು ಪಡೆಯುತ್ತೀರಿ.

ಸಿಂಹ ರಾಶಿ
ಶುಕ್ರನು ಸಿಂಹರಾಶಿಯವರಿಗೂ ಶುಕ್ರದೆಸೆ ನೀಡಿದೆ. ಈ ಅವಧಿಯಲ್ಲಿ ನೀವು ವೃತ್ತಿಪರ ಜೀವನದಲ್ಲಿ ಉತ್ತಮ ಅವಕಾಶವನ್ನು ಪಡೆಯುತ್ತೀರಿ. ವ್ಯಾಪಾರ ಅಥವಾ ಉದ್ಯೋಗವಾಗಿರಲಿ, ಈ ಅವಧಿ ನಿಮಗೆ ಉತ್ತಮವಾಗಿದೆ. ಧನು ರಾಶಿಯಲ್ಲಿ ಶುಕ್ರನ ಸಂಚಾರ ಉದ್ಯೋಗಿಗಳಿಗೆ, ವ್ಯಾಪಾರಿಗಳಿಗೆ ಉತ್ತಮ ಫಲಿತಾಂಶ ನೀಡಲಿದೆ.
ಕನ್ಯಾ ರಾಶಿ
ಸ್ವಂತ ಉದ್ಯೋಗ ಮಾಡುತ್ತಿದ್ದರೆ ನೀವು ಧನಾತ್ಮಕ ಫಲಿತಾಂಶಗಳನ್ನು ಪಡೆಯುತ್ತೀರಿ. ಕೆಲಸದ ಜಾಗದಲ್ಲಿ ನಿಮ್ಮ ಮೇಲಾಧಿಕಾರಿಗಳು ನಿಮ್ಮ ಕೆಲಸ ಮತ್ತು ಕಠಿಣ ಪರಿಶ್ರಮವನ್ನು ಮೆಚ್ಚುತ್ತಾರೆ. ಶೀಘ್ರವೇ ನಿಮಗೆ ಬಡ್ತಿ ದೊರೆಯಲಿದೆ. ವ್ಯಾಪಾರಿಗಳು ಲಾಭ ಗಳಿಸುತ್ತೀರಿ.
ತುಲಾ ರಾಶಿ
ತುಲಾ ರಾಶಿಯವರಿಗೂ ಈ ಅವಧಿ ಅನುಕೂಲಕರವಾಗದೆ. ವೃತ್ತಿ ಜೀವನದಲ್ಲಿ ಆನಂದವಿರಲಿದೆ, ಸಂಬಂಧಗಳಲ್ಲಿ ಉತ್ತಮ ಹೊಂದಾಣಿಕೆ ಇರಲಿದೆ. ಈ ಅವಧಿಯಲ್ಲಿ ನೀವು ವೃತ್ತಿ ಬದುಕಿನಲ್ಲಿ ಬೆಳವಣಿಗೆಯನ್ನು ಕಾಣುತ್ತೀರಿ.
ವೃಶ್ಚಿಕ ರಾಶಿ
ಈ ಸಂಚಾರ ನಿಮ್ಮ ಆರ್ಥಿಕ ಜೀವನಕ್ಕೆ ಉತ್ತಮವಾಗಿದೆ. ಈ ಸಮಯದಲ್ಲಿ ನೀವು ಆರ್ಥಿಕ ಪ್ರಗತಿಯನ್ನು ಕಾಣುತ್ತೀರಿ. ಶುಕ್ರ ಸಂಚಾರದ ಸಮಯದಲ್ಲಿ ನಿಮ್ಮ ಸ್ವಂತ ವ್ಯವಹಾರವನ್ನು ಪ್ರಾರಂಭಿಸಲು ನೀವು ಬಯಸಿದರೆ, ಅದು ನಿಮಗೆ ಲಾಭದಾಯಕವಾಗಿರಲಿದೆ. ನಿಮ್ಮ ಖ್ಯಾತಿಯು ಹೆಚ್ಚಾಗುತ್ತದೆ, ನಿಮ್ಮ ಆರ್ಥಿಕ ಜೀವನದಲ್ಲಿ ನೀವು ಸ್ಥಿರತೆಯನ್ನು ಪಡೆಯುತ್ತೀರಿ. ನಿಮ್ಮ ಕುಟುಂಬ ಸದಸ್ಯರಿಂದ ನೀವು ಆರ್ಥಿಕ ಬೆಂಬಲವನ್ನು ಪಡೆಯುತ್ತೀರಿ.
ಧನು ರಾಶಿ
ಈ ಸಮಯದಲ್ಲಿ ನೀವು ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸಬೇಕಾಗಬಹುದು, ಉದ್ಯೋಗಿಗಳು ಸ್ವಯಂ ಉದ್ಯೋಗ ಮಾಡುವವರುಈ ಅವಧಿಯಲ್ಲಿ ಹೆಚ್ಚಿನ ಖ್ಯಾತಿ ಪಡೆಯುವಿರಿ. ವೃತ್ತಿ ಬದುಕಿನಲ್ಲಿ ಹಾಗೂ ವೈಯಕ್ತಿಕ ಬದುಕಿನಲ್ಲಿ ಉತ್ತಮ ಪ್ರಯೋಜನ ಪಡೆಯುತ್ತೀರಿ.
ಕುಂಭ ರಾಶಿ
ಈ ಅವಧಿಯಲ್ಲಿ ಶುಕ್ರನ ದೆಸೆಯಿಂದ ನಿಮ್ಮ ವೃತ್ತಿಪರ ಜೀವನದಲ್ಲಿಅಪಾರ ಖ್ಯಾತಿಯನ್ನು ಪಡೆಯುತ್ತೀರಿ. ನೀವು ಭೌತಿಕ ಸೌಕರ್ಯಗಳನ್ನು ಆನಂದಿಸುತ್ತೀರಿ. ದೀರ್ಘಾವಧಿಯ ಹೂಡಿಕೆಗಳನ್ನು ಮಾಡಲು ಯೋಚಿಸಿದರೆ ಈ ಅವಧಿ ಒಳ್ಳೆಯದಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications