Latest Updates
-
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು!
ವೃಶ್ಚಿಕ ರಾಶಿಯಲ್ಲಿ ಶುಕ್ರ ಸಂಚಾರ 2023: ಈ 4 ರಾಶಿಯವರಿಗೆ ಶುಕ್ರದೆಸೆ
ವೈದಿಕ ಶಾಸ್ತ್ರದಲ್ಲಿ ಶುಕ್ರನನ್ನು ಭೌತಿಕ ಸೌಕರ್ಯ, ಸಂತೋಷ, ಪ್ರೀತಿ, ಸೌಂದರ್ಯ ಇವುಗಳ ಮೇಲೆ ಪ್ರಭಾವ ಬೀರುವ ಗ್ರಹವೆಂದು ಪರಿಗಣಿಸಲಾಗಿದೆ. ಶುಕ್ರವು 30-36 ದಿನಗಳಲ್ಲಿ ರಾಶಿಯನ್ನು ಬದಲಾಯಿಸುತ್ತದೆ. ಈ ಡಿಸೆಂಬರ್ 25ಕ್ಕೆ ಶುಕ್ರ ತುಲಾ ರಾಶಿಯಿಂದ ವೃಶ್ಚಿಕ ರಾಶಿಗೆ ಸಂಚರಿಸಲಿದೆ.
ಶುಕ್ರ ತನ್ನ ರಾಶಿ ಬದಲಾವಣೆ ಮಾಡಿದಾಗಶುಕ್ರ ಸಂಕ್ರಮಿಸಿದಾಗಲೆಲ್ಲಾ ಅದು ದ್ವಾದಶ ರಾಶಿಗಳ ಮೇಲೆ ಬೀರುವ ಪ್ರಭಾವ ಭಿನ್ನವಾಗಿರುತ್ತದೆ. ತುಲಾ ರಾಶಿಯಿಂದ ವೃಶ್ಚಿಕ ರಾಶಿಗೆ ಸಂಚರಿಸಿದಾಗ ಕೆಲವರಿಗೆ ಶುಕ್ರದೆಸೆ ಶುರುವಾಗಲಿದೆ. ಯಾವೆಲ್ಲಾ ರಾಶಿಗಳಿಗೆ ಈ ಸಂಚಾರ ಮಂಗಳಕರವಾಗಿದೆ ಎಂದು ನೊಡೋಣ:

ವೃಷಭ ರಾಶಿ
ವೃಷಭ ರಾಶಿವರಲ್ಲಿ ಶುಕ್ರ ಈ ಅವಧಿಯಲ್ಲಿ 7ನೇ ಮನೆಯಲ್ಲಿ ಇರಲಿದೆ. ಶುಕ್ರನು 7ನೇ ಮನೆಯಲ್ಲಿ ಇರುವುದರಿಂದ ಉದ್ಯೋಗಿಗಳು, ವ್ಯಾಪಾರಿಗಳು ಈ ಅವಧಿಯಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯುವ ಸೂಚನೆಗಳಿವೆ. ಜಾತಕದ ಏಳನೇ ಮನೆ ಪಾಲುದಾರಿಕೆಯಾಗಿದೆ. ಅಂತಹ ಪರಿಸ್ಥಿತಿಯಲ್ಲಿ, ಪಾಲುದಾರಿಕೆಯ ವ್ಯವಹಾರದಲ್ಲಿ ನೀವು ಉತ್ತಮ ಪ್ರಯೋಜನವನ್ನು ಪಡೆಯಬಹುದು. ತುಂಬಾ ಸಮಯದಿಂದ ವೈವಾಹಿಕ ಜೀವನದಲ್ಲಿರುವ ಸಮಸ್ಯೆ ಬಗೆಹರಿಯಲಿದೆ. ವೈವಾಹಿಕ ಸಂಬಂಧದ ವಿಷಯದಲ್ಲಿ ಸಮಯ ಉತ್ತಮವಾಗಿರಲಿದೆ.
ಕರ್ಕ ರಾಶಿ
ಶುಕ್ರನು 5ನೇ ಮನೆಗೆ ಪ್ರವೇಶಿಸಲಿದೆ. ಶುಕ್ರನ ಈ ಸ್ಥಾನ ನಿಮಗೆ ತುಂಬಾನೇ ಪ್ರಯೋಜನಕಾರಿಯಾಗಿದೆ. ಈ ಅವಧಿಯಲ್ಲಿ ಆರ್ಥಿಕವಾಗಿ ತುಂಬಾ ಒಳ್ಳೆಯದಿದೆ. ಸೃಜನಶೀಲ ಕ್ಷೇತ್ರಗಳಲ್ಲಿ ಕೆಲಸ ಮಾಡುವವರಿಗೆ ಸಮಯವು ಅನುಕೂಲಕರವಾಗಿರುತ್ತದೆ. ಈ ಅವಧಿಯಲ್ಲಿ ಸಾಮಾಜಿಕ ಗೌರವ ಹೆಚ್ಚಾಗಲಿದೆ. ವ್ಯಾಪಾರಿಗಳು ಉತ್ತಮ ಲಾಭವನ್ನು ಪಡೆಯಬಹುದು.
ತುಲಾ ರಾಶಿ
ತುಲಾ ರಾಶಿಯಲ್ಲಿ 2ನೇ ಮನೆಯಲ್ಲಿ ಇರಲಿದೆ. ಎರಡನೇ ಮನೆ ಆದಾಯ, ಕುಟುಂಬ ಮತ್ತು ಮಾತನ್ನು ಪ್ರತಿನಿಧಿಸುತ್ತದೆ. ಇದಲ್ಲದೇ ತುಲಾ ರಾಶಿಯವರಿಗೆ ಜಾತಕದಲ್ಲಿ ಮೊದಲ ಮತ್ತು ಎಂಟನೇ ಮನೆಯ ಅಧಿಪತಿ ಶುಕ್ರ. ಈ ಶುಕ್ರ ಸಂಚಾರದ ಸಮಯದಲ್ಲಿ ಕುಟುಂಬ ಸದಸ್ಯರ ನಡುವೆ ಹೊಂದಾಣಿಕೆ ಉತ್ತಮವಾಗಿರುತ್ತದೆ. ವೃಶ್ಚಿಕ ರಾಶಿಯಲ್ಲಿ ಶುಕ್ರ ಸಂಕ್ರಮಣದಿಂದ ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚಾಗಲಿದೆ. ನಿಮ್ಮ ಆದಾಯ ಹೆಚ್ಚಾಗಲಿದೆ.
ಮಕರ ಸಂಕ್ರಾಂತಿ
ಮಕರ ರಾಶಿಯಲ್ಲಿ ಶುಕ್ರ 11ನೇ ಮನೆಯಲ್ಲಿ ಇರಲಿದೆ. ವೃಶ್ಚಿಕ ರಾಶಿಯಲ್ಲಿ ಶುಕ್ರನ ಸಂಚಾರವು ಮಕರ ರಾಶಿಯವರಿಗೆ ಮಂಗಳಕರ ಮತ್ತು ಲಾಭದಾಯಕವಾಗಿರುತ್ತದೆ. ನಿಮ್ಮ ಕಠಿಣ ಪರಿಶ್ರಮಕ್ಕೆ ನೀವು ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ನಿಮ್ಮ ವೃತ್ತಿ ಜೀವನದಲ್ಲಿ ಉತ್ತಮ ಬೆಳವಣಿಗೆಯನ್ನು ಕಾಣುವಿರಿ. ಎಲ್ಲಾ ರೀತಿಯ ಇಷ್ಟಾರ್ಥಗಳು ಈಡೇರುತ್ತವೆ. ಸೌಕರ್ಯಗಳು ಮತ್ತು ಐಷಾರಾಮಿಗಳಲ್ಲಿ ಹೆಚ್ಚಳವಾಗುತ್ತದೆ. ಹೂಡಿಕೆಗೆ ಸಮಯ ಉತ್ತಮವಾಗಿರುತ್ತದೆ. ಕೆಲಸದ ಸ್ಥಳದಲ್ಲಿ ನೀವು ಹೊಸ ಜವಾಬ್ದಾರಿಯನ್ನು ಪಡೆಯಬಹುದು. ಆರ್ಥಿಕ ಸ್ಥಿರತೆಯನ್ನು ಕಾಣಬಹುದು.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
