Latest Updates
-
ಹಾಲುಣಿಸುವ ತಾಯಂದಿರೇ ಗಮನಿಸಿ: ಬೆನ್ನು ಮತ್ತು ಕುತ್ತಿಗೆ ನೋವು ಮರೆಯಾಗಲು ಈ 8 ನಿಮಿಷದ ವ್ಯಾಯಾಮ ಸಾಕು! -
ಐಟಿಆರ್ ಗಡುವು ಮಿಸ್ ಆಯ್ತಾ? ದಂಡ ತಪ್ಪಿಸಲು ಈಗಲೇ ಈ ಕೆಲಸ ಮಾಡಿ, ಆರ್ಥಿಕ ನಷ್ಟದಿಂದ ಪಾರಾಗಿ! -
ಕರ್ನಾಟಕದಲ್ಲಿ ಭಾರಿ ಮಳೆ: ನಿಮ್ಮ ಮನೆ ಮತ್ತು ಕುಟುಂಬವನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಪೀನಟ್ ಬಟರ್ನಲ್ಲಿ ವಿಷಕಾರಿ ಶಿಲೀಂಧ್ರ? ನಿಮ್ಮ ಆರೋಗ್ಯ ಕಾಪಾಡಲು ಈ ವಿಷಯಗಳನ್ನು ಮರೆಯದಿರಿ -
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ!
ವೃಶ್ಚಿಕ ರಾಶಿಗೆ ಶುಕ್ರ ಸಂಚಾರ: 12 ರಾಶಿಗಳ ಹಣಕಾಸಿನ ಪರಿಸ್ಥಿತಿ ಮೇಲೆ ಹೇಗೆ ಪ್ರಭಾವ ಬೀರಲಿದೆ?
ಅಕ್ಟೋಬರ್ 13ಕ್ಕೆ ಶುಕ್ರನು ವೃಶ್ಚಿಕ ರಾಶಿಗೆ ಸಂಚರಿಸಿದೆ, ಶುಕ್ರನನ್ನು ಅದೃಷ್ಟದ ಗ್ರಹವೆಂದು ಪರಿಗಣಿಸಲಾಗಿದೆ, ಶುಕ್ರ ಬಲವಾದ ಸ್ಥಾನದಲ್ಲಿದ್ದರೆ ಶುಕ್ರದೆಸೆ, ದುರ್ಬಲ ಸ್ಥಾನದಲ್ಲಿದ್ದರೆ ಆರ್ಥಿಕ ತೊಂದರೆಗಳಿರಲಿದೆ. ಈ ಸಂಚಾರ ದ್ವಾದಶ ರಾಶಿಗಳ ಆರ್ಥಿಕ ಜೀವನದ ಮೇಲೆ ಹೇಗೆ ಪ್ರಭಾವ ಬೀರಿದೆ ನೋಡೋಣ:

ಮೇಷ ರಾಶಿ
ಮೇಷ ರಾಶಿಯವರಿಗೆ ಈ ಶುಕ್ರ ಸಂಚಾರ ಕೆಲ ಸವಾಲುಗಳನ್ನು ತರಬಹುದು. ನೀವು ಸಾಲ ಕೊಡುವುದು ಮಾಡಬೇಡಿ, ಆರ್ಥಿಕವಾಗಿ ತುಂಬಾನೇ ಜಾಗ್ರತೆವಹಿಸಬೇಕು.
ವೃಷಭ ರಾಶಿ
ಆರ್ಥಿಕ ದೃಷ್ಟಿಯಿಂದ ನೋಡುವುದಾದರೆ ನಿಮಗೆ ಸರಾಸರಿಯಾಗಿರಲಿದೆ, ಆರ್ಥಿಕ ಬದುಕಿನಲ್ಲಿ ಏರಳಿತವಿರಬಹುದು, ಶುಕ್ರನ ಸ್ಥಾನ ಬಲವಾಗಿರದ ಕಾರಣ ಯಾವುದೇ ದೊಡ್ಡ ಹೂಡಿಕೆ ಮಾಡಲು ಹೋಗಬೇಡಿ.
ಮಿಥುನ ರಾಶಿ
ಆರ್ಥಿಕವಾಗಿ ಉತ್ತಮವಾಗಿರಲಿದೆ, ಆದರೆ ಖರ್ಚುಗಳೂ ಅಧಿಕವಿರಲಿದೆ. ಹಾಗಾಗಿ ನೀವು ಬಜೆಟ್ ಪ್ಲ್ಯಾನ್ ಮಾಡಿ ಖರ್ಚು ಮಾಡಿದರೆ ಒಳ್ಳೆಯದು. ಅಗ್ಯತಕ್ಕಿಂತ ಹೆಚ್ಚುಖರ್ಚು ಮಾಡಲು ಹೋಗಬೇಡಿ.
ಕರ್ಕ ರಾಶಿ
ಆರ್ಥಿಕ ದೃಷ್ಟಿಯಿಂದ ಈ ಶುಕ್ರ ಸಂಚಾರ ನಿಮಗೆ ಅನುಕೂಲಕರವಾಗಿದೆ. ಪಾಲುದಾರಿಕೆಯ ವ್ಯಾಪಾರ ಮಾಡುವುದಾದರೆ ಈ ಅವಧಿಯಲ್ಲಿ ಸವಾಲುಗಳನ್ನು ಎದುರಿಸಬಹುದು.
ಸಿಂಹ ರಾಶಿ
ಶುಕ್ರನು ನಿಮಗೆ ಆರ್ಥಿಕ ಲಾಭ ನೀಡಲಿದೆ, ಆದರೆ ಅಷ್ಟೇ ಖರ್ಚು ಕೂಡ ಇರಲಿದೆ. ನೀವು ಖರ್ಚು ನಿಯಂತ್ರಿಸಿ ಉಳಿತಾಯದ ಕಡೆಗೆ ಗಮನಹರಿಸಿದರೆ ಭವಿಷ್ಯದಲ್ಲಿ ಹಣದ ತೊಂದರೆಯಾಗಲ್ಲ. ಬಜೆಟ್ ಪ್ಲ್ಯಾನ್ ಮಾಡಿ ಅದರಂತೆ ಖರ್ಚು ಮಾಡಿದರೆ ಒಳ್ಳೆಯದು.
ಕನ್ಯಾ ರಾಶಿ
ವ್ಯಾಪಾರಿಗಳಿಗೆ ಈ ದಿನ ಲಾಭದಾಯಕವಾಗಿರಲಿದೆ. ಆರ್ಥಿಕವಾಗಿ ಈ ಅವಧಿ ಉತ್ತಮವಾಗಿರಲಿದೆ, ಆದಾಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ, ಹಣವನ್ನು ಉಳಿತಾಯ ಮಾಡಲು ಸಾಧ್ಯವಾಗುವುದು.
ತುಲಾ ರಾಶಿ
ಹಣಕಾಸಿನ ದೃಷ್ಟಿಯಿಂದ ಈ ಅವಧಿ ಸರಾಸರಿಯಾಗಿರಲಿದೆ,ಆರ್ಥಿಕ ನಷ್ಟ ಉಂಟಾಗದಂತೆ ಜಾಗ್ರತೆವಹಿಸಿ, ಈ ಅವಧಿಯಲ್ಲಿ ಯಾವುದೇ ದೊಡ್ಡ ಹೂಡಿಕೆ ಮಾಡಲು ಹೋಗಬೇಡಿ. ಅಲ್ಲದೆ ದೂರ ಪ್ರಯಾಣ ಆರ್ಥಿಕ ನಷ್ಟ ಉಂಟು ಮಾಡದಂತೆ ಜಾಗ್ರತೆವಹಿಸಿ.
ವೃಶ್ಚಿಕ ರಾಶಿ
ಹಣಕಾಸಿನ ದೃಷ್ಟಿಯಿಂದ ಈ ದಿನ ನಿಮಗೆ ಉತ್ತಮವಾಗಿರಲಿದೆ. ವ್ಯಾಪಾರಿಗಳು ಉತ್ತಮ ಲಾಭ ಗಳಿಸುತ್ತೀರಿ, ನೀವು ಹೆಚ್ಚಿನ ಲಾಭ ಗಳಿಸಲು ಹೆಚ್ಚುಶ್ರಮ ಹಾಕಬೇಕಾಗುತ್ತದೆ. ಉದ್ಯೋಗಿಗಳಿಗೆ ಈ ಅವಧಿ ಉತ್ತಮವಾಗಿರಲಿದೆ.
ಧನು ರಾಶಿ
ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ, ಆದರೆ ಕೆಲ ಸವಾಲುಗಳು ಕೂಡ ಎದುರಾಗುವುದು. ಇನ್ನು ನಿರ್ಲಕ್ಷ್ಯದಿಂದ ಹಣ ಕಳೆದುಕೊಳ್ಳುವ ಸಾಧ್ಯತೆ ಇದೆ ಈ ಬಗ್ಗೆ ಜಾಗ್ರತೆವಹಿಸಿ.
ಮಕರ ರಾಶಿ
ವ್ಯಾಪಾರಿಗಳಿಗೆ ಈ ಅವಧಿ ಉತ್ತಮವಾಗಿರಲಿದೆ, ಹೊಸ ಉದ್ಯೋಗಕ್ಕೆ ಪ್ರಯತ್ನಿಸುತ್ತಿದ್ದರೆ ಈ ಅವಧಿ ಕೆಲಸ ಸಿಗಲಿದೆ, ನಿಮ್ಮ ಆರ್ಥಿಕ ಸ್ಥಿತಿ ಬಲವಾಗಲಿದೆ. ಆರ್ಥಿಕ ಲಾಭ ದೊರೆಯಲಿದೆ.
ಕುಂಭ ರಾಶಿ
ಈ ಅವಧಿ ಆರ್ಥಿಕವಾಗಿ ನಿಮಗೆ ಉತ್ತಮವಾಗಿರಲಿದೆ, ಆದಾಯ ಹೆಚ್ಚಾಗಲಿದೆ, ಈ ಅವಧಿ ಹೂಡಿಕೆಗೆ ಉತ್ತಮವಾಗಿರಲಿದೆ. ವ್ಯಾಪಾರಿಗಳು ಉತ್ತಮ ಲಾಭ ಗಳಿಸುತ್ತೀರಿ.
ಮೀನ ರಾಶಿ
ಆರ್ಥಿಕವಾಗಿ ಈ ಅವಧಿ ಅನುಕೂಲಕರವಲ್ಲ, ಖರ್ಚು ಹೆಚ್ಚರಲಿದೆ, ಅಲ್ಲದೆ ಬಜೆಟ್ ಪ್ಲ್ಯಾನ್ ಮಾಡದೆ ಖರ್ಚು ಮಾಡಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಬಹುದು, ಈ ಬಗ್ಗೆ ಜಾಗ್ರತೆವಹಿಸಿ. ಅಮೂಲ್ಯ ವಸ್ತುಗಳ ಕಡೆಗೆ ಗಮನಹರಿಸಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
