Latest Updates
-
ಮದುವೆ ಅಥವಾ ಡೇಟಿಂಗ್ ಪ್ಲಾನ್ ಮಾಡಿದ್ದೀರಾ? ಇಂದಿನ ಹವಾಮಾನದ ಅಬ್ಬರಕ್ಕೆ ನಿಮ್ಮ ತಯಾರಿ ಹೇಗಿರಲಿ? -
ಬಿರುಗಾಳಿ ಮಳೆಗೆ ನಿಮ್ಮ ಬಾಲ್ಕನಿ ಗಾರ್ಡನ್ ನಲುಗುತ್ತಿದೆಯೇ? ಗಿಡಗಳನ್ನು ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲ ಧಗೆಗೆ ಸುಸ್ತಾದ್ರಾ? ಈ ಪಾನೀಯಗಳಿದ್ದರೆ ಸಾಕು, ಬೇಸಿಗೆಯಲ್ಲೂ ಇರುತ್ತೀರಿ ಫ್ರೆಶ್! -
ಮೆಟ್ ಗಾಲಾ 2026: ಕರಣ್ ಜೋಹರ್ ಎಂಟ್ರಿಯಿಂದ ಫ್ಯಾಷನ್ ಲೋಕದಲ್ಲಿ ಸಂಚಲನ, ಭಾರತದಲ್ಲಿ ವೀಕ್ಷಿಸುವುದು ಹೇಗೆ? -
ಬಿಸಿಲ ಬೇಗೆಯಿಂದ ಪಾರಾಗಲು ಮುಂಜಾನೆಯೇ ವ್ಯಾಯಾಮ: ನಿಮ್ಮ ದಿನಚರಿಯಲ್ಲಿ ಈ ಬದಲಾವಣೆ ಮಾಡಿಕೊಳ್ಳಿ -
ಬೇಸಿಗೆ ಮದುವೆ ಸಂಭ್ರಮ: ಬಿಸಿಲ ಬೇಗೆಯಿಂದ ಅತಿಥಿಗಳನ್ನು ರಕ್ಷಿಸಲು ಇಲ್ಲಿದೆ ಮಾಸ್ಟರ್ ಪ್ಲಾನ್ -
ಮೇ 2-3ರ ಬಿರುಗಾಳಿ ಎಚ್ಚರಿಕೆ: ನಿಮ್ಮ ಮನೆ ಮತ್ತು ಬಾಲ್ಕನಿ ಗಿಡಗಳನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಭಾರತದಲ್ಲಿ ಸುಡುವ ಬಿಸಿಲು: ಹೀಟ್ ವೇವ್ನಿಂದ ಪಾರಾಗಲು ಇಲ್ಲಿವೆ ಬೆಸ್ಟ್ ಡಯಟ್ ಮತ್ತು ಹೈಡ್ರೇಶನ್ ಟಿಪ್ಸ್! -
ಮೆಟ್ ಗಾಲಾ 2026: ರೆಡ್ ಕಾರ್ಪೆಟ್ ಮೇಲೆ ಕರಣ್ ಜೋಹರ್ ಅಬ್ಬರ, ಭಾರತೀಯ ಫ್ಯಾಷನ್ ಲೋಕದ ಹೊಸ ಸಂಚಲನ! -
ಮೇ ತಿಂಗಳ ಬಿಸಿಲ ಧಗೆ: ನಿಮ್ಮ ಬೆಳಗಿನ ದಿನಚರಿಯಲ್ಲಿ ಈ ಬದಲಾವಣೆ ಮಾಡಿಕೊಳ್ಳದಿದ್ದರೆ ಕಷ್ಟ!
ಈ 5 ರಾಶಿಗಳಿಗೆ ಬಡ್ತಿ ಸಿಗಲಿದೆ, ಗಾಡಿ, ಆಸ್ತಿ ಖರೀದಿ ಅಂತ ಶುಕ್ರದೆಸೆಯ ಸಮಯವಿದು
ಫೆಬ್ರವರಿ 2ಕ್ಕೆ ಬಸಂತ ಪಂಚಮಿ, ಇದೀಗ ಶುಕ್ರನು ಪೂರ್ವ ಭಾದ್ರಪದ ನಕ್ಷತ್ರದಿಂದ ಉತ್ತರಾಭಾದ್ರಪದ ನಕ್ಷತ್ರಕ್ಕೆ ಸಂಚಾರ ಮಾಡಿದೆ. ಶುಕ್ರನು ಏಪ್ರಿಲ್ 1ರವರೆಗೆ ಇದೇ ನಕ್ಷತ್ರದಲ್ಲಿ ಇರಲಿದೆ. ಈ 59 ದಿನಗಳು 5 ರಾಶಿಗಳಿಗೆ ಅದೃಷ್ಟದ ಬೆಂಬಲ ಅಧಿಕವಾಗಿರಲಿದೆ. ಈ ಸಮಯದಲ್ಲಿ ಈ ರಾಶಿಯವರ ಅಪೂರ್ಣ ಕಾರ್ಯವಿದ್ದರೆ ಅದು ಪೂರ್ಣವಾಗಲಿದೆ, ಹಣಕಾಸು ಚೆನ್ನಾಗಿರಲಿದೆ, ಈ ಅವಧಿಯಲ್ಲಿ ನೀವು ಹೆಚ್ಚಿನ ಯಶಸ್ಸು ಪಡೆಯಲು ಸಾಧ್ಯವಾಗಲಿದೆ. ಶುಕ್ರನ ಸ್ಥಾನ ಈ 5 ರಾಶಿಗಳಿಗೆ ತುಂಬಾನೇ ಪ್ರಯೋಜನಕಾರಿಯಾಗಿದೆ:

ವೃಷಭ ರಾಶಿ
ಶುಕ್ರನು ಉತ್ತರಾಭಾದ್ರಪದ ನಕ್ಷತ್ರದಲ್ಲಿ ಇರುವುದರಿಂದ ಈ 59 ದಿನಗಳು ನಿಮಗೆ ತುಂಬಾನೇ ವಿಶೇಷವಾಗಿರಲಿದೆ. ಏನಾದರು ಸಂಬಳ ಬಡ್ತಿಯ ನಿರೀಕ್ಷೆಯಲ್ಲಿದ್ದರೆ ಈ ಅವಧಿ ಅನುಕೂಲಕರವಾಗಿದೆ, ಈ ಸಮಯದಲ್ಲಿ ಐಷಾರಾಮಿ ವಸ್ತುಗಳನ್ನು ಖರೀದಿಸಲು ಸಾಧ್ಯವಾಗಲಿದೆ, ನಿಮ್ಮ ಸೌಕರ್ಯಗಳು ಹೆಚ್ಚಾಗಲಿದೆ. ಇನ್ನು ಈ ಅವಧಿಯಲ್ಲಿ ಹೂಡಿಕೆ ಮಾಡಿದ್ದರೆ ಉತ್ತಮ ಲಾಭ ಗಳಿಸುತ್ತೀರಿ, ಷೇರಿನಲ್ಲಿ ಹೂಡಿಕೆ ಮಾಡಿದ್ದರೆ ಈ ಅವಧಿ ಅನುಕೂಲಕರವಾಗಿದೆ.
ಸಿಂಹ ರಾಶಿ
ಸಿಂಹ ರಾಶಿಯವರಿಗೆ ಈ ಅವಧಿ ತುಂಬಾನೇ ಅನುಕೂಲಕರವಾಗಿದೆ. ವೃತ್ತಿ ಬದುಕು ತುಂಬಾ ಚೆನ್ನಾಗಿರಲಿದೆ, ಉದ್ಯಮಿಗಳು ಉತ್ತಮ ಆರ್ಥಿಕ ಲಾಭ ಪಡೆಯಲು ಸಾಧ್ಯವಾಗಲಿದೆ. ಇನ್ನು ಮದುವೆಗೆ ಸಂಬಂಧ ಹುಡುಕುತ್ತಿದ್ದರೆ ಈ ಸಮಯದಲ್ಲಿ ಸಂಬಂಧ ಕೂಡಿ ಬರಬಹುದು. ಕೆಲಸಕ್ಕಾಗಿ ಮಾಡುವ ಪ್ರಯತ್ನದಲ್ಲಿ ಹೊಸ ಫಲ ಸಿಗಲಿದೆ, ವೃತ್ತಿ ಬದುಕು ತುಂಬಾ ಚೆನ್ನಾಗಿರಲಿದೆ, ನೀವು ಬಯಸಿದಂತೆಯೇ ಕೆಲಸ ಕಾರ್ಯಗಳು ನಡೆಯಲಿದೆ. ವ್ಯಾಪಾರಸ್ಥರು ಈ ಅವಧಿಯಲ್ಲಿ ಉತ್ತಮ ಆರ್ಥಿಕ ಲಾಭ ಪಡೆಯಲುಸಾಧ್ಯವಾಗಲಿದೆ. ಇನ್ನು ಈ ಸಮಯದಲ್ಲಿ ಕೆಲಸಕ್ಕೆ ಸಂಬಂಧಿಸಿದ ಪ್ರಯಾಣ ಲಾಭ ತರಲಿದೆ.
ತುಲಾ ರಾಶಿ
ಶುಕ್ರನು ತುಲಾ ರಾಶಿಯಲ್ಲಿಯೂ ಅದೃಷ್ಟದ ಸ್ಥಾನದಲ್ಲಿ ನಿಂತಿದ್ದಾನೆ. ಈ ಸಮಯ ಕುಟುಂಬ ಜೀವನದ ದೃಷ್ಟಿಯಿಂದ ನಿಮಗೆ ತುಂಬಾನೇ ಉತ್ತಮವಾಗಿರಲಿದೆ. ವೃತ್ತಿ ಬದುಕು ತುಂಬಾ ಚೆನ್ನಾಗಿರಲಿದೆ. ಇನ್ನು ಕೆಲಸ ಕಾರ್ಯಗಳು ನೀವು ಅಂದುಕೊಂಡಂತೆಯೇ ನಡೆಯುವುದರಿಂದ ಈ ಅವಧಿಯಲ್ಲಿ ಲಾಭ ದೊರೆಯಲಿದೆ. ಅಲ್ಲದೆ ಈ ಅವಧಿಯಲ್ಲಿ ಕುಟುಂಬ ಜೀವನ ಚೆನ್ನಾಗಿರಲಿದೆ. ಮನೆಯಲ್ಲಿ ಮದುವೆ ಪ್ರಾಯದವರು ಇದ್ದರೆ ಶುಭ ಕಾರ್ಯ ನಡೆಯಲಿದೆ.
ಮಕರ ರಾಶಿ
ಮಕರ ರಾಶಿಯವರು ಈ ಅವಧಿಯಲ್ಲಿ ತುಂಬಾನೇ ಉತ್ತಮ ಆರ್ಥಿಕ ಪ್ರಯೋಜನ ಪಡೆಯುತ್ತೀರಿ. ನೀವು ಸಾಲ ಮಾಡಿದ್ದರೆ ಸಾಲ ಮರುಪಾವತಿ ಮಾಡಲು ಸಾಧ್ಯವಾಗಲಿದೆ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ. ಈ ಅವಧಿಯಲ್ಲಿ ನೀವು ಆಸ್ತಿ, ವಾಹನ ಮುಂತಾದ ದುಬಾರಿ ವಸ್ತುಗಳ ಖರೀದಿ ಬಗ್ಗೆ ಯೋಚಿಸುತ್ತಿದ್ದರೆ ಅದು ಸಾಧ್ಯವಾಗಲಿದೆ. ವ್ಯಾಪಾರಸ್ಥರು ಉತ್ತಮ ಲಾಭ ಪಡೆಯುವಲ್ಲಿ ಯಶಸ್ವಿಯಾಗುತ್ತೀರಿ. ದೊಡ್ಡ ಲಾಭ ಗಳಿಸಲು ಸಾಧ್ಯವಾಗಲಿದೆ, ಸಂಬಳ ಹೆಚ್ಚಳ ನಿರೀಕ್ಷೆಯಲ್ಲಿದ್ದರೆ ಈ ಅವಧಿಯಲ್ಲಿ ನಿಮ್ಮಾಸೆಯಂತೆಯೇ ಸಂಬಳದಲ್ಲಿ ಬಡ್ತಿ ಸಿಗಲಿದೆ.
ಮೀನ ರಾಶಿ
ಮೀನ ರಾಶಿಯವರಿಗೆ ಈ ಅವಧಿ ತುಂಬಾನೇ ಅನುಕೂಲಕರವಾಗಿದೆ. ಅದರಲ್ಲಿಯೂ ಸೃಜನಶೀಲ ಕ್ಷೇತ್ರದಲ್ಲಿರುವವರು ಉತ್ತಮ ಪ್ರಯೋಜನ ಪಡೆಯುವಲ್ಲಿ ಯಶಸ್ವಿಯಾಗುತ್ತೀರಿ. ಕೆಲಸ ಕಾರ್ಯಗಳು ನೀವು ಅಂದುಕೊಂಡಂತೆಯೇ ನಡೆಯಲಿದೆ. ಹಣದ ಕಾರಣದಿಂದ ಬಾಕಿಯುಳಿದ ಕೆಲಸ ಈ ಸಮಯದಲ್ಲಿ ಪೂರ್ಣವಾಗಲಿದೆ. ಷೇರಿನಲ್ಲಿ ಹೂಡಿಕೆ ಮಾಡಿದ್ದರೆ ಉತ್ತಮ ಲಾಭ ಪಡೆಯಲು ಸಾಧ್ಯವಾಗಲಿದೆ. ವಿದೇಶದಲ್ಲಿ ಕೆಲಸಕ್ಕೆ ಪ್ರಯತ್ನ ಮಾಡುತ್ತಿರುವವರು ಈಸಮಯದಲ್ಲಿ ಉತ್ತಮ ಅವಕಾಶ ಪಡೆಯುವಲ್ಲಿ ಯಶಸ್ವಿಯಾಗುತ್ತೀರಿ.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications