Latest Updates
-
ಶ್ರಾವಣ ಸೋಮವಾರದ ಉಪವಾಸ: ಆಫೀಸ್ ಕೆಲಸದ ನಡುವೆಯೂ ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿವೆ ಸರಳ ಟಿಪ್ಸ್! -
ಟಾಟಾ ಮುಂಬೈ ಮ್ಯಾರಥಾನ್ 2027: ನೋಂದಣಿಗೆ ಸಿದ್ಧರಾಗಿ, ಓಟಗಾರರಿಗೆ ಇಲ್ಲಿದೆ ಮಹತ್ವದ ಸಲಹೆಗಳು! -
ಆರ್ಬಿಐ ಸಭೆಗೂ ಮುನ್ನ ದಂಪತಿಗಳಿಗೆ ಎಚ್ಚರಿಕೆ: ಇಂದೇ ಈ 30 ನಿಮಿಷದ ಫೈನಾನ್ಶಿಯಲ್ ಟೆಸ್ಟ್ ಮಾಡಿ! -
ಹಾಲುಣಿಸುವ ತಾಯಂದಿರೇ ಗಮನಿಸಿ: ಬೆನ್ನು ಮತ್ತು ಕುತ್ತಿಗೆ ನೋವು ಮರೆಯಾಗಲು ಈ 8 ನಿಮಿಷದ ವ್ಯಾಯಾಮ ಸಾಕು! -
ಐಟಿಆರ್ ಗಡುವು ಮಿಸ್ ಆಯ್ತಾ? ದಂಡ ತಪ್ಪಿಸಲು ಈಗಲೇ ಈ ಕೆಲಸ ಮಾಡಿ, ಆರ್ಥಿಕ ನಷ್ಟದಿಂದ ಪಾರಾಗಿ! -
ಕರ್ನಾಟಕದಲ್ಲಿ ಭಾರಿ ಮಳೆ: ನಿಮ್ಮ ಮನೆ ಮತ್ತು ಕುಟುಂಬವನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಪೀನಟ್ ಬಟರ್ನಲ್ಲಿ ವಿಷಕಾರಿ ಶಿಲೀಂಧ್ರ? ನಿಮ್ಮ ಆರೋಗ್ಯ ಕಾಪಾಡಲು ಈ ವಿಷಯಗಳನ್ನು ಮರೆಯದಿರಿ -
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ!
ವಿಜಯ ಏಕಾದಶಿ ಯಾವಾಗ? ಇಷ್ಟಾರ್ಥ ಸಿದ್ಧಿಗೆ ಈ ದಿನ ಏನು ಮಾಡಬೇಕು?
ಫಾಲ್ಗುಣ ಮಾಸದಲ್ಲಿ ಬರುವ ಕೃಷ್ಣ ಪಕ್ಷದ ಏಕಾದಶಿಯನ್ನು ವಿಜಯ ಏಕಾದಶಿಯಂದು ಆಚರಿಸಲಾಗುವುದು, ಈ ವರ್ಷ ವಿಜಯ ಏಕಾದಶಿಯನ್ನು ಫೆಬ್ರವರಿ 24ರಂದು ವಿಜಯ ಏಕಾದಶಿಯನ್ನು ಆಚರಿಸಲಾಗುವುದು. ಪ್ರತಿಯೊಂದು ಏಕಾದಶಿಗೆ ಅದರದ್ದೇ ಆದ ಮಹತ್ವವಿದೆ, ಈ ಏಕಾದಶಿಯ ಮಹತ್ವವೇನು? ವಿಜಯ ಏಕಾದಶಿಯ ಆಚರಣೆ ಹೇಗೆ ಎಂದು ನೋಡೋಣ:

ವಿಜಯ ಏಕಾದಶಿ ದಿನಾಂಕ ಮತ್ತು ಸಮಯ
ಏಕಾದಶಿ ತಿಥಿ ಪ್ರಾರಂಭ ಫೆಬ್ರವರಿ 23, ಮಧ್ಯಾಹ್ನ 1:55ಕ್ಕೆ ಪ್ರಾರಂಭ
ಏಕಾದಶಿ ತಿಥಿ ಮುಕ್ತಾಯ ಫೆಬ್ರವರಿ 24 ಮಧ್ಯಾಹ್ನ 1:44ಕ್ಕೆ
ಪಾರಣ ಸಮಯ ಫೆಬ್ರವರಿ 25 ಬೆಳಗ್ಗೆ 06:49ರಿಂದ 09:07ರೊಳಗೆ ಉಪವಾಸ ಮುರಿಯಿರಿ
ಉದಯ ತಿಥಿ ಪ್ರಕಾರ ವಿಜಯ ಏಕಾದಶಿಯನ್ನು ಫೆಬ್ರವರಿ 25ರಂದು ಆಚರಿಸಲಾಗುವುದು
ವಿಜಯ ಏಕಾದಶಿಯ ಪೂಜಾ ನಿಯಮಗಳು
ವಿಜಯ ಏಕಾದಶಿಯಂದು ಬೆಳಗ್ಗೆ ಬೇಗನೆ ಎದ್ದು ಸ್ನಾನ ಮಾಡಿ ಮಡಿ ಬಟ್ಟೆ ಧರಿಸಿ ಪೂಜಾ ಕೋಣೆಯನ್ನು ಸ್ವಚ್ಛಗೊಳಿಸಿ
ನಂತರ ಮನೆ ಬಾಗಿಲಿಗೆ ಮಾವಿನ ತೋರಣಗಳನ್ನು ಕಟ್ಟಿ, ಕಲಶವನ್ನು ಅಲಂಕರಿಸಿ
ವಿಷ್ಣು ಮೂರ್ತಿಯನ್ನು ಹೊಸ ವಸ್ತ್ರ ಹಾಗೂ ಹೂವುಗಳಿಂದ ಅಲಂಕರಿಸಿ
ಉಪವಾಸವಿದ್ದು ಸಂಕಲ್ಪ ತೆಗೆದುಕೊಳ್ಳಿ
ನಂತರ ಶ್ರೀ ವಿಷ್ಣುವಿನ ಪೂಜೆಯನ್ನು ವಿಷ್ಣು ಮಂತ್ರಗಳನ್ನು ಪಠಿಸುತ್ತಾ ಹೇಳಿ.
ವಿಜಯ ಏಕಾದಶಿಯ ಮಹತ್ವವೇನು?
ವಿಜಯ ಏಕಾದಶಿ ಆಚರಣೆ ಮಾಡುವುದರಿಂದ ನಾವು ಏನು ಬಯಸಿದ್ದೇವೋ ಅದರಲ್ಲಿ ಯಶಸ್ಸು ದೊರೆಯಲಿದೆ ಎಂದು ಹೇಳಲಾಗುವುದು.
ಹಾಗಾಗಿ ಧಾರ್ಮಿಕ ಕ್ಷೇತ್ರದಲ್ಲಿ ಸಾಧನೆ ಬಯಸುವವರು, ವೃತ್ತಿ ಬದುಕಿನಲ್ಲಿ ಸಾಧನೆ ಬಯಸುವವರು ವಿಜಯ ಏಕಾದಶಿ ಮಾಡಿದರೆ ಉತ್ತಮ ಫಲ ಪಡೆಯಲು ಸಾಧ್ಯವಾಗುವುದು
ವಿಜಯ ಏಕಾದಶಿ ಆಚರಣೆ ಮಾಡುವುದರಿಂದ ನಮ್ಮಲ್ಲಿರುವ ಗೊಂದಲಗಳು ಬಗೆಹರಿಯಲಿದೆ, ಒಂದು ಒಳ್ಳೆಯ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗುವುದು.
ವಿಜಯ ಏಕಾದಶಿಯಂದು ಶ್ರೀ ವಿಷ್ಣುವಿಗೆ ಪೂಜೆ ಸಲ್ಲಿಸುವಾಗ ಈ ಮಂತ್ರಗಳನ್ನು ಪಠಿಸಿ
ವಿಷ್ಣು ಮೂಲ ಮಂತ್ರ:
ಓಂ ನಮೋ ಭಗವತೇ ವಾಸುದೇವಾಯ
ವಿಷ್ಣು ಗಾಯತ್ರಿ ಮಂತ್ರ
ಓಂ ನಾರಾಯಣಯೇ ವಿದ್ಮಹೇ ವಾಸುದೇವಾಯ ಧೀಮಹಿ ತನ್ನೋ ವಿಷ್ಣು ಪ್ರಚೋದಯಾತ್
- ವಿಜಯ ದಶಮಿ ಆಚರಣೆ ಮಾಡುವುದರಿಂದ ಶ್ರೀವಿಷ್ಣುವಿನ ಕೃಪೆಯಿಂದ ಬದುಕಿನಲ್ಲಿರುವ ಸಮಸ್ಯೆಗಳು ದೂರಾಗಲಿದೆ
- ವ್ಯಕ್ತಿ ಆರ್ಥಿಕ ಸಮಸ್ಯೆ ಎದುರಿಸುತ್ತಿದ್ದರೆ ಶ್ರೀ ವಿಷ್ಣುವಿನ ಕೃಪೆಯಿಂದ ಅದು ದೂರಾಗಲಿದೆ
- ವೃತ್ತಿ ಬದುಕಿನಲ್ಲಿನ ಸಮಸ್ಯೆಗಳು ಬಗೆಹರಿಯಲಿದೆ
- ನಾವು ಕೆಲಸದಲ್ಲಿ ಏನಾದರು ಯಶಸ್ಸು ಸಿಗಬೇಕು ಅಥವಾ ನಾವು ಇಷ್ಟಡುತ್ತಿರುವ ಕೆಲಸಕ್ಕೆ ಪ್ರಯತ್ನ ಪಡುತ್ತಿದ್ದರೆ ಶ್ರೀ ವಿಷ್ಣುವಿನ ಕೃಪೆಯಿಂದ ಆಸೆ ನೆರವೇರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications