Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಜ್ಯೋತಿಷ್ಯ ಶಾಸ್ತ್ರ ಪ್ರಕಾರ ಈ ವಾರ (ಆಗಸ್ಟ್4-10) 12 ರಾಶಿಗಳಿಗೆ ಹೇಗಿರಲಿದೆ?
ಜ್ಯೋತಿಷ್ಯಶಾಸ್ತ್ರದ ಪ್ರಕಾರ ಈ ವಾರ 12 ರಾಶಿಗಳಿಗೆ ಹೇಗಿರಲಿದೆ ನೋಡೋಣ:
ಮೇಷ ರಾಶಿ
ಈ ವಾರ ಆರ್ಥಿಕವಾಗಿ ಉತ್ತಮವಾಗಿರಲಿದೆ, ಈ ಅವದಿಯಲ್ಲಿ ಉಳಿತಾಯ ಮಾಡಲು ಸಾಧ್ಯವಾಗುವುದು, ಇನ್ನುಸ್ವಲ್ಪ ಸಮಯದಿಂದ ನೀವು ವಾಹನ ಖರೀದಿ ಮಾಡಬೇಕೆಂದಿದ್ದರೆ ಈ ವಾರದಲ್ಲಿ ಸಾಧ್ಯವಾಗಲಿದೆ. ಇನ್ನು ಹೊರದೇಶಕ್ಕೆ ಹೋಗಿ ಉನ್ನತ ಶಿಕ್ಷಣ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳಿಗೆ ಈ ಸಮಯ ಉತ್ತಮವಾಗಿದೆ. ಕುಟುಂಬದ ವಾತಾವರಣ ಚೆನ್ನಾಗಿರಲಿದೆ, ಅರೋಗ್ಯವೂ ಉತ್ತಮವಾಗಿರಲಿದೆ.
ಈ ವಾರ ನಿಮಗೆ ಅದೃಷ್ಟದ ಬಣ್ಣ ನೀಲಿ, ಅದೃಷ್ಟದ ಸಂಖ್ಯೆ 11 ಹಾಗೂ ಭಾನುವಾರ ಶುಭ ದಿನವಾಗಿದೆ.

ವೃಷಭ ರಾಶಿ
ಉದ್ಯೋಗಿಗಳಿಗೆ ಈ ಸಮಯ ಉತ್ತಮವಾಗಿದೆ, ನಿಮ್ಮ ಕೆಲಸ ಕಾರ್ಯಗಳು ಉತ್ತಮವಾಗಿ ನೆರವೇರಲಿದೆ. ಇನ್ನು ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ್ದರೆ ಈ ಸಮಯದಲ್ಲಿ ನಿವು ಉತ್ತಮ ಲಾಭ ಪಡೆಯುತ್ತೀರಿ, ಆರ್ಥಿಕವಾಗಿ ಈ ಸಮಯ ಚೆನ್ನಾಗಿರಲಿದೆ, ಆದರೆ ಖರ್ಚು ಇರಲಿದೆ. ಕೆಲಸದ ಬಗ್ಗೆ ಜಾಗ್ರತೆವಹಿಸಿ, ಆಸ್ತಿ ವ್ಯವಹಾರಕ್ಕೆ ಈ ಅವಧಿ ಉತ್ತಮವಾಗಿರಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ ಈ ಸಮಯ ಉತ್ತಮವಾಗಿದೆ.
ಈ ವಾರ ನಿಮಗೆ ಅದೃಷ್ಟದ ಬಣ್ಣ: ಬೂದು, 2 ಅದೃಷ್ಟದ ಸಂಖ್ಯೆ, ಬುಧವಾರ ಶುಭ ದಿನವಾಗಿದೆ.
ಮಿಥುನ ರಾಶಿ
ಈ ಸಮಯದಲ್ಲಿ ವೃತ್ತಿ ಬದುಕಿನಲ್ಲಿ ಧನಾತ್ಮಕ ಬದಲಾವಣೆ ಕಂಡು ಬರಲಿದೆ, ವ್ಯಾಪಾರಿಗಳಿಗೆ ಈ ದಿನ ಲಾಭವಾಗಲಿದೆ, ಕೆಲಸಕ್ಕೆ ಸಂಬಂಧಿಸಿದಂತೆ ಮಾಡುವ ಪ್ರಯಾಣವು ಅನುಕೂಲಕರವಾಗಿದೆ. ಆರೋಗ್ಯದ ದೃಷ್ಟಿಯಿಂದ ಈ ಸಮಯ ತುಂಬಾ ಉತ್ತಮವಾಗಿರಲಿದೆ, ವೈವಾಹಿಕ ಜೀವನ, ಕುಟುಂಬ ಜೀವನ ಚೆನ್ನಾಗಿರಲಿದೆ.
ಈ ವಾರ ನಿಮಗೆ ಅದೃಷ್ಟದ ಬಣ್ಣ ಪೀಚ್, ಅದೃಷ್ಟದ ಸರ್ಖಯೆ 10, ಮಂಗಳವಾರ ಶುಭದಿನವಾಗಿದೆ.
ಕರ್ಕ ರಾಶಿ
ಕರ್ಕ ರಾಶಿಯವರಿಗೆ ಈ ವಾರ ಉತ್ತಮವಾಗಿರಲಿದೆ, ಆರ್ಥಿಕವಾಗಿ ಈ ವಾರ ಉತ್ತಮವಾಗಿರಲಿದೆ. ಇದರಿಂದಾಗಿ ಅರ್ಥಿಕ ಸಮಸ್ಯೆ ದೂರಾಗಲಿದೆ. ಆಸ್ತಿ ಮಾರಾಟ ಮಾಡುವುದಕ್ಕೆ ಸ್ರಮಿಸುತ್ತಿದ್ದರೆ ಈ ಅವಧಿ ಅನುಕೂಲಕರವಾಗಿದೆ. ಉದ್ಯಮಿಗಳಿಗೆ, ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಚಿಕ್ಕ ಪುಟ್ಟ ಅರೋಗ್ಯ ಸಮಸ್ಯೆಗಳಿರಬಹುದು.
ಈ ವಾರ ನಿಮಗೆ ಹಳದಿ ಅದೃಷ್ಟದ ಬಣ್ಣ, 19 ಅದೃಷ್ಟದ ಸಂಖ್ಯೆ, ಗುರುವಾರ ಶುಭದಿನವಾಗಿದೆ.
ಸಿಂಹ ರಾಶಿ
ಕೆಲಸ-ಕಾರ್ಯದಲ್ಲಿ ಈ ದಿನ ಉತ್ತಮವಾಗಿದೆ, ಕೆಲಸದಲ್ಲಿ ಉತ್ತಮ ಪ್ರತಿಫಲ ಸಿಗಲು ನೀವು ತಾಳ್ಮೆಯಿಂದ ಕಾಯುವುದು ಒಳ್ಳೆಯದು. ಈ ಅವಧಿಯಲ್ಲಿ ವ್ಯಾಪಾರಸ್ಥರು ಜಾಗರೂಕರಾಗಿರಬೇಕು. ಮನೆಯಲ್ಲಿ ವಾತಾವರಣ ಸುಧಾರಿಸಲಿದೆ. ಕುಟುಂಬ ಜೀವನದಲ್ಲಿ ಭಿನ್ನಾಭಿಪ್ರಾಯಗಳಿರಬಹುದು, ನೀವು ಕೋಪ ನಿಯಂತ್ರಿಸಿದರೆ ಒಳ್ಳೆಯದು. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯವಾಗಿರುತ್ತದೆ. ಹೆಚ್ಚು ಹಣ ಖರ್ಚು ಮಾಡಬೇಡಿ, ಆರೋಗ್ಯ ಸಮಸ್ಯೆವಿದ್ದರೆ ನಿರ್ಲಕ್ಷ್ಯ ಮಾಡಬೇಡಿ.
ಈ ವಾರ ನಿಮಗೆ ಅದೃಷ್ಟದ ಬಣ್ಣ ಹಸಿರು, ಅದೃಷ್ಟದ ಸಂಖ್ಯೆ: 44, ಸೋಮವಾರ ಶುಭವಾಗಿದೆ.
ಕನ್ಯಾ ರಾಶಿ
ವೃತ್ತಿ ಬದುಕಿನ ಸವಾಲುಗಳು ದೂರಾಗುವುದು, ಕೆಲಸ ಹುಡುಕುತ್ತಿದ್ದರೆ ಈ ಸಮಯದಲ್ಲಿ ಕೆಲಸ ಸಿಗಲಿದೆ. ವ್ಯಾಪಾರಿಗಳಿಗೆ ಈ ಅವಧಿಯಲ್ಲಿ ಲಾಭ ದೊರೆಯಲಿದೆ.
ಸಂಗಾತಿಯೊಂದಿಗಿನ ಸಂಬಂಧದಲ್ಲಿ ಸಾಮರಸ್ಯ ಇರುತ್ತದೆ. ವೈವಾಹಿಕ ಜೀವನದಲ್ಲಿ ಭಿನ್ನಾಭಿಪ್ರಾಯಗಳಿರಬಹುದು , ಆರೋಗ್ಯದ ಬಗ್ಗೆ ಜಾಗ್ರತೆವಹಿಸಿ.
ಈ ವಾರ ಅದೃಷ್ಟದ ಬಣ್ಣ ಆಕಾಶ ನೀಲಿ, ಅದೃಷ್ಟದ ಸಂಖ್ಯೆ 32, ಅದೃಷ್ಟದ ದಿನ ಸೋಮವಾರವಾಗಿದೆ.
ತುಲಾ ರಾಶಿ
ವೃತ್ತಿ ಜೀವನದ ಬಗ್ಗೆ ಜಾಗ್ರತೆವಹಿಸಬೇಕು, ಕೆಲವರಿಗೆ ಇಷ್ಟವಿಲ್ಲದಿದ್ದರೂ ವರ್ಗಾವಣೆ ಉಂಟಾಗಬಹುದು, ಆರ್ಥಿಕ ಪ್ರಯತ್ನಗಳಲ್ಲಿ ಅಡೆತಡೆ ಉಂಟಾಗಬಹುದು, ಸಾಲ ಸಿಗದೆ ನಿಮ್ಮ ಕೆಲಸ ಕಾರ್ಯಕ್ಕೆ ಅಡಚಣೆ ಉಂಟಾಗುವುದು. ನೀವು ಕುಟುಂಬಕ್ಕೆ ಸಮಯ ನೀಡದಿದ್ದರೆ ಕುಟುಂಬದಲ್ಲಿ ಅಸಮಧಾನ ಉಂಟಾಗಬಹುದು, ಈ ಸಮಯದಲ್ಲಿ ಖರ್ಚು ಹೆಚ್ಚಿರಲಿದೆ. ಆರೋಗ್ಯದ ಕಡೆಗೆ ಗಮನಹರಿಸಿ.
ಈ ವಾರ ಅದೃಷ್ಟದ ಬಣ್ಣ: ಕೆಂಪು, ಅದೃಷ್ಟದ ಸಂಖ್ಯೆ: 7, ಮಂಗಳವಾರ ಶುಭ ದಿನವಾಗಿದೆ.
ವೃಶ್ಚಿಕ ರಾಶಿ
ಕೆಲಸ ಕಾರ್ಯದ ದೃಷ್ಟಿಯಿಂದ ನೋಡುವುದಾದರೆ ಈ ಅವಧಿ ಉತ್ತಮವಾಗಿದೆ. ಆಸ್ತಿ ಸಂಬಂಧಿಸಿದ ವ್ಯವಹಾರಕ್ಕೆ ಈ ದಿನ ಉತ್ತಮವಾಗಿದೆ. ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ. ಕುಟುಂಬ ಜೀವನ, ವೈವಾಹಿಕ ಜೀವನ ಚೆನ್ನಾಗಿರಲಿದೆ. ಈ ಅವಧಿಯಲ್ಲಿ ಆರೋಗ್ಯ ಚೆನ್ನಾಗಿರಲಿದೆ.
ಈ ವಾರ ನಿಮಗೆ ಅದೃಷ್ಟ ಬಣ್ಣ ಕಂದು, ಅದೃಷ್ಟ ಸಂಖ್ಯೆ, 16, ಬುಧವಾರ ಶುಭ ದಿನವಾಗಿದೆ.
ಧನು ರಾಶಿ
ಈ ವಾರದ ಆರಂಭದಲ್ಲಿ ಕೆಲ ಸವಾಲುಗಳು ಇರಬಹುದು, ಸಾಲ ನೀಡಿದ ಹಣ ಸಿಗದೆ ಮತ್ತಷ್ಟು ಕಷ್ಟವಾಗುವುದು. ಇದೇ ಕಾರಣಕ್ಕೆ ಚಿಂತೆ ಕಾಡುವುದು.
ಉದ್ಯೋಗಿಗಳಿಗೆ ಕಳೆದ ವಾರಕ್ಕಿಂತ ಈ ವಾರ ಉತ್ತಮವಾಗಿರುತ್ತದೆ. ಕೆಲವು ಪ್ರಮುಖ ಕೆಲಸವನ್ನು ಪೂರ್ಣಗೊಳಿಸಲು ಶ್ರಮಿಸುತ್ತಿದ್ದರೆ ಈ ವಾರ ನೀವು ಉತ್ತಮ ಯಶಸ್ಸನ್ನು ಪಡೆಯಬಹುದು. ನಿಮ್ಮ ಸಹೋದ್ಯೋಗಿಗಳನ್ನು ಅತಿಯಾಗಿ ನಂಬಬೇಡಿ. ವಾರದ ಕೊನೆಯಲ್ಲಿ ಕುಟುಂಬದ ಜೊತೆಗೆ ಸಮಯ ಕಳೆಯುತ್ತೀರಿ.ಈ ವಾರ ಅದೃಷ್ಟದ ಬಣ್ಣ: ಕಿತ್ತಳೆ, ಅದೃಷ್ಟದ ಸಂಖ್ಯೆ: 37, ಶುಭ ದಿನ: ಗುರುವಾರ
ಮಕರ ರಾಶಿ
ಈ ವಾರ ಸವಾಲಿನಿಂದ ಕೂಡಿರಲಿದೆ, ವೃತ್ತಿ ಜೀವನದಲ್ಲಿ ಕೆಲ ಅಡೆತಡೆ ಎದುರಾಗಬಹುದು, ಈ ಅವಧಿಯಲ್ಲಿ ಹಣಕ್ಕೆ ಸಂಬಂಧಿಸಿದ ಯಾವುದೇ ವ್ಯವಹಾರ ಮಾಡದಿದ್ದರೆ ಒಳ್ಳೆಯದು. ಇನ್ನು ಕುಟುಂಬದಲ್ಲಿ ಒತ್ತಡದ ಪರಿಸ್ಥಿತಿ ಇರಲಿದೆ, ಸಂಗಾತಿಯ ಆರೋಗ್ಯದ ಕಡೆಗೆ ಗಮನಹರಿಸಿ. ಇನ್ನು ಕೋಪ ನಿಯಂತ್ರಿಸಿ, ನಿಮ್ಮ ಆರೋಗ್ಯದ ಕಡೆಯೂ ಗಮನಹರಿಸಿ.
ಈ ವಾರ ನಿಮಗೆ ಅದೃಷ್ಟದ ಬಣ್ಣ: ಬಿಳಿ, ಅದೃಷ್ಟದ ಸಂಖ್ಯೆ: 29, ಶುಕ್ರವಾರ ಅದೃಷ್ಟದ ದಿನವಾಗಿದೆ.
ಕುಂಭ ರಾಶಿ
ಈ ವಾರ ನಿಮಗೆ ಮಿಶ್ರಫಲ. ಉದ್ಯೋಗ ಮತ್ತು ವ್ಯವಹಾರದಲ್ಲಿ ಕೆಲ ಸವಾಲುಗಳಿವೆ, ಪ್ರತಿಕೂಲ ಸಂದರ್ಭಗಳಲ್ಲಿ, ನಿಮ್ಮ ಸ್ನೇಹಿತರು ಮತ್ತು ಕುಟುಂಬದಿಂದ ನೀವು ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ಹಣದ ವಿಷಯದಲ್ಲಿ ಈ ವಾರ ನಿಮಗೆ ಉತ್ತಮವಾಗಿರುತ್ತದೆ. ಆದಾಯವು ಉತ್ತಮವಾಗಿರುತ್ತದೆ. ಈ ಅವಧಿಯಲ್ಲಿ ಲಾಭದ ಅತಿಯಾಸೆಗೆ ರಿಸ್ಕಿ ಹಣಕಾಸು ಯೋಜನೆಗಳಲ್ಲಿ ಹೂಡಿಕೆ ಮಾಡಬೇಡಿ. ಸಂಗಾತಿಗೆ ಅರೋಗ್ಯ ಸಮಸ್ಯೆ ಇದ್ದರೆ ಅವರ ಆರೈಕೆ ಕಡೆಗೆ ಹೆಚ್ಚಿನ ಗಮನಹರಿಸಿ.
ಈ ವಾರ ನಿಮಗೆ ಅದೃಷ್ಟದ ಬಣ್ಣ: ನೇರಳೆ, ಅದೃಷ್ಟದ ಸಂಖ್ಯೆ: 5, ಶನಿವಾರ ಶುಭ ದಿನವಾಗಿದೆ.
ಮೀನ ರಾಶಿ
ಮೀನ ರಾಶಿಯ ವಿದ್ಯಾರ್ತಿಗಳು ಈ ಅವಧಿಯಲ್ಲಿ ಸ್ಪರ್ದಾತ್ಮಕ ಪರೀಕ್ಷೆ ಬರೆದರೆ ಉತ್ತಮ ಯಶಸ್ಸು ಪಡಯುತ್ತೀರಿ. ಉದ್ಯೋಗಿಗಳಿಗೆ ಈ ಸಮಯ ಉತ್ತಮವಿದೆ.
ಆರ್ಥಿಕವಾಗಿ ಈ ಸಮಯ ಉತ್ತಮವಾಗಿದೆ, ಆದರೆ ಹಣದ ವಿಷಯಗಳಲ್ಲಿ ಸ್ವಲ್ಪ ಜಾಗರೂಕರಾಗಿರಬೇಕು. ಇತರರ ಸಲಹೆಯ ಮೇರೆಗೆ ಹೂಡಿಕೆ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ. ವೈವಾಹಿಕ ಜೀವನ, ಕುಟುಂಬ ಜೀವನ ಚೆನ್ನಾಗಿರಲಿದೆ.
ಈ ಅವಧಿಯಲ್ಲಿ ಅದೃಷ್ಟದ ಬಣ್ಣ ಗುಲಾಬಿ, ಅದೃಷ್ಟದ ಸಂಖ್ಯೆ22, ಭಾನುವಾರ ಶುಭದಿನವಾಗಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











