Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಈ ವಾರದ (ಆಗಸ್ಟ್ 11-17) ರಾಶಿಫಲ ಪ್ರಕಾರ ನಿಮ್ಮ ರಾಶಿಗೆ ಹಣಕಾಸಿನ ಸ್ಥಿತಿಗತಿ ಹೇಗಿದೆ?
ಈ ವಾರದ (ಆಗಸ್ಟ್ 11-17) ಭವಿಷ್ಯ ಪ್ರಕಾರ ದ್ವಾದಶ ರಾಶಿಗಳ ಆರ್ಥಿಕ ಭವಿಷ್ಯ ನೋಡೋಣ:
ಮೇಷ ರಾಶಿ
ವೃತ್ತಿ ಜೀವನಕ್ಕೆ ಸಂಬಂಧಿಸಿದ ಪ್ರಮುಖ ಚಿಂತೆ ಬಗೆಹರಿಯಲಿದೆ. ಈ ಅವಧಿಯಲ್ಲಿ ನೀವು ಉತ್ತಮ ಪ್ರಗತಿ ಕಾಣುತ್ತೀರಿ, ನಿಮ್ಮ ಕೆಲಸ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳ್ಳಲಿದೆ. ಹೀಗಾಗಿ ಆರ್ಥಿಕವಾಗಿ ಈ ಅವಧಿ ಉತ್ತಮವಾಗಿದೆ, ವ್ಯಾಪಾರಿಗಳಿಗೆ ಈ ವಾರ ಧನ ಲಾಭವಾಗಲಿದೆ.

ವೃಷಭ ರಾಶಿ
ಈ ಆರ್ಥಿಕವಾಗಿ ನಿಮಗೆ ಒಳ್ಳೆಯದಿದೆ, ಹಣಕ್ಕೆ ಸಂಬಂಧಿಸಿದ ಸಮಸ್ಯೆ ಬಗೆಹರಿಯಲಿದೆ, ಹಣ ಸಿಗದೆ ಒದ್ದಾಡುತ್ತಿದ್ದರೆ ಆ ಕಷ್ಟ ದೂರಾಗಲಿದೆ, ಆದರೆ ಭವಿಷ್ಯದ ಹಣದ ಕುರಿತ ನಿರ್ಧಾರಗಳನ್ನು ತುಂಬಾನೇ ಆಲೋಚಿಸಿ ತೆಗೆದುಕೊಳ್ಳುವುದು ಒಳ್ಳೆಯದು.
ಮಿಥುನ ರಾಶಿ
ಆರ್ಥಿಕವಾಗಿ ಈ ಅವಧಿ ತುಂಬಾನೇ ಉತ್ತಮವಾಗಿದೆ, ಹಣದ ತೊಂದರೆ ಇರಲ್ಲ, ಹೂಡಿಕೆ ಬಗ್ಗೆ ಆಲೋಚಿಸುತ್ತೀರಿ. ಷೇರು ಮಾರುಕಟ್ಟೆಯಲ್ಲಿ ಹಣ ಹೂಡಲು ಸೂಕ್ತ ಸಮಯ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ.
ಕರ್ಕ ರಾಶಿ
ನೀವು ಖರ್ಚು ಕಡಿಮೆ ಮಾಡಿ ಉಳಿತಾಯದ ಕಡೆಗೆ ಗಮಹರಿಸುವುದು ಒಳ್ಳೆಯದು, ಇಲ್ಲದಿದ್ದರೆ ಮುಂದೆ ಆರ್ಥಿಕ ತೊಂದರೆಗಳನ್ನು ಎದುರಿಸಬೇಕಾಗುವುದು, ಆದ್ದರಿಂದ ಈ ಬಗ್ಗೆ ಜಾಗ್ರತೆವಹಿಸಿ. ವ್ಯಾಪಾರಿಗಳಿಗೆ ಈ ವಾರ ಅನುಕೂಲಕರವಾಗಿದೆ, ಬಯಸಿದಂತೆ ಲಾಭ ಗಳಿಸಲು ಸಾಧ್ಯವಾಗುವುದು. ಖರ್ಚು ಮಿತ ಮಾಡಿದರೆ ತುಂಬಾನೇ ಒಳ್ಳೆಯದು.
ಸಿಂಹ ರಾಶಿ
ಹಣಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರಮುಖ ನಿರ್ಧಾರ ತೆಗೆದುಕೊಳ್ಳಬೇಡಿ, ಅಲ್ಲದೆ ಮಿತಿಮೀರಿ ಖರ್ಚು ಮಾಡಲು ಕೂಡ ಹೋಗಬೇಡಿ, ನಿಮ್ಮ ಬಜೆಟ್‌ನಲ್ಲಿ ಅಸಮತೋಲಿತವಾಗಬಹುದು, ಇದರಿಂದ ಸಾಲ ಪಡೆಯಬೇಕಾಗುವುದು, ಹಾಗಾಗಿ ನೀವು ಖರ್ಚಿನ ವಿಷಯದಲ್ಲಿ ತುಂಬಾನೇ ಜಾಗ್ರತೆವಹಿಸಿ.
ಕನ್ಯಾ ರಾಶಿ
ಈ ವಾರ ಧನ ಲಾಭವಾಗಲಿದೆ. ಕೆಲಸಕ್ಕೆ ಸಂಬಂಧಿಸಿದ ಪ್ರಯಾಣದಲ್ಲಿ ಲಾಭ ಗಳಿಸುತ್ತೀರಿ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯಾಗುವ ಸಾಧ್ಯತೆ ಇದೆ. ವ್ಯಾಪಾರಿಗಳು ಹಠಾತ್ ಆರ್ಥಿಕ ಲಾಭವನ್ನು ಪಡೆಯಬಹುದು.
ತುಲಾ ರಾಶಿ
ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ, ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ಒಳ್ಳೆಯ ಪ್ರಗತಿ ಇರಲಿದೆ. ವ್ಯಾಪಾರಿಗಳಿಗೆ ತುಂಬಾ ಒಳ್ಳೆಯದಿದೆ, ನಿಮ್ಮ ವ್ಯಾಪಾರ-ವಹಿವಾಟು ತುಂಬಾ ಚೆನ್ನಾಗಿ ಇರಲಿದೆ.
ವೃಶ್ಚಿಕ ರಾಶಿ
ಆರ್ಥಿಕವಾಗಿ ಈ ಅವಧಿ ತುಂಬಾ ಚೆನ್ನಾಗಿರಲಿದೆ. ಈ ಅವಧಿಯಲ್ಲಿ ನೀವು ಐಷಾರಾಮಿ ವಸ್ತುಗಳಿಗೆ ಹಣ ಖರ್ಚು ಮಾಡುತ್ತೀರಿ, ನಿಮ್ಮ ಆರ್ಥಿಕ ಸ್ಥಿತಿ ಅಭಿವೃದ್ಧಿಯಾಗುವುದರಿಂದ ಸಾಲ ತೀರಿಸಲು ಸಾಧ್ಯವಾಗುವುದು.
ಧನು ರಾಶಿ
ಆರ್ಥಿಕವಾಗಿ ನೋಡುವುದಾದರೆ ಉದಯಮಿಗಳಿಗೆ ಏರಳಿತಗಳಿಂದ ಕೂಡಿರಲಿದೆ. ಆರ್ಥಿಕ ಕಾರಣದಿಂದ ಕೆಲಸವು ನಿಧಾನವಾಗುವುದು, ಹಣಕಾಸಿನ ವಿಷಯಗಳಲ್ಲಿ ನೀವು ಜಾಗರೂಕರಾಗಿರಬೇಕು. ಈ ಅವಧಿಯಲ್ಲಿ ನೀವು ಹೊಸ ಹೂಡಿಕೆ ಮಾಡದಿದ್ದರೆ ಒಳ್ಳೆಯದು.
ಮಕರ ರಾಶಿ
ಆರ್ಥಿಕವಾಗಿ ಈ ವಾರ ಉತ್ತಮವಾಗಿದೆ. ನಿಮ್ಮ ಬಜೆಟ್ ಅನ್ನು ಮೀರಿ ಹೋಗುವ ತಪ್ಪನ್ನು ಮಾಡಬೇಡಿ. ಹಣವನ್ನು ಮಿತಿಯಲ್ಲಿ ಖರ್ಚು ಮಾಡಿದರೆ ಒಳ್ಳೆಯದು. ವ್ಯಾಪಾರಿಗಳು ದೊಡ್ಡ ಹಣ ಹೂಡಿಕೆ ಮಾಡಬೆಡಿ.
ಕುಂಭ ರಾಶಿ
ಹಣಕಾಸಿನ ವಿಚಾರದಲ್ಲಿ ಈ ವಾರ ಉತ್ತಮವಾಗಿದೆ. ಹಣದ ಕಾರಣದಿಂದ ನಿಂತು ಹೋಗಿದ್ದ ಕೆಲಸ ಈ ಅವಧಿಯಲ್ಲಿ ಚುರುಕುಗೊಳ್ಳಲಿದೆ, ವ್ಯಾಪಾರಿಗಳಿಗೆ ಅಪೇಕ್ಷಿತ ಲಾಭ ದೊರೆಯಲಿದೆ.
ಮೀನ ರಾಶಿ
ಮೀನ ರಾಶಿಯವರಿಗೆ ಆರ್ಥಿಕವಾಗಿ ಈ ಅವಧಿ ಉತ್ತಮವಾಗಿದೆ. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುತ್ತಿರುವವರು ಒಳ್ಳೆಯ ಲಾಭ ಗಳಿಸಲು ಸಾಧ್ಯವಾಗುವುದು. ಆರ್ಥಿಕ ಕಾರಣದಿಂದ ಕೆಲಸ ಕಾರ್ಯಗಳಿಗೆ ತೊಂದರೆಯಾಗಲ್ಲ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications