Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಈ ವಾರದ ಆರ್ಥಿಕ ಭವಿಷ್ಯ ದ್ವಾದಶ ರಾಶಿಗಳಲ್ಲಿ ಯಾರಿಗೆ ಹೇಗಿರಲಿದೆ?
ಜ್ಯೋತಿಷ್ಯದ ಪ್ರಕಾರ ಈ ವಾರ ದ್ವಾದಶ ರಾಶಿಗಳ ಆರ್ಥಿಕ ಭವಿಷ್ಯ ಹೇಗಿದೆ?
ಮೇಷ ರಾಶಿ
ಈ ವಾರ ಆರ್ಥಿಕವಾಗಿಅ ಷ್ಟೊಂದು ಅನುಕೂಲಕರವಲ್ಲ, ಯಾವುದೇ ದೊಡ್ಡ ಹೂಡಿಕೆ ಮಾಡದಿರುವುದು ಒಳ್ಳೆಯದು.ಇನ್ನು ಮಾಡಿದ ಹೂಡಿಕೆಯಿಂದ ಕೂಡ ದೊಡ್ಡ ಲಾಭ ಗಳಿಸುವುದು ಕಷ್ಟವಾಗಬಹುದು, ಈ ಅವಧಿಯಲ್ಲಿ ಸಾಲ ಕೊಡುವುದು ಅಥವಾ ಪಡೆಯುವುದು ಮಾಡದೆ ಇದ್ದರೆ ಒಳ್ಳೆಯದು.

ವೃಷಭ ರಾಶಿ
ಈ ವಾರ ಆರ್ಥಿಕವಾಗಿ ನಿಮಗೆ ಉತ್ತಮವಾಗಿದೆ. ವ್ಯಾಪಾರಿಗಳು, ಉದ್ಯಮಿಗಳು ಈ ವಾರ ತಮ್ಮ ವ್ಯವಹಾರದಲ್ಲಿ ಉತ್ತಮ ಪ್ರಯೋಜನ ಪಡೆಯಬಹುದು. ಬರಬೇಕಾಗಿರುವ ಹಣ ಕೈ ಸೇರಲಿದೆ. ಹೂಡಿಕೆ ಮಾಡಲು ಅನುಕೂಲಕರವಾಗಿದೆ, ಹಣದ ಸಮಸ್ಯೆ ಇರದ ಕಾರಣ ಸ್ವಂತ ಕೆಲಸ ಕಾರ್ಯಗಳಿಗೆ ಅಡಚಣೆ ಉಂಟಾಗುವುದಿಲ್ಲ.
ಮಿಥುನ ರಾಶಿ
ಮಿಥುನ ರಾಶಿಯವರಿಗೆ ಈ ವಾರ ಆರ್ಥಿಕವಾಗಿ ಉತ್ತಮವಾಗಿದೆ, ನಿಮ್ಮ ಆರ್ಥಿಕ ಪ್ರಯತ್ನಗಳಿಗೆ ಉತ್ತಮ ಪ್ರತಿಫಲ ಸಿಗಲಿದೆ. ಈಗ ಮಾಡಿದ ಕೆಲಸಗಳಿಗೆ ಭವಿಷ್ಯದಲ್ಲಿ ಕೂಡ ನೀವು ಉತ್ತಮ ಪ್ರಯೋಜನ ಪಡೆಯುತ್ತೀರಿ, ಆರ್ಥಿಕವಾಗಿ ಈ ಅವಧಿ ಚೆನ್ನಾಗಿರಲಿದೆ.
ಕರ್ಕ ರಾಶಿ
ಈ ವಾರ ನೀವು ಆರ್ಥಿಕವಾಗಿ ಜಾಗ್ರತೆವಹಿಸಬೇಕು, ಹಣದ ನಷ್ಟ ಉಂಟಾಗಬಹುದು, ನೀವು ಬಜೆಟ್ ಮೀರಿ ಖರ್ಚು ಮಾಡಲು ಹೋಗಬೇಡಿ. ಯಾವುದೇ ಹೂಡಿಕೆ ಮಾಡುವುದಾದರೆ ಯೋಚಿಸಿ ಮಾಡುವುದು ಒಳ್ಳೆಯದು. ಸಾಲದ ವ್ಯವಹಾರ ಮಾಡಲು ಹೋಗಬೇಡಿ.
ಸಿಂಹ ರಾಶಿ
ಆರ್ಥಿಕವಾಗಿ ಈ ಅವಧಿ ತುಂಬಾ ಚೆನ್ನಾಗಿರಲಿದೆ, ನಿಮ್ಮ ಶ್ರಮಕ್ಕೆ ತಕ್ಕಪ್ರತಿಫಲ ದೊರೆಯಲಿದೆ. ಆರ್ಥಿಕವಾಗಿ ನೀವು ಉತ್ತಮ ಪ್ರಯೋಜನ ಪಡೆಯುತ್ತೀರಿ, ವ್ಯಾಪಾರಿಗಳು ತಮ್ಮ ವ್ಯವಹಾರದಲ್ಲಿ ಲಾಭ ಗಳಿಸಬಹುದು, ಹೂಡಿಕೆಗೆ ಈ ಅವಧಿ ಉತ್ತಮವಾಗಿದೆ.
ಕನ್ಯಾ ರಾಶಿ
ಆರ್ಥಿಕವಾಗಿ ನಿಮಗೆ ಬೆಳವಣಿಗೆ ಸೂಚಿಸುತ್ತದೆ, ಹಣಕ್ಕೆ ಸಂಬಂಧಿಸಿದ ಪ್ರಯತ್ನಗಳಿಗೆ ಫಲ ಸಿಗಲಿದೆ, ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಬಡ್ತಿಗೆ ಕಾಯುತ್ತಿದ್ದರೆ ಈ ಅವಧಿಯಲ್ಲಿ ಶುಭ ಸುದ್ದಿ ಸಿಗಲಿದೆ, ನಿಮ್ಮ ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ ಕಂಡು ಬರಲಿದೆ.
ತುಲಾ ರಾಶಿ
ಹಣಕಾಸಿನ ನಿರ್ಧಾರಗಳನ್ನು ಆಲೋಚಿಸಿ ತೆಗೆದುಕೊಳ್ಳಬೇಕು. ಬೇರೆಯವರು ಹೇಳಿದರು ಅಂತ ಹೂಡಿಕೆ ಮಾಡದೆ ಅದರ ಚೆನ್ನಾಗಿ ವಿಚಾರಣೆ ಮಾಡಿ ನಂತರ ಮಾಡುವುದು ಒಳ್ಳೆಯದು. ಪಾಲುದಾರಿಕೆಯ ವ್ಯವಹಾರ ಮಾಡುವವರಿಗೆ ಈ ಅವಧಿ ಅನುಕೂಲಕರವಾಗಿರಲಿದೆ.
ವೃಶ್ಚಿಕ ರಾಶಿ
ಆರ್ಥಿಕವಾಗಿ ಈ ಅವಧಿ ಅನುಕೂಲಕರವಾಗಿರಲಿದೆ. ನಿಮ್ಮ ಯೋಜನೆಗೆ ತಕ್ಕ ಪ್ರತಿಫಲ ಸಿಗಲಿದೆ. ಸಂಪತ್ತು ಹೆಚ್ಚಾಗಲಿದೆ, ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ವೃತ್ತಿ ಬದುಕಿನಲ್ಲಿ ಸ್ಥಿರತೆ ಇರಲಿದೆ.
ಧನು ರಾಶಿ
ಹಣದ ವಿಚಾರದಲ್ಲಿ ಈ ವಾರ ಅಷ್ಟೊಂದು ಅನುಕೂಲಕರವಲ್ಲ, ಅಲ್ಲದೆ ನೀವು ಬಯಸಿದ ಪ್ರಮುಖ ವಸ್ತು ಖರೀದಿಸಲು ಹಣ ಸಾಕಾಗಿಲ್ಲ ಎಂಬ ನಿರಾಸೆ ಬೇರೆ ಉಂಟಾಗುವುದು. ಆರ್ಥಿಕ ಪರಿಸ್ಥಿತಿ ಸುಧಾರಿಸಲು ನೀವು ಅವಕಾಶವನ್ನು ಉತ್ತಮವಾಗಿ ಬಳಸಿಕೊಳ್ಳಲು ಪ್ರಯತ್ನಿಸಬೇಕು.
ಮಕರ ರಾಶಿ
ಮಕರ ರಾಶಿಯವರಿಗೆ ಆರ್ಥಿಕವಾಗಿ ಈ ಅವಧಿ ಅನುಕೂಲಕರವಲ್ಲ, ಒತ್ತಡ ಅಧಿಕವಿರಲಿದೆ. ಹಣಕ್ಕೆ ಸಂಬಂಧಿಸಿದ ಪ್ರಯತ್ನ ವಿಫಲವಾಗಬಹುದು, ಅಗ್ಯತಕ್ಕಿಂತ ಹೆಚ್ಚು ಸಾಲ ಮಾಡಲು ಹೋಗಬೇಡಿ.
ಕುಂಭ ರಾಶಿ
ಆರ್ಥಿಕವಾಗಿ ಈ ಅವಧಿ ಉತ್ತಮವಾಗಿರಲಿದೆ, ಹಣಕಾಸಿನ ಪರಿಸ್ಥಿತಿ ಸುಧಾರಿಸಲಿದೆ, ಯಾವುದೇ ಆತುರದ ಹಣಕಾಸಿನ ನಿರ್ಧಾರ ತೆಗೆದುಕೊಳ್ಳಬೇಡಿ. ಯಾವುದೇ ರಿಸ್ಕಿ ಹೂಡಿಕೆ ಮಾಡಲು ಹೋಗಬೇಡಿ.
ಮೀನ ರಾಶಿ
ಆರ್ಥಿಕವಾಗಿ ಈ ಅವಧಿ ಉತ್ತಮವಾಗಿರಲಿದೆ, ಆರ್ಥಿಕವಾಗಿ ಈ ಅವಧಿ ಉತ್ತಮವಾದ ಪ್ರಯೋಜನ ಪಡೆಯುತ್ತೀರಿ. ಆರ್ಥಿಕ ಸಮಸ್ಯೆ ಬಗೆಹರಿಯಲಿದೆ, ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ.
ಸೂಚನೆ
ಈ ಲೇಖನವನ್ನು ಜ್ಯೋತಿಷ್ಯ ಪ್ರಕಾರ ನೀಡಲಾಗಿದ್ದು, ಮಾಹಿತಿಯ ಉದ್ದೇಶದಿಂದ ಮಾತ್ರ ನೀಡಲಾಗಿದೆ, ಯಾವುದೇ ನಿರ್ಧಾರ ಅಥವಾ ನಷ್ಟಗಳಿಗೆ Kannada Boldsky.com ಹೊಣೆಯಲ್ಲ. ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ಅಥವಾ ಹೂಡಿಕೆ ಮುನ್ನ ತಜ್ಞರ ಸಲಹೆ ಪಡೆಯುವುದು ಸೂಕ್ತ
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











