Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
ಈ ವಾರದ(ಸೆ. 16-22) ಭವಿಷ್ಯ ಪ್ರಕಾರ ದ್ವಾದಶ ರಾಶಿಗಳ ಆರ್ಥಿಕ ಭವಿಷ್ಯ ಹೇಗಿದೆ?
ವಾರ ಭವಿಷ್ಯ ಪ್ರಕಾರ ನಿಮ್ಮ ರಾಶಿಯ ಅರ್ಥಿಕ ಸ್ಥಿತಿ ಹೇಗಿರಲಿದೆ?
ಮೇಷ ರಾಶಿ
ಈ ವಾರ ವೃತ್ತಿ ಜೀವನ ಚೆನ್ನಾಗಿರಲಿದೆ, ಆರ್ಥಿಕವಾಗಿಯೂ ನಿಮಗೆ ತುಂಬಾ ಉತ್ತಮವಾಗಿರಲಿದೆ. ಆದರೆ ನೀವು ಬಜೆಟ್‌ಗೆ ತಕ್ಕಂತೆ ಖರ್ಚು ಮಾಡಿದರೆ ಒಳ್ಳೆಯದು. ಉಳಿದಂತೆ ಈ ವಾರ ನಿಮಗೆ ತುಂಬಾ ಉತ್ತಮವಾಗಿರಲಿದೆ.

ವೃಷಭ ರಾಶಿ
ಆರ್ಥಿಕವಾಗಿ ಈ ಅವಧಿ ಅಷ್ಟೊಂದು ಅನುಕೂಲಕರವಲ್ಲ. ನೀವು ಬಜೆಟ್ ವಿಚಾರದಲ್ಲಿ ತುಂಬಾ ಲೆಕ್ಕಾಚಾರ ಹಾಕಿದರೆ ಒಳ್ಳೆಯದು, ನೋಡಿ ಖರ್ಚು ಮಾಡಿ. ಹಣದ ಸಮಸ್ಯೆ ಕಾರಣ ಕೆಲ ಪ್ರಮುಖ ಸಮಸ್ಯೆಗೆ ಅಡ್ಡಿಯಾಗಬಹುದು.
ಮಿಥುನ ರಾಶಿ
ಈ ವಾರ ಹಣದ ವಿಚಾರದಲ್ಲಿ ನೀವು ಜಾಗ್ರತೆವಹಿಸಬೇಕು, ಈ ಅವಧಿಯಲ್ಲಿ ಹಣಕಾಸಿನ ವಿಷಯದಲ್ಲಿ ತುಂಬಾನೇ ಏರಳಿತವಿರಬಹುದು. ಕೇಳಿದ ಕಡೆ ಹಣ ಸಿಗದೆ ನಿಮ್ಮ ಚೆಂತೆಗೆ ಕಾರಣವಾಗಬಹುದು, ಹಿಂದೆ ಮುಂದೆ ಯೋಚಿಸದೆ ಹೂಡಿಕೆ ಮಾಡಬೇಡಿ.
ಕರ್ಕ ರಾಶಿ
ಈ ವಾರ ನಿಮಗೆ ಉತ್ತಮವಾಗಿರಲಿದೆ. ಈ ಸಮಯದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಫಲ ಸಿಗಲಿದೆ, ಪಾಲುದಾರಿಕೆಯ ವ್ಯಾಪಾರ ಮಾಡುತ್ತಿದ್ದರೆ ಈ ಸಮಯದಲ್ಲಿ ಒಳ್ಳೆಯ ಲಾಭ ಗಳಿಸಬಹುದು. ಹೊಸ ಆದಾಯಕ್ಕೆ ಪ್ರಯತ್ನ ಮಾಡುತ್ತಿದ್ದರೆ ಈ ಅವಧಿ ಅನುಕೂಲಕರವಾಗಿದೆ.
ಸಿಂಹ ರಾಶಿ
ಆರ್ಥಿಕ ದೃಷ್ಟಿಯಿಂದ ನೋಡುವುದಾದರೆ ಈ ಸಮಯದಲ್ಲಿ ಖರ್ಚು ಅಧಿಕವಿರಲಿದೆ. ಹಣವು ನೀವು ಬಯಸದೆ ಇದ್ದರೂ ಅನಿವಾರ್ಯವಾಗಿ ಖರ್ಚು ಮಾಡಬೇಕಾಗುತ್ತದೆ. ನೀವು ಯಾವುದೇ ನಿರ್ಧಾರ ತೆಗೆದುಕೊಳ್ಳುವುದಾದರೆ ಆಲೋಚಿಸಿ ತೆಗೆದುಕೊಂಡರೆ ಒಳ್ಳೆಯದು.
ಕನ್ಯಾ ರಾಶಿ
ಆರ್ಥಿಕವಾಗಿ ಈ ಅವಧಿ ನಿಮಗೆ ಉತ್ತಮವಾಗಿರಲಿದೆ. ಆಸ್ತಿ, ಮನೆ, ವಾಹನ ಇತ್ಯಾದಿಗಳನ್ನು ಖರೀದಿಸಲು ಯೋಚಿಸುತ್ತಿದ್ದರೆ ಈ ಸಮಯ ನಿಮಗೆ ಅನುಕೂಲಕರವಾಗಿರುತ್ತದೆ.
ವ್ಯಾಪಾರಿಗಳು ಉತ್ತಮ ಲಾಭ ಗಳಿಸುತ್ತೀರಿ.
ತುಲಾ ರಾಶಿ
ಹಣಕ್ಕೆ ಸಂಬಂಧಿಸಿದ ಸಮಸ್ಯೆ ಬಗೆಹರಿಯಲಿದೆ, ಆದರೆ ಹೆಚ್ಚು ಖರ್ಚು ಮಾಡಬೇಡಿ. ಹಣದ ವಿಷಯದಲ್ಲಿ ಜಾಗ್ರತೆವಹಿಸಿದರೆ ಯಾವುದೇ ಸಮಸ್ಯೆಯಿರಲ್ಲ, ಈ ಅವಧಿ ನಿಮಗೆ ತುಂಬಾನೇ ಉತ್ತಮವಾಗಿರಲಿದೆ.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯವರ ಆರ್ಥಿಕ ಸ್ಥಿತಿ ತುಂಬಾ ಉತ್ತಮವಾಗಿರಲಿದೆ. ಈ ಸಮಯದಲ್ಲಿ ಹೆಚ್ಚು ಖರ್ಚು ಮಾಡಲು ಹೋಗಬೇಡಿ, ಹಣಕ್ಕೆ ಸಂಬಂಧಿಸಿದ ವ್ಯವಹಾರಗಳನ್ನು ಮಾಡಲು ಹೋಗಬೇಡಿ. ವ್ಯಾಪಾರಿಗಳಿಗೂ ಈ ಅವಧಿ ಮಧ್ಯಮವಾಗಿರಲಿದೆ.
ಧನು ರಾಶಿ
ಆರ್ಥಿಕ ದೃಷ್ಟಿಯಿಂದ ಈ ಅವಧಿ ಉತ್ತಮವಾಗಿರಲಿದೆ. ನೀವು ಸ್ವಂತ ವ್ಯವಹಾರವನ್ನು ಪ್ರಾರಂಭಿಸಲು ಬಯಸಿದ್ದು ಅದಕ್ಕೆ ಪ್ರಯತ್ನ ಮಾಡುತ್ತಿದ್ದರೆ ಈ ಸಮಯ ನಿಮಗೆ ತುಂಬಾನೇ ಅನುಕೂಲಕರವಾಗಿದೆ. ಆರ್ಥಿಕ ವಿಷಯದಲ್ಲಿ ನಿಮ್ಮ ಆಪ್ತರಿಂದ ನೆರವು ಕೂಡ ದೊರೆಯಲಿದೆ.
ಮಕರ ರಾಶಿ
ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಈ ಸಮಯ ನಿಮಗೆ ತುಂಬಾನೇ ಲಾಭದಾಯಕವಾಗಿರಲಿದೆ. ವ್ಯಾಪಾರಿಗಳು ಈ ಸಮಯದಲ್ಲಿ ಉತ್ತಮ ಆರ್ಥಿಕ ಪ್ರಯೋಜನ ಪಡೆಯಬಹುದು.
ಕುಂಭ ರಾಶಿ
ಈ ಸಮಯದಲ್ಲಿ ಹಣದ ಚಿಂತೆ ಕಾಡಬಹುದು, ನೀವು ಯಾವುದೇ ಸಾಲ ಮಾಡಿದ್ದರೆ ಮರುಪಾವತಿಗೆ ಒತ್ತಡವಿರಬಹುದು. ವ್ಯಾಪಾರಿಗಳಿಗೆ, ಉದ್ಯಮಿಗಳಿಗೆ ಈ ಸಮಯದಲ್ಲಿ ಸವಾಲುಗಳಿರಬಹುದು
ಮೀನ ರಾಶಿ
ನೀವು ಉದ್ಯಮಿಯಾಗಿದ್ದರೆ ಈ ಅವಧಿ ಆರ್ಥಿಕವಾಗಿ ಉತ್ತಮವಾಗಿದೆ. ನಿಮ್ಮ ವ್ಯವಹಾರವನ್ನು ವಿಸ್ತರಿಸಲು ಯೋಜಿಸುತ್ತಿದ್ದರೆ ನಿಮಗೆ ಉತ್ತಮ ಅವಕಾಶ ಸಿಗಲಿದೆ. ವ್ಯಾಪಾರಿಗಳಿಗೆ ಈ ಸಮಯ ಉತ್ತಮವಾಗಿರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
