Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಈ ವಾರದ ಆರ್ಥಿಕ ಭವಿಷ್ಯ ಪ್ರಕಾರ: ಈ 7 ರಾಶಿಗಳಿಗೆ ಹಣಕಾಸು ಚೆನ್ನಾಗಿರಲಿದೆ
ಈ ವಾರದ (ಸೆಪ್ಟೆಂಬರ್ 22-28ರವರೆಗಿನ) ಭವಿಷ್ಯ ಪ್ರಕಾರ ಹಣಕಾಸಿನ ವಿಚಾರದಲ್ಲಿ ದ್ವಾದಶ ರಾಶಿಗಳಿಗೆ ಹೇಗಿರಲಿದೆ?
ಮೇಷ ರಾಶಿ
ಆರ್ಥಿಕವಾಗಿ ಈ ಅವಧಿ ಅನುಕೂಲಕರವಾಗಿದೆ. ಹಣದ ಸಮಸ್ಯೆ ಇರಲ್ಲ, ಇನ್ನು ವ್ಯಾಪಾರಿಗಳು ಆರ್ಥಿಕ ಲಾಭ ಪಡೆಯುತ್ತೀರಿ. ಇನ್ನು ಹೂಡಿಕೆಗೆ ಈ ಸಮಯ ಉತ್ತಮವಾಗಿದೆ. ಒಟ್ಟಿನಲ್ಲಿ ಆರ್ಥಿಕವಾಗಿ ಈ ಅವಧಿ ಉತ್ತಮವಾಗಿರಲಿದೆ.

ವೃಷಭ ರಾಶಿ
ವೃಷಭ ರಾಶಿಯವರಿಗೆ ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳು ಬಗೆಹರಿಯಲಿವೆ. ಹಣದ ಕೊರತೆಯಿಂದ ಯಾವುದೇ ಕೆಲಸ ಅಪೂರ್ಣವಾಗಿದ್ದರೆ ಮತ್ತೆ ಶುರುವಾಗಲಿದೆ. ನಿಮ್ಮ ಅರ್ಥಿಕ ಪ್ರಯತ್ನಗಳಲ್ಲಿ ಯಶಸ್ಸು ಸಿಗಲಿದೆ.
ಮಿಥುನ ರಾಶಿ
ಉದ್ಯೋಗಕ್ಕಾಗಿ ಮಾಡುವ ಪ್ರಯತ್ನಗಳು ಯಶಸ್ವಿಯಾಗುತ್ತವೆ. ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಕಂಡು ಬರಲಿದೆ. ಇದರಿಂದಾಗಿ ಹಣಕ್ಕೆ ಸಂಬಂಧಿಸಿದಂತೆ ಕಾಡುತ್ತಿದ್ದ ಸಮಸ್ಯೆ ಕಡಿಮೆಯಾಗಲಿದೆ.
ಕರ್ಕ ರಾಶಿ
ಕರ್ಕ ರಾಶಿಯ ವ್ಯಾಪಾರಿಗಳಿಗೆ ಈ ಅವಧಿ ಅನುಕೂಲರವಾಗಿದೆ. ನಿಮ್ಮ ಪ್ರಯತ್ನಗಳಿಗೆ ತಕ್ಕ ಲಾಭ ದೊರೆಯಲಿದೆ. ಉಳಿದವರಿಗೂ ಆರ್ಥಿಕವಾಗಿ ಈ ಸಮಯ ಉತ್ತಮವಾಗಿರಲಿದೆ, ಅಲ್ಲದೆ ಈ ಸಮಯದಲ್ಲಿ ಪ್ರಯಾಣ ಮಾಡುವ ಸಾಧ್ಯತೆ ಇದೆ.
ಸಿಂಹ ರಾಶಿ
ನೀವು ನಿರುದ್ಯೋಗಿಗಳಾಗಿದ್ದರೆ ಮತ್ತು ಉದ್ಯೋಗವನ್ನು ಹುಡುಕುತ್ತಿದ್ದರೆ ನಿಮ್ಮ ಪ್ರಯತ್ನ ಮತ್ತಷ್ಟು ಚುರುಕುಗೊಳಿಸಿ, ಇನ್ನು ಹಣದ ಬಗ್ಗೆ ನೋಡುವುದಾದರೆ ಖರ್ಚು ಅಧಿಕವಿರಲಿದೆ,
ಅದರೆ ನಿಮ್ಮ ಬಜೆಟ್ ಮೀರಿ ಖರ್ಚು ಮಾಡಲು ಹೋಗಬೇಡಿ ಎಂದು ಸಲಹೆ ನೀಡಲಾಗುವುದು.
ಕನ್ಯಾ ರಾಶಿ
ಈ ಅವಧಿಯಲ್ಲಿ ನೀವು ಹಣದ ಬಗ್ಗೆ ಜಾಗ್ರತೆವಹಿಸಿ, ಸಾಲ ಕೊಡುವಾಗಲೂ ಅಷ್ಟೇ ಜಾಗ್ರತೆವಹಿಸಿ. ಇನ್ನು ವ್ಯಾಪಾರಿಗಳು ಹಣದ ಹೂಡಿಕೆ ಮಾಡುವುದಾದರೆ ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ.
ತುಲಾ ರಾಶಿ
ಹಣಕ್ಕೆ ಸಂಬಂಧಿಸಿದಂತೆ ನೀವು ಮಾಡುವ ಪ್ರಯತ್ನಗಳಲ್ಲಿ ಯಶಸ್ಸು ಸಿಗಲಿದೆ. ನೀವು ಹೊಸ ಆಸ್ತಿಯನ್ನು ಖರೀದಿಸಲು ಯೋಜಿಸುತ್ತಿದ್ದರೆ ನಿಮ್ಮ ಯೋಜನೆಗಳನ್ನು ಸ್ವಲ್ಪ ಸಮಯದವರೆಗೆ ಮುಂದೂಡಬೇಕಾಗುತ್ತದೆ. ಹಣವನ್ನು ಮಿತಿ ಮೀರಿ ಖರ್ಚು ಮಾಡಿದರೆ ಮುಂದೆ ಕಷ್ಟವಾಗಬಹುದು.
ವೃಶ್ಚಿಕ ರಾಶಿ
ನಿಮ್ಮ ಕಠಿಣ ಪರಿಶ್ರಮಕ್ಕೆ ಸರಿಯಾದ ಫಲಿತಾಂಶವನ್ನು ಪಡೆಯುತ್ತೀರಿ. ವಾರದ ಆರಂಭದಲ್ಲಿ ನೀವು ಕೆಲಸಕ್ಕೆ ಸಂಬಂಧಿಸಿದ ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯುವಿರಿ, ನಿಮ್ಮ ಆದಾಯದಲ್ಲಿ ಹೆಚ್ಚಳವಾಗುವ ಸಾಧ್ಯತೆ ಇದೆ. ವ್ಯಾಪಾರಿಗಳು ಆರ್ಥಿಕ ಲಾಭ ಪಡೆಯುತ್ತೀರಿ.
ಧನು ರಾಶಿ
ವೃತ್ತಿಪರ ಜೀವನದಲ್ಲಿ ನಿಮ್ಮ ಕಾರ್ಯಕ್ಷಮತೆ ಉತ್ತಮವಾಗಿರುತ್ತದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ದುಂದು ವೆಚ್ಚ ಮಾಡಬೇಡಿ. ನೀವು ಸಾಲ ತೆಗೆದುಕೊಂಡಿದ್ದರೆ ಅದನ್ನು ಮರುಪಾವತಿ ಮಾಡಿದರೆ ಒಳ್ಳೆಯದು, ಇನ್ನು ಹಣವಿದೆ ಎಂದು ಬಜೆಟ್ ಮೀರಿ ಖರ್ಚು ಮಾಡಬೇಡಿ.
ಮಕರ ರಾಶಿ
ಹಣದ ವಿಷಯದಲ್ಲಿ ಈ ವಾರ ನಿಮಗೆ ಸರಾಸರಿಯಾಗಲಿದೆ. ದೊಡ್ಡ ಖರ್ಚು ಮಾಡಲು ಇದು ಸರಿಯಾದ ಸಮಯವಲ್ಲ. ಹಾಗಾಗಿ ಈ ಸಮಯದಲ್ಲಿ ಯಾವುದೇ ಹೂಡಿಕೆ ಮಾಡದಿದ್ದರೆ ಒಳ್ಳೆಯದು. ಇನ್ನು ವ್ಯಾಪಾರಿಗಳು ಈ ಸಮಯದಲ್ಲಿ ಸಾಲದ ವ್ಯವಹಾರ ಮಾಡಲು ಹೋಗಬೇಡಿ.
ಕುಂಭ ರಾಶಿ
ವೃತ್ತಿ ಮತ್ತು ವ್ಯವಹಾರಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ತರಾತುರಿಯಲ್ಲಿ ತೆಗೆದುಕೊಳ್ಳಬೇಡಿ. ಒಂದು ವೇಳೆ ಹಾಗೆ ಮಾಡಿದರೆ ಹಣ ನಷ್ಟವಾಗಬಹುದು. ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಲು ಕೂಡ ಈ ಸಮಯ ನಿಮಗೆ ಅನುಕೂಲಕರವಲ್ಲ.
ಮೀನ ರಾಶಿ
ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ಪ್ರಗತಿಯ ಸೂಚನೆಯಿದೆ. ಉದ್ಯೋಗವನ್ನು ಬದಲಾಯಿಸಲು ಆಲೋಚಿಸುತ್ತಿದ್ದರೆ ನಿಮ್ಮ ಆರ್ಥಿಕ ಸ್ಥಿತಿ ಬಲಪಡಿಸುವಂಥ ಕೆಲಸ ಸಿಗಲಿದೆ. ವ್ಯಾಪಾರಿಗಳು ಕೂಡ ತಮ್ಮ ವ್ಯವಹಾರದಲ್ಲಿ ಪ್ರಗತಿಯನ್ನು ಕಾಣುತ್ತೀರಿ. ಒಟ್ಟಿನಲ್ಲಿ ಈ ವಾರ ಆರ್ಥಿಕವಾಗಿ ಒಳ್ಳೆಯದಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











