ವಾರದ ಪ್ರೀತಿ ಭವಿಷ್ಯ (ಜೂನ್‌15-22): ಈ ವಾರ ನಿಮ್ಮ ಆರೋಗ್ಯ ಫಲ ಹೇಗಿದೆ?

ವೈದಿಕ ಶಾಸ್ತ್ರದ ಪ್ರಕಾರ ದ್ವಾದಶ ರಾಶಿಗಳ ಆರೋಗ್ಯ ಭವಿಷ್ಯ ಈ ವಾರ ಹೇಗಿರಲಿದೆ ನೋಡೋಣ:

ಮೇಷ ರಾಶಿ
ಆರೋಗ್ಯದ ದೃಷ್ಟಿಯಿಂದ ಈ ವಾರ ನಿಮಗೆ ತುಂಬಾ ಒಳ್ಳೆಯದಿದೆ, ಏನಾದರೂ ಆರೋಗ್ಯ ಸಮಸ್ಯೆ ಅದು ಬಗೆಹರಿಯಲಿದೆ. ನೀವು ಮಾನಸಿಕವಾಗಿ ತುಂಬಾ ಬಲಶಾಲಿಯಾಗುತ್ತೀರಿ ಮತ್ತು ನಿಮ್ಮ ಎಲ್ಲಾ ನಿರ್ಧಾರಗಳನ್ನು ಬಹಳ ಆಲೋಚಿಸಿ ತೆಗೆದುಕೊಳ್ಳುತ್ತೀರಿ.

Weekly Health Horoscope

ವೃಷಭ ರಾಶಿ
ಆರೋಗ್ಯದ ವಿಷಯದಲ್ಲಿ ಈ ವಾರ ನಿಮಗೆ ಮಿಶ್ರಫಲ. ವಾರದ ಆರಂಭವು ನಿಮಗೆ ಉತ್ತಮವಾಗಿರುತ್ತದೆ, ಆದರೆ ನಂತರ ಆರೋಗ್ಯ ಸಮಸ್ಯೆಗಳಿರಲ್ಲ, ನಿಮ್ಮ ಆಹಾರ ಮತ್ತು ಪಾನೀಯಗಳ ಬಗ್ಗೆ ನೀವು ವಿಶೇಷ ಕಾಳಜಿ ವಹಿಸಬೇಕು. ನೀವು ಹಸಿರು ತರಕಾರಿಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸಿದರೆ ಉತ್ತಮ.

ಮಿಥುನ ರಾಶಿ
ಕಳಪೆ ಆರೋಗ್ಯದಿಂದಾಗಿ, ಈ ಅವಧಿಯಲ್ಲಿ ನೀವು ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಕೆಟ್ಟ ಚಟಗಳಿದ್ದರೆ ಅದನ್ನು ಬಿಡಬೇಕು ಇಲ್ಲದಿದ್ದರೆ ಸಮಸ್ಯೆಯಾಗುವುದು. ನಿಮ್ಮ ದಿನಚರಿಯಲ್ಲಿ ಯೋಗ ಮತ್ತು ಧ್ಯಾನವನ್ನು ಸೇರಿಸಿದರೆ ಉತ್ತಮ.

ಕರ್ಕ ರಾಶಿ
ನೀವು ಕೆಲಸದಲ್ಲಿ ತುಂಬಾ ನಿರತರಾಗಿರುತ್ತೀರಿ. ಈ ಅವಧಿಯಲ್ಲಿ, ಕೆಲವು ದೀರ್ಘಕಾಲದ ಕಾಯಿಲೆಗಳು ನಿಮ್ಮನ್ನು ಕಾಡಬಹುದು. ವಿಶೇಷವಾಗಿ ನೀವು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೊಂದಿರುವ ಸಾಧ್ಯತೆಯಿದೆ. ಯೋಜನೆಯ ಪ್ರಕಾರ ನಿಮ್ಮ ಎಲ್ಲಾ ಕೆಲಸಗಳನ್ನು ಪೂರ್ಣಗೊಳಿಸಲು ನೀವು ಪ್ರಯತ್ನಿಸುತ್ತೀರಿ.

ಸಿಂಹ ರಾಶಿ
ಕೆಲಸದ ಒತ್ತಡದಿಂದ ಆರೋಗ್ಯ ಮತ್ತಷ್ಟು ದುರ್ಬಲವಾಗಬಹುದು. ಯಶಸ್ಸನ್ನು ಸಾಧಿಸಲು, ನೀವು ಆರೋಗ್ಯವಾಗಿರುವುದು ಬಹಳ ಮುಖ್ಯ. ಅಧಿಕ ರಕ್ತದೊತ್ತಡದ ಸಮಸ್ಯೆಯನ್ನು ಹೊಂದಿದ್ದರೆ, ಈ ಸಮಯದಲ್ಲಿ ನೀವು ನಿಮ್ಮ ಆಹಾರಕ್ರಮದ ಕಡೆಗೆ ವಿಶೇಷ ಕಾಳಜಿವಹಿಸಿ. ನೀವು ಪ್ರತಿದಿನ ಲಘು ವ್ಯಾಯಾಮವನ್ನು ಸಹ ಮಾಡಬೇಕಾಗುತ್ತದೆ.

ಕನ್ಯಾ ರಾಶಿ
ಆರೋಗ್ಯದಲ್ಲಿ ಏರುಪೇರು ಇರಲಿದೆ. ಏನಾದರೂ ಆರೋಗ್ಯ ಸಮಸ್ಯೆಯಿದ್ದರೆ ನೀವು ವೈದ್ಯರನ್ನು ಸಂಪರ್ಕಿಸಬೇಕು. ನಿಮ್ಮ ಬಗ್ಗೆ ಹೆಚ್ಚು ಗಮನ ಹರಿಸಲು ಪ್ರಯತ್ನಿಸಿ. ನಿಮ್ಮ ಆರೋಗ್ಯದಲ್ಲಿ ನೀವು ಶೀಘ್ರದಲ್ಲೇ ದೊಡ್ಡ ಸುಧಾರಣೆಯನ್ನು ಕಾಣುವ ಸಾಧ್ಯತೆಯಿದೆ.

ತುಲಾ ರಾಶಿ
ಆರೋಗ್ಯದ ದೃಷ್ಟಿಯಿಂದ ಈ ವಾರ ನಿಮಗೆ ಯಾವುದೇ ಒಳ್ಳೆಯದಲ್ಲ, ಆರೋಗ್ಯದ ಬಗ್ಗೆ ತುಂಬ ಜಾಗರೂಕರಾಗಿರಬೇಕು. ನೀವು ಅನಗತ್ಯ ಚಿಂತೆಗಳಿಂದ ದೂರವಿರಬೇಕು, ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು.

ವೃಶ್ಚಿಕ ರಾಶಿ
ಆರೋಗ್ಯದ ದೃಷ್ಟಿಯಿಂದ ಈ ವಾರ ನಿಮಗೆ ಉತ್ತಮವಾಗಿರಲಿದೆ. ಈ ಸಮಯದಲ್ಲಿ, ನೀವು ತುಂಬಾ ಆರೋಗ್ಯಕರವಾಗಿರುತ್ತೀರಿ ಆರೋಗ್ಯ ಸಂಬಂಧಿ ಸಮಸ್ಯೆಯಿದ್ದರೆ ಸುಧಾರಣೆ ಕಂಡು ಬರಲಿದೆ. ಆರೋಗ್ಯಕ್ಕಾಗಿ ವ್ಯಾಯಾಮದ ಕಡೆಗೆ ಗಮನಹರಿಸಿ.

ಧನು ರಾಶಿ
ಈ ಅವಧಿಯಲ್ಲಿ, ನಿಮ್ಮ ಆರೋಗ್ಯವು ಉತ್ತಮವಾಗಿರುತ್ತದೆ. ನಿಮ್ಮ ಎಲ್ಲಾ ಕೆಲಸಗಳನ್ನು ಯೋಜನೆಯ ಪ್ರಕಾರ ಪೂರ್ಣಗೊಳಿಸಲು ನೀವು ಪ್ರಯತ್ನಿಸಬೇಕು. ಮಧುಮೇಹಿಗಳು ಆಹಾರಕ್ರಮದ ಕಡೆಗೆ ತುಂಬಾನೇ ಜಾಗ್ರತೆವಹಿಸಿ.

ಮಕರ ರಾಶಿ
ಆರೋಗ್ಯದ ದೃಷ್ಟಿಯಿಂದ ಈ ವಾರ ನಿಮಗೆ ಉತ್ತಮವಾಗಿರಲಿದೆ. ಹೀಗಾಗಿ ನಿಮ್ಮ ಕೆಲಸವನ್ನು ತುಂಬಾ ಉತ್ಸಾಹದಿಂದ ಮಾಡಿ ಮುಗಿಸಲು ಸಾಧ್ಯವಾಗುವುದು. ಇನ್ನು ಆರೋಗ್ಯ ಸಮಸ್ಯೆಯಿದ್ದರೆ ಈ ಅವಧಿಯಲ್ಲಿ ಸುಧಾರಣೆ ಕಂಡು ಬರಲಿದೆ.

ಕುಂಭ ರಾಶಿ
ಆರೋಗ್ಯದ ವಿಷಯದಲ್ಲಿ ಈ ವಾರ ನಿಮಗೆ ಮಿಶ್ರಫಲ. ನೀವು ಯಾವುದೇ ಸಣ್ಣ ಸಮಸ್ಯೆಯನ್ನು ಎದುರಿಸುತ್ತಿದ್ದರೆ ಅದನ್ನು ನಿರ್ಲಕ್ಷಿಸಬೇಡಿ. ವೈದ್ಯರು ಮತ್ತು ಔಷಧಿಗಳಿಗಾಗಿ ನೀವು ಸಾಕಷ್ಟು ಹಣವನ್ನು ಖರ್ಚು ಮಾಡಬಹುದು. ಮನಸ್ಸಿನಲ್ಲಿ ನಕರಾತ್ಮಕತೆ ದೂರಾಗಿಸಿ.

ಮೀನ ರಾಶಿ
ಈ ಅವಧಿಯಲ್ಲಿ ನಿಮ್ಮ ಆರೋಗ್ಯ ಉತ್ತಮವಾಗಿರುತ್ತದೆ. ಈ ವಾರ ನಿಮಗೆ ಧನಾತ್ಮಕವಾಗಿರಲಿದೆ. ಆಹಾರಕ್ರಮದ ಕಡೆಗೆ ಗಮನಹರಿಸಿದರೆ ಆರೋಗ್ಯ ತುಂಬಾ ಚೆನ್ನಾಗಿರಲಿದೆ.

Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.

English summary

Weekly Health Horoscope:From June 15 To 22 Health Life Prediction Of 12 Zodiac Signs

Weekly Health Horoscope (June 15 To 22): Health Prediction of 12 zodiac signs read on...
Story first published: Saturday, June 15, 2024, 22:46 [IST]
X
Desktop Bottom Promotion