Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
ವಾರ ಭವಿಷ್ಯ (ಏಪ್ರಿಲ್ 7-14): ಈ ವಾರ 4 ರಾಶಿಯವರಿಗೆ ತುಂಬಾ ಪ್ರಯೋಜನಕಾರಿ
ಗ್ರಹಗಳ ಸ್ಥಾನವು ಪ್ರತಿಯೊಂದು ರಾಶಿಯ ಮೇಲೆ ಪರಿಣಾಮ ಬೀರುವುದು. ಈ ವಾರದ ಗ್ರಹಗತಿಗಳ ಸ್ಥಾನದ ಬಗ್ಗೆ ಹೇಳುವುದಾದರೆ ಈ ನಾಲ್ಕು ರಾಶಿಗಳಿಗೆ ಹೆಚ್ಚು ಅನುಕೂಲಕರವಾಗಿದೆ, ಈ ವಾರ ಅದ್ಭುತವಾಗಿರಲಿದೆ ನೋಡಿ:

ಮೇಷ ರಾಶಿ
ಮೇಷ ರಾಶಿಯವರ ವಾರ ಭವಿಷ್ಯ ನೋಡುವುದಾದರೆ ಈ ವಾರ ನಿಮಗೆ ಶುಭವಾಗಿದೆ. ಕೆಲಸದಲ್ಲಿ ನಿಮಗೆ ಉತ್ತಮ ಫಲ ಸಿಗಲಿದೆ. ನಿಮ್ಮ ಎಲ್ಲಾ ಕೆಲಸ ಪುರ್ಣಗೊಳಿಸಲು ಸಾಧ್ಯವಾಗುವುದು. ವೃತ್ತಿ ಜೀವನದಲ್ಲಿ ಹೊಸ ಯಶಸ್ಸು ಗಳಿಸಲು ಸಾಧ್ಯವಾಗುವುದು. ಇನ್ನು ವ್ಯಾಪಾರಿಗಳಿಗೆ ಈ ವಾರ ಉತ್ತಮವಾಗಿದೆ. ನೀವು ನಿಮ್ಮ ವ್ಯವಹಾರದಲ್ಲಿ ಉತ್ತಮ ಲಾಭ ಗಳಿಸಲು ಸಾಧ್ಯವಾಗವುದು. ಪಾಲುದಾರಿಕೆಯ ವ್ಯವಹಾರ ಮಾಡುತ್ತಿರುವವರಿಗೂ ಈ ವಾರ ಒಳ್ಳೆಯದು. ಇನ್ನು ಕೆಲಸಕ್ಕಾಗಿ ಹುಡುಕುತ್ತಿರುವವರಿಗೂ ಈ ಅವಧಿ ತುಂಬಾನೇ ಒಳ್ಳೆಯದು. ನಿಮಗೆ ಕೆಲಸ ಸಿಗುವ ಸಾಧ್ಯತೆ ಇದೆ. ಇನ್ನು ಕುಟುಂಬ ಜೀವನದ ಬಗ್ಗೆ ಹೇಳುವುದಾದರೆ ಈ ವಾರ ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ. ವೈವಾಹಿಕ ಜೀವನದಲ್ಲಿ ಪ್ರೀತಿ ಹೆಚ್ಚಾಗಲಿದೆ. ಇನ್ನು ಆರ್ಥಿಕ ದೃಷ್ಟಿಯಿಂದಲೂ ಈ ವಾರ ತುಂಬಾಬ ಒಳ್ಳೆಯದಿದೆ ನೋಡಿ.
ಅದೃಷ್ಟದ ಬಣ್ಣ: ಕಡು ಹಸಿರು ಅದೃಷ್ಟದ ಸಂಖ್ಯೆ: 7 ಶುಭ ದಿನ: ಶನಿವಾರ
ಸಿಂಹ ರಾಶಿ
ಸಿಂಹ ರಾಶಿಯವರಿಗೆ ಈ ವಾರ ಉತ್ತಮವಾಗಿದೆ. ನಿಮ್ಮ ಆರೋಗ್ಯವು ತುಂಬಾ ಉತ್ತಮವಾಗಿರಲಿದೆ. ಉದ್ಯೋಗಿಗಳಿಗೆ ಈ ಅವಧಿ ತುಂಬಾ ಉತ್ತಮವಾಗಿರಲಿದೆ. ನಿಮ್ಮೆಲ್ಲಾ ಕೆಲಸವನ್ನೂ ಸಮಯಕ್ಕೆ ಪೂರ್ಣಗೊಳಿಸಲು ಸಾಧ್ಯವಾಗುವುದು. ಸವಾಲಿನ ಕೆಲಸವನ್ನು ಕೂಡ ಪೂರ್ಣಗೊಳಿಸಲು ಸಾಧ್ಯವಾಗುವುದು. ವ್ಯಾಪಾರಿಗಳಿಗೆ ಈ ಅವಧಿ ತುಂಬಾನೇ ಒಳ್ಳೆಯದು, ವ್ಯಾಪಾರದಲ್ಲಿ ವಿಶೇಷ ಅನುಕೂಲಕರವಾಗಿರಲಿದೆ. ನೀವು ಉತ್ತಮ ಲಾಭ ಗಳಿಸಲು ಸಾಧ್ಯವಾಗುವುದು. ಆದರೆ ಹಣದ ವಿಚಾರದಲ್ಲಿ ದುಬಾರಿಯಾಗಲಿದೆ. ಶಾಪಿಂಗ್ ಅಂತ ತುಂಬಾ ಹಣ ಖರ್ಚು ಮಾಡುತ್ತೀರಿ.
ಅದೃಷ್ಟದ ಬಣ್ಣ: ಕಿತ್ತಳೆ ಅದೃಷ್ಟದ ಸಂಖ್ಯೆ: 9 ಶುಭ ದಿನ: ಗುರುವಾರ
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯವರಿಗೆ ಎಲ್ಲಾ ಗ್ರಹಗಳ ಸ್ಥಾನ ತುಂಬಾನೇ ಅನುಕೂಲಕರವಾಗಿದೆ. ನಿಮ್ಮ ಕೆಲಸ ಕಾರ್ಯಗಳಲ್ಲಿ ಉತ್ತಮ ಯಶಸ್ಸು ಪಡೆಯಲು ಸಾಧ್ಯವಾಗುವುದು. ವೃತ್ತಿ ಬದುಕಿನಲ್ಲಿ. ವ್ಯಾಪಾರಿಗಳು ಉತ್ತಮ ಲಾಭ ಪಡೆಯಲು ಸಾಧ್ಯವಾಗುವುದು. ನೀವು ಹೂಡಿಕೆ ಮಾಡಲು ಆಲೋಚಿಸುತ್ತಿದ್ದರೆ ಹೂಡಿಕೆಗೆ ಈ ಅವಧಿ ತುಂಬಾ ಒಳ್ಳೆಯದಿದೆ. ನಿಮ್ಮ ಕುಟುಂಬ ಜೀವನ ಚೆನ್ನಾಗಿರಲಿದೆ, ವಿವಾಹಿತರ ವೈವಾಹಿಕ ಜೀವನ ಚೆನ್ನಾಗಿರಲಿದೆ. ಆರ್ಥಿಕವಾಗಿ ಈ ವಾರ ತುಂಬಾನೇ ಒಳ್ಳೆಯದು. ಆರೋಗ್ಯ ಕೂಡ ತುಂಬಾ ಚೆನ್ನಾಗಿರಲಿದೆ.
ಅದೃಷ್ಟದ ಬಣ್ಣ: ಕೆನೆ ಅದೃಷ್ಟದ ಸಂಖ್ಯೆ: 10 ಶುಭ ದಿನ: ಶುಕ್ರವಾರ
ಮಕರ ರಾಶಿ
ಈ ವಾರ ನಿಮಗೆ ತುಂಬಾ ಉತ್ತಮವಾಗಿರಲಿದೆ. ನಿಮ್ಮ ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ. ಸಂಗಾತಿಯೊಂದಿಗೆ ಉತ್ತಮ ಬಾಂಧವ್ಯ ಇರಲಿದೆ. ಹಣದ ಬಗ್ಗೆ ಹೇಳುವುದಾದರೆಈ ವಾರ ಉತ್ತಮವಾಗಿರಲಿದೆ, ಆದರೆ ಹಣವನ್ನು ನೋಡಿಕೊಂಡು ಖರ್ಚು ಮಾಡಿದರೆ ಒಳ್ಳೆಯದು. ಉದ್ಯೋಗಿಗಳಿಗೆ ಈ ವಾರ ತುಂಬಾ ಒಳ್ಲೆಯದು. ನೀವು ವೃತ್ತಿ ಬದುಕಿನಲ್ಲಿ ಬದಲಾವಣೆ ಮಾಡಲು ಅಂದರೆ ಕೆಲಸ ಬದಲಾಯಿಸಲು ಯೋಚಿಸುತ್ತಿದ್ದರೆ ಈ ವಾರ ತುಂಬಾನೇ ಒಳ್ಳೆಯದು. ವ್ಯಾಪಾರಿಗಳಿಗೆ ಈ ಅವಧಿ ನಿಮಗೆ ಲಾಭದಾಯಕವಾಗಿದೆ. ನಿಮ್ಮ ಆರೋಗ್ಯ ತುಂಬಾ ಚೆನ್ನಾಗಿರಲಿದೆ. ಈ ವಾರದ 7 ದಿನಗಳು ಖುಷಿಯಿಂದ ಕೂಡಿರುತ್ತದೆ.
ಅದೃಷ್ಟದ ಬಣ್ಣ: ಕೆಂಪು ಅದೃಷ್ಟದ ಸಂಖ್ಯೆ: 6 ಶುಭ ದಿನ: ಭಾನುವಾರ
ಈ ವಾರ ಈ ನಾಲ್ಕು ರಾಶಿಗಳು ಉಳಿದ 8 ರಾಶಿಗಳಿಗಂತ ಹೆಚ್ಚಿನ ಪ್ರಯೋಜನ ಪಡೆಯುತ್ತಿದ್ದಾರೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications
