ವಾರ ಭವಿಷ್ಯ ಡಿಸೆಂಬರ್‌ 1-7 : ಈ ಏಳು ದಿನಗಳು ಯಾವ ರಾಶಿಗಳಿಗೆ ಶುಭವಾಗಿದೆ

ಗ್ರಹಗತಿಗಳ ಸ್ಥಾನದ ಪ್ರಕಾರ ಡಿಸೆಂಬರ್ ಮಾಸದ ಮೊದಲ ವಾರ ದ್ವಾದಶ ರಾಶಿಗಳಿಗೆ ಹೇಗಿರಲಿದೆ ಎಂದು ನೋಡೋಣ:

ಮೇಷ ರಾಶಿ

ಮೇಷ ರಾಶಿಯವರಿಗೆ ವೃತ್ತಿ ಬದುಕಿನ ದೃಷ್ಟಿಯಿಂದ ಅನುಕೂಲಕರವಾಗಿದೆ, ಕೆಲಸಕಾರ್ಯಗಳು ಯೋಜನೆಯಂತೆಯೇ ಪೂರ್ಣಗೊಳ್ಳಲಿದೆ. ಆರ್ಥಿಕ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ. ಆದರೆ ಹೂಡಿಕೆ ವಿಷಯದಲ್ಲಿ ಅತಿಯಾದ ಆತ್ಮವಿಶ್ವಾಸ ಒಳ್ಳೆಯದಲ್ಲ. ವೈವಾಹಿಕ ಜೀವನ ತುಂಬಾ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ.

weekly horoscope

ವೃಷಭ ರಾಶಿ

ಈ ವಾರ ವೃತ್ತಿ ಬದುಕಿನಲ್ಲಿ ಹೊಸ ಅವಕಾಶಗಳು ದೊರೆಯಲಿದೆ, ಇದರಿಂದ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ. ಸ್ವಂತ ವ್ಯಾಪಾರ ಮಾಡುವವರು ಉತ್ತಮ ಲಾಭ ಗಳಿಸುತ್ತೀರಿ. ಹಣದ ವ್ಯವಹಾರದಲ್ಲಿ ತುಂಬಾನೇ ಜಾಗ್ರತೆವಹಿಸಿ, ಯಾವುದೇ ದೊಡ್ಡ ಹೂಡಿಕೆ ಮಾಡದಂತೆ ಸಲಹೆ ನೀಡಲಾಗುವುದು, ಅಲ್ಲದೆ ಹಣದ ವಿಷಯದಲ್ಲಿ ಯಾರಿಗೂ ಮೋಸ ಮಾಡಬೇಡಿ. ಕುಟುಂಬ ಜೀವನ ಚೆನ್ನಾಗಿರಲಿದೆ, ವಿವಾಹಿತ ದಂಪತಿ ನಡುವೆ ಒಳ್ಳೆಯ ಬಾಂಧವ್ಯ ಇರಲಿದೆ, ಅವಾಹಿತರಿಗೆ ಮದುವೆ ಪ್ರಸ್ತಾಪ ಬರಬಹುದು.

ಮಿಥುನ ರಾಶಿ

ವೃತ್ತಿ ಜೀವನದ ದೃಷ್ಟಿಯಿಂದ ಈ ವಾರ ನಿಮಗೆ ತುಂಬಾನೇ ಉತ್ತಮವಾಗಿದೆ, ಒಳ್ಳೆಯ ಉದ್ಯೋಗವಕಾಶ ದೊರೆಯಲಿದೆ, ನೀವು ತುಂಬಾ ಸಮಯದಿಂದ ಕಾಯುತ್ತಿದ್ದ ಬಡ್ತಿ ಸಿಗುವ ಸಾಧ್ಯತೆ ಇದೆ. ಆರ್ಥಿಕವಾಗಿಯೂ ಈ ವಾರ ಚಿಂತಿಸಬೇಕಾಗಿಲ್ಲ. ಸಂಬಂಧದ ದೃಷ್ಟಿಯಿಂದಲೂ ಉತ್ತಮವಾಗಿದೆ, ಏನೇ ಭಿನ್ನಾಭಿಪ್ರಾಯವಿದ್ದರೂ ಮುಕ್ತವಾಗಿ ಮಾತನಾಡುವುದು ಒಳ್ಳೆಯದು. ಆರೋಗ್ಯದ ಕಡೆಗೆ ಗಮನಹರಿಸಬೇಕು.

ಕರ್ಕ ರಾಶಿ

ವೃತ್ತಿ ಜೀವನದ ದೃಷ್ಟಿಯಿಂದ ಉತ್ತಮವಾಗಿರಲಿದೆ. ಉದ್ಯೋಗಿಗಳಿಗೆ, ವ್ಯಾಪಾರಿಗಳಿಗೆ ಈ ಅವಧಿ ಉತ್ತಮವಾಗಿರಲಿದೆ. ವ್ಯಾಪಾರಿಗಳು ಉತ್ತಮ ಲಾಭ ಗಳಿಸುತ್ತೀರಿ. ಹಣಕ್ಕೆ ಸಂಬಂಧಿಸಿದ ನಿರ್ಧಾರ ಆತುರದಿಂದ ನಿರ್ಧಾರ ತೆಗೆದುಕೊಳ್ಳಬೇಡಿ. ಯಾವುದೇ ಹೂಡಿಕೆ ಮಾಡಬೇಕಾದರೆ ನೀವು ಆಲೋಚಿಸಿ ನಿರ್ಧಾರ ತೆಗೆದುಕೊಳ್ಳಬೇಕು. ಕುಟುಂಬ ಜೀವನ ತುಂಬಾ ಚೆನ್ನಾಗಿರಲಿದೆ. ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಬೇಡ.

ಸಿಂಹ ರಾಶಿ

ವೃತ್ತಿ ಬದುಕಿನ ದೃಷ್ಟಿಯಿಂದ ನೋಡುವುದಾದರೆ ಕೆಲ ಸವಾಲುಗಳು ಎದುರಾಗಬುದು, ವ್ಯಾಪಾರಿಗಳಿಗೂ ಈ ವಾರ ಬಯಸಿದ ಲಾಭ ಪಡೆಯಲು ಹೆಚ್ಚಿನ ಶ್ರಮ ಹಾಕಬೇಕಾಗುತ್ತದೆ, ಕೆಲವೊಂದು ಯೋಜನೆಗಳು ವಿಫಲವಾದಾಗ ಚಿಂತೆ ಕಾಡಬಹುದು. ಹಣದ ವಿಷಯದಲ್ಲಿ ಉತ್ತಮವಾಗಿದೆ, ಈ ಸಮಯದಲ್ಲಿ ಯಾರಿಗೂ ಸಾಲ ನೀಡದಿರುವುದು ಒಳ್ಳೆಯದು. ಸಂಬಂಧದಲ್ಲಿ ಈ ವಾರ ನಿಮಗೆ ಅನುಕೂಲಕರವಾಗಿದೆ, ನಿಮ್ಮ ಮನಸ್ಸಿನ ಭಾವನೆಗಳನ್ನು ಮುಕ್ತವಾಗಿ ಹಂಚಕೊಳ್ಳುವುದು ಒಳ್ಳೆಯದು. ಆರೋಗ್ಯ ಸಮಸ್ಯೆವಿದ್ದರೆ ಸುಧಾರಣೆ ಕಂಡ ಬರಲಿದೆ.

ಕನ್ಯಾ ರಾಶಿ

ಕನ್ಯಾ ರಾಶಿಯವರು ಈ ವಾರ ಗುರಿಯತ್ತ ತುಂಬಾನೇ ಫೋಕಸ್ ಆಗಿರುತ್ತೀರಿ, ನೀವು ಬಯಸಿದ ಗುರಿ ಮುಟ್ಟಲು ನೀವು ಹೆಚ್ಚಿನ ಶ್ರಮ ಹಾಕಬೇಕು, ಹಣಕಾಸಿನ ಭವಿಷ್ಯ ನೋಡುವುದಾದರೆ ಹಣಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ಆಲೋಚಿಸಿ ತೆಗೆದುಕೊಳ್ಳಬೇಕು, ಕುಟುಂಬ ಜೀವನದಲ್ಲಿ ಒತ್ತಡವಿಬಹುದು, ನಿಮ್ಮ ಹಾಗೂ ಸಂಗಾತಿ ನಡುವೆ ಭಿನ್ನಾಭಿಪ್ರಾಯ ಉಂಟಾಗಬಹುದು, ತಾಳ್ಮೆಯಿಂದ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಬೇಕು. ಆರೋಗ್ಯದ ದೃಷ್ಟಿಯಿಂದ ಈ ದಿನ ಉತ್ತಮವಾಗಿರಲಿದೆ.

ತುಲಾ ರಾಶಿ

ಈ ವಾರ ವೃತ್ತಿ ಬದುಕಿನ ದೃಷ್ಟಿಯಿಂದ ನಿಮಗೆ ಉತ್ತಮವಾಗಿರಲಿದೆ, ನೀವು ಬಡ್ತಿ ನಿರೀಕ್ಷೆಯಲ್ಲಿದ್ದರೆ ಈ ವಾರ ಶುಭ ಸುದ್ದ ಪಡೆಯುತ್ತೀರಿ. ವ್ಯಾಪಾರಿಗಳಿಗೆ ಈ ವಾರ ಅನುಕೂಲಕರವಾಗಿರಲಿದೆ. ಹಣಕಾಸಿನ ವಿಚಾರದಲ್ಲಿ ಜಾಗ್ರತೆವಹಿಸಬೇಕು, ಬಜೆಟ್‌ ಮೀರಿ ಖರ್ಚು ಮಾಡಬೇಡಿ. ಆರೋಗ್ಯದ ವಿಷಯದಲ್ಲಿ ಈ ವಾರ ನಿಮಗೆ ಅನುಕೂಲಕರವಾ

ಮಕರ ರಾಶಿ

ವೃತ್ತಿ ಜೀವನ ತುಂಬಾ ಚೆನ್ನಾಗಿರಲಿದೆ. ಹೊಸ ಉದ್ಯೋಗವಕಾಶ ನಿಮ್ಮನ್ನು ಹುಡುಕಿ ಬರಲಿದೆ. ಹಣಕಾಸಿನ ವಿಷಯದಲ್ಲಿ ಇತ್ತೀಚಿನ ದಿನಗಳಲ್ಲಿ ಸ್ಥಿರತೆ ಕಂಡು ಬರುವುದ. ವ್ಯಾಪಾರಿಗಳಿಗೆ ಉತ್ತಮವಾಗಿರಲಿದೆ. ಪ್ರೇಮಿಗಳಿಗೆ ಈ ಅವಧಿ ಅಷ್ಟೊಂದು ಅನುಕೂಲಕರವಲ್ಲ, ನಿಮ್ಮ ಹಾಗೂ ಸಂಗಾತ ನಡುವೆ ಮನಸ್ತಾಪ ತಪ್ಪಿಸಿ. ಆರೋಗ್ಯದ ಬಗ್ಗೆ ಹೇಳುವುದಾದರೆ ಅನಗ್ಯತ ಚಿಂತೆ ಮಾಡದಿರಿ.


ಕುಂಭ ರಾಶಿ

ವೃತ್ತಿ ಬದುಕಿನಲ್ಲಿ ಹೊಸ ಅವಕಾಶಗಳು ದೊರೆಯಬಹುದು, ವ್ಯಾಪಾರಿಗಳಿಗೆ ಈ ವಾರ ಉತ್ತಮಾಗಿರಲಿದೆ. ಹಣಕಾಸಿನ ವಿಚಾರದಲ್ಲಿ ಈ ದಿನ ನಿಮಗೆ ಅನುಕೂಲಕರವಾಗಿದೆ, ನೀವು ಸಂಗಾತಿಯ ಭಾವನೆಗಳನ್ನು ಅರ್ಥ ಮಾಡಿಕೊಳ್ಳಲು ಪ್ರಯತ್ನಿಸಬೇಕು. ಹೃದಯ ಅಥವಾ ಶ್ವಾಸಕೋಶದ ಆರೋಗ್ಯ ಸಮಸ್ಯೆ ಇರುವವರು ಹೆಚ್ಚು ಜಾಗ್ರತೆವಹಿಸಬೇಕು. ಆರ್ಥಿಕವಾಗಿ ಈ ವಾರ ನಿಮಗೆ ಉತ್ತಮವಾಗಿದೆ.

ಮೀನ ರಾಶಿ

ಕೆಲಸ ಕಾರ್ಯದಲ್ಲಿ ಈ ವಾರ ನಿಮಗೆ ಉತ್ತಮವಾಗಿದೆ. ವೃತ್ತಿ ಬದುಕಿನಲ್ಲಿ ನಿಮಗೆ ಉತ್ತಮ ಅವಕಾಶ ದೊರೆಯಲಿದೆ, ಅದನ್ನು ಬಳಸಿಕೊಳ್ಳಲು ಪ್ರಯತ್ನಿಸಬೇಕು. ಆರ್ಥಿಕವಾಗಿ ಈ ಅವಧಿ ನಿಮಗೆ ಅನುಕೂಲಕರವಾಗಿರಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ಸಂಬಂಧದ ದೃಷ್ಟಿಯಿಂದ ಈ ಅವಧಿ ಅನುಕೂಲಕರವಾಗಿರಲಿದೆ.

Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.

English summary

Weekly Horoscope: December 1-7 Prediction For 12 Zodiac Signs In Kannada

Here is weekly horoscope(December 1-7) prediction for 12 zodiac signs, read on...
Story first published: Sunday, December 1, 2024, 13:18 [IST]
X
Desktop Bottom Promotion