Latest Updates
-
ಅಕ್ಷಯ ತೃತೀಯ: ಮದುವೆ ಮತ್ತು ಚಿನ್ನದ ಖರೀದಿಗೆ ಹೀಗೆ ಪ್ಲಾನ್ ಮಾಡಿ -
ಮನೆಯನ್ನು ತಂಪಾಗಿಡಲು ಹೀಟ್ವೇವ್ ಸಮಯದಲ್ಲಿ ಈ ಟ್ರಿಕ್ಸ್ ಫಾಲೋ ಮಾಡಿ -
ಮಾವಿನ ಹಣ್ಣು ಖರೀದಿಸುವ ಮುನ್ನ ಈ ತಪ್ಪು ಮಾಡಬೇಡಿ! -
ಅಕ್ಷಯ ತೃತೀಯ ಚಿನ್ನದ ಖರೀದಿ: ಈ ಆಫರ್ ಮಿಸ್ ಮಾಡ್ಬೇಡಿ! -
ಬಿಸಿಲ ಧಗೆಯಲ್ಲೂ ಫಿಟ್ ಆಗಿರಲು ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಷಯ ತೃತೀಯ: ಸಾಲದ ಸುಳಿಯಿಲ್ಲದೆ ಚಿನ್ನ ಖರೀದಿಸುವುದು ಹೇಗೆ? -
ಬಿಸಿಲಿನ ತಾಪ: ನಿಮ್ಮ ಮನೆಯನ್ನು ತಂಪಾಗಿಡಲು ಅದ್ಭುತ ಟಿಪ್ಸ್ -
ಬಿಸಿಲಿನ ಬೇಗೆಯಿಂದ ಪಾರಾಗಲು ಈ ತಂಪು ಆಹಾರಗಳೇ ಮದ್ದು -
ಹಬ್ಬದ ಸೀರೆ ಫ್ಯಾಷನ್: ಈ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಬಿಸಿಗಾಳಿ ಎಚ್ಚರಿಕೆ: ಸುಡುವ ಬಿಸಿಲಿನಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ
ವಾರ ಭವಿಷ್ಯ(ಫೆಬ್ರವರಿ 24ರಿಂದ ಮಾರ್ಚ್ 2): ಈ ವಾರ 5 ರಾಶಿಗಳಿಗೆ ತುಂಬಾನೇ ಅನುಕೂಲಕರ
ಈ ವಾರ ಗ್ರಹಗತಿಗಳ ಸ್ಥಾನವೂ 5 ರಾಶಿಯವರಿಗೆ ತುಂಬಾನೇ ಅನುಕೂಲಕರವಾಗಿದೆ, ಯಾವ 5 ರಾಶಿಗಳಿಗೆ ಈ 7 ದಿನಗಳು ತುಂಬಾನೇ ಚೆನ್ನಾಗಿ ಕಳೆಯಲಿದೆ ಎಂದು ನೋಡೋಣ ಬನ್ನಿ:
ಮೇಷ ರಾಶಿ
ಮೇಷ ರಾಶಿಯವರಿಗ ಈ ವಾರ ಶುಭವಾಗಿದೆ. ಉದ್ಯೋಗಿಗಳು ಈ ಅವಧಿಯಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಫಲ ಪಡೆಯುತ್ತೀರಿ. ಆದರೆ ಹಣಕಾಸಿನ ವಹಿವಾಟು ವಿಚಾರ ಮಾಡುವಾಗ ಸ್ವಲ್ಪ ಜಾಗ್ರತೆವಹಿಸಿ, ಉಳಿದಂತೆ ಈ ವಾರ ನಿಮಗೆ ಉತ್ತಮವಾಗಿರಲಿದೆ. ನಿಮ್ಮ ವೈವಾಹಿಕ ಜೀವನ ಚೆನ್ನಾಗಿರಲಿದೆ, ಆರೋಗ್ಯ ಕೂಡ ಈ ಅವಧಿಯಲ್ಲಿ ಉತ್ತಮವಾಗಿರಲಿದೆ.

ಸಿಂಹ ರಾಶಿ
ಸಿಂಹ ರಾಶಿಯವರಿಗೆ ಈ ಅವಧಿ ತುಂಬಾನೇ ಅನುಕೂಲಕರವಾಗಿದೆ. ಅಲ್ಲದೆ ನಿಮ್ಮ ಆರ್ಥಿಕ ಸ್ಥಿತಿ ಬಲಪಡಿಸಲು ನೀವು ಪ್ರಮುಖ ನಿರ್ಧಾರ ತೆಗೆದುಕೊಳ್ಳುತ್ತೀರಿ. ಅಲ್ಲದೆ ಈ ವಾರ ನಿಮ್ಮ ಒಡಹುಟ್ಟಿದವರ ಸಹಾಯದಿಂದ ನಿಮ್ಮ ಸಮಸ್ಯೆಗೆ ಪರಿಹಾರ ಸಿಗಲಿದೆ. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಸಾಮರಸ್ಯ ಇರಲಿದೆ. ಆದರೆ ಕೆಲಸದ ವಿಷಯದಲ್ಲಿ ಈ ವಾರ ಅಧಿಕ ಒತ್ತಡವಿರಲಿದೆ.
ವೃಶ್ಚಿಕ ರಾಶಿ
ವಿದ್ಯಾರ್ಥಿಗಳಿಗೆ ಈ ವಾರ ಅನುಕೂಲಕರವಾಗಿರುತ್ತದೆ. ಶಿಕ್ಷಣಕ್ಕೆ ಸಂಬಂಧಿಸಿದ ನಿಮ್ಮ ಪ್ರಯತ್ನಗಳಲ್ಲಿ ನೀವು ಯಶಸ್ಸನ್ನು ಪಡೆಯಬಹುದು. ನೀವು ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದರೆ ಈ ವಾರ ನಿಮಗೆ ತುಂಬಾ ಒಳ್ಳೆಯದು. ಈ ವಾರ ನಿಮ್ಮ ಕೆಲಸ ಕಾರ್ಯಗಳು ಸುಗಮವಾಗಿ ನಡೆಯಲಿದೆ. ಉದ್ಯೋಗಿಗಳು ಕೆಲಸ ಬದಲಾಯಿಸಲು ಯೋಚಿಸುತ್ತಿದ್ದತೆ ಉದ್ಯೋಗಸ್ಥರಿಗೆ ಉತ್ತಮ ಅವಕಾಶಗಳು ಸಿಗಬಹುದು. ವಿಶೇಷವಾಗಿ ನೀವು ವಿದೇಶಕ್ಕೆ ಹೋಗಿ ಕೆಲಸ ಮಾಡಲು ಬಯಸಿದರೆ, ನಿಮಗೆ ಯಶಸ್ಸನ್ನು ಪಡೆಯುವ ಬಲವಾದ ಅವಕಾಶಗಳಿವೆ. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವವರು ಸ್ವಲ್ಪ ಜಾಗ್ರತೆವಹಿಸಿ. ನಿಮ್ಮ ಪ್ರೇಮ ಸಂಬಂಧ ಮತ್ತಷ್ಟು ಗಟ್ಟಿಯಾಗಲಿದೆ.
ಕುಂಭ ರಾಶಿ
ಈ ವಾರದ ಆರಂಭವು ನಿಮಗೆ ತುಂಬಾ ಒಳ್ಳೆಯದು. ಈ ಅವಧಿಯಲ್ಲಿ ನಿಮ್ಮ ಕಾರ್ಯಗಳಿಂದ ಗೌರವ ಹೆಚ್ಚಾಗಲಿದೆ. ಹಣದ ವಿಷಯದಲ್ಲಿ ಈ ಸಮಯವು ನಿಮಗೆ ತುಂಬಾ ಒಳ್ಳೆಯದು. ನಿಮ್ಮ ಆರ್ಥಿಕ ಸ್ಥಿತಿ ತುಂಬಾ ಚೆನ್ನಾಗಿರಲಿದೆ. ವ್ಯಾಪಾರಿಗಳು ಉತ್ತಮ ಫಲಿತಾಂಶಗಳನ್ನು ಪಡೆಯುತ್ತಾರೆ.ಅಲ್ಲದೆ ನೀವು ಕೆಲವು ದಾಖಲೆಗಳನ್ನು ಮಾಡಲು ಓಡಾಡುತ್ತಿದ್ದರೆ ಆ ಕೆಲಸಗಳು ಪೂರ್ಣಗೊಳ್ಳಲಿದೆ. ಆರ್ಥಿಕವಾಗಿ ಈ ವಾರ ಒಳ್ಳೆಯದು. ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ
ಮೀನ ರಾಶಿ
ಮೀನ ರಾಶಿಯವರಿಗೆ ಈ ವಾರ ತುಂಬಾ ಶುಭವಾಗಿದೆ. ಈ ವಾರ ನೀವು ಸಕಾರಾತ್ಮಕ ಫಲಿತಾಂಶಗಳನ್ನು ಸಹ ಪಡೆಯುವ ಸಾಧ್ಯತೆಯಿದೆ.ಈ ವಾರ ಕೆಲಸದ ಜೊತೆಗೆ ಕುಟುಂಬದ ಕಡೆಗೂ ಗಮನ ಹರಿಸಬೇಕು. ನೀವು ನಿರುದ್ಯೋಗಿಗಳಾಗಿದ್ದರೆ ಮತ್ತು ಉದ್ಯೋಗವನ್ನು ಹುಡುಕುತ್ತಿದ್ದರೆ, ಈ ಅವಧಿಯಲ್ಲಿ ನೀವು ಕೆಲವು ಉತ್ತಮ ಆಫರ್ ಪಡೆಯಬಹುದು. ಆ ವ್ಯಾಪಾರಿಗಳು ಈ ಅವಧಿಯಲ್ಲಿ ಉತ್ತಮ ಲಾಭಗಳಿಸಲು ಸಾಧ್ಯವಾಗುವುದು. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications











