Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಫೆಬ್ರವರಿ 3-10ರ ಭವಿಷ್ಯ: ಈ ವಾರ ಈ 4 ರಾಶಿಗಳಿಗೆ ಅದೃಷ್ಟದ ವಾರ
ಗ್ರಹಗತಿಗಳ ಸ್ಥಾನದ ಪ್ರಕಾರ ಈ ವಾರದ ವಾರ ಭವಿಷ್ಯ ನೋಡಿದಾಗ ಈ 4 ರಾಶಿಗಳಿಗೆ ಫೆಬ್ರವರಿ3-10ರವರೆಗಿನ ದಿನಗಳು ತುಂಬಾನೇ ಶುಭವಾಗಿದೆ ನೋಡಿ:

ಮೇಷ ರಾಶಿ
ವೈದಿಕ ಶಾಸ್ತ್ರದ ಪ್ರಕಾರ ಈ ವಾರ ಅದೃಷ್ಟದ ವಾರವಾಗಿದೆ, ಈ ಅವಧಿಯಲ್ಲಿ, ಯೋಚಿಸಿದ ಎಲ್ಲಾ ಕೆಲಸಗಳು ಯೋಜನೆಯ ಪ್ರಕಾರ ಪೂರ್ಣಗೊಳ್ಳುತ್ತವೆ. ವಾರದ ಆರಂಭದಲ್ಲಿ, ಯಾವುದೇ ಬಾಕಿ ಉಳಿದಿರುವ ಕೆಲಸವನ್ನು ಪೂರ್ಣಗೊಳಿಸುವುದರಿಂದ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗುವುದುದದೆ. ಕೆಲಸದ ಮೇಲೆ ಸಂಪೂರ್ಣ ಗಮನಹರಿಸಲು ಸಾಧ್ಯವಾಗುವುದರಿಂದ ನೀವು ಎಣಿಸಿದಂತೆಯೇ ಕೆಲಸಗಳು ಪೂರ್ಣವಾಗಲಿದೆ. ವ್ಯಾಪಾರಸ್ಥರ ಆರ್ಥಿಕ ಸ್ಥಿತಿಯು ಬಲಗೊಳ್ಳುತ್ತದೆ. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಆಹ್ಲಾದಕರವಾಗಿರುತ್ತದೆ. ಈ ವಾರ ನಿಮಗೆ ಹಣದ ವಿಷಯದಲ್ಲಿ ಬಹಳ ಮುಖ್ಯವಾಗಿರುತ್ತದೆ. ನಿಮ್ಮ ಆದಾಯ ಹೆಚ್ಚಾಗಬಹುದು, ಈ ವಾರ ಆರೋಗ್ಯದ ದೃಷ್ಟಿಯಿಂದ ಅನುಕೂಲಕರವಾಗಿದೆ.
ವೃಷಭ ರಾಶಿ
ವೃಷಭ ರಾಶಿಯವರಿಗೆ ಗೃಹಗಳ ಸ್ಥಾನದ ಪ್ರಕಾರ ಈ ಅ ವಾರ ಅನುಕೂಲಕರವಾಗಿದೆ. ನೀವು ಉನ್ನತ ಅಧಿಕಾರಿಗಳಿಂದ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ಕೆಲಸದಲ್ಲಿ ಗುರುತಿಸಿಗೊಳ್ಳುವಿರಿ, ನಿಮ್ಮ ಕೆಲಸವನ್ನು ಸುಲಭವಾಗಿ ಪೂರ್ಣಗೊಳಿಸಲು ಸಾಧ್ಯವಾಗುವುದು. ಈ ವಾರ ವ್ಯಾಪಾರಸ್ಥರಿಗೆ ಕೆಲವು ಹೊಸ ಸವಾಲುಗಳು ಎದುರಾಗಬಹುದು. ಕಾನೂನು ವಿಷಯಗಳಲ್ಲಿ ಹೆಚ್ಚು ಜಾಗರೂಕರಾಗಿರಲು ನಿಮಗೆ ಸಲಹೆ ನೀಡಲಾಗುವುದು. ಹಣದ ವಿಷಯದಲ್ಲಿ ಈ ವಾರ ನಿಮಗೆ ಉತ್ತಮವಾಗಿರುತ್ತದೆ. ಈ ವಾರ ಖರ್ಚುಗಳೂ ಕಡಿಮೆ ಇರಲಿದೆ. ಆರೋಗ್ಯದ ವಿಷಯದಲ್ಲಿ ಈ ವಾರ ನಿಮಗೆ ಸರಾಸರಿಯಾಗಿರಲಿದೆ.
ಮಿಥುನ ರಾಶಿ
ಮಿಥುನ ರಾಶಿಯವರಿಗೆ ಈ ವಾರ ನಿಮಗೆ ತುಂಬಾ ಶುಭವಾಗಿದೆ. ಹೂಡಿಕೆ ಮಾಡುವುದಾದರೆ ಈ ವಾರ ನಿಮಗೆ ಅನುಕೂಲಕರವಾಗಿದೆ. ಇದಲ್ಲದೆ, ನಿಮ್ಮ ವ್ಯಾಪಾರ ವಿಸ್ತರಣೆಯ ಯೋಜನೆಯು ಯಶಸ್ವಿಯಾಗುತ್ತದೆ. ಈ ವಾರ ಖರ್ಚು ಸ್ವಲ್ಪ ಅಧಿಕವಿರಲಿದೆ, ಆದರೆ ವಾರದ ಕೊನೆಯಲ್ಲಿ ನೀವು ಆರ್ಥಿಕ ಲಾಭ ಗಳಿಸಲು ಸಾಧ್ಯವಾಗುವುದು. ನಿಮ್ಮ ಒಡಹುಟ್ಟಿದವರೊಂದಿಗಿನ ನಿಮ್ಮ ಸಂಬಂಧವು ಇನ್ನಷ್ಟು ಗಟ್ಟಿಯಾಗುತ್ತದೆ. ಆರೋಗ್ಯದ ದೃಷ್ಟಿಯಿಂದ ಈ ಏಳು ದಿನಗಳು ನಿಮಗೆ ಉತ್ತಮವಾಗಿರುತ್ತವೆ.
ಮಕರ ರಾಶಿ
ಕೆಲಸ ಬದಲಾಯಿಸಲು ಈ ವಾರ ನಿಮಗೆ ಅನುಕೂಲಕರವಾಗಿದೆ. ನಿಮ್ಮ ಆದಾಯ ಹೆಚ್ಚಾಗಬಹುದು. ನೀವು ಇತ್ತೀಚೆಗೆ ಹೊಸ ಕೆಲಸಕ್ಕೆ ಸೇರಿದ್ದರೆ ನಿಮ್ಮ ಕೆಲಸಕ್ಕೆ ಮೆಚ್ಚುಗೆ ಗಳಿಸುತ್ತೀರಿ. ವ್ಯಾಪಾರಿಗಳು ಈ ಅವಧಿಯಲ್ಲಿ ಉತ್ತಮ ಲಾಭವನ್ನು ಪಡೆಯಬಹುದು. ಈ ವಾರ ವಿಶೇಷವಾಗಿ ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವವರಿಗೆ ತುಂಬಾ ಒಳ್ಳೆಯದು. ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. ನೀವು ಹಣಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಯನ್ನು ಎದುರಿಸುತ್ತಿದ್ದರೆ ಈ ವಾರ ಆ ಸಮಸ್ಯೆಯಿಂದ ಹೊರಬರಬಹುದು. ವಾರದ ಕೊನೆಯಲ್ಲಿ, ನೀವು ಕೆಲವು ಆಸ್ತಿ ಸಂಬಂಧಿತ ಪ್ರಯೋಜನಗಳನ್ನು ಪಡೆಯುತ್ತೀರಿ. ಆರೋಗ್ಯದ ದೃಷ್ಟಿಯಿಂದ ಈ ಸಮಯವು ಅನುಕೂಲಕರವಾಗಿದೆ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications