Latest Updates
-
ಬಿಸಿಲಿನ ಬೇಗೆಗೆ ದಂಪತಿಗಳ ನಡುವೆ ಜಗಳವೇ? ಈ ಸಣ್ಣ ಬದಲಾವಣೆಗಳು ನಿಮ್ಮ ಸಂಬಂಧವನ್ನು ಬಿರುಕಿನಿಂದ ಕಾಪಾಡುತ್ತವೆ! -
ಉತ್ತರ ಭಾರತದಲ್ಲಿ ಸುಡುವ ಬಿಸಿಲು: ಮನೆಯನ್ನು ತಂಪಾಗಿಡಲು ಮತ್ತು ಗಿಡಗಳನ್ನು ಬಚಾವ್ ಮಾಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಲ ಬೇಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ನಿಮಗೆ ರಾಮಬಾಣ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಈ ಸಿಂಪಲ್ ಟಿಪ್ಸ್ ಪಾಲಿಸಿದ್ರೆ ಬೇಸಿಗೆಯಲ್ಲೂ ನೀವು ಕೂಲ್ ಆಗಿರಬಹುದು! -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ನಿಮ್ಮ ಹೃದಯದ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ! -
ಬಿಸಿಲಿನ ತಾಪಕ್ಕೆ ದಂಪತಿಗಳ ನಡುವೆ ಜಗಳವೇ? ಸಂಬಂಧ ಗಟ್ಟಿಯಾಗಿರಲು ಇಲ್ಲಿವೆ ನೋಡಿ ಸರಳ ಉಪಾಯಗಳು -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ವಿದ್ಯುತ್ ಬಿಲ್ ಇಲ್ಲದೆ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲ ಬೇಗೆಗೆ ರೆಡ್ ಅಲರ್ಟ್: ಹೀಟ್ ಸ್ಟ್ರೋಕ್ನಿಂದ ಪಾರಾಗಲು ಈ ಮನೆಮದ್ದುಗಳನ್ನು ಇಂದೇ ಟ್ರೈ ಮಾಡಿ! -
ಮಳೆಗಾಲದಲ್ಲಿ ಸ್ಟೈಲಿಶ್ ಆಗಿ ಕಾಣಬೇಕಾ? ಈ ಸಿಂಪಲ್ ಟಿಪ್ಸ್ ನಿಮ್ಮನ್ನು ಮಳೆಗಾಲದ ಫ್ಯಾಷನ್ ಐಕಾನ್ ಮಾಡೋದು ಗ್ಯಾರಂಟಿ! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಆರೋಗ್ಯಕ್ಕೆ ಕುತ್ತು ತಪ್ಪಿದ್ದಲ್ಲ!
ವಾರ ಭವಿಷ್ಯ ಪ್ರಕಾರ ಈ 6 ರಾಶಿಗಳಿಗೆ ಈ ವಾರ(ಆಗಸ್ಟ್11-17) ಎಲ್ಲಾ ರೀತಿಯಿಂದಲೂ ಒಳ್ಳೆಯದಿದೆ
ಮೇಷ ರಾಶಿ
ಈ ವಾರ ನಿಮಗೆ ಒಳ್ಳೆಯದಿದೆ, ಪ್ರಗತಿಯ ಸೂಚನೆಗಳಿವೆ, ವೃತ್ತಿ ಜೀವನದಲ್ಲಿನ ಸಮಸ್ಯೆ ಬಗೆಹರಿಯಲಿದೆ, ಹೀಗಾಗಿ ಕೆಲಸದ ಕಡೆಗೆ ಹೆಚ್ಚಿನ ಗಮನಹರಿಸಲು ಸಾಧ್ಯವಾಗುವುದು. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಆರ್ಥಿಕವಾಗಿ ಈ ಅವಧಿ ಉತ್ತಮವಾಗಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ, ವಿವಾಹಿತರಿಗೆ ಉತ್ತಮವಾಗಿರಲಿದೆ. ಆರೋಗ್ಯದ ಕೂಡ ಉತ್ತಮವಾಗಿರುವುದರಿಂದ ಈ ವಾರ ನಿಮಗೆ ತುಂಬಾ ಚೆನ್ನಾಗಿರಲಿದೆ.

ವೃಷಭ ರಾಶಿ
ಈ ವಾರ ನಿಮಗೆ ತುಂಬಾ ಉತ್ತಮವಾಗಿರಲಿದೆ, ಆರ್ಥಿಕವಾಗಿಯೂ ಈ ವಾರ ತುಂಬಾ ಉತ್ತಮವಾಗಿರಲಿದೆ. ಹಣಕ್ಕೆ ಸಂಬಂಧಿಸಿದ ಪ್ರಯತ್ನಗಳಲ್ಲಿ ಯಶಸ್ಸು ದೊರೆಯಲಿದೆ. ಇನ್ನು ವ್ಯಾಪಾರಿಗಳಿಗೆ ಈ ವಾರ ಉತ್ತಮವಾಗಿರಲಿದೆ, ನಿಮಗೆ ಧನಲಾಭವಾಗಲಿದೆ, ಹೂಡಿಕೆಗೆ ಸಾಲ ಮಾಡಲು ಯೋಚಿಸುತ್ತಿದ್ದರೆ ಸಾಲ ದೊರೆಯಲಿದೆ. ಆರೋಗ್ಯ ಕೂಡ ಚೆನ್ನಾಗಿರಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ವಿವಾಹಿತರ ವೈವಾಹಿಕ ಬದುಕು ತುಂಬಾ ಚೆನ್ನಾಗಿರಲಿದೆ, ಅವಾಹಿತರಿಗೆ ವಿವಾಹ ಪ್ರಸ್ತಾಪ ಬರಬಹುದು, ಆರೋಗ್ಯ ಉತ್ತಮವಾಗಿರಲಿದೆ.
ತುಲಾ ರಾಶಿ
ತುಲಾ ರಾಶಿಯವರಿಗೆ ಈ ವಾರ ಅದ್ಭುತವಾಗಿರಲಿದೆ, ಆರ್ಥಿಕವಾಗಿ ತುಂಬಾ ಚೆನ್ನಾಗಿರಲಿದೆ. ಹಣಕಾಸಿನ ಸ್ಥಿತಿ ಅಭಿವೃದ್ಧಿ ಪಡಿಸಲು ಉತ್ತಮ ಅವಕಾಶ ಕೂಡ ಸಿಗಲಿದೆ.
ನಿಮ್ಮೆಲ್ಲಾ ಕೆಲಸ ಕಾರ್ಯಗಳು ಯೋಜನೆಯಂತೆಯೇ ಪೂರ್ಣಗೊಳ್ಳಲಿದೆ. ಉದ್ಯಮಿಗಳಿಗೆ ವ್ಯವಹಾರದಲ್ಲಿ ಲಾಭ ದೊರೆಯಲಿದೆ. ಆರೋಗ್ಯ ತುಂಬಾ ಚೆನ್ನಾಗಿರಲಿದೆ. ವಿದ್ಯಾರ್ಥಿಗಳಿಗೆ ಅನುಕೂಲಕರವಾಗಿದ್ದು ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದರೆ ಈ ವಾರ ತುಂಬಾನೇ ಅನುಕೂಲಕರವಾಗಿದೆ, ಕುಟುಂಬ ಜೀವನದಲ್ಲಿ ಪ್ರೀತಿ ಇರಲಿದೆ, ಸಂಗಾತಿಯೊಂದಿಗೆ ಖುಷಿಯಾಗಿರುತ್ತೀರಿ.
ವೃಶ್ಚಿಕ ರಾಶಿ
ವ್ಯಾಪಾರಿಗಳಿಗೆ ಈ ವಾರ ತುಂಬಾ ಉತ್ತಮವಾಗಿದೆ. ನೀವು ಹೊಸ ಯೋಜನೆಯಲ್ಲಿ ಕೆಲಸವನ್ನು ಪ್ರಾರಂಭಿಸಬಹುದು ಅಥವಾ ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವ ಪ್ರಸ್ತಾಪವನ್ನು ಪಡೆಯಬಹುದು. ಉದ್ಯೋಗಿಗಳ ಕಾರ್ಯಕ್ಷಮತೆಯಲ್ಲಿ ದೊಡ್ಡ ಸುಧಾರಣೆ ಕಂಡುಬರುತ್ತದೆ. ಇದರಿಂದಾಗಿ ನಿಮ್ಮ ಆತ್ಮವಿಶ್ವಶಾಸ ಉತ್ತಮವಾಗಿರುತ್ತದೆ. ಆರ್ಥಿಕವಾಗಿ ಈ ಅವಧಿ ಹೆಚ್ಚು ಅನುಕೂಲಕರವಾಗಿದೆ. ನೀವು ಬಯಸಿದ ವಸ್ತುಗಳನ್ನು ಕೂಡ ಖರೀದಿಸುತ್ತೀರಿ. ಕುಟುಂಬ ಜೀವನ ಚೆನ್ನಾಗಿರಲಿದೆ, ಆದರೆ ನೀವು ಕೋಪವನ್ನು ನಿಯಂತ್ರಿಸಿ ಎಂಬ ಸಲಹೆ ನೀಡಲಾಗುವುದು.
ಕುಂಭ ರಾಶಿ
ಕುಂಭ ರಾಶಿಯವರಿಗೆ ಈ ಅವಧಿ ಒಳ್ಳೆಯದಿದೆ. ನೀವು ನಿಮ್ಮ ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ಕೆಲವು ಉತ್ತಮ ಮತ್ತು ದೊಡ್ಡ ಬದಲಾವಣೆಗಳನ್ನು ನೋಡಬಹುದು.
ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿರುವವರಿಗೆ ಕೆಲಸ ಸಿಗಲಿದೆ, ಕೆಲಸ ಬದಲಾಯಿಸಲು ಯೋಚಿಸುತ್ತಿದ್ದರೆ ಉತ್ತಮ ಅವಕಾಶ ಸಿಗಲಿದೆ, ವ್ಯಾಪಾರಿಗಳಿಗೆ ಅಪೇಕ್ಷಿತ ಲಾಭ ದೊರೆಯಲಿದೆ. ನಿಮ್ಮ ಬಾಕಿ ಕೆಲಸಗಳೂ ಪೂರ್ಣಗೊಳ್ಳುತ್ತವೆ. ಕುಟುಂಬದಲ್ಲಿ ಪ್ರೀತಿ, ನೆಮ್ಮದಿ ಇರಲಿದೆ. ಆರೋಗ್ಯ ಉತ್ತಮವಾಗಿರಲಿದೆ, ಆರ್ಥಿಕ ಸ್ಥಿತಿ ಕೂಡ ತುಂಬಾ ಚೆನ್ನಾಗಿರಲಿದೆ.
ಮೀನ ರಾಶಿ
ಈ ಅವಧಿಯಲ್ಲಿ ವೃತ್ತಿ ಬದುಕಿನಲ್ಲಿ ಪ್ರಗತಿ ಕಾಣುತ್ತೀರಿ. ನೀವು ಸರ್ಕಾರಿ ನೌಕರಿಗಾಗಿ ಪ್ರಯತ್ನಿಸುತ್ತಿದ್ದರೆ ಈ ವಾರ ನಿಮಗೆ ಶುಭ ಸುದ್ದಿ ಸಿಗಬಹುದು. ವ್ಯಾಪಾರಿಗಳು ಧನ ಲಾಭ ಪಡೆಯುತ್ತೀರಿ, ಪ್ರೇಮಿಗಳಿಗೆ ಈ ವಾರ ವಿಸೇಷವಾಗಿರದೆ, ವಿವಾಹಿತರ ನಡುವೆ ಉತ್ತಮ ಹೊಂದಾಣಿಕೆ ಇರಲಿದೆ. ಒಟ್ಟಿನಲ್ಲಿ ಈ ವಾರ ನಿಮಗೆ ಉತ್ತಮವಾಗಿದೆ, ಆದರೆ ಅರೋಗ್ಯದ ಕಡೆಗೆ ಗಮನಹರಿಸಿ.
Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.



Click it and Unblock the Notifications