ವಾರ ಭವಿಷ್ಯ: ಜ್ಯೋತಿಷ್ಯ ಪ್ರಕಾರ ವರ್ಷದ ಮೊದಲ ವಾರದ 12 ರಾಶಿಗಳ ರಾಶಿಫಲ

ಹೊಸ ವರ್ಷ ನಿಮ್ಮೆಲ್ಲರ ಬದುಕಿನಲ್ಲಿ ಹೊಸ ವರ್ಷ ತರಲಿ. ಜ್ಯೋತಿಷ್ಯ ಪ್ರಕಾರ ವರ್ಷದ ಮೊದಲ ತಿಂಗಳ ಮೊದಲ ವಾರ ನಿಮಗೆ ಹೇಗಿರಲಿದೆ ಎಂದು ನೋಡೋಣ:

ಮೇಷ ರಾಶಿ

ಮೇಷ ರಾಶಿಯವರಿಗೆ ಈ ವಾರ ತುಂಬಾ ಚೆನ್ನಾಗಿರಲಿದೆ, ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ. ವೈವಾಹಿಕ ಬದುಕು ಚೆನ್ನಾಗಿರಲಿದೆ.
ವೃತ್ತಿ ಬದುಕು ತುಂಬಾ ಚೆನ್ನಾಗಿರಲಿದೆ, ವ್ಯಾಪಾರಿಗಳಿಗೆ ಲಾಭ ದೊರೆಯಲಿದೆ. ಕೆಲಸಕ್ಕೆ ಸಂಬಂಧಿಸಿದ ಪ್ರಯಾಣ ಅನುಕೂಲಕರವಾಗಿದೆ. ಆಸ್ತಿಗೆ ಸಂಬಂಧಿಸಿದ ಏನಾದರು ಭಿನ್ನಾಭಿಪ್ರಾಯವಿದ್ದರೆ ಅದು ಬಗೆಹರಿಯಲಿದೆ. ವ್ಯಾಪಾರಿಗಳು ಅಪೇರಿಕ್ಷಿತ ಲಾಭ ಪಡೆಯುತ್ತೀರಿ.

December 30 To January 4

ವೃಷಭ ರಾಶಿ

ವೃತ್ತಿ ಬದುಕಿನಲ್ಲಿ ಕೆಲವೊಂದು ಬದಲಾವಣೆಗಳು ಕಾಣಬಹುದು, ಅನಿರೀಕ್ಷಿತ ಸಮಸ್ಯೆ ಎದುರಾಗಬಹುದು, ವಿರೋಧಿಗಳ ಬಗ್ಗೆ ಎಚ್ಚರಿಕೆವಹಿಸಬೇಕು. ಆರೋಗ್ಯ ಸಮಸ್ಯೆಯಿದ್ದರೆ ತುಂಬಾನೇ ಜಾಗ್ರತೆವಹಿಸಿ, ಸಮಯಕ್ಕೆ ಸರಿಯಾಗಿ ಔಷಧಿ ಸೇವಿಸಿ. ಇನ್ನು ಈ ವಾರ ಹಣದ ವ್ಯವಹಾರದ ಬಗ್ಗೆ ಕೂಡ ಜಾಗ್ರತೆ ಮಾಡಬೇಕು. ಸಾಲ ಕೊಡುವುದಾಗಲಿ, ಪಡೆಯುವುದಾಗಲಿ ಮಾಡಲು ಹೋಗಬೇಡಿ. ಇನ್ನು ಆನ್‌ಲೈನ್‌ ಗೇಮ್, ಬೆಟ್ಟಿಂಗ್‌ ಇವುಗಳಿಂದ ದೂರವಿರಬೇಕು.

ಮಿಥುನ ರಾಶಿ

ಈ ವಾರ ಮಿಥುನ ರಾಶಿಯವರಿಗೆ ಈ ಅವಧಿ ಅನುಕೂಲಕರವಾಗಿದೆ. ನಿಮ್ಮ ಕೆಲಸ ಕಾರ್ಯಗಳು ಯೋಜನೆಯಂತೆ ಪೂರ್ಣವಾಗಲಿದೆ. ಆರೋಗ್ಯ ಸರಾಸರಿಯಾಗಿರಲಿದೆ. ಕೆಲಸ ಹುಡುಕುತ್ತಿರುವವರೆಗೆ ಈ ಅವಧಿ ತುಂಬಾ ಚೆನ್ನಾಗಿರಲಿದೆ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಕುಟುಂಬ ಜೀವನ ತುಂಬಾ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ.


ಕರ್ಕ ರಾಶಿ

ಕರ್ಕ ರಾಶಿಯರಿಗೆ ಈ ವಾರ ಮಿಶ್ರಫಲ, ನೀವು ಯೋಚನೆ ಮಾಡಿದಂತೆ ಯಾವುದೇ ಕಾರ್ಯ ನಡೆಯದಿದ್ದಾಗ ಅಸಮಧಾನ ಉಂಟಾಗಬಹುದು. ಹಣಕಾಸಿನ ವಿಷಯದಲ್ಲಿಯೂ ಈ ವಾರ ಅಷ್ಟೊಂದು ಅನುಕೂಲಕರವಲ್ಲ, ಹಣವನ್ನು ಬಜೆಟ್‌ ಮೀರಿ ಖರ್ಚು ಮಾಡಬೇಡಿ. ವಾರದ ಮಧ್ಯದಿಂದ ಪರಿಸ್ಥಿತಿ ಸುಧಾರಿಸಲಿದೆ.ಕುಟುಂಬ ಬದುಕು ಚೆನ್ನಾಗಿರಲಿದೆ, ನಿಮ್ಮ ವೈವಾಹಿಕ ಜೀವನ ತುಂಬಾ ಚೆನ್ನಾಗಿರಲಿದೆ.


ಸಿಂಹ ರಾಶಿ

ಸಿಂಹ ರಾಶಿಯವರಿಗೆ ಈ ವಾರ ಅನುಕೂಲಕರವಾಗಿದೆ, ವ್ಯಾಪಾರಿಗಳಿಗೆ ಲಾಭ ಗಳಿಸಲು ಸಾಧ್ಯವಾಗುವುದು, ಕೆಲಸ ಕಾರ್ಯಗಳು ತುಂಬಾ ಚೆನ್ನಾಗಿ ನಡಯಲಿದೆ. ವಿದ್ಯಾರ್ಥಿಗಳಿಗೂ ಈ ಅವಧಿ ಅನುಕೂಲಕರವಾಗಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ,, ಕುಟುಂಬದಲ್ಲಿ ನಿರೀಕ್ಷಿತ ಬೆಂಬಲ ಸಿಗಲಿದೆ. ವಾರ ನಿಮಗೆ ಅನುಕೂಲಕರವಾಗಿದೆ.


ಕನ್ಯಾ ರಾಶಿ

ಈ ವಾರ ನೀವು ಕೆಲಸ ಕಾರ್ಯದ ಕಡೆಗೆ ತುಂಬಾನೇ ಗಮನಹರಿಸಬೇಕು. ಆರ್ಥಿಕವಾಗಿ ಈ ಅವಧಿ ಅನುಕೂಲಕರವಲ್ಲ, ನೀವು ಹಣಕಾಸಿನ ಬಗ್ಗೆ ಜಾಗ್ರತೆವಹಿಸಬೇಕು. ಇನ್ನು ಹಳೆಯ ಕಾಯಿಲೆ ಮರುಕಳಿಸುವ ಸಾಧ್ಯತೆ ಇರುವುದರಿಂದ ಆರೋಗ್ಯದ ಕಡೆಗೆ ಗಮನಹರಿಸಬೇಕು. ವೈವಾಹಿಕ ಜೀವನದಲ್ಲಿ ನೀವು ನಿಮ್ಮ ಸಂಗಾತಿಯ ಭಾವನೆಗಳನ್ನು ಗೌರವಿಸಿ.

ತುಲಾ ರಾಶಿ
ವ್ಯಾಪಾರಸ್ಥರಿಗೆ ಈ ಅವಧಿ ಅನುಕೂಲಕರವಾಗಿದೆ. ಕೆಲಸವನ್ನು ಹುಡುಕುತ್ತಿರುವವರು ಈ ವಾರ ಒಳ್ಳೆಯ ಸುದ್ದಿ ಪಡೆಯುತ್ತೀರಿ, ನಿಮ್ಮ ಇಷ್ಟದ ಕೆಲಸ ಕೈ ಸೇರಲಿದೆ. ನೀವು ಯಾರ ಬಳಿಯಾದರೂ ಸಾಲ ಪಡೆದಿದ್ದರೆ ಅದನ್ನು ಮರಳಿ ನೀಡಲು ಸಾಧ್ಯವಾಗುವುದು, ಆರ್ಥಿಕ ದೃಷ್ಟಿಯಿಂದ ಈ ಸಮಯ ತುಂಬಾ ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗರಲಿದೆ.

ವೃಶ್ಚಿಕ ರಾಶಿ

ಈ ವಾರ ನಿಮಗೆ ತುಂಬಾನೇ ಚೆನ್ನಾಗಿಲಿದೆ. ಹಣಕಾಸಿನ ಸ್ಥಿತಿ ಚೆನ್ನಾಗಿರಲಿದೆ, ಈ ಹಿಂದೆ ಮಾಡಿದ ಹೂಡಿಕೆ ನಿಮಗೆ ಲಾಭ ತರಲಿದೆ, ವೃತ್ತಿ ಜೀವನದಲ್ಲಿ ನಿಮ್ಮ ಪ್ರಯತ್ನಗಳಿಗೆ ಉತ್ತಮ ಯಶಸ್ಸು ದೊರೆಯಲಿದೆ. ಪ್ರೇಮಿಗಳು ತಮ್ಮ ಪ್ರೀತಿಯನ್ನು ಮನೆಯಲ್ಲಿ ತಿಳಿಸಲು ಈ ಸಮಯ ಅನುಕೂಲಕರವಾಗಿದೆ. ವೈವಾಹಿಕ ಬದುಕು, ಕುಟುಂಬ ಜೀವನ ಚೆನ್ನಾಗಿರಲಿದೆ.

ಧನು ರಾಶಿ

ಈ ವಾರ ಕೆಲಸದಲ್ಲಿ ಹೆಚ್ಚು ಒತ್ತಡ ತೆಗೆದುಕೊಳ್ಳಬೇಡಿ, ಹಲವು ಕೆಲಸ ಜೊತೆಗೆ ಮಾಡುವ ಬದಲಿಗೆ ಮಾಡುವ ಕೆಲಸವನ್ನು ಪೂರ್ಣಗೊಳಿಸಲು ಪ್ರಯತ್ನಿಸಿ. ಕೆಲಸದ ಜಾಗದಲ್ಲಿ ಒಳ ರಾಜಕೀಯಕ್ಕೆ ಬಲಿಯಾಗದಂತೆ ಜಾಗ್ರತೆವಹಿಸಬೇಕು. ವೈವಾಹಿಕ ಬದುಕಿನಲ್ಲಿ ಭಿನ್ನಾಭಿಪ್ರಾಯ ಉಂಟಾದರೆ ನಿಮ್ಮ ಸಮಸ್ಯೆ ಸಮಧಾನದಿಂದ ಬಗೆಹರಿಸಲು ಪ್ರಯತ್ನಿಸಿ.

ಮಕರ ರಾಶಿ

ಮಕರ ರಾಶಿಯವರಿಗೆ ಈ ವಾರ ಅನುಕೂಲಕರವಾಗಿರಲಿದೆ, ನಿಮಗೆ ಸಿಕ್ಕ ಅವಕಾಶಗಳನ್ನು ಉತ್ತಮವಾಗಿ ಬಳಸಿಕೊಳ್ಳಲು ಪ್ರಯತ್ನಿಸಿ. ವ್ಯಾಪಾರಿಗಳಿಗೆ ಈ ವಾರ ಅನುಕೂಲಕರವಾಗಿದೆ. ವೃತ್ತಿ ಜೀವನ ತುಂಬಾ ಚೆನ್ನಾಗಿರಲಿದೆ. ಮನೆಯ ವಾತಾವರಣ ತುಂಬಾ ಚೆನ್ನಾಗಿರಲಿದೆ. ನಿಮ್ಮಿಬ್ಬರ ನಡುವೆ ಪ್ರೀತಿ ಹೆಚ್ಚಾಗಲಿದೆ.

ಕುಂಭ ರಾಶಿ

ಕುಂಭ ರಾಶಿಯವರಿಗೆ ಈ ವಾರ ಏರಳಿತಗಳಿಂದ ಕೂಡಿರಲಿದೆ, ಹಣಕಾಸಿನ ವ್ಯವಹಾರವನ್ನು ತುಂಬಾ ಜಾಗ್ರತೆಯಿಂದ ಮಾಡಬೇಕು. ಕೆಲಸದಲ್ಲಿ ಹೆಚ್ಚು ಒತ್ತಡವಿರಬಹುದು. ಮನೆಯಲ್ಲಿಯೂ ಪರಿಸ್ಥಿತಿ ಒತ್ತಡದಿಂದ ಕೂಡಿರಲಿದೆ. ಮನೆಯ ಸಮಸ್ಯೆ ನಿಮ್ಮ ಕೆಲಸದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಕೂಡ ಇದೆ.


ಮೀನ ರಾಶಿ

ಮೀನ ರಾಶಿಯವರು ತಮ್ಮ ಕೆಲಸದ ಕಡೆಗೆ ಗಮನಹರಿಸಬೇಕು, ವಹಿಸಿರುವ ಕೆಲಸವನ್ನು ಅಪೂರ್ಣವಾಗಿ ಬಿಡಬೇಡಿ. ವೃತ್ತಿ ಬದುಕಿನಲ್ಲಿ ಕೆಲ ಅಡೆತಡೆಗಳು ಬರಬಹುದು. ವ್ಯಾಪಾರಿಗಳಿಗೆ ಆರ್ಥಿಕವಾಗಿ ಈ ಅವಧಿ ಅನುಕೂಲಕರವಾಗಿದೆ. ವಾರದ ಆರಂಭದಲ್ಲಿ ಕೆಲಸದಲ್ಲಿ ಕೆಲ ಅಡೆತಡೆಗಳು ಉಂಟಾದರೂ ನಂತರ ಎಲ್ಲವೂ ಸರಿಯಾಗಲಿದೆ.

Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.

English summary

Weekly Horoscope From December 30 To January 4 In Kannada

Here is weekly prediction from December 30 To January 4, 2025 for all zodiac signs, read on.
Story first published: Sunday, December 29, 2024, 8:33 [IST]
X
Desktop Bottom Promotion