ವಾರ ಭವಿಷ್ಯ: ಫೆಬ್ರವರಿ2-8ರವರೆಗಿನ ಏಳು ದಿನಗಳು ಯಾರಿಗೆ ಶುಭ ಯಾವ ರಾಶಿಗಳಿಗಲ್ಲ?

ಜ್ಯೋತಿಷ್ಯದ ಪ್ರಕಾರ ಫೆಬ್ರವರಿ 2ರಿಂದ 8ರವರೆಗೆ ದ್ವಾದಶ ರಾಶಿಗಳಿಗೆ ಹೇಗಿರಲಿದೆ?

ಮೇಷ ರಾಶಿ
ಈ ವಾರ ನಿಮಗೆ ತುಂಬಾನೇ ಉತ್ತಮವಾಗಿರಲಿದೆ, ಈ ವಾರ ನಿಮಗೆ ಅದೃಷ್ಟದ ಬೆಂಬಲ ಇರಲಿದೆ, ನಿಮ್ಮ ಪ್ರಯತ್ನಕ್ಕೆ ಸಕರಾತ್ಮಕ ಪ್ರತಿಫಲ ಸಿಗಲಿದೆ, ಕುಟುಂಬ ಜೀವನ ಚೆನ್ನಾಗಿರಲಿದೆ. ಉದ್ಯೋಗಿಗಳಿಗೆ ಈ ದಿನ ನಿಮಗೆ ತುಂಬಾನೇ ಉತ್ತಮವಾಗಿರಲಿದೆ. ಆರ್ಥಿಕವಾಗಿ ನೋಡುವುದಾದರೆ ಈ ದಿನ ಉತ್ತಮವಾಗಿರಲಿದೆ, ಆರೋಗ್ಯದ ಕಡೆಗೆ ಗಮನಹರಿಸಿ.

Weekly Horoscope

ವೃಷಭ ರಾಶಿ
ವೃಷಭ ರಾಶಿಯವರಿಗೆ ಈ ವಾರ ಏರಳಿತದಿಂದ ಕೂಡಿರಲಿದೆ, ಈ ವಾರ ಕೆಲಸ ಕಾರ್ಯದ ಕಡೆಗೆ ಹೆಚ್ಚಿನ ಗಮನಹರಿಸಬೇಕಾಗುತ್ತದೆ. ವ್ಯಾಪಾರಿಗಳಿಗೆ ಈ ವಾರ ಸವಾಲಿನ ವಾರವಾಗಿದೆ, ನೀವು ಬಯಸಿದಂತೆ ಲಾಭ ಪಡೆಯುವುದು ಕಷ್ಟವಾಗುವುದು. ಮಾನಸಿಕ ಒತ್ತಡ ಅಧಿಕವಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಮಕ್ಕಳಿಗೆ ಸಂಬಂಧಿಸಿದ ಚಿಂತೆ ಕಾಡಬಹುದು. ಆರೋಗ್ಯದ ಕಡೆಗೆ ಗಮನಹರಿಸಿ.

ಮಿಥುನ ರಾಶಿ
ಮಿಥುನ ರಾಶಿಯವರಿಗೆ ಈ ವಾರ ಮಿಶ್ರಫಲಿತಾಂಶ, ಕೆಲಸದ ಜಾಗದಲ್ಲಿ ಪ್ರತಿಕೂಲ ಸಂದರ್ಭ ಎದುರಿಸಬಹುದು, ನೀವು ಆಪ್ತರಿಂದ ನಿರೀಕ್ಷೆ ಮಾಡಿದ ಸಹಾಯ ದೊರೆಯದೇ ಇದ್ದಾಗ ಮನಸ್ಸಿಗೆ ಬೇಸರವಾಗಬಹುದು, ಉದ್ಯೋಗಿಗಳ ಮೇಲೆ ಕೆಲಸದ ಒತ್ತಡವಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವೆ ಭಿನ್ನಾಭಿಪ್ರಾಯ ಬರಬಹುದು, ತಾಳ್ಮೆಯಿಂದ ವರ್ತಿಸಿ. ನಿಮ್ಮ ನಡುವೆ ಏನೇ ಸಮಸ್ಯೆವಿದ್ದರೆ ತಾಳ್ಮೆಯಿಂದ ಬಗೆಹರಿಸಲು ಪ್ರಯತ್ನಿಸಿ.

ಕರ್ಕ ರಾಶಿ
ಕರ್ಕ ರಾಶಿಯವರಿಗೆ ಈ ವಾರ ಸ್ವಲ್ಪ ಒತ್ತಡದಿಂದ ಕೂಡಿರಲಿದೆ, ಯೋಜಿತ ರೀತಿಯಲ್ಲಿ ಕೆಲಸವನ್ನು ಮಾಡಿದರೆ ನೀವು ಯಶಸ್ವಿಯಾಗಲು ಸಾಧ್ಯವಾಗುವುದು. ಉದ್ಯೋಗಿಗಳಿಗೆ ಕೆಲಸದ ಒತ್ತಡ ಇರಲಿದೆ, ಈ ಅವಧಿಯಲ್ಲಿ ಆರೋಗ್ಯ ಸಂಬಂಧಿತ ಸಮಸ್ಯೆಗಳಿರಬಹುದು. ಆರ್ಥಿಕವಾಗಿ ಖರ್ಚು ಹೆಚ್ಚಿರಲಿದೆ, ವ್ಯಾಪಾರಿಗಳು ಅಪೇಕ್ಷಿತ ಲಾಭ ಪಡೆಯಲು ಸಾಧ್ಯವಾಗಲಿದೆ. ನಿಮ್ಮ ಸಂಗಾತಿಯ ಭಾವನೆ ಕಡೆಗೆ ಗಮನಹರಿಸಿ.

ಸಿಂಹ ರಾಶಿ
ಈ ವಾರ ನಿಮಗೆ ಉತ್ತಮವಾಗಿರಲಿದೆ, ಕೆಲಸದಲ್ಲಿ ಒತ್ತಡವನ್ನು ಎದುರಿಸಬಹುದು, ಆದರೆ ನಿಮ್ಮ ಕಠಿಣ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ನಿಮಗೆ ವಹಿಸಿರುವ ಕೆಲಸವನ್ನು ಸಮಯಕ್ಕೆ ಪೂರ್ಣಗೊಳಿಸಲು ಸಾಧ್ಯವಾಗಲಿದೆ, ವ್ಯಾಪಾರಿಗಳಿಗೆ ಈ ದಿನ ಉತ್ತಮವಾಗಿರಲಿದೆ, ಕುಟುಂಬ ಜೀವನದ ದೃಷ್ಟಿಯಿಂದ ಈ ವಾರ ನಿಮಗೆ ಅನುಕೂಲಕರವಾಗಿದೆ.

ಕನ್ಯಾ ರಾಶಿ
ಈ ವಾರ ಅಪೂರ್ಣವಾಗಿರುವ ಕೆಲಸ ಪೂರ್ಣಗೊಳಳಲಿದೆ. ಕೆಲಸ ಕಾರ್ಯಗಳು ಯೋಜನೆಯಂತೆಯೇ ಪೂರ್ಣಗೊಳ್ಳಲಿದೆ. ನಿಮ್ಮ ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ನ್ಯಾಯಾಲಯದಲ್ಲಿ ಏನಾದರು ಪ್ರಕತಣವಿದ್ದರೆ ಅದರ ತೀರ್ಪು ನಿಮ್ಮ ಪರವಾಗಿ ಬರಲಿದೆ. ನಿಮ್ಮ ಕುಟುಂಬ ಜೀವನ ಚೆನ್ನಾಗಿರಲಿದೆ, ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ.

ತುಲಾ ರಾಶಿ
ಕೆಲಸದಲ್ಲಿ ಈ ವವಾರ ನಿಮಗೆ ಉತ್ತಮವಾಗಿರಲಿದೆ, ಕೆಲಸಕ್ಕೆ ಸಂಬಂಧಿಸಿದ ಪ್ರಯಾಣ ಲಾಭ ತರಲಿದೆ. ಉದ್ಯೋಗಿಗಳಿಗೆ ಈ ದಿನ ಅನುಕೂಲಕರವಾಗಿದೆ, ವ್ಯಾಪಾರಿಗಳು ಲಾಭ ಗಳಿಸುತ್ತೀರಿ, ಹಿಂದೆ ಮಾಡಿದ ಹೂಡಿಕೆ ಲಾಭ ತರಲಿದೆ, ಕುಟುಂಬ ಜೀವನ ತುಂಬಾ ಚೆನ್ನಾಗಿರಲಿದೆ.

ವೃಶ್ಚಿಕ ರಾಶಿ
ಈ ವಾರ ನೀವು ಕೆಲಸ ಕಾರ್ಯದ ಕಡೆಗೆ ಹೆಚ್ಚು ಗಮನಹರಿಸಬೇಕು, ಕೆಲಸದಲ್ಲಿ ಸೋಮಾರಿತನ ಮಾಡದೆ ಶ್ರದ್ಧೆಯಿಂದ ಮಾಡಿ. ವ್ಯಾಪಾರಿಗಳು ಲಾಭ ಗಳಿಸಲು ಸಾಧ್ಯವಾಗಲಿದೆ, ಹಣದ ವಿಷಯದಲ್ಲಿ ನೋಡುವುದಾದರೆ ಖರ್ಚು ಹೆಚ್ಚಿರಲಿದೆ, ಕುಟುಂಬದಲ್ಲಿ ಕೆಲ ಮನಸ್ತಾಪಗಳಿರಬಹುದು.

ಧನು ರಾಶಿ
ಈ ವಾರ ನಿಮಗೆ ತುಂಬಾನೇ ಉತ್ತಮವಾಗಿದೆ, ವ್ಯಾಪಾರಿಗಳಿಗೆ ಲಾಭ ತರಲಿದ, ಉದ್ಯೋಗಿಗಳಿಗೆ ಕೆಲಸದ ವಿಷಯದಲ್ಲಿ ಅನುಕೂಲಕರವಾಗಿದೆ, ಕೆಲಸ ಹುಡುಕುತ್ತಿದ್ದರೆ ಕೆಲಸ ಪಡೆಯಲು ಸಾಧ್ಯವಾಗಲಿದೆ,ಕುಟುಂಬ ಜೀವನದಲ್ಲಿ ಪ್ರೀತಿ, ಹೊಂದಾಣಿಕೆ ಇರಲಿದೆ.

ಮಕರ ರಾಶಿ
ಈ ವಾರ ನಿಮಗೆ ತುಂಬಾನೇ ಉತ್ತಮವಾಗಿದೆ, ನಿಮ್ಮ ಕಠಿಣ ಶ್ರಮಕ್ಕೆ ಉತ್ತಮ ಪ್ರತಿಫಲ ಪಡೆಯಲು ಸಾಧ್ಯವಾಗಲಿದೆ, ಕೆಲಸಕ್ಕಾಗಿ ಪ್ರಯತ್ನ ಮಾಡುತ್ತಿರುವವರು ಶುಭ ಸುದ್ದಿ ಪಡೆಯುತ್ತೀರಿ, ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ, ವ್ಯಾಪಾರಿಗು ಜಾಗ್ರತೆವಹಿಸಿ.

ಕುಂಭ ರಾಶಿ
ಕುಂಭ ರಾಶಿಯವರಿಗೆ ಈ ವಾರ ಅನುಕೂಲಕರವಾಗಿದೆ, ನಿಮ್ಮ ಕೆಲಸ ಕಾರ್ಯದಲ್ಲಿ ಉತ್ತಮ ಫಲಕಾಣಬಹುದು, ಆರೋಗ್ಯ ಉತ್ತಮವಾಗಿರಲಿದೆ. ಸಂಬಂಧದ ದೃಷ್ಟಿಯಿಂದ ಈ ವಾರ ನಿಮಗೆ ಉತ್ತಮವಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ತುಂಬಾ ಚೆನ್ನಾಗಿರಲಿದೆ.

ಮೀನ ರಾಶಿ
ಈ ವಾರ ನಿಮಗೆ ತುಂಬಾನೇ ಶುಭವಾಗಿದೆ, ವೃತ್ತಿ ಬದುಕಿನಲ್ಲಿ ಉತ್ತಮ ಯಶಸ್ಸು ಪಡೆಯಲು ಸಾಧ್ಯವಾಗಲಿದೆ, ವೃತ್ತಿ ಬದುಕಿನಲ್ಲಿ ಬದಲಾವಣೆ ಬಗ್ಗೆ ಆಲೋಚನೆ ಮಾಡುತ್ತಿದ್ದರೆ ಅದಕ್ಕೆ ಈ ಅವಧಿ ಅನುಕೂಲಕರವಾಗಿದೆ. ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ್ದರೆ ಉತ್ತಮ ಲಾಭ ಪಡೆಯುತ್ತೀರಿ. ಕುಟುಂಬ ಜೀವನ ಚೆನ್ನಾಗಿರಲಿದೆ.

Disclaimer: ಈ ಲೇಖನದಲ್ಲಿ ಉಲ್ಲೇಖಿಸಲಾದ ಹರಳುಗಳ ಪ್ರಯೋಜನಗಳು ಸಾಂಪ್ರದಾಯಿಕ ನಂಬಿಕೆಗಳು ಮತ್ತು ಜ್ಯೋತಿಷ್ಯ ಪದ್ಧತಿಗಳನ್ನು ಆಧರಿಸಿವೆ. ಇದರ ಫಲಿತಾಂಶಗಳು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು. ಜ್ಯೋತಿಷ್ಯ ಉದ್ದೇಶಗಳಿಗಾಗಿ ಯಾವುದೇ ರತ್ನವನ್ನು ಧರಿಸುವ ಮೊದಲು ಪ್ರಮಾಣೀಕೃತ ಜ್ಯೋತಿಷಿ ಅಥವಾ ಹರಳು ತಜ್ಞರನ್ನು ಸಂಪರ್ಕಿಸಲು ನಾವು ಶಿಫಾರಸು ಮಾಡುತ್ತೇವೆ. ಈ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಕಟಿಸಲಾಗಿದೆ ವೃತ್ತಿಪರ ಸಲಹೆಗೆ ಪರ್ಯಾಯವಾಗಿ ಪರಿಗಣಿಸಬಾರದು.

English summary

Weekly Horoscope From February 2 To February 8: Prediction For 12 Zodiac Signs In Kannada

Weekly Horoscope : Here is February 2 To February 8: Prediction For 12 Zodiac Signs, read on.....
Story first published: Sunday, February 2, 2025, 1:01 [IST]
X
Desktop Bottom Promotion